ಶಿವಮೊಗ್ಗ ಸೆ.13: ‘ಚೈತ್ರಾ ಕುಂದಾಪುರ (Chaithra Kundapura) ಅವರು ವಂಚನೆ ಮಾಡಿದ್ದಾರೆ ಎಂದರೆ ತನಿಖೆ ಆಗಲಿ, ಕಾನೂನು ಕ್ರಮ ಆಗಲಿ’ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಶಿವಮೊಗ್ಗದಲ್ಲಿ ಚೈತ್ರಾ ಕುಂದಾಪುರ ಬಂಧನ ವಿಷಯವಾಗಿ ಪ್ರತಿಕ್ರಿಯಿಸಿದ ಅವರು, ವಂಚನೆ ಮಾಡಿದ್ದಾರೆ ಎಂದರೆ ತನಿಖೆ ಆಗಲಿ, ಕಾನೂನು ಕ್ರಮ ಆಗಲಿ ಆದರೆ ಅನಾವಶ್ಯಕ ಹಾಗೂ ದುರುದ್ದೇಶಪೂರ್ವಕವಾಗಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದರು.
ಸಚಿವ ಡಿ.ಸುಧಾಕರ್ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು,ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಸುಧಾಕರ್ ಗೆ ಒಂದು ಕಾನೂನು ಬೇರೆಯವರಿಗೊಂದು ಕಾನೂನು ಇಲ್ಲ,ಕಾನೂನಿಗೆ ವಿರುದ್ಧವಾಗಿದ್ದರೆ ಸುಧಾಕರ್ ವಿರುದ್ಧ ಕ್ರಮ ಆಗಲಿ, ವಿಚಾರಣೆ ಆಗಲಿ,ಸತ್ಯಾಸತ್ಯತೆ ಹೊರಬರಲಿ ಎಂದರು.
ಈ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯ ಕಾಂಗ್ರೇಸ್ , ಮಾಜಿ ಗೃಹಸಚಿವರು ಆರೋಪಿಯ ಪರ ವಕಾಲತ್ತು ವಹಿಸುತ್ತಿರುವುದರ ಹಿಂದೆ ಯಾವ ಸತ್ಯ ಅಡಗಿದೆ?
ವಂಚನೆ ಆರೋಪಿಯೊಂದಿಗೆ ವೇದಿಕೆಯಲ್ಲಿ ಯಾವ ಘನಂದಾರಿ ಚರ್ಚೆ ಮಾಡಿದ್ದಿರಿ @JnanendraAraga ಅವರೇ?
ಕುಮಾರಕೃಪಾದಲ್ಲಿ ಡೀಲಿಂಗ್ ನಡೆಸಿದ
ಸ್ಯಾಂಟ್ರೋ ರವಿ, ಚೈನ್ ಚೈತ್ರ ಜ್ಞಾನೇಂದ್ರರಿಗೆ ಪರಮಾಪ್ತರು.
ವಂಚಕರಿಗೆ ಕುಮಾರಕೃಪಾ ಸಿಗಲು ಮಾಜಿ ಗೃಹ ಸಚಿವರ ಕೃಪೆ ಇತ್ತೇ?
ಬಿಜೆಪಿ ಪಕ್ಷದ ಟಿಕೆಟ್ ಕೊಡಿಸುತ್ತೇನೆಂದು, ಬಿಜೆಪಿಯವರಿಗೇ ವಂಚಿಸಿದರೂ ವಂಚಕಿಯ ಪರ ನಿಂತಿರುವುದರ ಹಿಂದೆ ಯಾವ ಹಿತಾಸಕ್ತಿ ಅಡಗಿದೆ?
ಮಾಜಿ ಗೃಹಸಚಿವರು ಆರೋಪಿಯ ಪರ ವಕಾಲತ್ತು ವಹಿಸುತ್ತಿರುವುದರ ಹಿಂದೆ ಯಾವ ಸತ್ಯ ಅಡಗಿದೆ?
— Karnataka Congress (@INCKarnataka) September 13, 2023
ವಂಚನೆ ಆರೋಪಿಯೊಂದಿಗೆ ವೇದಿಕೆಯಲ್ಲಿ ಯಾವ ಘನಂದಾರಿ ಚರ್ಚೆ ಮಾಡಿದ್ದಿರಿ @JnanendraAraga ಅವರೇ?
ಕುಮಾರಕೃಪಾದಲ್ಲಿ ಡೀಲಿಂಗ್ ನಡೆಸಿದ
ಸ್ಯಾಂಟ್ರೋ ರವಿ, ಚೈನ್ ಚೈತ್ರ ಜ್ಞಾನೇಂದ್ರರಿಗೆ ಪರಮಾಪ್ತರು.
ವಂಚಕರಿಗೆ ಕುಮಾರಕೃಪಾ ಸಿಗಲು ಮಾಜಿ ಗೃಹ ಸಚಿವರ… pic.twitter.com/BnyxRkkmz8
ಬಿಜೆಪಿಯಲ್ಲಿ ಸಿಎಂ ಹುದ್ದೆಗೆ 2,500 ಕೋಟಿ ನೀಡಬೇಕು ಎಂಬ ಸತ್ಯ ಬಹಿರಂಗಪಡಿಸಿದ್ದ @BasanagoudaBJP ಅವರು ಬಿಜೆಪಿ ಟಿಕೆಟ್ ಗೆ 7 ಕೋಟಿ ಕೊಡಬೇಕು ಎಂದು ವಂಚಿಸಿದ ಆರೋಪಿಯೊಂದಿಗೆ.
— Karnataka Congress (@INCKarnataka) September 13, 2023
🔷ಸ್ಯಾಂಟ್ರೋ ರವಿಯೂ ಬಿಜೆಪಿಗರಿಗೆ ಆಪ್ತ,
🔷PSI ಹಗರಣದ ಆರೋಪಿಗಳೂ ಬಿಜೆಪಿಗರಿಗೆ ಆಪ್ತರು,
🔷ರೌಡಿ ಶೀಟರ್ ಗಳೂ ಬಿಜೆಪಿಗರಿಗೆ ಆಪ್ತರು,
🔷ಟಿಕೆಟ್ ಹಗರಣದ… pic.twitter.com/e4onp4yrOE