Uncategorized
D Veerendra Heggade ಆರ್‌ಸೆಟಿ ಮತ್ತು ರುಡ್‌ಸೆಟ್ ಸಂಸ್ಥೆಗಳ ತರಬೇತಿಯಿಂದ ನಿರುದ್ಯೋಗ ಸಮಸ್ಯೆ ನಿವಾರಣೆ, ದೇಶದ ಪ್ರಗತಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ

ಉಜಿರೆ: ಯುವ ಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು ಆರ್‌ಸೆಟಿ ಮತ್ತು ರುಡ್‌ಸೆಟ್ ಸಂಸ್ಥೆಗಳ ಮೂಲಕ ನಿರುದ್ಯೋಗಿಗಳಿಗೆ ನೀಡುತ್ತಿರುವ ಮಾಹಿತಿ, ಮಾರ್ಗದರ್ಶನ ಮತ್ತು ತರಬೇತಿ ಹಾಗೂ ಬ್ಯಾಂಕುಗಳಿಂದ ನೀಡುವ ಆರ್ಥಿಕ ನೆರವಿನಿಂದ ಎಲ್ಲರೂ ಇಂದು ಸ್ವ-ಉದ್ಯೋಗದ ಮೂಲಕ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ದೇಶದ ಪ್ರಗತಿಗೆ ಅಮೂಲ್ಯ ಸೇವೆ ನೀಡುತ್ತಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಗುರುವಾರ ಧರ್ಮಸ್ಥಳದಲ್ಲಿ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಆಯೋಜಿಸಿದ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳು ಮತ್ತು ತರಬೇತುದಾರರ ವಾರ್ಷಿಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಇಲಾಖೆಯೊಂದಿಗೆ ಮಾಡಿಕೊಂಡ ಒಪ್ಪಂದದಂತೆ, ತರಬೇತಿ ಸಂಸ್ಥೆಗಳ ಕಟ್ಟಡ ನಿರ್ಮಾಣ ಹಾಗೂ ನಿವೇಶನಕ್ಕೆ ಪೂರ್ಣ ಸಹಕಾರ ಸಿಗುತ್ತದೆ. ಪ್ರಗತಿಗೆ ಮಿತಿ ಎಂಬುದು ಇಲ್ಲ. ಇಂದಿನ ಸ್ಪರ್ಧಾಯುಗದ ಬೇಡಿಕೆಯಂತೆ ಅವಶ್ಯಕವಾದ ಅಲ್ಪಾವಧಿ ತರಬೇತಿ ನೀಡಿ ಸ್ವಯಂ ಉದ್ಯೋಗ ಮಾಡಲು ಪ್ರೋತ್ಸಾಹ ನೀಡಲಾಗುತ್ತದೆ. ಹೊಸ ತರಬೇತಿ ಕಾರ್ಯಕ್ರಮಗಳನ್ನೂ ರೂಪಿಸಲಾಗುತ್ತದೆ. ಮಹಿಳೆಯರು ಕೂಡಾ ಸ್ವಯಂ ಉದ್ಯೋಗ ಕ್ಷೇತ್ರಕ್ಕೆ ಬಂದು ಸ್ವಾವಲಂಬಿ ಜೀವನ ನಡೆಸುವುದರ ಮೂಲಕ ಮಹಿಳಾ ಸಬಲೀಕರಣವೂ ಆಗುತ್ತಿದೆ. ಇಂದು ಪದವೀಧರರು ಹಾಗೂ ಸ್ನಾತಕೋತ್ತರ ಪದವೀಧರರೂ ಸ್ವಯಂ-ಉದ್ಯೋಗ ಕ್ಷೇತ್ರಕ್ಕೆ ಬರುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು.
ಆರ್‌ಸೆಟಿ ಮತ್ತು ರುಡ್‌ಸೆಟ್ ಸಂಸ್ಥೆಗಳಲ್ಲಿ ನೀಡುವ ತರಬೇತಿ ಮಾದರಿಯಾಗಿದ್ದು, ಉತ್ತಮ ಪರಿಣಾಮ ಬೀರುತ್ತದೆ. ತರಬೇತುದಾರರು ಆತ್ಮೀಯತೆಯಿಂದ ಆಪ್ತ ಸಮಾಲೋಚನೆಯೊಂದಿಗೆ ತರಬೇತಿ ಪಡೆಯುವವರ ಸಮಸ್ಯೆ, ಸವಾಲುಗಳನ್ನು ಸೌಹರ್ದಯುತವಾಗಿ ಪರಿಹರಿಸಿ ಪ್ರೇರಣೆ ನೀಡಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.
ದೇಶದೆಲ್ಲೆಡೆ 519 ಆರ್‌ಸೆಟಿ ಮತ್ತು ರುಡ್‌ಸೆಟ್ ಸಂಸ್ಥೆಗಳ ಮೂಲಕ ಉತ್ತಮ ತರಬೇತಿ ನೀಡಿ ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಅಮೂಲ್ಯ ಕೊಡುಗೆ ನೀಡಲಾಗುತ್ತದೆ ಎಂದು ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು.

