ರಾಜಕೀಯ
750ಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೇಸ್ ಸೇರಿದ ಬಿಜೆಪಿಯ ಮಾಜಿ ಶಾಸಕಿ

ಬೆಂಗಳೂರು ಅ 20: 750 ಕ್ಕೂ ಹೆಚ್ಚು ಬಿಜೆಪಿ ಮುಖಂಡರೊಂದಿಗೆ ಬಿಜೆಪಿಯ ಮಾಜಿ ಶಾಸಕಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೇಸ್ ಸೇರ್ಪಡೆಯಾಗಿದ್ದಾರೆ.
ಪೂರ್ಣಿಮಾ ಮತ್ತು ಶ್ರೀನಿವಾಸ್ ಸಾಮಾಜಿಕ ನ್ಯಾಯದ ಪರವಾಗಿರುವವರು. ಒಲ್ಲದ ಮನಸ್ಸಿನಿಂದ ಬಿಜೆಪಿ ಯಲ್ಲಿದ್ದರು. ಈಗ ಕಾಂಗ್ರೆಸ್ ಗೆ ಬಂದಿದ್ದಾರೆ. ಇವರಿಗೆ ರಾಜಕೀಯವಾಗಿ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅಭಯ ನೀಡಿದರು.
ಅತ್ಯಂತ ಹಿಂದುಳಿದ ವರ್ಗ ಗೊಲ್ಲ ಸಮುದಾಯದ ಹಿರಿಯ ಕಾಂಗ್ರೆಸ್ ಮುಖಂಡರಾದ ದಿವಂಗತ ಎ.ಕೃಷ್ಣಪ್ಪ ಅವರ ಪುತ್ರಿ ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಕೃಷ್ಣಪ್ಪ ಮತ್ತು ಕೃಷ್ಣಪ್ಪ ಅವರ ಅಳಿಯ ಶ್ರೀನಿವಾಸ್, ಕೆ.ನರಸಿಂಹನಾಯಕ್ ಸೇರಿದಂತೆ 750 ಕ್ಕೂ ಹೆಚ್ಚು ಬಿಜೆಪಿಯ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದರು.

ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳ ಪರವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ನಮ್ಮ ಕಾಂಗ್ರೆಸ್ . ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಧ್ವನಿಯಾಗಿ ಎ.ಕೃಷ್ಣಪ್ಪ, ಪೂರ್ಣಿಮಾ ಮತ್ತು ಶ್ರೀನಿವಾಸ್ ಮೊದಲಿನಿಂದಲೂ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಬಿಜೆಪಿ ಜಾತಿ ತಾರತಮ್ಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಎಲ್ಲಾ ಜಾತಿಯ ಬಡವರು ಮತ್ತು ಶೂದ್ರ ಸಮುದಾಯದವರು ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡು ರಾಜಕೀಯ ನಿಲುವು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.

ಪೂರ್ಣಿಮಾ, ಶ್ರೀನಿವಾಸ್ ಮತ್ತು ಇವರ ಬೆಂಬಲಿಗರಿಗೆ ಬಿಜೆಪಿ ಯಲ್ಲಿ ಸಾಮಾಜಿಕ ನ್ಯಾಯ ಇಲ್ಲ ಎನ್ನುವುದು ಸ್ಪಷ್ಟವಾಗಿ ಮನದಟ್ಟಾಗಿದೆ. ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯದ ಪರವಾಗಿ ನಿಲುವು ಇಟ್ಟುಕೊಂಡಿರುವವರಿಗೆ ಬಹಳ ಕಷ್ಟ ಎನ್ನುವುದು ಇವರನ್ನು ನೋಡಿದಾಗ ಸ್ಪಷ್ಟವಾಗಿದೆ ಎಂದರು. ಅದಕ್ಕೇ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಹಿಂದುಳಿದ ಸಮುದಾಯಗಳು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಸಚಿವ ಡಿ.ಸುಧಾಕರ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿದಂತೆ ಗೊಲ್ಲ ಸಮುದಾಯದ ರಾಜ್ಯ ಮುಖಂಡರೂ , ವಿಧಾನ ಪರಿಷತ್ ಸದಸ್ಯರೂ ಆದ ನಾಗರಾಜ ಯಾದವ್ ಸೇರಿದಂತೆ ಹಲವು ಮಂದಿ ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳ ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುಳ್ಳೇ ಬಿಜೆಪಿಯ ಮನೆ ದೇವರು
