ಸುಳ್ಯ
ಕೆವಿಜಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣ : ಡಾ.ರೇಣುಕಾ ಪ್ರಸಾದ್ ಸೇರಿ ಆರು ಮಂದಿ ದೋಷಿಗಳು : ಹೈ ಕೋರ್ಟು ತೀರ್ಪು – ಅ 5 ರಂದು ಶಿಕ್ಷೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ (KVG Polytechnic College) ಪ್ರಾಂಶುಪಾಲರಾಗಿದ್ದ ಎ.ಎಸ್. ರಾಮಕೃಷ್ಣ ಅವರ ಹತ್ಯೆ ಪ್ರಕರಣದ ತೀರ್ಪನ್ನು ರಾಜ್ಯ ಹೈ ಕೊರ್ಟು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಡಾ.ರೇಣುಕಾ ಪ್ರಸಾದ್ (Dr Renuka Prasad) ಸೇರಿದಂತೆ 6 ಮಂದಿಯನ್ನು ದೋಷಿಗಳು ಎಂದು ತೀರ್ಮಾನಿಸಿ ಹೈಕೋರ್ಟ್ ಬುಧವಾರ ಮಹತ್ವದ ಆದೇಶ ಹೊರಡಿಸಿದೆ.
2011ರ ಏಪ್ರಿಲ್ ತಿಂಗಳಿನಲ್ಲಿ ಎ.ಎಸ್. ರಾಮಕೃಷ್ಣ ಸುಳ್ಯ ನಗರದ ರಸ್ತೆಯೊಂದರಲ್ಲಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರಿನ 5ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಪ್ರಮುಖ ಆರೋಪಿ ರೇಣುಕಾ ಪ್ರಸಾದ್ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ 2016ರಲ್ಲಿ ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ದ ರಾಜ್ಯ ಸರ್ಕಾರ (ಪುತ್ತೂರು ಉಪ ವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ) ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ.
ಪ್ರಕರಣದ ಒಟ್ಟು ಏಳು ಮಂದಿ ಆರೋಪಿಗಳ ಪೈಕಿ ಡಾ.ರೇಣುಕಾ ಪ್ರಸಾದ್, ಮನೋಜ್ ರೈ, ಎಚ್.ರ್ಆ.ನಾಗೇಶ್, ವಾಮನ ಪೂಜಾರಿ, ಶರಣ್ ಪೂಜಾರಿ ಮತ್ತು ಶಂಕರ ಅವರನ್ನು ಮೃತ ಎ.ಎಸ್.ರಾಮಕೃಷ್ಣ ಅವರ ಹತ್ಯೆ ಮತ್ತು ಕೊಲೆಗೆ ಒಳಸಂಚು ರೂಪಿಸಿದ ಪ್ರಕರಣದಲ್ಲಿ ದೋಷಿಗಳೆಂದು ತೀರ್ಮಾನಿಸಿದೆ. ಆದರೆ, ಏಳನೇ ಆರೋಪಿಯಾಗಿದ್ದ ಎಚ್.ಯು ನಾಗೇಶ್‌ಕುಮಾರ್ ಅವರನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಇದೇ ವೇಳೆ ಮಾನ್ಯ ಮಾಡಿದೆ. ಅಲ್ಲದೆ, ದೋಷಿಗಳಿಗೆ ಶಿಕ್ಷೆ ಪ್ರಮಾಣ ನಿಗದಿಪಡಿಸುವ ಕುರಿತು ಅ.5ರಂದು ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿದೆ.
ಪ್ರಕರಣದ ಹಿನ್ನೆಲೆ: ಕುರುಂಜಿ ವೆಂಕಟರಮಣ ಗೌಡ ಅವರು ಕೆವಿಜಿ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಸ್ಪ್ಲಿಂಟರ್ ಇನ್‌ಸ್ಟಿಟ್ಯೂಷನ್ಸ್ ಸಂಸ್ಥಾಪಕರಾಗಿದ್ದರು. ವಯಸ್ಸಾದ ಮತ್ತು ಅನಾರೋಗ್ಯ ಕಾಡಿದ ಕಾರಣ ಶೈಕ್ಷಣಿಕ ಸಂಸ್ಥೆಗಳ ನಿರ್ವಹಣೆ ಹೊಣೆಯನ್ನು ಅವರು ಹಿರಿಯ ಪುತ್ರ ಕೆ ವಿ ಚಿದಾನಂದ ಮತ್ತು ಕಿರಿಯ ಪುತ್ರ ರೇಣುಕಾ ಪ್ರಸಾದ್ ಅವರಿಗೆ ವಿಭಜನೆ ಮಾಡಿ ಕೊಟ್ಟಿದ್ದರು. ಎ ಎಸ್ ರಾಮಕೃಷ್ಣ ಅವರು ಕೆವಿಜಿ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಆಸ್ತಿ, ಶೈಕ್ಷಣಿಕ ಸಂಸ್ಥೆಗಳ ಹೊಣೆಗಾರಿಕೆ ವಿಭಜನೆಯನ್ನು ರಾಮಕೃಷ್ಣ ಅವರ ಸಲಹೆ ಮೇರೆಗೆ ಮಾಡಲಾಗಿದೆ ಎಂದು ಭಾವಿಸಿದ್ದ ರೇಣುಕಾ ಪ್ರಸಾದ್, ಚಿದಾನಂದ ಅವರ ಪರವಾಗಿ ಕೆವಿಜಿ ಮೆಡಿಕಲ್ ಕಾಲೇಜು ವ್ಯವಹಾರಗಳನ್ನು ಸಹ ರಾಮಕೃಷ್ಣ ಅವರು ನೋಡಿಕೊಳ್ಳುತ್ತಿದ್ದಾರೆ ಎಂದು ಭಾವಿಸಿ ರಾಮಕೃಷ್ಣ ಕೊಲೆಗೆ ಸುಪಾರಿ ನೀಡಿದ್ದರು.
2011ರ ಏಪ್ರಿಲ್ 28ರಂದು ಬೆಳಗ್ಗೆ 7.45ರ ವೇಳೆಯಲ್ಲಿ ಅಂಬೆತಡ್ಕ ಬಳಿಯ ಶ್ರೀಕೃಷ್ಣ ಆಯುರ್ವೇದಿಕ್ ಥೆರಪಿ ಕ್ಲಿನಿಕ್ ರಸ್ತೆಯಲ್ಲಿ ನಡೆದುಹೋಗುತ್ತಿದ್ದ ರಾಮಕೃಷ್ಣ ಅವರ ಮೇಲೆ ಆರೋಪಿಗಳು ದಾಳಿ ನಡೆಸಿ, ಕೊಚ್ಚಿ ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ರೇಣುಕಾ ಪ್ರಸಾದ್ ಮೊದಲ ಆರೋಪಿಯಾಗಿದ್ದು ಒಟ್ಟು ಏಳು ಆರೋಪಿಗಳಿದ್ದರು. ಸಾಕ್ಷ್ಯಧಾರಗಳ ಕೊರತೆಯಿಂದ ಅವರೆಲ್ಲರನ್ನೂ ಖುಲಾಸೆಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 2016ರ ಅಕ್ಟೋಬರ್ 21ರಂದು ಆದೇಶಿಸಿತ್ತು.
ಈ ಆದೇಶ ಪ್ರಶ್ನಿಸಿ ಸರ್ಕಾರ 2017ರಲ್ಲಿ ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿತ್ತು. ಇದೀಗ ರೇಣುಕಾಪ್ರಸಾದ್ ಹಾಗೂ ಇತರೆ ಐವರು ಆರೊಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷ್ಯಧಾರಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿರುವ ಹೈಕೋರ್ಟ್, ಎಲ್ಲರನ್ನೂ ಕೊಲೆ ಮತ್ತು ಅಪರಾಧಿಕ ಒಳಸಂಚಿನ ಕೃತ್ಯದಲ್ಲಿ ದೋಷಿ ಎಂದು ತೀರ್ಮಾನಿಸಿದೆ
ಸುಳ್ಯ
ಸುಳ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ, ಪುತ್ತೂರು ಪಟ್ಟೆ ನಿವಾಸಿ ಸೂಯಿಸೈಡ್

ಪುತ್ತೂರು : ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕೊಂದರಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ( ಡಿ 2) ರಾತ್ರಿ ಸಂಭವಿಸಿದೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಪಟ್ಟೆ ನಿವಾಸಿ ಪ್ರೀತಂ(26) ಆತ್ಮಹತ್ಯೆ ಮಾಡಿಕೊಂಡವರು.
ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ಆನಂದ ಗೌಡ ಅವರ ಪುತ್ರ, ಸುಳ್ಯದ ಪರಿವಾರ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಪ್ರೀತಂ ಶನಿವಾರ ಸಂಜೆ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ರಾತ್ರಿ ಮನೆಮಂದಿ ಮಲಗುವ ವೇಳೆ ನಾಳೆ ಮೂಡುಬಿದಿರೆಯಲ್ಲಿ ತರಬೇತಿ ಇದೆ. ಬೇಗ ಎಬ್ಬಿಸಿ ಎಂದು ತಾಯಿಯಲ್ಲಿ ತಿಳಿಸಿ ಬಳಿಕ ಕೋಣೆಯಲ್ಲಿ ಮಲಗಿದ್ದರು.
ಭಾನುವಾರ ಬೆಳಗ್ಗೆ ತಾಯಿ ಪ್ರೀತಂ ಅವರನ್ನು ಎಬ್ಬಿಸಲು ಕೋಣೆಗೆ ಹೋದಾಗ ಅಲ್ಲಿ ಆತನಿರಲಿಲ್ಲ. ಹುಡುಕಾಡಿದಾಗ ಮನೆಯ ಅಂಗಳದ ಬಾವಿಯ ಪಕ್ಕದಲ್ಲಿ ಪ್ರೀತಂ ಚಪ್ಪಲಿ ಮತ್ತು ಮೊಬೈಲ್ ಕಂಡುಬಂದಿತ್ತು.
ಈ ಹಿನ್ನಲೆಯಲ್ಲಿ ನೀಡಲಾದ ಮಾಹಿತಿಯಂತೆ ಅಗ್ನಿಶಾಮಕದವರು ಸ್ಥಳಕ್ಕೆ ಬಂದು ಬಾವಿಯಲ್ಲಿ ಶೋಧಿಸಿದಾಗ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಪ್ರೀತಂ ಯಾವುದೋ ಕಾರಣದಿಂದಾಗಿ ಜೀವನದಲ್ಲಿ ಜಿಗುಪ್ಪೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ತಂದೆ ಆನಂದ ಗೌಡ ಅವರು ನೀಡಿದ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ
ಎಸ್ಪಿಯಾಗಿ ಪದೋನ್ನತಿ ಹೊಂದಿದ ಬೆಳ್ಳಾರೆಯ ಜಗನ್ನಾಥ್ ರೈ ಬಜನಿ

ಬೆಂಗಳೂರು : ಸುಳ್ಯ ತಾಲೂಕಿನ ಬೆಳ್ಳಾರೆಯ ಬಜನಿಗುತ್ತು ನಿವಾಸಿ ಜಗನ್ನಾಥ್ ರೈಯವರು ಸುಪರಿಂಡೆಂಟ್ ಆಫ್ ಪೊಲೀಸ್ ಆಗಿ ಪದೋನ್ನತಿ ಹೊಂದಿದ್ದಾರೆ.
ಬೆಳ್ಳಾರೆ ಬಾಳಿಲ ವಿದ್ಯಾಬೋಧಿನಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮುಗಿಸಿ , ನಂತರ ಪಿಯುಸಿ ಹಾಗೂ ಡಿಗ್ರಿ ವಿದ್ಯಾಭ್ಯಾಸವನ್ನು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪೂರೈಸಿದರು.
1996 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಸೇರ್ಪಡೆಗೊಂಡ ಜಗನ್ನಾಥ್ ರೈ ಯವರು, ನಂತರ ಇನ್ಸ್ ಪೆಕ್ಟರ್ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ತದನಂತ ಡಿವೈಎಸ್ಪಿ ಯಾಗಿ ಸಿಸಿಬಿ ಎಸಿಪಿಯಾಗಿ ಇದೀಗ ಎಸ್ಪಿಯಾಗಿದ್ದಾರೆ.
ಬೆಂಗಳೂರಿನ ಗುಪ್ತಚಾರ ವಿಭಾಗದ ಎಸ್ಪಿಯಾಗಿ ಪದೋನ್ನತಿ ಹೊಂದಿದ್ದಾರೆ.
ಜಗನ್ನಾಥ ರೈಯವರು ಬೆಳ್ಳಾರೆ ಬಜನಿಗುತ್ತು ರಾಮಯ್ಯ ರೈ ಹಾಗೂ ಕುಸುಮಾವತಿ ದಂಪತಿಯ ಪುತ್ರ
ಸುಳ್ಯ
ಶಾಲಾ ಮುಖ್ಯ ಶಿಕ್ಷಕ ಜನಾರ್ದನ ಗೌಡ ಹೃದಯಾಘಾತದಿಂದ ನಿಧನ

ರಾಮಕುಂಜ: ಕೊಯಿಲ ಗ್ರಾಮದ ಗಂಡಿಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ, ಅಲಂಕಾರು ಗ್ರಾಮದ ತೀರ್ಥಜಾಲು ನಿವಾಸಿ ಜನಾರ್ದನ ಗೌಡ (59) ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾದರು.
ಜನಾರ್ದನ ಗೌಡ ಅವರು ಮಂಗಳವಾರ ಮಧ್ಯಾಹ್ನದ ವರೆಗೆ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಹೋಗಿ ಸಂಜೆ ಮನೆಗೆ ಬಂದಿದ್ದರು. ರಾತ್ರಿ ಅವರಿಗೆ ಎದೆನೋವು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಮನೆಯವರು ತಕ್ಷಣ ಉಪ್ಪಿನಂಗಡಿಯ ಆಸ್ಪತ್ರೆಗೆ ಕರೆತಂದರಾದರು ಆ ವೇಳೆಗಾಗಲೇ ಜನಾರ್ಧನಗೌಡರವರು ಮೃತಪಟ್ಟಿದ್ದರು ಎನ್ನಲಾಗಿದೆ.
ಜನಾರ್ದನ ಗೌಡ ಅವರು ನರಿಮೊಗರು ಶಾಲೆಯಲ್ಲಿ ಶಿಕ್ಷಕ ವೃತ್ತಿ ಆರಂಭಿಸಿ ಬಳಿಕ ಕುಂಡಾಜೆ, ಕಳಪ್ಪಾರು, ಆಲಂಕಾರು ಶಾಲೆಗಳಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸಿ ಎರಡು ವರ್ಷ ದ ಹಿಂದೆ ಮುಖ್ಯಶಿಕ್ಷಕರಾಗಿ ಭಡ್ತಿ ಪಡೆದು ಗಂಡಿಬಾಗಿಲು ಶಾಲೆಗೆ ವರ್ಗಾವಣೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು


-
ಅಪರಾಧ9 hours ago
ವಿಟ್ಲ : 80 ಪ್ರಕರಣಗಳ ಸರದಾರ ʼಇತ್ತೆ ಬರ್ಪೆ ಅಬೂಬ್ಬಕರ್ʼ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು – ಅಷ್ಟಕ್ಕೂ ಈತ ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ? ಇತ್ತೆ ಬರ್ಪೆ ಹೆಸರಿನ ಹಿಂದಿದೆ ಇಂಟ್ರೆಸ್ಟಿಂಗ್ ಕಹಾನಿ
-
ಬಿಗ್ ನ್ಯೂಸ್13 hours ago
ಹುತಾತ್ಮ ಯೋಧ ಕ್ಯಾ.ಪ್ರಾಂಜಲ್ ಕುಟುಂಬಕ್ಕೆ ಚೆಕ್ ವಿತರಣೆ : ಮೊತ್ತ ತಾಯಿ-ಪತ್ನಿಗೆ ಸಮಪಾಲು ಮಾಡಿದ ಸರ್ಕಾರ
-
ಕ್ರೀಡೆ13 hours ago
Bomb Threat ಪ್ರಿಯಕರ ಕೊಟ್ಟ ಐಡಿಯಾ ನಂಬಿ ಗಂಡನ ಜೈಲಿಗೆ ಕಳುಹಿಸಲು ಆತನ ಮೊಬೈಲ್ʼನಿಂದ ಹೆಂಡತಿ ಕಳುಹಿಸಿದಳು ಬೆದರಿಕೆ ಮೆಸೇಜ್ – ಆದರೇ ಮುಂದೇನಾಯಿತು ?
-
ಕ್ರೀಡೆ10 hours ago
Jay shah: ಜಯ್ ಶಾಗೆ ಸ್ಪೋರ್ಟ್ಸ್ ಬ್ಯುಸಿನೆಸ್ ಲೀಡರ್ ಆಫ್ ದಿ ಇಯರ್ ಪ್ರಶಸ್ತಿಯ ಗರಿ – ಬಿಸಿಸಿಐ ಕಾರ್ಯದರ್ಶಿಗೆ ಈ ಗೌರವ ಸಿಕ್ಕಿದ್ದು ಯಾಕೆ ಗೊತ್ತೆ ?
-
ರಾಜಕೀಯ11 hours ago
Harish Poonja Moved Privilege motion ತನ್ನ ಮೇಲೆ ಎಫ್ ಐ ಆರ್ ದಾಖಲಿಸಿದ ಅರಣ್ಯ ಅಧಿಕಾರಿಗಳ ವಿರುದ್ದ ಸದನದಲ್ಲಿ ಹಕ್ಕು ಚ್ಯುತಿ ಮಂಡಿಸಿದ ಹರೀಶ್ ಪೂಂಜಾ – ಏನಿದು ಪ್ರಕರಣ ? ಮುಂದೇನಾಯಿತು?
-
ಸಾಮಾಜಿಕ ಮಾಧ್ಯಮ18 hours ago
Dasara Elephant Arjun Dies ಅರ್ಜುನ ಸಾವಿನ ಸುತ್ತ ಹಲವು ಅನುಮಾನ – ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ – ಅದರಲ್ಲಿದೆ ಗುಂಡೇಟಿನ ವಿಚಾರ
-
ಸಿನೆಮಾ1 day ago
Animal Box Office collection ರಣ್ ಬೀರ್ – ರಶ್ಮಿಕಾ ಜೋಡಿ ಕಮಾಲ್ : ಅನಿಮಲ್ ಬಾಕ್ಸ್ ಆಫೀಸ್ನಲ್ಲಿ ಮಾಡಿದ ಕಲೆಕ್ಷನ್ ಎಷ್ಟು ಗೊತ್ತಾ?
-
ಚಿನ್ನ-ಬೆಳ್ಳಿ ದರ19 hours ago
Gold Rate Hike:ಆಭರಣ ಪ್ರಿಯರಿಗೆ ಶಾಕಿಂಗ್ ಸುದ್ದಿ : ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ದರ ಸಾರ್ವಕಾಲಿಕ ಜಿಗಿತ – ಮುಂದಿನ ದಿನಗಳಲ್ಲಿ ರೇಟ್ ಹೇಗಿರಲಿದೆ?