ಅಪರಾಧ
ಧರ್ಮಸ್ಥಳ : ಪರವಾನಿಗೆ ಇಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಮಧ್ಯ ಸೇವಿಸಿದ ಇಬ್ಬರ ವಶ – 5 ಟೆಟ್ರಾ ಪ್ಯಾಕೆಟ್ ಮದ್ಯ, ಪ್ಲಾಸ್ಟಿಕ್ ಗ್ಲಾಸ್, ನೀರಿನ ಖಾಲಿ ಬಾಟಲಿ ಜಪ್ತಿ

ಸರಕಾರಿ ಗುಡ್ಡ ಜಾಗದಲ್ಲಿ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ ಮದ್ಯ ಸೇವನೆ ಮಾಡುತ್ತಿದ್ದಾಗ ದಾಳಿ ನಡೆಸಿದ ಧರ್ಮಸ್ಥಳ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಸೆ 3 ರಂದು ಸಂಜೆ ನಡೆದಿದೆ.
ಬೆಳ್ತಂಗಡಿ ನಿವಾಸಿಗಳಾದ ಲೋಕೇಶ (34) ಮತ್ತು ಜಗದೀಶ (23) ಪ್ರಕರಣದ ಆರೋಪಿಗಳು. ಧರ್ಮಸ್ಥಳ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬಂದಿಗಳು ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಮದಿಮಲ್ ಕಟ್ಟೆ ಎಂಬಲ್ಲಿ ದಾಳಿ ನಡೆಸಿ ಇವರನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ 5 ಟೆಟ್ರಾ ಪ್ಯಾಕೆಟ್ ಮದ್ಯ ಮತ್ತು ಆರೋಪಿ ಮಧ್ಯ ಸೇವಿಸಲು ಬಳಸಿದ ಪ್ಲಾಸ್ಟಿಕ್ ಗ್ಲಾಸ್, ನೀರಿನ ಖಾಲಿ ಬಾಟಲಿ ಯನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಆರೋಪಿಗಳ ವಿರುದ್ದ ಐಪಿಸಿ ಕಲಂ: 15(A) 32(3) ಕರ್ನಾಟಕ ಅಬಕಾರಿ ಕಾಯಿದೆ ಯಂತೆ ಪ್ರಕರಣ ದಾಖಲಾಗಿದೆ.
ದಕ್ಷಿನ ಕನ್ನಡ ಜಿಲ್ಲೆ ಸಹಿತ ರಾಜ್ಯದ ಬಹುತೇಕ ಕಡೆ ವೈನ್ ಶಾಪ್ ಗಳಲ್ಲಿ ಮದ್ಯವನ್ನು ಚಿಲ್ಲರೆ ರೂಪದಲ್ಲಿ ಮಾರಾಟ ಮಾಡುತ್ತಿದ್ದರೂ ಆ ಬಗ್ಗೆ ಅಷ್ಟಾಗಿ ಗಮನ ಹರಿಸದ ಪೊಲೀಸ್ ಇಲಾಖೆ ಗುಡ್ಡದಲ್ಲಿ ಕೂತು ಮದ್ಯಪಾನ ಮಾಡುತ್ತಿದ್ದವರ ವಿರುದ್ದ ಕ್ರಮ ಕೈಗೊಂಡದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಹಲವು ಕಡೆ ಪೊಲೀಸ್ ಠಾಣೆಯ ಕೂಗಳತೆಯ ದೂರದಲ್ಲೇ ವೈನ್ಸ್ ಶಾಪಿನಲ್ಲಿ ಚಿಲ್ಲರೆ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಮದ್ಯಪಾನಿಗಳು ಶಾಪ್ ನ ಮುಂಭಾಗವೇ ರಾಜರೋಷವಾಗಿ ಕುಡಿಯುತ್ತಿರುವುದು ಕಾಣಬಹುದಾಗಿದೆ
ಅಪರಾಧ
Dowry Harasment: ʼಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಡೆತ್ ನೋಟ್ ಬರೆದಿಟ್ಟು ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಯುವ ವೈದ್ಯೆ ಆತ್ಮಹತ್ಯೆ – ಅಷ್ಟಕ್ಕೂ ವರನ ಮನೆಯವರು ಇಟ್ಟ ಡಿಮ್ಯಾಂಡ್ ಎಷ್ಟು ಗೊತ್ತೆ ?

ತಿರುವನಂತಪುರಂ : ಕಳೆದ ವರ್ಷ ಕೇರಳದಲ್ಲಿ ದೊಡ್ಡ ಅಭಿಯಾನಕ್ಕೆ ಕಾರಣವಾಗಿದ್ದ ವರದಕ್ಷಿಣೆ ಕಿರುಕುಳ ಮತ್ತೆ ಆ ರಾಜ್ಯದಲ್ಲಿ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣವಾಗಿರುವುದು ಎರಡು ದಿನಗಳ ಹಿಂದೆ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಕೇರಳದ (Kerala) ಯುವ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು. ಮೃತಳನ್ನು ಶಹನಾ (Shahana) (26) ಎಂದು ಗುರುತಿಸಲಾಗಿದೆ̤ ಈಕೆಯ ಆತ್ಮಹತ್ಯೆಗೆ ಪ್ರಚೊಧನೆ ನೀಡಿದ ಆರೋಪದಡಿ ಆಕೆಯ ಬಾಯ್ ಫ್ರೆಂಡ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಹಾನಾ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಪಿಜಿ ವಿದ್ಯಾರ್ಥಿನಿ. ಈಕೆಯ ಮೃತ ದೇಹ ಮಂಗಳವಾರ ಬೆಳಗ್ಗೆ ಕಾಲೇಜ್ ಬಳಿಯ ಬಾಡಿಗೆ ಅಪಾರ್ಟ್ಮೆಂಟ್ನಲ್ಲಿ ಪತ್ತೆಯಾಗಿದೆ. ಡಾ. ಸಹನಾ, ತಮ್ಮ ತಾಯಿ ಮತ್ತು ಇಬ್ಬರು ಒಡಹುಟ್ಟಿದವರ ಜತೆ ವಾಸವಿದ್ದರು. ಗಲ್ಫ್ನಲ್ಲಿ ಕೆಲಸ ಮಾಡುತ್ತಿದ್ದ ಅವರ ತಂದೆ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಅವರು ಡಾ. ಇಎ ರುವಾಯಿಸ್ನನ್ನು ಪ್ರೀತಿಸುತ್ತಿದ್ದರು. ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು.
ಬಳಿಕ ಆ ಯುವಕನ ಕುಟುಂಬ ವರದಕ್ಷಿಣೆಗೆ ಡಿಮ್ಯಾಂಡ್ ಮಾಡಿದ ಹಿನ್ನಲೆಯಲ್ಲಿ ಅ ಮದುವೆ ಮುರಿದು ಬಿದ್ದಿತ್ತು. ಇದರಿಂದ ಮಾನಸಿಕ ಖಿನ್ನತೆ ಅನುಭವಿಸಿದ ಅಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆಕೆಯ ಸಂಬಂಧಿಕರು ಆರೋಪಿಸಿದ್ದಾರೆ. ಈ ವಿಚಾರ ಕೇರಳದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ (Veena George) ಅವರು ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೂಚಿಸಿದ್ದಾರೆ.
ತರುವಾಯ, ವೈದ್ಯಕೀಯ ಕಾಲೇಜು ಪೊಲೀಸರು ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಶಹಾನಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅದೇ ಸಂಸ್ಥೆಯಲ್ಲಿ ಪಿಜಿ ವಿದ್ಯಾರ್ಥಿಯಾಗಿರುವ ಯುವಕ ಪ್ರಕರಣದ ಆರೋಪಿ. ಈತ ಮೂಳೆ ಚಿಕಿತ್ಸೆಯಲ್ಲಿ ಪಿಜಿ ಮಾಡುತ್ತಿರುವ ವೈದ್ಯ.ಈತನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ವರದಕ್ಷಿಣೆಗಾಗಿ ಕಿರುಕುಳ ಪ್ರಕರಣ ದಾಖಲಾಗಿದೆ.
ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಾವು ದಾಖಲಿಸಿಕೊಂಡಿರುವ ವಿವಿಧ ಹೇಳಿಕೆಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಾಗಿದೆ. ಆ ಬಳಿಕವಷ್ಟೇ ಯುವಕನ ಬಂಧನ ಸೇರಿದಂತೆ ಮುಂದಿನ ಪ್ರಕ್ರಿಯೆಗಳ ಕುರಿತಾಗಿ ನಿರ್ಧರಿಸಲಾಗುವುದು” ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಆರಂಭದಲ್ಲಿ ಅಸಹಜ ಸಾವು ಎಂದು ಶಹನಾ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಶಹಾನಾ ಅವರ ಕುಟುಂಬಸ್ಥರು ದೂರು ನೀಡಿದ ಬಳಿಕ ಅದರಂತೆ ಐಪಿಸಿ ಸೆಕ್ಷನ್ಗಳನ್ನು ಬದಲಾಯಿಸಿದರು.

ವರದಕ್ಷಿಣೆಯಾಗಿ 150 ಪವನ್ ಚಿನ್ನ, ಐಷಾರಾಮಿ BMW ಕಾರು ಮತ್ತು 15 ಎಕ್ರೆ ಜಮೀನು ನೀಡುವಂತೆ ಆರೋಪಿ ಕುಟುಂಬ ಬೇಡಿಕೆಯಿಟ್ಟಿತ್ತು. ಆದರೆ, ಶಹನಾಳ ಮನೆಯವರಿಗೆ ಅಷ್ಟು ದೊಡ್ಡ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗಿಲ್ಲ . ಈ ಬಳಿಕ ವೈದ್ಯಕೀಯ ಪಿಜಿ ವೈದ್ಯರ ಸಂಘದ ಪ್ರತಿನಿಧಿಯೂ ಆಗಿದ್ದ ಆರೋಪಿ ವೈದ್ಯ ಶಹಾನಾ ಜೊತೆಗಿನ ಸಂಬಂಧವನ್ನು ಕಡಿತಗೊಳಿಸಿದ್ದಾನೆ.
ಪೊಲೀಸರು ಮೃತಳು ವಾಸ್ತವ್ಯವಿದ್ದ ಕೊಠಡಿಯಿಂದ ಡೆತ್ ನೋಟ್ ಅನ್ನು ವಶಕ್ಕೆ ಪಡೆದಿದ್ದಾರೆ. ಅದರಲ್ಲಿ “ಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಎಂದು ಬರೆದು ಕೊಂಡಿದ್ದಾಳೆ . ತಾನೇ ಇಷ್ಟಪಟ್ಟು ಆಯ್ಕೆ ಮಾಡಿಕೊಂಡ ಗೆಳೆಯನ ಜತೆ ಮದುವೆಗೆ ಸಿದ್ಧತೆ ನಡೆಸಿದ್ದ ಡಾ. ಸಹನಾಗೆ ಇದು ಭಾರಿ ಆಘಾತ ಉಂಟುಮಾಡಿತ್ತು. ಇದರಿಂದ ತೀವ್ರ ನೊಂದಿದ್ದ ಸಹನಾ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ಮತ್ತು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ
ಅಪರಾಧ
ವಿಟ್ಲ : 80 ಪ್ರಕರಣಗಳ ಸರದಾರ ʼಇತ್ತೆ ಬರ್ಪೆ ಅಬೂಬ್ಬಕರ್ʼ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು – ಅಷ್ಟಕ್ಕೂ ಈತ ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ? ಇತ್ತೆ ಬರ್ಪೆ ಹೆಸರಿನ ಹಿಂದಿದೆ ಇಂಟ್ರೆಸ್ಟಿಂಗ್ ಕಹಾನಿ

ಪುತ್ತೂರು: ಕೆದಿಲದಲ್ಲಿ ನವೆಂಬರ್ 22 ರಂದು ನಡೆದ ಸರಣಿ ಕಳ್ಳತನದ ಆರೋಪಿಯನ್ನು ಸ್ಥಳೀಯರು ಡಿ 4 ರಂದು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು , ಇಂದು(ಮಂಗಳವಾರ) ಬಂಧಿಸಿರುವ ಬಗ್ಗೆ ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.ಮೂಲತಃ ವಿಟ್ಲ ಸಮೀಪದ ಕಡಂಬು ನಿವಾಸಿ ಹಾಲಿ ಚಿಕ್ಕಮಂಗಳೂರು ಉಪ್ಪಳ್ಳಿ ನಿವಾಸಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬ್ಬಕರ್ ಬಂಧಿತ. ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಡಿ.19ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಕೆದಿಲದ ರಮ್ಲ ಕುಂಞಿ ಮನೆಯಲ್ಲಿ ಕಳ್ಳತನಗೈದಿದ್ದ ಆರೋಪಿ ಕೋಡಿ ನಿವಾಸಿ ಉಮ್ಮರ್ ಫಾರೂಕ್ ಅವರ ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳವುಗೈದಿದ್ದ. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ ಸಂಖ್ಯೆ 112 ಮತ್ತು 113ರಂತೆ ಪ್ರಕರಣ ದಾಖಲಾಗಿತ್ತು.
ಸಿಕ್ಕಿಬಿದ್ದದ್ದು ಹೀಗೆ
ಈ ಪೈಕಿ ಆರೋಪಿಯು ಕಳವು ಗೈದ ದ್ವಿಚಕ್ರವಾಹನ ಗುಡ್ಡ ಪ್ರದೇಶದಲ್ಲಿ ಅಡಗಿಸಿಟ್ಟಿದ್ದ. ಅದನ್ನು ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಸೋಮವಾರ ಅಬೂಬ್ಬಕರ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಖರೀದಿಸಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರಿಗೆ ಅನುಮಾನ ಉಂಟಾಗಿದೆ. ಅವರು ಆತನ ಬೆನ್ನ ಹಿಂದೆ ಬಿದ್ದಿದ್ದಾರೆ ಎನ್ನಲಾಗಿದೆ.
ಈತ ಅಲ್ಲಿಂದ ತಾನು ಬೈಕ್ ಅಡಗಿಸಿಟ್ಟಿದ್ದ ಗುಡ್ಡಕ್ಕೆ ತೆರಳಿದ್ದು ಈ ವೇಳೆ ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದು ವಿಚಾರಿಸಿದ್ದಾರೆ. ಈವೇಳೆ ಆತ ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಬಳಿಕ ಸ್ಥಳೀಯರು ಆತನನ್ನು ಠಾಣೆಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.
ಒಂದೇ ದಿನ ಎರಡು ಕಳ್ಳತನ
ರಮ್ಲ ಕುಂಞಿ ಬೆಂಗಳೂರು ಕಂಬಳಕ್ಕೆ ವ್ಯಾಪಾರಕ್ಕೆಂದು ನ.22ರಂದು ರಾತ್ರಿ 8 ಗಂಟೆಗೆ ಮನೆಗೆ ಬೀಗ ಹಾಕಿ ತೆರಳಿದ್ದು, ಕೆದಿಲ ಮಿತ್ತಪಡ್ಪು ನಿವಾಸಿ ಹಮೀದ್ ನ.23 ರಂದು ಬೆಳಗ್ಗೆ ಹೋಗಿ ನೋಡುವ ಸಂದರ್ಭದಲ್ಲಿ ಬೀಗ ಮುರಿದಿದ್ದು ಪತ್ತೆಯಾಗಿತ್ತು, ಕಪಾಟಿನಲ್ಲಿದ್ದ ಸುಮಾರು ೨ಲಕ್ಷ ಕಳವಾಗಿತ್ತು. ಇದರ ಜತೆಗೆ ಕೋಡಿ ನಿವಾಸಿ ಉಮ್ಮರ್ ಫಾರೂಕ್ ಅವರಿಗೆ ಸೇರಿದ ದ್ವಿಚಕ್ರವಾಹನ ಮನೆಯ ಅಂಗಳದಿಂದ ಕಳವಾಗಿತ್ತು. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿತ್ತು.
ಇತ್ತೆ ಬರ್ಪೆ ಹೆಸರು ಬಂದದ್ದು ಹೇಗೆ :
ಟ್ಲದಲ್ಲಿ ಅಟೋ ರಿಕ್ಷಾ ಹೊಂದಿದ್ದ ಅಬೂಬಕ್ಕರ್ ರಿಕ್ಷಾ ಹಿಂಭಾಗದಲ್ಲಿ ಇತ್ತೆ ಬರ್ಪೆ ಎಂದು ಬರೆದಿಕೊಂಡಿದ್ದರು. ಇದರಿಂದ ಆ ಹೆಸರಿನಲ್ಲೇ ಜನರಿಗೆ ಚಿರಪರಿಚಿತರಾಗಿದ್ದರು. ಮಂಗಳೂರು, ಬಂಟ್ವಾಳ, ಪುತ್ತೂರು, ಮೂಡುಬಿದಿರೆ, ಕಾರ್ಕಳ, ಉಡುಪಿ, ಸುರತ್ಕಲ್, ಚಿಕ್ಕಮಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಸುಮಾರು 80 ಕ್ಕೂ ಹೆಚ್ಚು ಕಳ್ಳತನದ ಪ್ರಕರಣಗಳು ದಾಖಲಾಗಿತ್ತು.
ಅಪರಾಧ
Ballari Murder case ಸರಿಯಾಗಿ ಆರೈಕೆ ಮಾಡ್ತಿಲ್ಲ ಎಂದು ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಪತಿ: ಪೊಲೀಸರಿಗೆ ಆರೋಪಿ ಶರಣು
ಹೆಂಡತಿ ಸರಿಯಾಗಿ ಆರೈಕೆ ಮಾಡುತ್ತಿಲ್ಲವೆಂದು ಪತಿ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಬಳ್ಳಾರಿ, (ಡಿಸೆಂಬರ್ 04): ಸರಿಯಾಗಿ ಆರೈಕೆ ಮಾಡುತ್ತಿಲ್ಲ ಎಂದು ಕೋಪಗೊಂಡ ಪತಿರಾಯನೊಬ್ಬ(Husband) ಹೆಂಡತಿಯನ್ನು(Wife) ಕೊಚ್ಚಿ ಕೊಂದಿರುವ ಘಟನೆ ಬಳ್ಳಾರಿ(Bellary) ಜಿಲ್ಲೆಯ ಸಿರುಗುಪ್ಪದ ಬಲಕುಂದಿ ಗ್ರಾಮದಲ್ಲಿ ನಡೆದಿದೆ. ಮೈಬುನಾ ಬಿ. (35) ಕೊಲೆಯಾದ ಮಹಿಳೆ.
ಡಯಾಲಿಸಿಸ್ ರೋಗಿಯಾಗಿರುವ ಆರೋಪಿ ರಸೂಲ್ ಸಾಬ್, ಪತ್ನಿ ಸರಿಯಾಗಿ ಕೇರ್ ಮಾಡುತ್ತಿಲ್ಲ ಎಂದು ಮಲಗಿದ್ದ ಮೈಬುನಾಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ಆರೋಪಿ ರಸೂಲ್ ಸಾಬ್ ತಾನೇ ಪೊಲೀಸರ ಮುಂದೆ ಶರಣಾಗಿದ್ದಾನೆ.
ಈ ಬಗ್ಗೆ ಮಾತನಾಡಿರುವ ರಸೂಲ್ ಸಾಬ್ ನನಗೆ ಡಯಾಲಿಸಿಸ್ ಕಾಯಲೆ ಇದೆ. ಆದ್ರೆ, ಪತ್ನಿ ಸರಿಯಾಗಿ ಆರೈಕೆ ಮಾಡುತ್ತಿಲ್ಲ. ಹೀಗಾಗಿ ನಾನು ಬೇಗ ಸಾಯುತ್ತೇನೆ. ನನಗಿಂತ ಮೊದಲು ಪತ್ನಿ ಸಾಯಬೇಕು ಎಂದು ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ಸತ್ಯ ಒಪ್ಪಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ತೆಕ್ಕಲಕೋಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
-
ಸುಳ್ಯ2 days ago
College student rape case ಪುತ್ತೂರು : ಕಾಲೇಜ್ ವಿದ್ಯಾರ್ಥಿನಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ಬಂಧಿತ ಆರೊಪಿಗೆ 2 ತಿಂಗಳ ಬಳಿಕ ಜಾಮೀನು
-
ರಾಷ್ಟ್ರೀಯ2 days ago
Divorce under Hindu Marriage Act : ಹಿಂದು ವಿವಾಹ ಕಾಯ್ದೆಯಡಿ ವಿಚ್ಛೇದನ ಪಡೆಯಲು ʼಈʼ ನಿಯಮ ಪಾಲನೆ ಕಡ್ಡಾಯ – ಕೊರ್ಟು ಮಹತ್ವದ ಆದೇಶ ; ಏನದು ನಿಯಮ ?
-
ಅಪರಾಧ2 days ago
Dowry Harasment: ʼಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಡೆತ್ ನೋಟ್ ಬರೆದಿಟ್ಟು ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಯುವ ವೈದ್ಯೆ ಆತ್ಮಹತ್ಯೆ – ಅಷ್ಟಕ್ಕೂ ವರನ ಮನೆಯವರು ಇಟ್ಟ ಡಿಮ್ಯಾಂಡ್ ಎಷ್ಟು ಗೊತ್ತೆ ?
-
ಸುಳ್ಯ2 days ago
Arecanut Yellow leaf diseases ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದತ್ತ ಮಹತ್ವದ ಹೆಜ್ಜೆ – ಸಂಪಾಜೆಯಲ್ಲಿ ಇಂದೋರ್ ಕಂಪೆನಿಯ ಔಷಧಿ ಪ್ರಯೋಗಕ್ಕೆ ಆರಂಭಿಕ ಗೆಲುವು – ರೋಗವಿದ್ದ ಪ್ರದೇಶದಲ್ಲಿ ನಳನಳಿಸುತ್ತಿದೆ ಫಸಲು
-
ಮಂಗಳೂರು1 day ago
ಕುಡುಪು ಷಷ್ಟಿ ಮಹೋತ್ಸವ ಜಾತ್ರೆ – ಸಂತೆ ವ್ಯಾಪಾರದಲ್ಲಿ ಹಿಂದೂಯೇತರರಿಗಿಲ್ಲ ಅವಕಾಶ: ವ್ಯಾಪಾರಿಗಳ ಸಮನ್ವಯ ಸಮಿತಿ ಆಕ್ರೋಶ – ದೇವಸ್ಥಾನದ EOರಿಂದ ತಿರುಗೇಟು – ಕರಾವಳಿಯಲ್ಲಿ ನಿಲ್ಲೋದಿಲ್ವಾ ಧರ್ಮ ದಂಗಲ್ ?
-
ರಾಷ್ಟ್ರೀಯ2 days ago
Pancard latest update : ಪ್ಯಾನ್ ಕಾರ್ಡ್ ಕುರಿತು ಮಹತ್ವದ ಮಾಹಿತಿ – ಈ ತಪ್ಪು ಮಾಡಿದರೆ 10,000 ರೂ ದಂಡ ಗ್ಯಾರಂಟಿ
-
ಮಂಗಳೂರು23 hours ago
Interfaith Marriage ಮಂಗಳೂರು : ಭಿನ್ನಕೋಮಿನ ಜೋಡಿ ವಿವಾಹ?
-
ಬಿಗ್ ನ್ಯೂಸ್24 hours ago
Bride refuses Marriage in hall ತಾಳಿ ಕಟ್ಟುವ ವೇಳೆ ವರನ ಕೈಗೆ ಅಡ್ಡ ಹಿಡಿದು ಸಿನಿಮೀಯ ಶೈಲಿಯಲ್ಲಿ ಮದುವೆ ನಿರಾಕರಿಸಿದ ವಧು