ಸುಳ್ಳು ಬಿಜೆಪಿಯ ಮನೆ ದೇವರು. ಸುಳ್ಳುಗಳ ಮೂಲಕ ಜನರನ್ನು ಯಾಮಾರಿಸಿ, ದಿಕ್ಕು ತಪ್ಪಿಸಿ, ಹಾದಿ ತಪ್ಪಿಸಿ ಕೆಟ್ಟ ರಾಜಕಾರಣ ಮಾಡುತ್ತದೆ. ಅಧಿಕಾರಿ ಇದ್ದಾಗಲೂ ಸುಳ್ಳು, ಅಧಿಕಾರ ಇಲ್ಲದಿದ್ದಾಗಲೂ ಸುಳ್ಳುಗಳ ಮೇಲೆ ಅವಲಂಬನೆಯಾಗಿರುತ್ತದೆ. ನಿಮ್ಮ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ನಿಮ್ಮನ್ನೇ ಯಾಮಾರಿಸುವವರನ್ನು ಈ ಕ್ಷಣದಿಂದಲೇ ತಿರಸ್ಕರಿಸಿ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.
ರಾಜಕೀಯ
ಗಂಭೀರ ಸ್ವರೂಪ ಪಡೆದುಕೊಂಡ ಐಸಿಸಿ ನಂಟಿನ ಮೌಲ್ವಿ ಹಾಶ್ಮಿ ಜೊತೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎನ್ನುವ ಯತ್ನಾಳ್ ಆರೋಪ : ‘ಜೀ’ ಗಳ ಬಲದಲ್ಲಿ ಮೋದಿಯನ್ನೇ ಪೇಚಿಗೆ ಸಿಲುಕಿಸಿದ ಯತ್ನಾಳ್..! ಆರೋಪ ಹೊತ್ತ ಮೌಲ್ವಿ ಜೊತೆಗಿನ ಮೋದಿ ಪೋಟೋ ಬಿಡುಗಡೆ ಮಾಡಿದ ಸಿದ್ದರಾಮಯ್ಯ

ಮೌಲ್ವಿ ತನ್ವೀರ್ ಹಾಶ್ಮಿ ಐಸಿಸಿ ನಂಟು ಹಾಗೂ ಸಿದ್ದರಾಮಯ್ಯರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎನ್ನುವ ಯತ್ನಾಳ್ ಆರೋಪ ದಿನೇ ದಿನೇ ಗಂಭೀರ ಸ್ವರೂಪ ಪಡೆಯುತ್ತಿದೆ. ಇದೀಗ ಹಾಶ್ಮಿಯೊಂದಿಗೆ ನರೇಂದ್ರ ಮೋದಿ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಖುದ್ದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಮಾಧ್ಯಮ ಪ್ರಕಟನೆ ಹೊರಡಿಸಿ, ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಪೋಟೊವನ್ನು ಹಿಡ್ಕೊಂಡು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನನ್ನ ವಿರುದ್ದ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ.
ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರ ಮೋದಿ ಅವರೂ ಸಂಬಂಧ ಹೊಂದಿರುವುದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ಪೋಟೊಗಳು ಸ್ಪಷ್ಟವಾಗಿ ಹೇಳುತ್ತಿವೆ. ದೀರ್ಘಕಾಲದಿಂದ ಹಾಶ್ಮಿ ಅವರಿಗೆ ಅತ್ಯಂತ ಆತ್ಮೀಯರಾಗಿರುವ ಮತ್ತು ಊರಿನಲ್ಲಿ ತನ್ನ ನೆರೆಹೊರೆಯಾಗಿರುವ ಯತ್ನಾಳ್ ಅವರಿಗೆ ಇದು ತಿಳಿದಿರಲಿಲ್ಲ ಎನ್ನುವುದನ್ನು ನಂಬಲು ಸಾಧ್ಯವೇ? ಎಂದಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷತೆ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ತಪ್ಪಿಹೋಗಿರುವುದರಿಂದ ಯತ್ನಾಳ್ ಅವರು ಕೆರಳಿ ಕೆಂಡವಾಗಿದ್ದಾರೆ. ಇದಕ್ಕೆ ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದಲೇ ಮೌಲ್ವಿ ತನ್ವೀರ್ ಹಾಶ್ಮಿ ಜೊತೆಗಿನ ನನ್ನ ಪೋಟೋವನ್ನು ತೋರಿಸಿ ಆರೋಪ ಮಾಡಿದ್ದಾರೆ. ಈ ಆರೋಪದ ನಂತರ ಮೌಲ್ವಿ ಅವರ ಜೊತೆಗಿನ ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧದ ವಿವರವೂ ಹೊರಬರಲಿದೆ ಎನ್ನುವುದು ಅವರಿಗೆ ಖಂಡಿತ ಗೊತ್ತಿತ್ತು ಎಂದಿದ್ದಾರೆ.
ಅವೆಲ್ಲವೂ ಬಯಲಾಗಿ ಪ್ರಧಾನಿ ಮತ್ತು ಬಿಜೆಪಿ ನಾಯಕರು ಮುಜುಗರಕ್ಕೀಡಾಗಲಿ ಎನ್ನುವ ದುರುದ್ದೇಶದಿಂದ ನನ್ನ ವಿರುದ್ಧ ಆರೋಪ ಮಾಡುವ ಆಟ ಆಡಿದ್ದಾರೆ.ಮೌಲ್ವಿ ಹಾಶ್ಮಿ ಅವರ ಜೊತೆಗಿನ ನನ್ನ ಸ್ನೇಹ ಸಂಬಂಧವನ್ನು ನಾನು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದೇನೆ. ಹಾಶ್ಮಿಯವರೂ ಕೂಡಾ ಅವರ ಮೇಲಿನ ಆರೋಪದ ತನಿಖೆಯನ್ನು ಕೇಂದ್ರ ಸರ್ಕಾರವೇ ನಡೆಸಲಿ ಎಂದು ಸವಾಲು ಹಾಕಿದ್ದಾರೆ.
ಈಗ ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಲೇ ಬೇಕಾಗುತ್ತದೆ. ಮೌಲಿ ತನ್ವೀರ್ ಹಾಶ್ಮಿ ಅವರಿಗೆ ನಿಜವಾಗಿ ಐಸಿಎಸ್ ಜೊತೆ ಸಂಬಂಧ ಇದ್ದರೆ ಆ ಬಗ್ಗೆ ತನಿಖೆಗೆ ಪ್ರಧಾನಿಯವರು ತಕ್ಷಣ ಆದೇಶ ನೀಡಬೇಕು ಮತ್ತು ಹಾಶ್ಮಿ ಮತ್ತು ತನ್ನ ಸಂಬಂಧದ ವಿವರವನ್ನು ದೇಶದ ಮುಂದಿಡಬೇಕು. ಇದು ಎರಡೂ ಮಾಡದೆ ಇದ್ದರೆ ಇಂತಹ ಸುಳ್ಳು ಆರೋಪ ಮಾಡುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮವನ್ನಾದರೂ ಕೈಗೊಳ್ಳಬೇಕು.ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ರೀತಿಯ ಆರೋಪಗಳನ್ನು ಮಾಡುವುದು ಇದೇ ಮೊದಲ ಸಲವೇನಲ್ಲ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಪುಂಖಾನುಪುಂಖವಾಗಿ ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಬೇಕಾದರೆ ಪಕ್ಷದ ಹೈಕಮಾಂಡಿಗೆ ಎರಡು ಸಾವಿರ ಕೋಟಿ ರೂಪಾಯಿ ಕೊಡಬೇಕಾಗುತ್ತದೆ ಎನ್ನುವ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ. ಈ ರೀತಿ ಬಹಿರಂಗವಾಗಿ ತಮ್ಮ ಪಕ್ಷದ ಉನ್ನತ ನಾಯಕರ ವಿರುದ್ಧವೇ ಆರೋಪ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಾಯಿಬಲದ ಹಿಂದೆ ಇರುವ ಶಕ್ತಿ ಯಾವುದು?
ಬಿಜೆಪಿಯಲ್ಲಿರುವ ಯಾವ ‘ಜೀ’’ ಗಳ ಬಲದಿಂದ ಇಂತಹ ಸ್ವಪಕ್ಷೀಯರ ವಿರುದ್ಧ ಇಂತಹ ಮಾನಹಾನಿಕರ ಆರೋಪ ಮಾಡಿಯೂ ಅವರೂ ಬಚಾವಾಗುತ್ತಿದ್ದಾರೆ ಎನ್ನುವುದು ಕೂಡಾ ಬಯಲಾಗಬೇಕಾಗಿದೆ. ಇಂದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿಯ ಪ್ರಕಾರ ಮೌಲ್ವಿ ತನ್ವೀರ್ ಹಾಶ್ಮಿ ಕುಟುಂಬದ ಜೊತೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ವ್ಯಾಪಾರಿ ಸಂಬಂಧ ಕೂಡಾ ಇದೆ ಎನ್ನುವುದು ಬಯಲಾಗಿದೆ.
ಯತ್ನಾಳ್ ಅವರ ಆರೋಪದಂತೆ ತನ್ವೀರ್ ಹಾಶ್ಮಿ ಅವರಿಗೆ ಐಸಿಸ್ ಜೊತೆ ಸಂಬಂಧ ಇರುವುದಾಗಿದ್ದರೆ ಅವರ ಜೊತೆಗೆ ವ್ಯವಹಾರದ ಪಾಲುದಾರರಾಗಿರುವ ಯತ್ನಾಳ್ ಅವರಿಗೆ ಅದು ಗೊತ್ತಿರಲಿಲ್ಲವೇ? ಗೊತ್ತಿದ್ದೂ ಸುಮ್ಮನಿರಲು ಕಾರಣವೇನು? ಇಷ್ಟು ಸಮಯದ ನಂತರ ಇಂತಹ ಆರೋಪ ಮಾಡಲು ಕಾರಣಗಳೇನು ಎನ್ನುವುದನ್ನು ಕೂಡಾ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದರು.
ರಾಜಕೀಯ
Karnataka BJP | ಪ್ರತಿಪಕ್ಷ ನಾಯಕ ಅಶೋಕ್ ವಿರುದ್ದ ಬಹಿರಂಗ ಆಕ್ರೋಶ ವ್ಯಕ್ತಪಡಿಸಿ ‘ಅಡ್ಜಸ್ಟ್ ಮೆಂಟ್ ಗಿರಾಕಿ’ ಎಂದ ಬಿಜೆಪಿ ಶಾಸಕರು

ಸುವರ್ಣವಿಧಾನಸೌಧ : ಬೆಳಗಾವಿ ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್‌ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನೀಡಿದ ಉತ್ತರ ವಿರೋಧಿಸಿ ನಡೆಸಿದ ಸಭಾತ್ಯಾಗ ಪ್ರತಿಪಕ್ಷ ಬಿಜೆಪಿಯಲ್ಲಿಯೇ ಗೊಂದಲ, ಅಸಮಾಧಾನಕ್ಕೆ ಕಾರಣವಾಗಿದ್ದು, ಪ್ರತಿಪಕ್ಷ ನಾಯಕ ಆರ್.ಅಶೋಕ್ (Karnataka BJP) ವಿರುದ್ಧವೇ ಸ್ವಪಕ್ಷೀಯರು ಬಹಿರಂಗವಾಗಿ ಬೇಸರ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.
ಪೃಥ್ವಿಸಿಂಗ್ ಮತ್ತು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಬೆಳಗಾವಿ ಬಿಜೆಪಿ ಮುಖಂಡ ಅಭಿಜಿತ್ ಜವಳ್ಕರ್ ಪ್ರಕರಣ ಸಂಬಂಧ ಧರಣಿ ನಡೆಸಲು ಬಿ.ವೈ.ವಿಜಯೇಂದ್ರ ಮತ್ತಿತರ ಸದಸ್ಯರು ತೀರ್ಮಾನಿಸಿದ್ದರು. ಅಷ್ಟರಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಏಕಾಏಕಿ ಸಭಾತ್ಯಾಗ ಎಂದು ಪ್ರಕಟಿಸಿ ಸದನದಿಂದ ಹೊರ ನಡೆದರು. ಪರಿಣಾಮ ಪಕ್ಷದವರಲ್ಲಿಯೇ ಗೊಂದಲ ಉಂಟಾಯಿತು. ನಂತರ ಅನಿವಾರ್ಯವಾಗಿ ವಿಜಯೇಂದ್ರ ಮತ್ತಿತರರು ಸಹ ಸದನದಿಂದ ಹೊರ ನಡೆದರು.
