Anugraha Institution :ಉಜಿರೆ : ಅನುಗ್ರಹದಲ್ಲಿ ಸಂಭ್ರಮದ ಕೆ.ಜಿ ತರಗತಿಗಳ ಪ್ರಾರಂಭೋತ್ಸವ

WhatsApp Image 2023-06-02 at 2.01.36 PM
Ad Widget

Ad Widget

Ad Widget

ಉಜಿರೆ : ಅನುಗ್ರಹ ಶಿಕ್ಷಣ ಸಂಸ್ಥೆಯ ಎಲ್.ಕೆ.ಜಿ, ಯು.ಕೆ.ಜಿ ಹಾಗೂ ಪ್ರೀ ಕೆ.ಜಿ ವಿಭಾಗಗಳ ಪ್ರಾರಂಭೋತ್ಸವವು ಶಾಲಾ ಸಂಚಾಲಕರಾದ ವಂ! ಫಾ! ಜೇಮ್ಸ್ ಡಿ’ಸೋಜ ರವರ ಅಧ್ಯಕ್ಷತೆಯಲ್ಲಿ ಜರಗಿತು. ಮದ್ದು ಪುಟಾಣಿಗಳನ್ನು ಶಾಲಾ ಬ್ಯಾಂಡಿನ ಮೂಲಕ ಮೆರವಣಿಗೆಯಲ್ಲಿ ಕರೆತರಲಾಯಿತು.

Ad Widget

ಶಾಲಾ ಮಕ್ಕಳ ಪ್ರಾರ್ಥನೆಯ ಬಳಿಕ ಶಿಕ್ಷಕಿ ಸಂಧ್ಯಾ ರವರು ಸ್ವಾಗತ ಭಾಷಣ ಮಾಡಿದರು. ತದನಂತರ ಶಾಲಾ ಸಂಚಾಲಕರು, ಪ್ರಾಂಶುಪಾಲರಾದ ವಂ!ಫಾ! ವಿಜಯ್ ಲೋಬೋ ಹಾಗೂ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷರಾದ ಶ್ರೀ ಆಂಟನಿ ಫೆರ್ನಾಂಡೀಸ್ ಮತ್ತು ಶ್ರೀಮತಿ ಗ್ರೇಸಿ ಸಲ್ಡಾನರವರು ಜೊತೆಗೂಡಿ ದೀಪ ಬೆಳಗಿಸಿ ಉದ್ಘಾಟಿಸುವ ಮೂಲಕ ಶಾಲಾ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಿದರು.

Ad Widget

Ad Widget

Ad Widget

ಶಾಲಾ ಪ್ರಾಂಶುಪಾಲರಾದ ವಂ!ಫಾ! ವಿಜಯ್ ಲೋಬೋ ತಮ್ಮ ಮುನ್ನುಡಿಯಲ್ಲಿ ಪಾಲಕ ಪೋಷಕರು ತಮ್ಮ ಮಕ್ಕಳ ಬಗ್ಗೆ ಕೈಗೊಳ್ಳಬೇಕಾದ ನಿಯಮಗಳನ್ನು ವಿವರಿಸುತ್ತಾ ಪ್ರೀ ಕೆ.ಜಿ.ತರಗತಿಯ ಯಶಸ್ಸಿಗೆ ಸರ್ವರೂ ಸಹಕರಿಸುವಂತೆ ವಿನಂತಿಸಿದರು. ಶ್ರೀ ಆಂಟನಿ ಫೆರ್ನಾಂಡೀಸ್‌ರವರು ಸಂದರ್ಭೊಚಿತವಾಗಿ ಮಾತನಾಡಿದರು ಮುಖ್ಯ ಅತಿಥಿಗಳಾದ ಶ್ರೀಮತಿ ಗ್ರೇಸಿ ಸಲ್ಡಾನರವರು ಕೆ.ಜಿ ತರಗತಿಗಳ ಮಹತ್ವವನ್ನು ತಿಳಿಸುತ್ತಾ ಮಕ್ಕಳಿಗೆ ಶುಭ ಹಾರೈಸಿದರು.

Ad Widget

ಶಾಲಾ ಸಂಚಾಲಕರು ಅದ್ಯಕ್ಷೀಯ ಭಾಷಣದ ಮೂಲಕ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶ್ರೀಮತಿ ವಿನ್ನಿಯವರು ಕಾರ್ಯಕ್ರಮ ನಿರ್ವಹಿಸಿ ಧನ್ಯವಾದವನ್ನಿತ್ತರು. ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಿತು ಹಾಗೂ ಮಕ್ಕಳಿಗೆ ಸಿಹಿ ಹಂಚಲಾಯಿತು.

Ad Widget

Ad Widget

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: