ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯು ತೆಂಗಿನ ಮೌಲ್ಯವರ್ಧನೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅವುಗಳಲ್ಲೂಂದು ತೆಂಗಿನಕಾಯಿಯ ಗೆರಟೆಯಿಂದ ಉತ್ಪನ್ನಗಳ ತಯಾರಿಸುವುದು. ಈ ಕುರಿತು ತರಬೇತಿಗಳನ್ನು ಸಂಸ್ಥೆಯು ನೀಡುತ್ತಿದ್ದು ತರಬೇತಿಯ ಪ್ರಗತಿ ಪರಿಶೀಲನ ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಸಂಸ್ಥೆಯ ಕಾರ್ಪೊರೇಟ್ ಕಚೇರಿಯಲ್ಲಿ ಆ 16 ರಂದು ನಡೆದಿದೆ.
ಈ ಸಂದರ್ಭ ನಬಾರ್ಡ್ ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ದ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ನಬಾರ್ಡ್ ನ ಎಜಿಎಂ ಶ್ರೀಮತಿ ಸಂಗೀತ ಕರ್ತ, ಭಾರತೀಯ ವಿಕಾಸ್ ಟ್ರಸ್ಟ್ ಮಣಿಪಾಲ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್, ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕರ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಕುಸುಮಾಧರ್ ಎಸ್ ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಎ, NRLM ಯೋಜನೆಯ ತಾಲೂಕು ಮೇಲ್ವಿಚಾರಕರಾದ ಶ್ರೀಮತಿ ನಳಿನಿ ಉಪಸ್ಥಿತರಿದ್ದರು.
ಕೋಡಿಂಬಾಡಿ ಹಾಗೂ ವಿಟ್ಲ ಪಡ್ನೂರು ಗ್ರಾಮದ ತೆಂಗಿನ ಗೆರಟೆ ಕಲಾಕೃತಿ ತಯಾರಿಕೆ ತರಬೇತಿಯಲ್ಲಿ ಭಾಗವಹಿಸಿದ ಸಂಜೀವಿನಿ ಒಕ್ಕೂಟದ ಸದಸ್ಯರು ಸಹ ಉಪಸ್ಥಿತರಿದ್ದರು.ತೆಂಗಿನ ಗೆರಟೆ ಕಲಾಕೃತಿ ತರಬೇತಿಯ ನಂತರ ಆದ ಬೆಳವಣಿಗೆ, ಮುಂದಿನ ಯೋಜನೆಗಳು, ಮಹಿಳೆಯರು ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಬಗ್ಗೆ ಚರ್ಚಿಸಲಾಯಿತು.

