ಮಂಗಳೂರು
Heart Attack : ಮಂಗಳೂರು : ಹೃದಯಘಾತಕ್ಕೆ ಯುವ ಪೊಲೀಸ್ ಸಿಬಂದಿ ಮೃತ್ಯು

ಮಂಗಳೂರು : ಇತ್ತೀಚೆಗೆ ಯುವಕರು ಹೃದಯಘಾತಕ್ಕೆ ತುತ್ತಾಗಿ ಮೃತಪಡುತ್ತಿರುವ ಘಟನೆಗಳು ಹೆಚ್ಚಾಗಿವೆ. ಅದರಲ್ಲೂ ಪೊಲೀಸ್ ಇಲಾಖೆಯಂತಹ ಸದೃಢ ದೇಹ ಆರೋಗ್ಯ ಬಯಸುವ ಇಲಾಖೆಯ ಸಿಬಂದಿಗಳು ಹೃದಯಘಾತಕ್ಕೆ ತುತ್ತಾಗುತ್ತಿರುವುದು ಕಂಡು ಬರುತ್ತಿವೆ. ಮಂಗಳೂರು ನಗರ ಶಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸೋಮನ ಗೌಡ ಚೌದರಿ (31) ಮೃತಪಟ್ಟ ಪೊಲೀಸ್ ಸಿಬ್ಬಂದಿ
ವಯರ್ ಲೆಸ್ ಇನ್ಸ್‌ಪೆಕ್ಟರ್ ವಾಹನಕ್ಕೆ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮನ ಗೌಡ ಮೂಲತ: ಬಿಜಾಪುರ ಜಿಲ್ಲೆಯವರಾಗಿದ್ದಾರೆ. ಇನ್ಸ್‌ಪೆಕ್ಟರ್ ಗೆ ಡೆಂಗ್ಯೂ ಜ್ವರ ಭಾದಿಸಿದ್ದರಿಂದ ನಗರದ ಫಳ್ನಿರ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ಮಂಗಳವಾರ ಬೆಳಿಗ್ಗೆ ಕರೆದುಕೊಂಡು ಹೋಗಿದ್ದರು.
ಅಧಿಕಾರಿಯನ್ನು ಆಸ್ಪತ್ರೆ ಬಳಿ ಇಳಿಸಿ ವಾಹನ ಪಾರ್ಕ್ ಮಾಡಲು ಹೋದ ಸಂದರ್ಭ ಸೋಮನಗೌಡ ಏಕಾಎಕಿ ಕುಸಿದು ಬಿದ್ದಿದ್ದಾರೆ ಕೂಡಲೇ ಸ್ಥಳೀಯರು ಧಾವಿಸಿ 112 ಗೆ ಕರೆ ಮಾಡಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲು ಕೊಂಡುಹೋಗುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ವಿವಾಹಿತರಾಗಿರುವ ಸೋಮನಗೌಡ ಕಳೆದ 7 ವರ್ಷಗಳಿಂದ ನಗರ ಶಶಸ್ತ್ರ ದಳದಲ್ಲಿ ಸೇವೆ ಸಲಿಸುತ್ತಿದ್ದಾರೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಸಿಬಂದಿ ಇತ್ತಿಚಿನ ದಿನಗಳಲ್ಲಿ ಅಕಾಲಿಕಾ ಮರಣಕ್ಕೆ ತುತ್ತಾಗುತ್ತಿರುವುದು ಆತಂಕ ಸೃಷ್ಟಿಸಿದೆ.
ಅಪರಾಧ
Mother and Son died ಮಂಗಳೂರು : ಹಸೂಗೂಸನ್ನು ಟಬ್ʼನ ನೀರಿನಲ್ಲಿ ಮುಳುಗಿಸಿ ತಾನೂ ಜೀವ ಕಳೆದುಕೊಂಡ ನವ ವಿವಾಹಿತೆ

ಮಂಗಳೂರು: ಹೆರಿಗೆ ಬಳಿಕ ಸಾಮಾನ್ಯವಾಗಿ ಬಾಣಂತಿಯರನ್ನು/ ಮಹಿಳೆಯರನ್ನು ಕಾಡುವ ಮಾನಸಿಕ ಖಿನ್ನತೆಗೆ (Mental disorder) ತುತ್ತಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕೂವರೆ ತಿಂಗಳ ಹಸುಗೂಸನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಗುಜ್ಜರಕೆರೆ ಎಂಬಲ್ಲಿ ನಡೆದಿದೆ.
ಗುಜ್ಜರಕೆರೆಯ ವಸತಿ ಸಮುಚ್ಚಯವೊಂದರಲ್ಲಿ ವಾಸಿಸುತ್ತಿದ್ದ ಫಾತಿಮಾ ರುಕಿಯಾ (23) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನಾಲ್ಕೂವರೆ ತಿಂಗಳ ಗಂಡು ಮಗು ಅಬ್ದುಲ್ಲಾ ಹೂದ್ ಮೃತ ಹಸುಳೆ. ಈ ದುರಂತದ ಬಗ್ಗೆ ಮೃತ ಮಹಿಳೆಯ ತಾಯಿ ದೂರು ನೀಡಿದ್ದು, ನಗರದ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಾತಿಮಾ ರುಕಿಯಾರವರ ವಿವಾಹ ಸುಮಾರು ಒಂದೂವರೆ ವರ್ಷದ ಹಿಂದೆ ಮುಹಮ್ಮದ್ ಉನೈಸ್ ಎಂಬವರ ಜತೆ ಜರುಗಿತ್ತು. ಜುಲೈ 7ರಂದು ಗಂಡು ಮಗುವಿಗೆ (ಅಬ್ದುಲ್ಲಾ ಹೂದ್ ) ಜನ್ಮ ನೀಡಿದ್ದರು.ಇದಾದ ಬಳಿ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಫಾತಿಮಾರವರಿಗೆ ಮಂಗಳೂರಿನ ಅರೋಗ್ಯ ಕ್ಲಿನಿಕ್ ನಲ್ಲಿ ಮಾನಸಿಕ ವೈದ್ಯರಾದ ಡಾ. ಸುಪ್ರಿಯಾ ರವರಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. .
ಫಾತಿಮಾರವರು ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ತಾಯಿ ಬಳಿ ಆಗಾಗ ಹೇಳಿಕೊಳ್ಳುತ್ತಿದ್ದರು . ಡಿ 2 ರಂದು ಬೆಳಿಗ್ಗೆ 11.30ರಿಂದ ಸಂಜೆ 3.30ರ ನಡುವೆ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್ ನ ಫ್ಲಾಟ್ ನಂಬರ್ 507 ರ ಬೆಡ್ ರೂಮ್ ನ ಗ್ಯಾಲರಿಯಲ್ಲಿ ಫಾತಿಮಾ ರುಕಿಯಾರವರು ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ 4 1/2 ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.
Bitter Gourd health benefits: ಹಾಗಲಕಾಯಿ ನಾಲಿಗೆಗೆ ಕಹಿ – ಉದರಕ್ಕೆ ಸಿಹಿ… ಇಲ್ಲಿದೆ ಅದರ ಆರೋಗ್ಯ ಪ್ರಯೋಜನಗಳು
ಬಳಿಕ ಕೊಠಡಿಯ ಕಿಟಕಿಯ ಕಬ್ಬಿಣದ ಸರಳಿಗೆ ಸೀರೆಯನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಫಾತಿಮಾ ರುಕಿಯಾ ತಾಯಿ ಖತಿಜಾತುಲ್ ಕುಬ್ರ ರವರು ಠಾಣೆಗೆ ದೂರು ನೀಡಿದ್ದಾರೆ.
