ಬೆಂಗಳೂರು
ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಅಂಬಿಕಾಪತಿ ಸಂಬಂಧಪಟ್ಟ 45ಕ್ಕೂ ಹೆಚ್ಚು ಸ್ಥಳಗಳಿಗೆ ಐಟಿ ದಾಳಿ – ಮಂಚದ ಅಡಿ 21 ರಟ್ಟಿನ ಬಾಕ್ಸ್‌ಗಳಲ್ಲಿ 20 ಕೋಟಿ ಪತ್ತೆ

ಬೆಂಗಳೂರು: ರಾಜ್ಯದ ಎರಡು ಗುತ್ತಿಗೆ ಕಂಪನಿಗಳು ಹಾಗೂ ಗುತ್ತಿಗೆದಾರರಿಗೆ ಸಂಬಂಧಪಟ್ಟ 45ಕ್ಕೂ ಹೆಚ್ಚು ಸ್ಥಳಗಳ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ಮಾಡಿದ್ದು, ಒಟ್ಟು 42 ಕೋಟಿ ನಗದು ಜಪ್ತಿ ಮಾಡಿದ್ದಾರೆ.
ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಅಂಬಿಕಾಪತಿ ಮನೆ ಹಾಗೂ ಕುಟುಂಬಸ್ಥರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಅಂಬಿಕಾಪತಿ ಮಗ ಪ್ರದೀಪ್ ಮನೆಯಲ್ಲಿ 20 ಕೋಟಿ ನಗದು ಜಪ್ತಿ ಮಾಡಿದ್ದಾರೆ.
ರಾಜ್ಯದ ಹಲವು ಸರ್ಕಾರಿ ಕಾಮಗಾರಿಗಳನ್ನು ಗುತ್ತಿಗೆ ಪಡೆದಿರುವ ಕಂಪನಿಗೆ ಸಂಬಂಧಪಟ್ಟ ಹೈದರಾಬಾದ್‌ನ ಸ್ಥಳದಲ್ಲೂ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಈ ಸ್ಥಳದಲ್ಲಿ 15 ಕೋಟಿ ನಗದು ಪತ್ತೆ ಆಗಿರುವುದಾಗಿ ಗೊತ್ತಾಗಿದೆ.
‘ಗುರುವಾರ ಬೆಳಿಗ್ಗೆಯಿಂದ ಶುಕ್ರವಾರ ರಾತ್ರಿಯವರೆಗೆ ಅಂಬಿಕಾಪತಿ ಮಗ ಪ್ರದೀಪ್ ಮನೆಯಲ್ಲಿ 20 ಕೋಟಿ, ಹೈದರಾಬಾದ್‌ನಲ್ಲಿ 15 ಕೋಟಿ ಸೇರಿದಂತೆ ಒಟ್ಟು 42 ಕೋಟಿ ನಗದು ಜಪ್ತಿ ಮಾಡಲಾಗಿದೆ’ ಎಂದು ಮೂಲಗಳು ಹೇಳಿವೆ.
`ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಈ ದಾಳಿಗಳನ್ನು ಮಾಡಲಾಗಿದೆ. ನಗದು ಜೊತೆಯಲ್ಲಿ ಸಾಕಷ್ಟು ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ಅವುಗಳ ಪರಿಶೀಲನೆ ನಡೆಸಲಾಗುತ್ತಿದೆ. ಹಲವು ಗುತ್ತಿಗೆದಾರರ ಮನೆಗಳಲ್ಲಿ ಶನಿವಾರವೂ ಶೋಧ ಮುಂದುವರಿಯಲಿದೆ ‘ ಎಂದು ಮೂಲಗಳು ತಿಳಿಸಿವೆ.
ಮಂಚದ ಅಡಿ 21 ರಟ್ಟಿನ ಬಾಕ್ಸ್‌ಗಳಲ್ಲಿ 20 ಕೋಟಿ :
ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷರೂ ಆಗಿರುವ ಅಂಬಿಕಾಪತಿ ಹಾಗೂ ಕುಟುಂಬಸ್ಥರ ಮನೆಗಳ ಮೇಲೆ ಐಟಿ ಅಧಿಕಾರಿಗಳು ಏಕಕಾಲದಲ್ಲಿ ಗುರುವಾರ ದಾಳಿ ಮಾಡಿದರು. ಅಂಬಿಕಾಪತಿ-ಪತ್ನಿ ಅಶ್ವತಮ್ಮ ವಾಸವಿರುವ ಮಾನ್ಯತಾ ಟೆಕ್‌ಪಾರ್ಕ್ ಬಳಿ ಮನೆ ಮಗ ಪ್ರದೀಪ್ ವಾಸವಿರುವ ಆರ್.ಟಿ.ನಗರ ಸುಲ್ತಾನ್‌ಪಾಳ್ಯದಲ್ಲಿರುವ ಮನೆ ಇನ್ನೊಬ್ಬ ಮಗನ ಮನೆ ಹಾಗೂ ಇತರೆ ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ಶೋಧ ನಡೆಸಿದರು.
ಮಗ ಪ್ರದೀಪ್ ಮನೆಯ ಎಲ್ಲ ಕಡೆ ತಪಾಸಣೆ ನಡೆಸಿದ ಐಟಿ ಅಧಿಕಾರಿಗಳು ಮಂಚದ ಕೆಳಗೆ ಬಚ್ಚಿಟ್ಟಿದ್ದರಟ್ಟಿನ 21 ಬಾಕ್ಸ್ ಹಾಗೂ 1 ಬ್ಯಾಗ್‌ಗಳನ್ನು ಪತ್ತೆ ಹಚ್ಚಿದ್ದರು. ಬಾಕ್ಸ್ ಹಾಗೂ ಬ್ಯಾಗ್‌ಗಳಲ್ಲಿ 500 ಮುಖ ಬೆಲೆಯ ನೋಟುಗಳ ಕಂತೆಗಳು ಇದ್ದವು. ಇದೇ ಮನೆಯಲ್ಲಿ 20 ಕೋಟಿಯನ್ನು ಅಧಿಕಾರಿಗಳು ಸುಪರ್ದಿಗೆ ಪಡೆದರು.
ಬೆಂಗಳೂರು
ಸಿ.ಪಿ ಯೋಗೇಶ್ವರ್ ಭಾವ ಮಹದೇವಯ್ಯ ನಾಪತ್ತೆ: ಅಪಹರಣ ಶಂಕೆ

ರಾಮನಗರ : ಬಿಜೆಪಿ ನಾಯಕ, ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರ ಭಾವ ಹಾಗೂ ಮೆಗಾಸಿಟಿ ನಿರ್ದೇಶಕ ಮಹದೇವಯ್ಯ ಅವರು ಅನುಮಾನಾಸ್ಪದವಾಗಿ ಕಾಣೆಯಾಗಿದ್ದಾರೆ.62 ವರ್ಷದ ಮಹದೇವಯ್ಯ ಅವರು ಗ್ರಾಮದ ತೋಟದ ಮನೆಯಲ್ಲಿ ಅವರು ವಾಸವಿದ್ದರು.
ಅವರ ಪತ್ನಿ ಬೆಂಗಳೂರಿಗೆ ಹೋಗಿದ್ದರಿಂದ, ಮನೆಯಲ್ಲಿ ಅವರೊಬ್ಬರೇ ಇದ್ದರು. ಮಧ್ಯಾಹ್ನ ಸ್ಥಳೀಯರು ಮನೆಗೆ ಹೋಗಿದ್ದಾಗ, ಮಹದೇವಯ್ಯ ಅವರು ಇರಲಿಲ್ಲ. ಬೆಡ್ ರೂಮ್ ನ ಅಲ್ಮೆರಾ ತೆರೆದಿದ್ದು, ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ಹಾಗಾಗಿ, ಯಾರೋ ಅವರನ್ನು ಅಪಹರಿಸಿ ಮನೆಯಲ್ಲಿದ್ದ ನಗದು ಮತ್ತು ಚಿನ್ನಾಭರಣ ದೋಚಿರುವ ಅನುಮಾನ ವ್ಯಕ್ತವಾಗಿದ್ದು, ಕೂಡಲೇ ಕುಟುಂಬದವರಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಿಪಿ ಯೋಗೇಶ್ವರ್ ಅವರ ಸಹೋದರ ಸಿ.ಪಿ.ರಾಜೇಶ್ ಅವರು, ತೋಟದ ಮನೆಗೆ ಬಂದು ನೋಡಿದಾಗ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿ ಆಗಿತ್ತು.
ಬೇರೆ ಬೇರೆ ಕಾರು ಓಡಾಡಿರುವ ಸಾಧ್ಯತೆ ಇದೆ. ಹೀಗಾಗಿ ಮಹದೇವಯ್ಯರನ್ನು ಅಪಹರಣ ಮಾಡಿರುವ ಅನುಮಾನ ಇದೆ. ಅದಕ್ಕೆ ನಾವು ಪೊಲೀಸರಿಗೆ ವಿಚಾರ ತಿಳಿಸಿದ್ದೇವೆ ಎಂದಿದ್ದಾರೆ.
ಬೆಂಗಳೂರು
Bangalore Kambala | ಬೆಂಗಳೂರು ಕಂಬಳ ಅದ್ದೂರಿ ಯಶಸ್ವಿ – ಮುಂದಿನ ಹೆಜ್ಜೆ ದೆಹಲಿಯತ್ತ

ಬೆಂಗಳೂರು: ಅದ್ದೂರಿಯಾಗಿ ಸಮಾರೋಪಗೊಂಡ ರಾಜ್ಯ ರಾಜಧಾನಿ ಬೆಂಗಳೂರಿನ ಕಂಬಳದ (Bangalore Kambala) ನಂತರ ರಾಷ್ಟ್ರ ರಾಜಧಾನಿಯಲ್ಲಿ ದೆಹಲಿಯಲ್ಲಿ ಕಂಬಳ ಆಯೋಜನೆ ಮಾಡುವ ಯೋಜನೆ ಕೈಗೊಂಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ಆಯೋಜನೆಗೊಂಡಿದ್ದ ‘ಬೆಂಗಳೂರು ಕಂಬಳ’ ಭಾನುವಾರ ಮಧ್ಯರಾತ್ರಿ ಅದ್ದೂರಿ ಸಮಾರೋಪ ಕಂಡಿತು. ಪ್ರಶಸ್ತಿ ವಿತರಣೆಯಾಗುತ್ತಿದ್ದಂತೆಯೇ ಗೆದ್ದ ಕೋಣಗಳ ತಂಡ ತವರು ಸೇರಲು ತಯಾರಾಗುತ್ತಿದ್ದವು. ಪರಿಚಾರಕರ ತಂಡ, ಬೆಳಗ್ಗೆಯಿಂದಲೇ ಸಾಮಾನು. ಸರಂಜಾಮುಗಳನ್ನು ಲಾರಿಗೆ ತುಂಬಿಸುತ್ತಿದ್ದರು.
ಪಂದ್ಯಾಟದಲ್ಲಿ ಸೋತ ಕೋಣಗಳ ಕೆಲ ತಂಡ ಭಾನುವಾರ ರಾತ್ರಿಯೇ ಊರಿನತ್ತ ಮುಖ ಮಾಡಿದ್ದವು.
ಬೆಂಗಳೂರಿನಿಂದ ಹೊರಟ ಕೆಲ ಕೋಣಗಳ ತಂಡ ಶಿರಾಡಿ ಘಾಟ್ ಹಾಗೂ ಇನ್ನು ಕೆಲವು ತಂಡ ಚಾರ್ಮಾಡಿ ಘಾಟ್ ಮೂಲಕ ಲಾರಿಯಲ್ಲಿ ತೆರಳಿದವು. ಹಾಸನ ಹಾಗೂ ಸಕಲೇಶಪುರದಲ್ಲಿ ಕೋಣಗಳಿಗೆ ಆಯಾಸ ತಣಿಸಲು ವಾಸ್ತವ್ಯ ವ್ಯವಸ್ಥೆ ಮಾಡಲಾಗಿತ್ತು.
ಒಟ್ಟಾರೆಯಾಗಿ ಬೆಂಗಳೂರು ಕಂಬಳದಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ ಮತ್ತು ಮುಂದಿನ ವರ್ಷ ಕಂಬಳ ಆಯೋಜಿಸಿದರೂ ಬರುತ್ತೇವೆ ಎಂದು ಬಹುತೇಕ ಕೋಣಗಳ ಮಾಲೀಕರು ಮತ್ತು ಪರಿಚಾರಕರು ಪ್ರತಿಕ್ರಿಯಿಸಿದರು.
ರಾಜಧಾನಿಯ ಅರಮನೆ ಮೈದಾನದಲ್ಲಿ 40 ಗಂಟೆಗೂ ಅಧಿಕ ಕಾಲ ಸಾಗಿದ ಕಂಬಳವನ್ನು ಒಟ್ಟಾರೆ 6 ಲಕ್ಷಕ್ಕೂ ಅಧಿಕ ಮಂದಿ ಕಣ್ತುಂಬಿಕೊಂಡಿದ್ದಾರೆ ಎನ್ನಲಾಗಿದೆ. 159 ಜತೆ ಕೋಣಗಳು ವಿವಿಧ ವಿಭಾಗಗಳಲ್ಲಿ ಓಟ ನಡೆಸಿದವು.
ಕರಾವಳಿಯ ಸಂಸ್ಕೃತಿ ಅನಾವರಣ ಮಾಡಲು ಬೆಂಗಳೂರಿನಲ್ಲಿ ಸರ್ಕಾರ ಎರಡು ಎಕರೆ ಜಾಗ ನೀಡಬೇಕು ಎಂದು ಬೆಂಗಳೂರು ಕಂಬಳ ಸಂಘಟಕ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮನವಿ ಮಾಡಿದ್ದಾರೆ. ಮುಂದಿನ ದಿನದಲ್ಲಿ ದೆಹಲಿಯಲ್ಲಿ ಕಂಬಳ ಆಯೋಜಿಸುವ ಚಿಂತನೆ ಇದೆ ಎಂದು ಅಶೋಕ್ ರೈ ತಿಳಿಸಿದ್ದಾರೆ.
ಬೆಂಗಳೂರು
ಬೆಂಗಳೂರು ಕಂಬಳ ನೋಡಿ ವಾಪಸ್ಸಾಗುತ್ತಿದ್ದಾಗ ಭೀಕರ ಅಪಘಾತ, ಇಬ್ಬರ ಸಾವು !

ಬೆಂಗಳೂರಿನಲ್ಲಿ ನಡೆಯುತ್ತಿರುವ ‘ಬೆಂಗಳೂರು ಕಂಬಳ’ವನ್ನು ನೋಡಿಕೊಂಡು ಮಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಮೃತಪಟ್ಟ ದುರ್ಘಟನೆ ನಡೆದಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾತ್ರಿ 1:15ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನೆ ರಾಜ್ಯ ಹೆದ್ದಾರಿ 33 ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಭಾನುವಾರ ನಡೆದಿದೆ.
ಮಂಗಳೂರಿನ ಬಜಪೆ ಮೂಲದ ಕಿಶಾನ್ ಶೆಟ್ಟಿ( 20 ) ದಕ್ಷಿಣ ಕನ್ನಡ ಜಿಲ್ಲೆ ಭಟ್ಟರ ತೋಟ ಗ್ರಾಮದ ಫಿಲೀಪ್ ನೇರಿ ಲೋಬೋ (32) ಮೃತ ದುರ್ದೈವಿಗಳು. ನಿತೀಶ್ ಭಡಾರಿ, ಪ್ರೀತಿ ಲೋಬೋ, ಹರೀಶ್ ತೀವ್ರವಾಗಿ ಗಾಯಗೊಂಡು ಅದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರಿನಲ್ಲಿದ್ದವರು ನೆಲಮಂಗಲ ಹಾಗೂ ಕುಣಿಗಲ್ ಮಾರ್ಗವಾಗಿ ಮಂಗಳೂರಿಗೆ ಹೋಗಬೇಕಾಗಿತ್ತು. ಆದರೆ, ದಾರಿತಪ್ಪಿ ತುಮಕೂರಿಗೆ ಹೋಗಿದ್ದಾರೆ. ಬಳಿಕ ಅಲ್ಲಿಂದ ಹೆಬ್ಬೂರು ಮಾರ್ಗವಾಗಿ ಕುಣಿಗಲ್ ನಿಂದ ಮಂಗಳೂರಿಗೆ ತೆರಳುತ್ತಿರಬೇಕಾದರೆ ಇವರು ಸಂಚರಿಸುತ್ತಿದ್ದ ಕಾರಿಗೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೊಗುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ನಿನ್ನೆ ರಾತ್ರಿ ಕಂಬಳ ನೋಡಿದ ಐವರು ಕಾರಿನಲ್ಲಿ ಮಂಗಳೂರಿಗೆ ವಾಪಸಾಗುತ್ತಿದ್ದರು. ಇದೇ ವೇಳೆ ಕಾರು ಹಾಗೂ ಬೋರ್‌ವೆಲ್ ಕೊರೆಯುವ ಲಾರಿ ಡಿಕ್ಕಿಯಾಗಿವೆ. ಮಂಗಳೂರಿನ ಬಜಪ್ಪೆ ಗ್ರಾಮದ ವಾಸಿ ಕಿಶಾನ್ ಶೆಟ್ಟಿ(20) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟ ಗ್ರಾಮದ ವಾಸಿ ಫಿಲಿಪ್ ನೇರಿ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಅಪಘಾತ ಸಂಭವಿಸುತ್ತಲೇ ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಲಾರಿ ಹಾಗೂ ಕಾರು ವೇಗವಾಗಿ ಚಲಿಸುತ್ತಿದ್ದ ಕಾರಣ ಕಾರು ನಜ್ಜುಗುಜ್ಜಾಗಿದೆ. ಹಾಗಾಗಿಯೇ, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
ಅಪರಾಧ9 hours ago
ವಿಟ್ಲ : 80 ಪ್ರಕರಣಗಳ ಸರದಾರ ʼಇತ್ತೆ ಬರ್ಪೆ ಅಬೂಬ್ಬಕರ್ʼ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು – ಅಷ್ಟಕ್ಕೂ ಈತ ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ? ಇತ್ತೆ ಬರ್ಪೆ ಹೆಸರಿನ ಹಿಂದಿದೆ ಇಂಟ್ರೆಸ್ಟಿಂಗ್ ಕಹಾನಿ
-
ಬಿಗ್ ನ್ಯೂಸ್13 hours ago
ಹುತಾತ್ಮ ಯೋಧ ಕ್ಯಾ.ಪ್ರಾಂಜಲ್ ಕುಟುಂಬಕ್ಕೆ ಚೆಕ್ ವಿತರಣೆ : ಮೊತ್ತ ತಾಯಿ-ಪತ್ನಿಗೆ ಸಮಪಾಲು ಮಾಡಿದ ಸರ್ಕಾರ
-
ಕ್ರೀಡೆ13 hours ago
Bomb Threat ಪ್ರಿಯಕರ ಕೊಟ್ಟ ಐಡಿಯಾ ನಂಬಿ ಗಂಡನ ಜೈಲಿಗೆ ಕಳುಹಿಸಲು ಆತನ ಮೊಬೈಲ್ʼನಿಂದ ಹೆಂಡತಿ ಕಳುಹಿಸಿದಳು ಬೆದರಿಕೆ ಮೆಸೇಜ್ – ಆದರೇ ಮುಂದೇನಾಯಿತು ?
-
ಕ್ರೀಡೆ10 hours ago
Jay shah: ಜಯ್ ಶಾಗೆ ಸ್ಪೋರ್ಟ್ಸ್ ಬ್ಯುಸಿನೆಸ್ ಲೀಡರ್ ಆಫ್ ದಿ ಇಯರ್ ಪ್ರಶಸ್ತಿಯ ಗರಿ – ಬಿಸಿಸಿಐ ಕಾರ್ಯದರ್ಶಿಗೆ ಈ ಗೌರವ ಸಿಕ್ಕಿದ್ದು ಯಾಕೆ ಗೊತ್ತೆ ?
-
ರಾಜಕೀಯ11 hours ago
Harish Poonja Moved Privilege motion ತನ್ನ ಮೇಲೆ ಎಫ್ ಐ ಆರ್ ದಾಖಲಿಸಿದ ಅರಣ್ಯ ಅಧಿಕಾರಿಗಳ ವಿರುದ್ದ ಸದನದಲ್ಲಿ ಹಕ್ಕು ಚ್ಯುತಿ ಮಂಡಿಸಿದ ಹರೀಶ್ ಪೂಂಜಾ – ಏನಿದು ಪ್ರಕರಣ ? ಮುಂದೇನಾಯಿತು?
-
ಸಾಮಾಜಿಕ ಮಾಧ್ಯಮ18 hours ago
Dasara Elephant Arjun Dies ಅರ್ಜುನ ಸಾವಿನ ಸುತ್ತ ಹಲವು ಅನುಮಾನ – ಮಾವುತರೊಂದಿಗೆ ಮಾತನಾಡಿದ ಕಾವಾಡಿಗರ ವಿಡಿಯೋ ವೈರಲ್ – ಅದರಲ್ಲಿದೆ ಗುಂಡೇಟಿನ ವಿಚಾರ
-
ಸಿನೆಮಾ1 day ago
Animal Box Office collection ರಣ್ ಬೀರ್ – ರಶ್ಮಿಕಾ ಜೋಡಿ ಕಮಾಲ್ : ಅನಿಮಲ್ ಬಾಕ್ಸ್ ಆಫೀಸ್ನಲ್ಲಿ ಮಾಡಿದ ಕಲೆಕ್ಷನ್ ಎಷ್ಟು ಗೊತ್ತಾ?
-
ಚಿನ್ನ-ಬೆಳ್ಳಿ ದರ19 hours ago
Gold Rate Hike:ಆಭರಣ ಪ್ರಿಯರಿಗೆ ಶಾಕಿಂಗ್ ಸುದ್ದಿ : ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ದರ ಸಾರ್ವಕಾಲಿಕ ಜಿಗಿತ – ಮುಂದಿನ ದಿನಗಳಲ್ಲಿ ರೇಟ್ ಹೇಗಿರಲಿದೆ?