Ashok Rai: ಪುತ್ತೂರಿನ ಸಮಗ್ರ ಅಭಿವೃದ್ದಿ ಕುರಿತು ಸಿಎಂ ಜತೆ ಅಶೋಕ್‌ ರೈ ಮಾತುಕತೆ – ಸಿದ್ದರಾಮಯ್ಯ ಮುಂದೆ ಶಾಸಕರಿಟ್ಟ ಪ್ರಮುಖ 5 ಬೇಡಿಕೆಗಳು ಯಾವುದು ಗೊತ್ತೆ ?

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ25 ಕೋಟಿ ರೂ ಅನುದಾನ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಶಾಸಕರು ಮನವಿ ಮಾಡಿದರು. ದೇವಳದಲ್ಲಿ ಅನೇಕ ಕಾಮಗಾರಿಗಳು ನಡೆಯಬೇಕಿದ್ದು ಕ್ಷೇತ್ರದ ಒಟ್ಟು ಅಭಿವೃದ್ದಿಗೆ 25ಕೋಟಿ ಅನುದಾನವನ್ನು ನೀಡುವಂತೆ ಕೇಳಿಕೊಂಡಿದ್ದಾರೆ
64b1d985-fc80-4846-9c17-42e561389e6b
Ad Widget

Ad Widget

Ad Widget

Ashok rai : ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈಯವರು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿ ಪುತ್ತೂರು ಕ್ಷೇತ್ರದ ಅಭಿವೃದ್ದಿಗೆ ಸಂಬಂದಿಸಿದಂತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದ್ದಾರೆ.

Ad Widget

ಪ್ರಮುಖವಾಗಿ ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಿಸುವ ಮೂಲಕ ಪುತ್ತೂರಿನ ಜನತೆಯ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ಕಾಲೇಜು ಮಂಜೂರು ಮಾಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡರು. ಮಂಗಳೂರಿನಲ್ಲಿರುವ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವ ಬಗ್ಗೆ ಕೆಲವೊಂದು ಪ್ರಕ್ರಿಯೆಗಳು ಪೂರ್ಣಗೊಂಡಿದ್ದು ಎಸ್ ಪಿ ಕಚೇರಿಯನ್ನು ಶೀಘ್ರವೇ ಪುತ್ತೂರಿಗೆ ಸ್ಥಳಾಂತರ ಮಾಡುವ ಬಗ್ಗೆ ವಿನಂತಿಸಿಕೊಂಡಿದ್ದಾರೆ.

Ad Widget

Ad Widget

Ad Widget

ಪುತ್ತೂರು ಕ್ಷೇತ್ರದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಈಗಾಗಲೇ ಅರ್ಧದಷ್ಟು ಅನುದಾನ ಮಂಜೂರಾಗಿದ್ದು ಯೋಜನೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸುವ ಮೂಲಕ ಕ್ಷೇತ್ರದ ಜನತೆಯ ಕುಡಿಯುವ ನೀರಿನ ಬೇಡಿಕೆಯನ್ನು ಈಡೇರಿಸುವಂತೆ ಮನವಿ ಮಾಡಲಾಗಿದೆ. ಕೊಯಿಲ ಪಶು ಸಂಗೋಪನಾ ಇಲಾಖೆಯಲ್ಲಿ ಖಾಸಗಿಯವರಿಗೆ ಉದ್ಯಮಕ್ಕೆ ಅವಕಾಶ ನೀಡುವ ಕುರಿತು ಈಗಾಗಲೇ ಸರಕಾರಕ್ಕೆ ಸಚಿವರ ಮೂಲಕ ಮನವಿ ಸಲ್ಲಿಸಲಾಗಿದ್ದು ಈ ಯೋಜನೆಗೆ ಒಪ್ಪಿಗೆ ನೀಡುವಂತೆ ಕೇಳಿಕೊಂಡಿದ್ದಾರೆ.

Ad Widget

ಜಿಲ್ಲಾಧಿಕಾರಿ ಕಚೇರಿಯ ಹೊಸ ಕಟ್ಟಡಕ್ಕೆ 23 ಕೋಟಿ ರೂ ಅನುದಾನ ಬೇಕಾಗಿದ್ದು ಅದನ್ನು ಬಿಡುಗಡೆ ಮಾಡುವಂತೆ ಶಾಸಕರು ಮುಖ್ಯಮಂತ್ರಿಗಳ ಮನವಿ ಮಾಡಿದರು.

Ad Widget

Ad Widget

ಪುತ್ತೂರು ದೇವಳಕ್ಕೆ 25 ಕೋಟಿ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ ೨೫ ಕೋಟಿ ರೂ ಅನುದಾನ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಶಾಸಕರು ಮನವಿ ಮಾಡಿದರು. ದೇವಳದಲ್ಲಿ ಅನೇಕ ಕಾಮಗಾರಿಗಳು ನಡೆಯಬೇಕಿದ್ದು ಕ್ಷೇತ್ರದ ಒಟ್ಟು ಅಭಿವೃದ್ದಿಗೆ 25ಕೋಟಿ ಅನುದಾನವನ್ನು ನೀಡುವಂತೆ ಕೇಳಿಕೊಂಡಿದ್ದಾರೆ. ಶಾಸಕರ ಬೇಡಿಕೆಯನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು ಬೇಡಿಕೆ ಈಡೇರಿಸುವ ಭರವಸೆಯನ್ನು ನೀಡಿದ್ದಾರೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ದ ಕ ಜಿಲ್ಲಾ ಉಸ್ತುವಾರಿ ಸಚಿವರಾದದಿನೇಶ್ ಗುಂಡೂರಾವ್, ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್‌ಕುಮಾರ್ ಉಪಸ್ಥಿತರಿದ್ದರು.

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: