ಗುಜರಾತ್ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ. ದಾಹೋದ್: ಗುಜರಾತ್ನ...
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರು: ಜಯನಗರ ವಿಧಾನಸಭಾ...
ಅಜಯ್ ದೇವಗನ್ ಅಭಿನಯದ ‘ದೃಶ್ಯಂ 3: ದಿ ಕನ್ಕ್ಲೂಷನ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದ್ದು, ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ ವಿಶ್ವಾದ್ಯಂತ ₹300 ಕೋಟಿ ಗಡಿ ದಾಟಿದೆ. ಚಿತ್ರದ ಒಟ್ಟು ವಿಶ್ವಾದ್ಯಂತ ಗಳಿಕೆ...
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ...
ಕರಾವಳಿ ಕರ್ನಾಟಕದ ಹೆಮ್ಮೆಯ ತುಳು ಭಾಷೆಯನ್ನು ಡಿಜಿಟಲ್ ಜಗತ್ತಿನಲ್ಲಿ ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಇನ್ನು ಮುಂದೆ ನೇರವಾಗಿ ತುಳು ಲಿಪಿಯಲ್ಲೇ ಸಂದೇಶಗಳನ್ನು ಟೈಪ್ ಮಾಡಲು ನೆರವಾಗುವ ‘ಕುರಲ್...
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ....
ಬೆಂಗಳೂರು : 2027 ಹೊಸ ವರ್ಷ ಆರಂಭದಲ್ಲಿಯೇ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲು ರಾಜ್ಯ ಸರಕಾರ ಮುಂದಾಗಿದೆ ಎನ್ನಲಾಗಿದೆ. ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ...