Electric Shock : ಕಂಬದಲ್ಲಿ ದುರಸ್ತಿ ಕಾರ್ಯದಲ್ಲಿದ್ದ ಪವರ್‌ ಮ್ಯಾನ್‌ ಗೆ ವಿದ್ಯುತ್‌ ಶಾಕ್‌  – ಆಸ್ಫತ್ರೆಗೆ ಸಾಗಿಸುವ ವೇಳೆ ಮೃತ್ಯು

IMG-20230601-WA0030
Ad Widget

Ad Widget

Ad Widget

Electric Shock : ಪುತ್ತೂರು : ಜೂ 1 : ವಿದ್ಯುತ್ ಕಂಬದಲ್ಲಿ ದುರಸ್ತಿ  ಕಾರ್ಯದಲ್ಲಿ ನಿರತರಾಗಿದ್ದ ಪವರ್‌ ಮ್ಯಾನ್‌ ಗೆ  ವಿದ್ಯುತ್ ಪ್ರವಹಿಸಿ ಗಂಭೀರ ಗಾಯಗೊಂಡ ಹಾಗೂ ಚಿಕಿತ್ಸೆಗೆಂದು ಕರೆದುಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ವಾಹನದಲ್ಲೆ ಕೊನೆಯುಸಿರೆಳೆದ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಎಂಬಲ್ಲಿ ಗುರುವಾರ ( ಜೂ 1) ನಡೆದಿದೆ.

Ad Widget

 ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ‌ ದೊಡ್ಮನಿ  ಮೃತಪಟ್ಟ ಪವರ್‌ ಮ್ಯಾನ್‌ . ಅವರು ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ವಿದ್ಯುತ್‌ ಕಂಬದಲ್ಲಿ ದುರಸ್ತಿ ಕಾರ್ಯ ನಡೆಸುತ್ತಿದ್ದಾಗ ಅವಘಡ ಸಂಭವಿಸಿದೆ. ತಲೆಕ್ಕಿ ಬಳಿ ಮುಳಿಮಜಲು ಎಂಬಲ್ಲಿ ವಿದ್ಯುತ್‌ ಸಂಪರ್ಕ ವ್ಯತ್ಯಯ ಉಂಟಾಗಿತ್ತು. ಇದರ ದುರಸ್ತಿಗೆಂದು ದ್ಯಾಮಣ್ಣರವರು ಕಂಬ ಏರಿದ್ದರು.ಈ  ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ದ್ಯಾಮಣ್ಣ ಶಾಕ್‌ ಹೊಡೆದಿದೆ.

Ad Widget

Ad Widget

Ad Widget

ವಿದ್ಯುತ್‌ ಶಾಕ್‌ ಹೊಡೆದ ಹಿನ್ನಲೆ  ದ್ಯಾಮಣ್ಣ ಅವರು  ಕೆಲ ಕಾಲ ಕಂಬದಲ್ಲೆ ಉಳಿದಿದ್ದರು ಎನ್ನಲಾಗಿದೆ. ಬಳಿಕ  ಸ್ಥಳೀಯರು ಮರದ ಕೋಲಿನ ಸಹಾಯದಿಂದ ಅವರನ್ನು ಕೆಳಗಿಳಿಸಿ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ.  ಬಳಿಕ ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

Ad Widget

ಆದರೆ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ‌  ಎಂದು ತಿಳಿದು ಬಂದಿದೆ.  ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.‌  

Ad Widget

Ad Widget

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: