ಸೌಜನ್ಯ ಪ್ರಕರಣದ ಮರು ತನಿಖೆಗೆ ಕರಾವಳಿ ಬಿಜೆಪಿ ಶಾಸಕರಿಂದ ಸಿಎಂ ಗೆ ಮನವಿ – ನಳಿನ್‌ ನೇತ್ರತ್ವದಲ್ಲಿ ರಾಜ್ಯಪಾಲರ ಭೇಟಿ | ಸಿಎಂ ಏನಂದ್ರು ಗೊತ್ತೆ ?

372753741_834192598074513_6917446736312397936_n
Ad Widget

Ad Widget

Ad Widget

ಬೆಂಗಳೂರು : ಸೌಜನ್ಯ ಪ್ರಕರಣ ವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ನಿಯೋಗದಲ್ಲಿ ಶಾಸಕರಾದ ಸುನೀಲ್ ಕುಮಾರ್, ವೇದವ್ಯಾಸ್ ಕಾಮತ್, ಡಾ, ಭರತ್ ಶೆಟ್ಟಿ, ಭಾಗಿರಥಿ ಮುರುಳ್ಯ, ಗುರ್ಮೆ ಸುರೇಶ್ ಶೆಟ್ಟಿ, ಹರೀಶ್ ಪೂಂಜಾ ಇದ್ದರು.

Ad Widget

ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ.ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈ ಕುರಿತು ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿದ್ದು ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಕೇಂದ್ರಿಯ ತನಿಖಾ ಸಂಸ್ಥೆ ಸಿಬಿಐಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ತಿಳಿಸಿರುವುದಾಗಿ ನಿಯೋಗದಲ್ಲಿದ್ದ ಬಿಜೆಪಿ ಶಾಸಕರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದಾರೆ.

Ad Widget

Ad Widget

Ad Widget

ಹಾಗಾಗಿಯೂ ” ನೀವುಗಳು ಬಂದಿರುವುದರಿಂದ ಇನ್ನೊಮ್ಮೆ ನಾನು ಕಾನೂನು ಸಲಹೆ ಪಡೆಯುವುದಾಗಿ ಸಿ ಎಂ ಭರವಸೆ ನೀಡಿರುವುದಾಗಿಯೂ ಬಿಜೆಪಿ ಶಾಸಕರು ಬರೆದುಕೊಂಡಿದ್ದಾರೆ. ರ

Ad Widget

ರಾಜ್ಯಪಾಲರ ಭೇಟಿ

Ad Widget

Ad Widget

ಜೂ 27 ರಂದು ಬೆಳ್ತಂಗಡಿಯಲ್ಲಿ ಕರಾವಳಿಯ ಬಿಜೆಪಿ ಶಾಸಕರು ಸೌಜನ್ಯಳ ನ್ಯಾಯಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿಗಳ ಬಳಿ ತೆರಳಿ ಮರು ತನಿಖೆಗೆ ಒತ್ತಾಯಿಸುವುದಾಗಿ ಆಗ್ರಹಿಸಿದರು.
ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರ ನಿಯೋಗ ರಾಜ್ಯಪಾಲರನ್ನು ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬೇಟಿ ಮಾಡಿ ಕು.ಸೌಜ್ಯನಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಸಿದರು

Leave a Reply

Recent Posts

ಮಹಿಳಾ ಪೊಲೀಸ್ ಪೇದೆಯನ್ನು ಹತ್ಯೆಗೈದು ನಾಪತ್ತೆಯಾಗಿದ್ದಳೆ ಎಂದು ಬಿಂಬಿಸಿದ್ದ ಸಹೋದ್ಯೋಗಿ ಎರಡು ವರ್ಷಗಳ ಬಳಿಕ ಅಂದರ್ ! ಚೈತ್ರಾ ಟಿಕೆಟ್‌ ಡೀಲ್ ನಂತೆ ನಕಲಿ ಪಾತ್ರ, ತಿರುಚಿದ ಆಡಿಯೋ, ನಕಲಿ ಕೊವೀಡ್‌ ಸರ್ಟಿಫಿಕೆಟ್‌ – ಅಬ್ಬಾಬ್ಬ ಕೊಲೆಯನ್ನು ಮುಚ್ಚಲು ಈ ಕ್ರಿಮಿನಲ್‌ ಮಾಡಿದ ಪ್ಲ್ಯಾನ್‌ ಒಂದಾ ಎರಡಾ ?

error: Content is protected !!
%d bloggers like this: