ಪುತ್ತೂರು, ಜೂ 3 : ವಿದ್ಯಾರ್ಥಿನಿಯೊಬ್ಬರು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಬಲ್ನಾಡು ಬಂಗಾರಡ್ಕ ನಿವಾಸಿ ನಿನ್ನೆ (ಜೂ 2) ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬಲ್ನಾಡು ಬ೦ಗಾರಡ್ಕ ದಿ.ಕಮಲಾಕ್ಷ ರ ಪುತ್ರಿ ವಂಶಿ
ಬಿ.ಕೆ (17ವ) ಮೃತಪಟ್ಟ ವಿದ್ಯಾರ್ಥಿನಿ
ವಿದ್ಯಾರ್ಥಿನಿ ವಂಶಿ ಈಗಷ್ಟೇ ಎಸ್.ಎಸ್.ಎಲ್.ಸಿ ಮುಗಿಸಿ ಮುಂದೆ ಪಿಯುಸಿ ವ್ಯಾಸಂಗ ಮಾಡಲು ಕಾಲೇಜು ಸೇರುವ ಸಿದ್ಧತೆಯಲ್ಲಿದ್ದರು.
ಮೃತ ವಂಶಿ ಬಿ.ಕೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆದಿದ್ದರು. ವಿದ್ಯಾಭಾರತಿ ಆಯೋಜಿಸಿದ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಇತ್ತೀಚೆಗೆ ಅವರು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣವೇ ವಿದ್ಯಾರ್ಥಿನಿಯನ್ನು ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಚೇತರಿಸಿಕೊಂಡು ಮನೆಗೆ ಹೋಗಿದ್ದರು. ಬಳಿಕ ಮತ್ತೆ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು ತೀವ್ರ ಅಸ್ವಸ್ಥರಾಗಿದ್ದರು. ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ತಾಯಿ ಬಿ.ಎಸ್ ಜಯಲತಾ ಮತ್ತು ಸಹೋದರನನ್ನು ಅಗಲಿದ್ದಾರೆ.