ಶುಭಾಶಂಸನೆ ಮಾಡಿದ ಕೆನರಾ ಬ್ಯಾಂಕಿನ ಮಂಗಳೂರು ವೃತ್ತದ ಮಹಾಪ್ರಬಂಧಕ ಬಿ. ಸುಧಾಕರ ಕೊಟಾರಿ ತರಬೇತಿ ಪಡೆದ ನಿರುದ್ಯೋಗಿಗಳು ತಮಗೆ ಸಮೀಪದ ಬ್ಯಾಂಕಿನಿಂದ ಸಾಲ ಪಡೆದು ಸದುಪಯೋಗ ಮಾಡಬೇಕು. ಶಾಖಾ ಪ್ರಬಂಧಕರು ಸಾಲ ಮಂಜೂರಾತಿಗೆ ವಿಳಂಬ ಮಾಡಿದಲ್ಲಿ, ತಕ್ಷಣ ತನ್ನ ಗಮನಕ್ಕೆ ತರಬೇಕು. ತರಬೇತಿ ಪಡೆದವರು ಬ್ಯಾಂಕ್ ಶಾಖೆ ಮತ್ತು ತರಬೇತಿ ಸಂಸ್ಥೆಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಹೇಳಿದರು.
ಆರ್‌ಸೆಟಿಗಳ ರಾಷ್ಟ್ರೀಯ ನಿರ್ದೇಶಕ ಜಿ. ಮುರುಗೇಶನ್ ಮಾತನಾಡಿ, ಪ್ರಸ್ತುತ ಅವಶ್ಯಕತೆಯಂತೆ ತರಬೇತಿ, ಹೊಸ ಪಠ್ಯಕ್ರಮವನ್ನು ರೂಪಿಸಲಾಗುತ್ತದೆ. ನಿರುದ್ಯೋಗ ಸಮಸ್ಯೆ ನಿವಾರಣೆಯಲ್ಲಿ ರುಡ್‌ಸೆಟ್ ಮತ್ತು ಆರ್‌ಸೆಟಿ ಗಳ ಸೇವೆ ಬಗ್ಯೆ ಸಮೀಕ್ಷೆ ನಡೆಸಲಾಗುತ್ತದೆ. ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆ ಕೂಡಾ ಈ ಬಗ್ಯೆ ಮಾರ್ಗದರ್ಶನ ನೀಡುತ್ತಿದೆ. ಎಲ್ಲರೂ ಸೇವಾ ಮನೋಭಾವ ಹಾಗೂ ಸಮರ್ಪಣಾ ಭಾವನೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಸಲಹೆ ನೀಡಿದರು.

ಸಂಸ್ಥೆಗಳ ಕೇಂದ್ರೀಯ ಕಾರ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ ಕಲ್ಲಾಪುರ್ ವರದಿ
ಸಾದರಪಡಿಸಿ ಆರಂಭದಿಂದ 1819 ಗ್ರಾಮಾಭಿವೃದ್ಧಿ ಕಾರ್ಯಕ್ರಮಗಳ ಮೂಲಕ 85916ಮಂದಿ ಅದರ
ಪ್ರಯೋಜನ ಪಡೆದಿರುತ್ತಾರೆ. ಪ್ರಸಕ್ತ ವರ್ಷ 47ಕಾರ್ಯಕ್ರಮಗಳ ಮೂಲಕ 1212 ಮಂದಿಗೆ ತರಬೇತಿ
ನೀಡಲಾಗಿದೆ. ಕೌಶಲಾಭಿವೃದ್ಧಿ ತರಬೇತಿ, ಸ್ವಯಂ ಉದ್ಯೋಗದ ಬಗ್ಗೆ ಅರಿವು, ಜಾಗೃತಿ ಮಾಡಿಸುವುದು, ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಯಕ್ರಮ, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗದವರಿಗೆ ಹಾಗೂ ಜೈಲುವಾಸಿಗಳಿಗೆ ಸ್ವಯಂ ಉದ್ಯೋಗ ತರಬೇತಿ ನೀಡಲಾಗಿದೆ. ಮಹಿಳಾ ಸಬಲೀಕರಣ, ಪರಿಸರ ಸಂರಕ್ಷಣೆ, ಆರ್ಥಿಕ ಸಾಕ್ಷರತೆ ರಕ್ತದಾನ ಶಿಬಿರ ಇತ್ಯಾದಿ ಚಟುವಟಿಕೆಗಳನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಗಿರಿಧರ್ ಕಲ್ಲಾಪುರ್ ಸ್ವಾಗತಿಸಿದರು. ಉಜಿರೆ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಂ. ಸುರೇಶ್ ಧನ್ಯವಾದವಿತ್ತರು. ಹಿರಿಯ ಉಪನ್ಯಾಸಕಿ ಅನಸೂಯಾ ಕಾರ್ಯಕ್ರಮ ನಿರ್ವಹಿಸಿದರು.
Uncategorized
Leelavathi | ಪ್ರಖ್ಯಾತ ಹಿರಿಯ ನಟಿ ಲೀಲಾವತಿ ವಿಧಿವಶ – ದಕ್ಷಿಣಕನ್ನಡದ ಕುಗ್ರಾಮದಿಂದ ಹೋಗಿ ಸಿನಿಮಾ ರಂಗದಲ್ಲಿ ಅಪಾರ ಸಾಧನೆ ಮೆರೆದ ನಟಿ

ಬೆಂಗಳೂರು: ಕೆಲ ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಖ್ಯಾತ ಹಿರಿಯ ನಟಿ ಲೀಲಾವತಿ (Leelavathi) ಅವರು ಶುಕ್ರವಾರ ಸಂಜೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.
ನೆಲಮಂಗಲದ ಸೋಲದೇವನ ಹಳ್ಳಿಯ ನಿವಾಸದಲ್ಲೇ ಅವರಿಗೆ ಆರೈಕೆ ಮಾಡಲಾಗುತ್ತಿತ್ತು. ಪುತ್ರ ವಿನೋದ್ ರಾಜ್ ಅವರು ನೋಡಿ ಕೊಳ್ಳುತ್ತಿದ್ದರು.
ದಕ್ಷಿಣಕನ್ನಡ ದ ಬೆಳ್ತಂಗಡಿಯ ಬಂಗಾಡಿಯ ಮೂಲದ ಲೀಲಾವತಿ ( ಲೀಲಾ ಕಿರಣ್) ಕನ್ನಡ, ತಮಿಳು ಮತ್ತು ತೆಲುಗು ಚಲನಚಿತ್ರಗಳಲ್ಲಿ ನಟಿಸಿದ್ದ ಹಿರಿಯ ಭಾರತೀಯ ನಟಿ.
50 ವರ್ಷಗಳಿಗೂ ಹೆಚ್ಚು ಕಾಲ ತಮ್ಮ ವೃತ್ತಿಜೀವನದುದ್ದಕ್ಕೂ 600 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದರು. ಕನ್ನಡದಲ್ಲಿ 400 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಮನೆ ಮಾತಾಗಿದ್ದರು. ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಮತ್ತು ಸಂತ ತುಕಾರಂ ಚಿತ್ರಗಳಲ್ಲಿನ ಸ್ಮರಣೀಯ ಅಭಿನಯಕ್ಕಾಗಿ ಅವರು ಜನಪ್ರಿಯತೆಯ ಉತ್ತುಂಗಕ್ಕೆ ಏರಿದ್ದರು. ವರು 1999 ರಲ್ಲಿ ಡಾ. ರಾಜ್‌ಕುಮಾರ್ ಪ್ರಶಸ್ತಿ ಮತ್ತು ಫಿಲ್ಮ್‌ಫೇರ್ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಚಂಚಲಾ ಕುಮಾರಿ ನಂತರ ಶಂಕರ್ ಸಿಂಗ್ ಅವರ ನಾಗ ಕನ್ನಿಕಾ ಚಿತ್ರದಲ್ಲಿ ಸಣ್ಣ ಪಾತ್ರಗಳ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಲೀಲಾವತಿ ಅವರು ಮಹಾಲಿಂಗ ಭಾಗವತರ್ ಅವರ ಶ್ರೀ ಸಾಹಿತ್ಯ ಸಾಮ್ರಾಜ್ಯ ನಾಟಕ ಕಂಪನಿಗೆ ಸೇರಿದರು.
ಸುಬ್ಬಯ್ಯ ನಾಯ್ಡು ಅವರ 1958 ರ ಸೂಪರ್ ಹಿಟ್ ಚಲನಚಿತ್ರ ಭಕ್ತ ಪ್ರಹ್ಲಾದ, ಬಳಿಕ ಮಾಂಗಲ್ಯ ಯೋಗ, ಧರ್ಮ ವಿಜಯ ಮತ್ತು ರಣಧೀರ ಕಂಠೀರವ ಮುಂತಾದ ಚಲನಚಿತ್ರಗಳಲ್ಲಿ ನಟಿಸಿ ಗಮನ ಸೆಳೆದರು.
ರಾಣಿ ಹೊನ್ನಮ್ಮ ಚಿತ್ರದಿಂದ ಲೀಲಾವತಿ ಪೂರ್ಣ ಪ್ರಮಾಣದ ನಾಯಕಿಯಾದರು. ಸಂತ ತುಕಾರಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ ಮತ್ತು ಮನ ಮೆಚ್ಚಿದ ಮಡದಿ ಚಿತ್ರಗಳಲ್ಲಿ ನಾಯಕಿ. ಅವರು ಗೆಜ್ಜೆ ಪೂಜೆ ಮತ್ತು ಡಾಕ್ಟರ್ ಕೃಷ್ಣ ಚಿತ್ರದಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದರು. ಮನೋಜ್ಞ ಅಭಿನಯಕ್ಕಾಗಿ ಕರ್ನಾಟಕ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದರು.
ಭೂದಾನ ಚಿತ್ರದಲ್ಲಿ ಡಾ. ರಾಜಕುಮಾರ್ ಅವರ ಮಗಳಾಗಿ, ವಾತ್ಸಲ್ಯ ಚಿತ್ರದಲ್ಲಿ ತಂಗಿಯಾಗಿ,ಪ್ರೇಮಮಯಿ ಚಿತ್ರದಲ್ಲಿ ಅತ್ತಿಗೆಯಾಗಿ ವಿವಿಧ ಚಿತ್ರಗಳಲ್ಲಿ ರಾಜಕುಮಾರ್ ಅವರೊಂದಿಗೆ ನಾಯಕಿಯಾಗಿ ಕೆಲಸ ಮಾಡಿದ ಜನ ಮೆಚ್ಚಿದ ಅಪೂರ್ವ ಜೋಡಿ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಶ್ರಾವಣ ಬಂತು , ವಸಂತಗೀತೆ, ನಾ ನಿನ್ನ ಮರೆಯಲಾರೆ ಮತ್ತು ಜ್ವಾಲಾಮುಖಿಯಲ್ಲಿಯೂ ನಟಿಸಿದ್ದರು.
Uncategorized
loan write off ದೇಶದ ಎಲ್ಲಾ ವಾಣಿಜ್ಯ ಬ್ಯಾಂಕುಗಳು ಕಳೆದ 5 ವರ್ಷಗಳಲ್ಲಿ 10.57 ಲಕ್ಷ ಕೋಟಿ ರೂ. ರೈಟ್-ಆಫ್….

ನವದೆಹಲಿ: ದೇಶದ ಎಲ್ಲ ವಾಣಿಜ್ಯ ಬ್ಯಾಂಕುಗಳು ಕಳೆದ 5 ವರ್ಷಗಳಲ್ಲಿ 10.57 ಲಕ್ಷ ಕೋಟಿ ರೂಪಾಯಿ ಸಾಲವನ್ನು ರೈಟ್ ಆಫ್ ಮಾಡಿದ್ದು, ಇದರಲ್ಲಿ 5.52 ಲಕ್ಷ ಕೋಟಿ ರೂ. ದೊಡ್ಡ ಕೈಗಾರಿಕೆಗಳಿಗೆ ಸಂಬಂಧಿಸಿರುವುದಾಗಿ ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ನಿನ್ನೆ (ಡಿ.05) ಮಾಹಿತಿಯನ್ನು ನೀಡಿದೆ.
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮಾಹಿತಿಯ ಪ್ರಕಾರ ದೇಶದ ಎಲ್ಲ ವಾಣಿಜ್ಯ ಬ್ಯಾಂಕುಗಳು ಕಳೆದ ಐದು ಹಣಕಾಸು ವರ್ಷಗಳಲ್ಲಿ 10.57 ಲಕ್ಷ ಕೋಟಿ ರೂಪಾಯಿಯನ್ನು ರೈಟ್ ಆಫ್ ಮಾಡಿವೆ ಎಂದು ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ವಿತ್ತ ಖಾತೆಯ ರಾಜ್ಯ ಸಚಿವ ಭಾಗವತ್ ಕರದ್ ಈ ರೀತಿಯಾಗಿ ಸಂಸತ್ತಿನಲ್ಲಿ ಮಾಹಿತಿ ನೀಡಿದರು.ಇದೇ ಅವಧಿಯಲ್ಲಿ ವಸೂಲಾಗದ ಒಟ್ಟು ಸಾಲದಲ್ಲಿ (ಎನ್‌ಪಿಎ) ₹7.15 ಲಕ್ಷ ಕೋಟಿಯನ್ನು ವಸೂಲಿ ಮಾಡಲಾಗಿದೆ ಎಂದು ಹೇಳಿದರು.
ರೈಟ್ ಆಫ್ ಮತ್ತು ಸಾಲಮನ್ನಾ ನಡುವೆ ಒಂದು ವ್ಯತ್ಯಾಸವಿದೆ. ಅದೇನೆಂದರೆ, ಬ್ಯಾಂಕುಗಳು ತಮ್ಮ ಬ್ಯಾಲೆನ್ಸ್ ಶೀಟ್ನಿಂದ ಮರುಪಾವತಿಯಾದ ಸಾಲವನ್ನು ತೆಗದುಹಾಕಿ ಎನ್ಪಿಎ ವರ್ಗಕ್ಕೆ ಸೇರಿಸುತ್ತದೆ. ಅಂದರೆ, ಸಾಲವನ್ನು ಬ್ಯಾಂಕ್ನ ಆಸ್ತಿ ಎಂದು ಪರಿಗಣಿಸುವುದಿಲ್ಲ. ಆದರೆ, ಸಾಲವನ್ನು ರೈಟ್ ಆಫ್ ಮಾಡಿದ ನಂತರವೂ ಸಾಲ ಮರುಪಾವತಿ ಪ್ರಕ್ರಿಯೆ ಮುಂದುವರಿಯುತ್ತದೆ. ಆದರೆ, ಸಾಲಮನ್ನಾ ವಿಚಾರಕ್ಕೆ ಬಂದಾಗ ಬ್ಯಾಂಕ್ ನೀಡಿದ ಸಾಲವನ್ನು ಸಂಪೂರ್ಣವಾಗಿ ವಜಾಗೊಳಿಸಲಾಗುತ್ತದೆ. ಅಂದರೆ, ಬ್ಯಾಂಕ್ ಮತ್ತು ಸಾಲ ಪಡೆದವನ ನಡುವೆ ಯಾವುದೇ ಒಪ್ಪಂದ ಇರುವುದಿಲ್ಲ. ಹೀಗಾಗಿ ಸಾಲವನ್ನು ಮರುಪಾವತಿ ಮಾಡುವ ಅವಕಾಶವೇ ಇರುವುದಿಲ್ಲ ಎಂದು ಹೇಳಿದರು.
ಸುಮಾರು 2300 ಕಂಪನಿಗಳು ವಿವಿಧ ವಾಣಿಜ್ಯ ಬ್ಯಾಂಕ್‌ಗಳಿಂದ 5 ಕೋಟಿ ರೂಪಾಯಿಗೂ ಹೆಚ್ಚು ಸಾಲ ಪಡೆದು ಮರುಪಾವತಿ ಮಾಡಿಲ್ಲ. ಈ ಮೊತ್ತವೇ ಸುಮಾರು 2 ಲಕ್ಷ ಕೋಟಿ ರೂಪಾಯಿಗೂ ಹೆಚ್ಚಿದೆ. ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾರ್ಗಸೂಚಿಗಳು ಮತ್ತು ನೀತಿಯ ಪ್ರಕಾರ, ಬ್ಯಾಂಕ್‌ಗಳು ಈ ಮೊತ್ತವನ್ನು ಎನ್‌ಪಿಎ ವರ್ಗಕ್ಕೆ ಸೇರಿಸಿವೆ.
ಸರ್ಕಾರದ ಸೂಕ್ತ ಕ್ರಮಗಳ ಅನುಷ್ಠಾನದಿಂದ ಇದು ಸಾಧ್ಯವಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.
2018-19ನೇ ಹಣಕಾಸು ವರ್ಷದಿಂದ 2022-23ನೇ ಹಣಕಾಸು ವರ್ಷದವರೆಗೆ ಕಳೆದ ಐದು ವರ್ಷಗಳಲ್ಲಿ ಬೃಹತ್ ಕೈಗಾರಿಕೆಗಳು ಮತ್ತು ಇತರೆ ಸೇವೆಗಳಿಗೆ ಸಂಬಂಧಿಸಿದ 5.52 ಲಕ್ಷ ಕೋಟಿ ರೂ.ಗಳನ್ನು ವಾಣಿಜ್ಯ ಬ್ಯಾಂಕುಗಳು ರೈಟ್ ಆಫ್ ಮಾಡಿವೆ. ಇದರಲ್ಲಿ 93,874 ಕೋಟಿ ರೂ. ವಂಚನೆಯ ಹಣವೂ ಸೇರಿದೆ. ಒಟ್ಟು 10.57 ಲಕ್ಷ ಕೋಟಿ ರೂ.ಗಳು ಅಂದರೆ, ಶ್ರೀಮಂತರ ಲಕ್ಷಾಂತರ ಕೋಟಿ ರೂಪಾಯಿ ಕೂಡ ಮನ್ನಾವಾದಂತೆ.
Uncategorized
New Simcard Rules :ಸಿಮ್ ಕಾರ್ಡ್ ಖರೀದಿಗೆ ಕೇಂದ್ರ ಸರಕಾರ ಜಾರಿಗೆ ತಂದಿದೆ ಕಠಿಣ ನಿಯಮಗಳು – ಬೇಕಾಬಿಟ್ಟಿ ಅಕ್ಟಿವೇಶನ್ ಗೆ ಕಡಿವಾಣ – ಇಲ್ಲಿದೆ ಕಂಪ್ಲಿಟ್ ಡಿಟೈಲ್

New simcard Rules: ಒಂದು ಕಾಲದಲ್ಲಿ ನಾಯಿ ಕೊಡೆಗಳಂತೆ ಬೇಕಾಬಿಟ್ಟಿಯಾಗಿ ಸಿಗುತ್ತಿದ್ದ ಮೊಬೈಲ್ ಸಿಮ್ ಕಾರ್ಡ್ (Sim card) ಗಳ ಖರೀದಿ ಎನ್ನುವುದು ಮುಂದಿನ ದಿನಗಳಲ್ಲಿ ಗಜ ಪ್ರಸವ ಆಗಲಿದೆ. ಈ ಹಿಂದೆ ಯಾರು ಯಾರದೋ ಗುರುತಿನ ಚೀಟಿ (ID Card) ಭಾವಚಿತ್ರಕ್ಕೆ ಇನ್ಯಾರಿಗೋ ಸಿಮ್ ಕಾರ್ಡ್ ನೀಡುತ್ತಿದ್ದ ಹಲವು ನಿದರ್ಶನಗಳು ಕಂಡು ಬಂದಿದ್ದವು . ವಂಚಕರು ಕಾಳ ಸಂತೆಯಲ್ಲಿ ಸಿಮ್ ಕಾರ್ಡ್ ಗಳನ್ನು ಖರೀದಿ ಮಾಡಿ , ಅದನ್ನು ಬೇಕಾಬಿಟ್ಟಿಯಾಗಿ ಬಳಸುತ್ತಿದ್ದನ್ನು ನಾವು ಕಾಣಬಹುದು . ಸದ್ಯ ಪೊಲೀಸರಿಗೆ ಅಪರಾಧ ತನಿಖೆಯಲ್ಲಿ ಸಿಮ್ ಕಾರ್ಡ್ ಅತೀ ದೊಡ್ಡ ಅಸ್ತ್ರವಾಗಿ ಬಳಕೆಯಾಗುತ್ತಿದೆ. ಅಲ್ಲದೇ ದೇಶದಲ್ಲಿ ದಿನೇದಿನೆ ಸೈಬರ್ ಪ್ರಾಡ್ ಗಳು ಹೆಚ್ಚುತ್ತಿದ್ದು, ವಂಚಕರು ಪೊಲೀಸ್ ತನಿಖೆಯಿಂದ ತಪ್ಪಿಸಿಕೊಳ್ಳಲು ನಕಲಿ ಸಿಮ್ ಗಳನ್ನು ಬಳಸುತ್ತಿರುವುದು ಬೆಳಕಿಗೆ ಬಂದಿದೆ.
ಹೀಗಾಗಿ ಸಿಮ್ ಕಾರ್ಡ್ಗಳ ಮೋಸದ ಮಾರಾಟವನ್ನು ತಡೆಯಲು ಭಾರತದ ಟೆಲಿಕಾಂ ಇಲಾಖೆ ಈ ವರ್ಷದ ಆಗಸ್ಟ್ನಲ್ಲಿ ಟೆಲಿಕಾಂ ಆಪರೇಟರ್ಗಳಿಗೆ ಹೊಸ ನಿಯಮಗಳನ್ನು ಘೋಷಿಸಿತ್ತು. ಆರಂಭದಲ್ಲಿ, ಈ ನಿಯಮಗಳನ್ನು ಅಕ್ಟೋಬರ್ 1 ರಿಂದ ಜಾರಿಗೆ ತರಲು ನಿರ್ಧರಿಸಲಾಗಿತ್ತು. ಆದರೆ ನಿಯಮಗಳ ಜಾರಿಯನ್ನು ಎರಡು ತಿಂಗಳ ಕಾಲ ಮುಂದೂಡಲಾಯಿತು.
ದೂರಸಂಪರ್ಕ ಇಲಾಖೆ (DoT) ನಕಲಿ ಸಿಮ್ ಕಾರ್ಡ್ಗಳಿಗೆ ಸಂಬಂಧಿಸಿದ ವಂಚನೆಗಳನ್ನು ತಡೆಗಟ್ಟಲು ಡಿಸೆಂಬರ್ 1, 2023 ರಿಂದ ಹೊಸ ಸಿಮ್ ಕಾರ್ಡ್ ನಿಯಮಗಳನ್ನು ಜಾರಿಗೆ ಬಂದಿದೆ. ನಕಲಿ ಸಿಮ್ ಕಾರ್ಡ್ಗಳಿಗೆ ಲಿಂಕ್ ಮಾಡಲಾದ ವಂಚನೆಗಳನ್ನು ಪರಿಹರಿಸಲು ಈ ನಿಯಮಗಳನ್ನು ರೂಪಿಸಲಾಗಿದ್ದು, ಅನುಸರಿಸದಿದ್ದಲ್ಲಿ ದಂಡ ಮತ್ತು ಜೈಲು ಶಿಕ್ಷೆಗೆ ಒಳಗಾಗಬಹುದು.
ಹೊಸ ಸಿಮ್ ಕಾರ್ಡ್ ಪಡೆಯಲು ಸಾಮಾನ್ಯವಾಗಿ ಗುರುತಿನ ಚೀಟಿಯನ್ನು ಕೊಟ್ಟರೆ ಕೆಲವು ಗಂಟೆಗಳ ನಂತರ ಸಿಮ್ ಕಾರ್ಡ್ ಆಕ್ಟಿವೇಶನ್ ಆಗುತ್ತಿತ್ತು, ಆದರೆ ಈಗ ಅದು ಸಾಧ್ಯವಿಲ್ಲ.ದೂ ಇನ್ನು ಮುಂದೆ, ಮಾರಾಟಗಾರರು ಸಿಮ್ ಕಾರ್ಡ್ಗಳನ್ನು ಮಾರಾಟ ಮಾಡುವಲ್ಲಿ ಅನೇಕ ನಿಯಮಗಳನ್ನು ಅನುಸರಿಸಬೇಕಾಗುತ್ತದೆ.
ದೂರಸಂಪರ್ಕ ಇಲಾಖೆಯ ಈ ನಿಯಮವನ್ನು ಪಾಲಿಸದಿದ್ದರೆ 10 ಲಕ್ಷ ರೂಪಾಯಿಗಳವರೆಗೆ ದಂಡ ಕಟ್ಟಬೇಕು. ದೇಶದಲ್ಲಿ ಹೆಚ್ಚುತ್ತಿರುವ ಸಿಮ್ ಕಾರ್ಡ್ ವಂಚನೆ ದರವನ್ನು ತಡೆಯಲು ಸರ್ಕಾರದಿಂದ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ನಕಲಿ ಸಿಮ್ ಕಾರ್ಡ್ಗಳ ಮಾರಾಟವನ್ನು ತಡೆಯಲು ಮಾರಾಟಗಾರರಿಗೆ ಈ ನಿಯಮ ತಂದಿದ್ದರೂ, ಇದು ಖರೀದಿದಾರರ ಮೇಲೂ ಪರಿಣಾಮ ಬೀರುತ್ತದೆ.
ಪ್ರಮುಖವಾಗಿ ಪ್ರಿ-ಆಕ್ಟಿವೇಟೆಡ್ ಸಿಮ್ ಕಾರ್ಡ್ಗಳು ದೇಶದಲ್ಲಿ ಮಾರಾಟವಾಗುತ್ತಿರುವುದರಿಂದ ಹೆಚ್ಚಿನ ಸಂದರ್ಭಗಳಲ್ಲಿ, ಆ ಸಿಮ್ಗಳನ್ನು ಬೇರೆಯವರ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಈಗ ಸಿಮ್ ಕಾರ್ಡ್ ಮಾರಾಟವನ್ನು ಕಟ್ಟುನಿಟ್ಟಾಗಿ ಮಾಡಲು ಸಾಧ್ಯವಾದರೆ, ಅಂತಹ ವಂಚನೆಯ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ಸರ್ಕಾರ ಹೇಳಿದೆ.