ಮಂಗಳೂರು
Boy assaulted at school: ದ.ಕ ಜಿಲ್ಲೆಯಲ್ಲೊಂದು ರಾಕ್ಷಸಿ ಕೃತ್ಯ : ಸೈಕಲ್ ಮಾರಾಟ ಮಾಡಿದನೆಂದು ಆರೋಪಿಸಿ ಬಾಲಕನಿಗೆ ಶಾಲೆಯಲ್ಲಿ ದೊಣ್ಣೆಯಿಂದ ಹೊಡೆದ SDMC ಅಧ್ಯಕ್ಷ – ಹಲ್ಲೆಗೆ ಶಿಕ್ಷಕರಿಬ್ಬರ ಪ್ರೋತ್ಸಾಹ

ಪುಂಜಾಲಕಟ್ಟೆ ಡಿ. 1: ಶಾಲಾ ಬಾಲಕನೋರ್ವ ಸೈಕಲ್ ಮಾರಾಟ ಮಾಡಿರುವುದಾಗಿ ಆರೋಪಿಸಿ ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ಅಧ್ಯಕ್ಷ ಶಾಲೆಯಲ್ಲಿ ಬಾಲಕನಿಗೆ ಹಲ್ಲೆಗೈದಿದ್ದು, ಬಾಲಕ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿನ 30ರಂದು ಸಂಭವಿಸಿದೆ.
ಬಾಲಕ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಬಾಲನ್ಯಾಯ ಕಾಯ್ದೆ ಅಡಿಯಲ್ಲಿ ಹಲ್ಲೆ ಮಾಡಿದಾತನ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬಳ್ಳಮಂಜ ಮಚ್ಚಿನದ ಹಿರಿಯ ಪ್ರಾಥಮಿಕ ಶಾಲೆ ಎಸ್.ಡಿ.ಎಂ.ಸಿ ಸಮಿತಿ ಅಧ್ಯಕ್ಷ ಪರಮೇಶ್ ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಪ್ರಮೀಳಾ ಹಾಗೂ ಶಿಕ್ಷಕ ರಮೇಶ್ ಪ್ರಕರಣದ ಆರೋಪಿಗಳು
ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯೊಂದರ ವಿದ್ಯಾರ್ಥಿ ಸಂತ್ರಸ್ತ ಬಾಲಕ. 8ನೇ ತರಗತಿಯ ಅಪ್ರಾಪ್ತ ಬಾಲಕ ಸೈಕಲ್ ಅನ್ನು ಇನ್ನೊಬ್ಬ ವಿದ್ಯಾರ್ಥಿಗೆ ಮಾರಾಟ ಮಾಡಿದ್ದ ಎನ್ನಲಾಗಿದ್ದು, ಈ ವಿಚಾರವಾಗಿ ನ.28ರಂದು ಬಾಲಕನನ್ನು ಶಿಕ್ಷಕರ ಕೊಠಡಿಗೆ ಕರೆಸಿದ ಆರೋಪಿ ಪರಮೇಶ್ ವಿದ್ಯಾರ್ಥಿಯ ತಾಯಿಯ ಎದುರಲ್ಲಿಯೇ ಆತನ ಮೇಲೆ ಕೋಲಿನಿಂದ ಹಾಗೂ ಕೈಯಿಂದ ಹಲ್ಲೆ ನಡೆಸಿದ್ದಾನೆ. ಬಾಲಕನ ಎದೆಗೂ ಗುದ್ದಿದ್ದಾನೆ ಎನ್ನಲಾಗಿದೆ. ಕೋಲಿನಿಂದ ನಡೆಸಿದ ಹಲ್ಲೆಯಿಂದ ಬಾಲಕನ ಕಾಲಿನಲ್ಲಿ ಗಾಯವಾಗಿದೆ. ಹಲ್ಲೆ ನಡೆಸಿದ ಬಳಿಕ ಇದನ್ನು ಯಾರಿಗೂ ತಿಳಿಸಿದರೇ ಸೈಕಲ್ ಕಳ್ಳತನ ಮಾಡಿರುವುದಾಗಿ ಕೇಸ್ ಮಾಡಿಸುತ್ತೇನೆ ಎಂದು ಬೆದರಿಕೆಯನ್ನೂ ಪರಮೇಶ್ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಈ ವೇಳೆ ಶಾಲಾ ಶಿಕ್ಷಕರಾದ ಪ್ರಮೀಳಾ ಮತ್ತು ರಮೇಶ್ ಅವರು ಬಾಲಕನಿಗೆ ಹೊಡೆಯಲು ಪ್ರೇರೇಪಿಸಿದ್ದರು ಎಂದು ಆರೋಪಿಸಲಾಗಿದೆ
Gold price hike ಜೆಟ್ ವೇಗದಲ್ಲಿ ಏರಿದ ಚಿನ್ನದ ಬೆಲೆ- ಇಳಿಯುವ ಸಾಧ್ಯತೆ ಇದೆಯಾ?
ಹಲ್ಲೆ ನಡೆಸಿದ ಬಳಿಕ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಸೈಕಲ್ ಕದ್ದು ಮಾರಾಟ ಮಾಡಿದ ಬಗ್ಗೆ ಕೇಸು ಹಾಕುವುದಾಗಿ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಶಾಲೆಯಲ್ಲಿ ನಡೆದ ಹಲ್ಲೆಯಿಂದ ನ. 30ರಂದು ಬೆಳಗ್ಗೆ ಬಾಲಕನಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಎಸ್.ಡಿ.ಎಂ.ಸಿ ಸಮಿತಿ ಅಧ್ಯಕ್ಷ ಪರಮೇಶ್ ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಪ್ರಮೀಳಾ ಹಾಗೂ ಶಿಕ್ಷಕ ರಮೇಶ್ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಕಲಂ 323, 324,506,114 ಹಾಗೂ ಬಾಲನ್ಯಾಯ ಕಾಯಿದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಾಲಕನಿಂದ ಮಾಹಿತಿ ಪಡೆದಿದ್ದಾರೆ.
ಮಂಗಳೂರು
Arrecanut: ಕಳ್ಳ ಮಾರ್ಗದಲ್ಲಿ ಮಂಗಳೂರು ಮಾರುಕಟ್ಟೆಗೆ ಬರುತ್ತಿದೆ ವಿದೇಶಿ ‘ಹುರಿದ ಅಡಿಕೆ – ಧಾರಣೆ ಕುಸಿತದ ಹಿಂದಿದೆ ಇದರ ಕರಾಮತ್ತು

ಮಂಗಳೂರು: ಹುರಿದ ಅಡಿಕೆ ರೂಪದಲ್ಲಿ ಕಸ್ಟಮ್ಸ್ ಸುಂಕ ತಪ್ಪಿಸಿಕೊಂಡು ಅವ್ಯಾಹತವಾಗಿ ವಿದೇಶ ಅಡಿಕೆ ಭಾರತಕ್ಕೆ ಬರುತ್ತಿರುವುದು ರಾಜ್ಯದ ಅಡಿಕೆ ವಹಿವಾಟು ಸಂಸ್ಥೆಗಳು ಹಾಗೂ ಬೆಳೆಗಾರರ ನಿದ್ದೆಗೆಡಿಸಿದೆ.
‘ತಿಂಗಳ ಈಚೆಗೆ ಸುಮಾರು 20 ಕಂಟೇನರ್ ಅಡಿಕೆ ವಿದೇಶದಿಂದ ಭಾರತಕ್ಕೆ ಬಂದಿದೆ, ಪ್ರತಿ ಕಂಟೇನರ್‌ನಲ್ಲಿ 20ರಿಂದ 24 ಟನ್ ಅಡಿಕೆ ಇರಬಹುದೆಂದು ಅಂದಾಜಿಸಲಾಗಿದೆ. ಇವುಗಳಲ್ಲಿ ಬಹುಪಾಲು ಹುರಿದ ಅಡಿಕೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ಕಸ್ಟಮ್ಸ್ ಇಲಾಖೆಯವರು ಹೇಳುವಂತೆ ಹುರಿದ ಅಡಿಕೆಗೆ ಕನಿಷ್ಠ ಆಮದು ಸುಂಕ ಅನ್ವಯವಾಗುವುದಿಲ್ಲ. ಹೀಗಾಗಿ, ಆಮದುದಾರರು ಇದರ ಲಾಭ ಪಡೆದುಕೊಳ್ಳುತ್ತಿರುವ ಸಾಧ್ಯತೆ ಇದೆ’ ಎನ್ನುತ್ತಾರೆ ಮಾರುಕಟ್ಟೆ ತಜ್ಞರೊಬ್ಬರು.
ವಿದೇಶದಿಂದ ಬಂದಿರುವ ಅಡಿಕೆಯ ಮಾದರಿಗಳ ಮೇಲೆ ಮಂಗಳೂರಿನ ಸಂಶೋಧನಾ ಸಂಸ್ಥೆಯೊಂದು ಅಧ್ಯಯನ ನಡೆಸಿದೆ. ಸ್ಥಳೀಯ ರೈತರು ತಯಾರಿಸುವ ಕೆಂಪಡಿಕೆಗೆ ಹೋಲುವ ಇವು ಸ್ವಲ್ಪ ಕಂದುಬಣ್ಣದಲ್ಲಿದ್ದು, ನೈಜ ಅಡಿಕೆಗಿಂತ ಭಿನ್ನವಾಗಿವೆ. ಅಡಿಕೆ ಗುಣಮಟ್ಟ ನಿಗದಿಪಡಿಸಿದ (ಬಿಐಎಸ್- ಬ್ಯುರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್) ಮಾನದಂಡಕ್ಕೆ ಅನುಗುಣವಾಗಿಲ್ಲ. ಅಲ್ಲದೆ, ಇವು ತುಸು ಹೊಗೆಯ ವಾಸನೆ ಹೊಂದಿವೆ. ಇದು ಇಂಡೊನೇಷ್ಯಾ ಅಡಿಕೆ ಆಗಿರುವ ಸಾಧ್ಯತೆ ಇದ್ದು, ಮೇಲ್ನೋಟಕ್ಕೆ ಸ್ಥಳೀಯ ಅಡಿಕೆಯನ್ನು ಹೋಲುತ್ತದೆ. ಆದರೆ, ಕಳಪೆ ಗುಣಮಟ್ಟದ ಈ ಅಡಿಕೆಗಳಲ್ಲಿ ಶೇ 33ರಷ್ಟು ಸೋಂಕು ತಗುಲಿದಂತಿವೆ ಎಂದು ಆ ವರದಿಯಲ್ಲಿ ತಿಳಿಸಲಾಗಿದೆ’ ಎಂದು ಅವರು ವಿವರಿಸಿದರು.
‘ವಿದೇಶಿ ಅಡಿಕೆ ಅವ್ಯಾಹತವಾಗಿ ದೇಸಿ ಮಾರುಕಟ್ಟೆಗೆ ಬರುತ್ತಿದ್ದು, ಕೆಲವು ಪ್ರಕರಣಗಳು ಮಾತ್ರ ಪತ್ತೆಯಾಗುತ್ತಿವೆ. ತೆರಿಗೆರಹಿತ ವಸ್ತುಗಳ ಹೆಸರಿನಲ್ಲಿ, ಒಣಹಣ್ಣುಗಳ ಹೆಸರಿನಲ್ಲಿ ವಿಮಾನಗಳ ಮೂಲಕವೂ ಅಡಿಕೆ ಬರುತ್ತಿದೆ. ಇಂಡೊನೇಷ್ಯಾ ಅಡಿಕೆಯು ಶ್ರೀಲಂಕಾ ಗಡಿ ಮೂಲಕ ಭಾರತಕ್ಕೆ ಬರುತ್ತದೆ. ಬೇರೆ ದೇಶಗಳಿಂದ ಅಡಿಕೆ ನುಸುಳುತ್ತಿದ್ದು, ವಾರದ ಈಚೆಗೆ ತಮಿಳುನಾಡಿನ ಬಂದರಿಗೆ ಬಂದ ವಿದೇಶಿ ಅಡಿಕೆಯನ್ನು ಕಸ್ಟಮ್ಸ್ ಇಲಾಖೆ ವಶಪಡಿಸಿಡಿಕೊಂಡಿದೆ’ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಹೇಳಿದ್ದಾರೆ.
‘ಸ್ಥಳೀಯ ಮಾರುಕಟ್ಟೆಗಳಲ್ಲಿ ಈಗಾಗಲೇ ವಿದೇಶ ಅಡಿಕೆ ಸಮಸ್ಯೆ ಸೃಷ್ಟಿಸಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರ, ಸಾಗರ, ಶಿವಮೊಗ್ಗ ಭಾಗಗಳಲ್ಲಿ ಕೆಂಪಡಿಕೆ ಹೆಚ್ಚು ತಯಾರಾಗುತ್ತದೆ. ಕೆಂಪಡಿಕೆಯೊಂದಿಗೆ ಕಳಪೆ ಗುಣಮಟ್ಟದ ಹುರಿ ಅಡಿಕೆ ಮಿಶ್ರಣ ಮಾಡಿ ಕಾಳದಂಧೆಕೋರರು ಮಾರಾಟಕ್ಕಿಳಿದರೆ, ನಮ್ಮ ಅಡಿಕೆ ದರವೂ ಕುಸಿಯುವ ಅಪಾಯ ಇದೆ. ಕ್ವಿಂಟಲ್‌ವೊಂದಕ್ಕೆ ಗರಿಷ್ಠ ₹52ಸಾವಿರದವರೆಗೆ ಇದ್ದ ಕೆಂಪಡಿಕೆ ದರ ಈಗ ₹45ಸಾವಿರಕ್ಕೆ ಕುಸಿದಿದೆ. ಹೀಗಾಗಿ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯೋಗದಲ್ಲಿ ತೆರಳಿ ಕೇಂದ್ರ ಸರ್ಕಾರದ ಪ್ರಮುಖರನ್ನು ಸದ್ಯದಲ್ಲಿ ಭೇಟಿ ಮಾಡಲಾಗುವುದು’ ಎಂದು ಅಡಿಕೆ ವಹಿವಾಟು ಸಹಕಾರಿ ಸಂಸ್ಥೆಯಾಗಿರುವ ಶಿರಸಿ ಟಿಎಸ್‌ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಹೇಳಿದ್ದಾರೆ.
ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ಕುಮಾರ್ ಕೊಡ್ಗಿ ಹೇಳಿಕೆ:
ನೆಲ ಜಲ ವಾಯು ಮಾರ್ಗಗಳ ಮೂಲಕ ವಿದೇಶದ ಕಳಪೆ ಅಡಿಕೆ ಭಾರತಕ್ಕೆ ಬರುತ್ತಿದೆ. ಗಡಿ ಪ್ರದೇಶದಿಂದ ವಿಮಾನಗಳ ಮೂಲಕ ಬರುವ ಅಡಿಕೆಯನ್ನು ಇಂಫಾಲ್ ದಿಮಾಪುರ್ ಕೊಲ್ಕತ್ತಾ ಮತ್ತು ಅಗರ್ತಲಾ ವಿಮಾನ ನಿಲ್ದಾಣಗಳ ಲೋಡಿಂಗ್ ಪಾಯಿಂಟ್‌ಗೆ ಕಳುಹಿಸಲಾಗುತ್ತದೆ. ಬೆಂಗಳೂರು ಹೈದರಾಬಾದ್ ನಾಗ್ಪುರ ಮತ್ತು ಅಹಮದಾಬಾದ್‌ನಲ್ಲಿ ಕಾರ್ಗೊ ಏಜೆಂಟರಿಗೆ ಈ ಅಡಿಕೆ ತಲುಪುತ್ತದೆ. ಆಹಾರ ವಸ್ತುಗಳ ಹೆಸರಿನಲ್ಲಿ ಬಂದರುಗಳ ಮೂಲಕವೂ ಅಡಿಕೆ ಬರುತ್ತಿದೆ. ಪ್ರತಿದಿನ 10 ಟನ್‌ಗಳಷ್ಟು ಸರಕು ಭಾರತಕ್ಕೆ ಪ್ರವೇಶಿಸುತ್ತಿದೆ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಪ್ರಧಾನಿಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ವಿನಂತಿಸಲಾಗಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ಕುಮಾರ್ ಕೊಡ್ಗಿ ತಿಳಿಸಿದರು.
-
ಅಪರಾಧ9 hours ago
ವಿಟ್ಲ : 80 ಪ್ರಕರಣಗಳ ಸರದಾರ ʼಇತ್ತೆ ಬರ್ಪೆ ಅಬೂಬ್ಬಕರ್ʼ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು – ಅಷ್ಟಕ್ಕೂ ಈತ ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ? ಇತ್ತೆ ಬರ್ಪೆ ಹೆಸರಿನ ಹಿಂದಿದೆ ಇಂಟ್ರೆಸ್ಟಿಂಗ್ ಕಹಾನಿ
-
ಬಿಗ್ ನ್ಯೂಸ್14 hours ago
ಹುತಾತ್ಮ ಯೋಧ ಕ್ಯಾ.ಪ್ರಾಂಜಲ್ ಕುಟುಂಬಕ್ಕೆ ಚೆಕ್ ವಿತರಣೆ : ಮೊತ್ತ ತಾಯಿ-ಪತ್ನಿಗೆ ಸಮಪಾಲು ಮಾಡಿದ ಸರ್ಕಾರ
-
ಕ್ರೀಡೆ13 hours ago
Bomb Threat ಪ್ರಿಯಕರ ಕೊಟ್ಟ ಐಡಿಯಾ ನಂಬಿ ಗಂಡನ ಜೈಲಿಗೆ ಕಳುಹಿಸಲು ಆತನ ಮೊಬೈಲ್ʼನಿಂದ ಹೆಂಡತಿ ಕಳುಹಿಸಿದಳು ಬೆದರಿಕೆ ಮೆಸೇಜ್ – ಆದರೇ ಮುಂದೇನಾಯಿತು ?
-
ಕ್ರೀಡೆ10 hours ago
Jay shah: ಜಯ್ ಶಾಗೆ ಸ್ಪೋರ್ಟ್ಸ್ ಬ್ಯುಸಿನೆಸ್ ಲೀಡರ್ ಆಫ್ ದಿ ಇಯರ್ ಪ್ರಶಸ್ತಿಯ ಗರಿ – ಬಿಸಿಸಿಐ ಕಾರ್ಯದರ್ಶಿಗೆ ಈ ಗೌರವ ಸಿಕ್ಕಿದ್ದು ಯಾಕೆ ಗೊತ್ತೆ ?
-
ರಾಜಕೀಯ11 hours ago
Harish Poonja Moved Privilege motion ತನ್ನ ಮೇಲೆ ಎಫ್ ಐ ಆರ್ ದಾಖಲಿಸಿದ ಅರಣ್ಯ ಅಧಿಕಾರಿಗಳ ವಿರುದ್ದ ಸದನದಲ್ಲಿ ಹಕ್ಕು ಚ್ಯುತಿ ಮಂಡಿಸಿದ ಹರೀಶ್ ಪೂಂಜಾ – ಏನಿದು ಪ್ರಕರಣ ? ಮುಂದೇನಾಯಿತು?
-
ಸಾಮಾಜಿಕ ಮಾಧ್ಯಮ18 hours ago
Dasara Elephant Arjun Dies ಅರ್ಜುನ ಸಾವಿನ ಸುತ್ತ ಹಲವು ಅನುಮಾನ – ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ – ಅದರಲ್ಲಿದೆ ಗುಂಡೇಟಿನ ವಿಚಾರ
-
ಸಿನೆಮಾ1 day ago
Animal Box Office collection ರಣ್ ಬೀರ್ – ರಶ್ಮಿಕಾ ಜೋಡಿ ಕಮಾಲ್ : ಅನಿಮಲ್ ಬಾಕ್ಸ್ ಆಫೀಸ್ನಲ್ಲಿ ಮಾಡಿದ ಕಲೆಕ್ಷನ್ ಎಷ್ಟು ಗೊತ್ತಾ?
-
ಚಿನ್ನ-ಬೆಳ್ಳಿ ದರ19 hours ago
Gold Rate Hike:ಆಭರಣ ಪ್ರಿಯರಿಗೆ ಶಾಕಿಂಗ್ ಸುದ್ದಿ : ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ದರ ಸಾರ್ವಕಾಲಿಕ ಜಿಗಿತ – ಮುಂದಿನ ದಿನಗಳಲ್ಲಿ ರೇಟ್ ಹೇಗಿರಲಿದೆ?