ಉಡುಪಿ : ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ರೂಪಾಯಿ ವಂಚನೆ ನಡೆಸಿದ ಪ್ರಮುಖ ಆರೋಪಿ ಹಿಂದೂ ಸಂಘಟನೆಗಳ ನಾಯಕಿ , ವಾಗ್ಮಿ ಚೈತ್ರ ಕುಂದಾಪುರಳನ್ನು (Chaithra Kundapura) ಪೊಲೀಸ್ ರು ಸಿನಿಮೀಯ ಶೈಲಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ, ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಸಿನಿಮಿಯ ಶೈಲಿಯಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರಿನ ಉದ್ಯಮಿ , ಬೆಂಗಳೂರಿನ ಶೆಫ್ಟಾಕ್ ಫುಡ್ & ಹಾಸ್ಪಿಟಾಲಿಟಿ ಪ್ರೈ.ಲಿ ನ ಸಂಸ್ಥಾಪಕ ಗೋವಿಂದ ಬಾಬು ಪೂಜಾರಿ ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರಿಗೆ ಟಿಕೇಟ್ ಕೊಡಿಸುವ ನೆಪದಲ್ಲಿ ಸುಮಾರು ಏಳು ಕೋಟಿ ರೂಪಾಯಿ ವಂಚನೆ ಮಾಡಿದ್ದರು.
ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಬಿಲ್ಲವ ನಾಯಕ ಟಿಕೆಟ್ ಕೊಡಿಸುವುದಾಗಿ ನಾಲ್ಕೈದು ಜನರು, ಕೇಂದ್ರದ ನಾಯಕರು, ಆರೆಸ್ಸೆಸ್ ಪ್ರಮುಖರ ಹೆಸರಿನಲ್ಲಿ ಪಂಗನಾಮ ಹಾಕಿದ್ದಾರೆ. ಗೋವಿಂದ ಬಾಬು ಪೂಜಾರಿಯವರಿಗೆ ಬೈಂದೂರಿನ ಬಿಜೆಪಿ ಟಿಕೇಟ್ ಕೊಡಿಸುವುದಾಗಿ ಸುಮಾರು ಮೂರು ಹಂತದಲ್ಲಿ ಏಳು ಕೋಟಿ ರೂಪಾಯಿ ಪೀಕಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು.
ಹಿಂದೂತ್ವದ ಬೆಂಕಿ ಚೆಂಡು ಎಂದೇ ಖ್ಯಾತಿಯಾಗಿದ್ದ ಚೈತ್ರ ಕುಂದಾಪುರ ಹಾಗೂ ಇತರರ ಮೂವರನ್ನು ವಶಕ್ಕೆ ಪಡೆದ ಸಿಸಿಬಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.
ಹಲವು ವ್ಯಕ್ತಿಗಳಿಗೆ ಬಿಜೆಪಿ ಟಿಕೇಟ್ ಕೊಡಿಸುವುದಾಗಿ ಬೇರೆ ಬೇರೆ ತಂಡಗಳು ಇದೇ ರೀತಿ ವಂಚಿಸಿರುವ ಬಗ್ಗೆ ಬಂದಿರುವ ದೂರುಗಳನ್ನು ಗಂಭೀರವಾಗಿ ಪೊಲೀಸ್ ಇಲಾಖೆ ಪರಿಗಣಿಸಿದೆ ಎನ್ನಲಾಗಿದೆ.