ಹೊಸ ಸಿಮ್ ಕಾರ್ಡ್ ಪಡೆಯಲು ನಿಯಮಗಳು :
*ವ್ಯಾಪಾರ ಸಂಪರ್ಕದ ಮೂಲಕ ಮಾತ್ರ ಸಿಮ್ ಕಾರ್ಡ್ಗಳನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸಲು ಅನುಮತಿಸಲಾಗಿದೆ. ಸಾಮಾನ್ಯ ಬಳಕೆದಾರರು ಹಿಂದಿನಂತೆ ಈಗಲೂ ಕೂಡ ಒಂದು ಐಡಿಯಲ್ಲಿ 9 ಸಿಮ್ ಕಾರ್ಡ್ಗಳನ್ನು ಪಡೆಯಬಹುದು.
*ಸಿಮ್ ಕಾರ್ಡ್ ಅನ್ನು ಕ್ಲೋಸ್ ಆದ 90 ದಿನಗಳ ಅವಧಿಯ ನಂತರವೇ ಆ ಸಂಖ್ಯೆಯನ್ನು ಇನ್ನೊಬ್ಬ ವ್ಯಕ್ತಿಗೆ ನೀಡಲಾಗುತ್ತದೆ.
*ಅಸ್ತಿತ್ವದಲ್ಲಿರುವ ತಮ್ಮ ಫೋನ್ ಸಂಖ್ಯೆಗಳಿಗೆ ಸಿಮ್ ಕಾರ್ಡ್ಗಳನ್ನು ಖರೀದಿಸುವ ಗ್ರಾಹಕರು ತಮ್ಮ ಆಧಾರ್ ಮತ್ತು ಇತರ ಡೆಮೊಗ್ರಾಫಿಕ್ ಡೇಟಾವನ್ನು ಸಲ್ಲಿಸಬೇಕಾಗುತ್ತದೆ.
*ರಿಜಿಸ್ಟರ್ ಆಗದ ಡೀಲರ್ಗಳ ಮೂಲಕ ಸಿಮ್ ಕಾರ್ಡ್ಗಳ ಮಾರಾಟ ಮಾಡಿಸಿದರೆ ಟೆಲಿಕಾಂ ಆಪರೇಟರ್ಗಳ ಮೇಲೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.
*ರಿಜಿಸ್ಟರ್ ಆಗದ ಡೀಲರ್ಗಳ ಮೂಲಕ ಪಡೆದ ಸಿಮ್ ಕಾರ್ಡ್ ಹಾಗೂ ಫೋನ್ ನಂಬರ್ಗಳನ್ನು ಮರುಪರಿಶೀಲಿಸಲಾಗುತ್ತದೆ.
*ಅಸ್ತಿತ್ವದಲ್ಲಿರುವ ಪಾಯಿಂಟ್ ಆಫ್ ಸೇಲ್ (ಪಿಒಎಸ್) ನವೆಂಬರ್ ಅಂತ್ಯದೊಳಗೆ ದಾಖಲೆಗಳನ್ನು ಸಲ್ಲಿಸಬೇಕು ಮತ್ತು ನೋಂದಾಯಿಸಿಕೊಳ್ಳಬೇಕು. ಪಿಒಎಸ್ ಅಥವಾ ಚಿಲ್ಲರೆ ವ್ಯಾಪಾರಿಗಳು ನೋಂದಣಿಗಾಗಿ ಕಾರ್ಪೊರೇಟ್ ಗುರುತಿನ ಸಂಖ್ಯೆ (CIN), ಲಿಮಿಟೆಟ್ ಲಯಾಬಿಲಿಟಿ ಪಾರ್ಟ್ನರ್ಶಿಪ್ ಐಡೆಂಟಿಫಿಕೇಶನ್ ನಂಬರ್ (LLPIN) ಅಥವಾ ವ್ಯಾಪಾರ ಪರವಾನಗಿ, ಆಧಾರ್ ಕಾರ್ಡ್ ಅಥವಾ ಪಾಸ್ಪೋರ್ಟ್, ಪಾನ್ ಕಾರ್ಡ್, ಸರಕು ಮತ್ತು ಸೇವಾ ತೆರಿಗೆ (GST) ನೋಂದಣಿ ಪ್ರಮಾಣಪತ್ರ ಇತ್ಯಾದಿಗಳನ್ನು ಒದಗಿಸಬೇಕಾಗುತ್ತದೆ.
*ಪಿಒಎಸ್ CIN, LLPIN, ಇನ್ಕಾರ್ಪೊರೇಶನ್ ಪ್ರಮಾಣಪತ್ರ, ಪಾನ್ ಮತ್ತು ಜಿಎಸ್ಟಿ ಪ್ರಮಾಣಪತ್ರವಿಲ್ಲದಿದ್ದರೆ, ಅದು ಅಫಿಡವಿಟ್ ಸಲ್ಲಿಸಬೇಕು. ಮತ್ತು ಈ ದಾಖಲೆಗಳನ್ನು ಲಭ್ಯವಾದ ತಕ್ಷಣವೇ ಸಲ್ಲಿಸಬೇಕಾಗುತ್ತದೆ.
* ಒಂದು ವೇಳೆ ಪಿಒಎಸ್ ನಕಲಿ ದಾಖಲೆಗಳನ್ನು ಸಲ್ಲಿಸಿದರೆ ಟೆಲಿಕಾಂ ಆಪರೇಟರ್ಗಳು ಅದರ ಐಡಿ ಅನ್ನು ನಿರ್ಬಂಧಿಸಬೇಕಾಗುತ್ತದೆ ಮತ್ತು ಪಿಒಎಸ್ ನಿಂದ ನೋಂದಾಯಿಸಲ್ಪಟ್ಟ ಎಲ್ಲಾ ಗ್ರಾಹಕರ ಸಿಮ್ಗಳನ್ನು ಮರುಪರಿಶೀಲಿಸಬೇಕಾಗುತ್ತದೆ.
-
ರಾಷ್ಟ್ರೀಯ2 days ago
Divorce under Hindu Marriage Act : ಹಿಂದು ವಿವಾಹ ಕಾಯ್ದೆಯಡಿ ವಿಚ್ಛೇದನ ಪಡೆಯಲು ʼಈʼ ನಿಯಮ ಪಾಲನೆ ಕಡ್ಡಾಯ – ಕೊರ್ಟು ಮಹತ್ವದ ಆದೇಶ ; ಏನದು ನಿಯಮ ?
-
ಅಪರಾಧ2 days ago
Dowry Harasment: ʼಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಡೆತ್ ನೋಟ್ ಬರೆದಿಟ್ಟು ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಯುವ ವೈದ್ಯೆ ಆತ್ಮಹತ್ಯೆ – ಅಷ್ಟಕ್ಕೂ ವರನ ಮನೆಯವರು ಇಟ್ಟ ಡಿಮ್ಯಾಂಡ್ ಎಷ್ಟು ಗೊತ್ತೆ ?
-
ಸುಳ್ಯ2 days ago
Arecanut Yellow leaf diseases ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದತ್ತ ಮಹತ್ವದ ಹೆಜ್ಜೆ – ಸಂಪಾಜೆಯಲ್ಲಿ ಇಂದೋರ್ ಕಂಪೆನಿಯ ಔಷಧಿ ಪ್ರಯೋಗಕ್ಕೆ ಆರಂಭಿಕ ಗೆಲುವು – ರೋಗವಿದ್ದ ಪ್ರದೇಶದಲ್ಲಿ ನಳನಳಿಸುತ್ತಿದೆ ಫಸಲು
-
ಮಂಗಳೂರು1 day ago
ಕುಡುಪು ಷಷ್ಟಿ ಮಹೋತ್ಸವ ಜಾತ್ರೆ – ಸಂತೆ ವ್ಯಾಪಾರದಲ್ಲಿ ಹಿಂದೂಯೇತರರಿಗಿಲ್ಲ ಅವಕಾಶ: ವ್ಯಾಪಾರಿಗಳ ಸಮನ್ವಯ ಸಮಿತಿ ಆಕ್ರೋಶ – ದೇವಸ್ಥಾನದ EOರಿಂದ ತಿರುಗೇಟು – ಕರಾವಳಿಯಲ್ಲಿ ನಿಲ್ಲೋದಿಲ್ವಾ ಧರ್ಮ ದಂಗಲ್ ?
-
ರಾಷ್ಟ್ರೀಯ2 days ago
Pancard latest update : ಪ್ಯಾನ್ ಕಾರ್ಡ್ ಕುರಿತು ಮಹತ್ವದ ಮಾಹಿತಿ – ಈ ತಪ್ಪು ಮಾಡಿದರೆ 10,000 ರೂ ದಂಡ ಗ್ಯಾರಂಟಿ
-
ಮಂಗಳೂರು23 hours ago
Interfaith Marriage ಮಂಗಳೂರು : ಭಿನ್ನಕೋಮಿನ ಜೋಡಿ ವಿವಾಹ?
-
ಬಿಗ್ ನ್ಯೂಸ್24 hours ago
Bride refuses Marriage in hall ತಾಳಿ ಕಟ್ಟುವ ವೇಳೆ ವರನ ಕೈಗೆ ಅಡ್ಡ ಹಿಡಿದು ಸಿನಿಮೀಯ ಶೈಲಿಯಲ್ಲಿ ಮದುವೆ ನಿರಾಕರಿಸಿದ ವಧು
-
ಸಿನೆಮಾ2 days ago
Pooja gandhi : ಕುವೆಂಪು ಪರಿಕಲ್ಪನೆಯ ’ಮಂತ್ರ ಮಾಂಗಲ್ಯ’ ಪದ್ದತಿಯಲ್ಲಿ ವಿವಾಹವಾದ ಪೂಜಾ ಗಾಂದಿ ದಂಪತಿಯಿಂದ ಕವಿ ಶೈಲ ಭೇಟಿ – ಹುಟ್ಟಿದ್ದು ಪಂಜಾಬಿನಲ್ಲಾದರೂ ಕನ್ನಡದ ಬಗೆಗಿನ ನಟಿಯ ಪ್ರೀತಿಗೆ ವ್ಯಾಪಕ ಮೆಚ್ಚುಗೆ