ಈ ನಡುವೆ, ಶಾಸಕರಾದ ಎಸ್.ಆರ್.ವಿಶ್ವನಾಥ್ ಮತ್ತು ಅಭಯ್ ಪಾಟೀಲ್ ಇಬ್ಬರು ಅಶೋಕ್ ನಡೆಗೆ ಕಿಡಿಕಾರಿದರು. ಎಸ್.ಆರ್.ವಿಶ್ವನಾಥ್ ಅವರಂತೂ ಅಶೋಕ್ ಅವರನ್ನು ‘ಅಡ್ಜಸ್ಟ್‌ಮೆಂಟ್ ಗಿರಾಕಿ’ ಎಂದು ಬೈಯ್ದುಕೊಂಡು, ಸದನಕ್ಕೆ ಆಗಮಿಸುವುದೇ ಇಲ್ಲ ಎಂದು ಕೋಪದಿಂದ ತೆರಳಿದರು. ಅಭಯ್ ಪಾಟೀಲ್, ಧರಣಿ ನಡೆಸುವ ಬದಲು ಸಭಾತ್ಯಾಗ ಮಾಡುವ ತೀರ್ಮಾನ ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸರ್ಕಾರದ ಉತ್ತರವನ್ನು ವಿರೋಧಿಸಿ ಧರಣಿ ಅಥವಾ ಸಭಾತ್ಯಾಗ ನಡೆಸುವ ಕುರಿತು ಸದನದಲ್ಲಿಯೇ ವಿಜಯೇಂದ್ರ, ಸುರೇಶ್ ಕುಮಾರ್, ಸುನೀಲ್ ಕುಮಾರ್ ಅವರು ಅಶೋಕ್ ಬಳಿ ಬಂದು ಚರ್ಚಿಸಿದರು. ಅಶೋಕ್ ಬಳಿಕ ಚರ್ಚಿಸಿದ ನಂತರ ಮತ್ತೊಮ್ಮೆ ಎಸ್.ಆರ್.ವಿಶ್ವನಾಥ್, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಇತರೆ ನಾಯಕರು ಮಾತುಕತೆ ನಡೆಸಿದರು. ಆದರೆ, ಈ ವೇಳೆ ಅಶೋಕ್ ಬಳಿ ಯಾರೂ ಮಾತುಕತೆ ನಡೆಸಲಿಲ್ಲ. ಇದು ಪಕ್ಷದ ಸದಸ್ಯರಲ್ಲಿಯೇ ಒಮ್ಮತ ಮೂಡಲು ಸಾಧ್ಯವಾಗಲಿಲ್ಲ. ಪರಿಣಾಮ ಅಶೋಕ್ ಅವರು ಏಕಾಏಕಿ ಸಭಾತ್ಯಾಗ ಘೋಷಣೆ ಮಾಡಿದ್ದು ಇತರೆ ನಾಯಕರಲ್ಲಿ ಆಶ್ಚರ್ಯವನ್ನುಂಟು ಮಾಡಿತು.
ಸದನದಿಂದ ಹೊರಗೆ ಬರುತ್ತಿದ್ದಂತೆ ಮೊಗಸಾಲೆಯಲ್ಲಿ ಹಲವು ನಾಯಕರು ಅಶೋಕ್ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು. ಕೋಪದಿಂದಲೇ ಹೊರಬಂದ ಎಸ್.ಆರ್.ವಿಶ್ವನಾಥ್, ಧರಣಿ ಮಾಡಬೇಕಲ್ಲವೇ. ಧರಣಿ ಮಾಡುವ ಕುರಿತು ಮಾತುಕತೆ ನಡೆಸಲಾಗಿತ್ತು ಎಂದು ಕಿಡಿಕಾರಿದರು. ಆದರೆ ತಮ್ಮ ತೀರ್ಮಾನವನ್ನು ಸಮರ್ಥಿಸಿಕೊಂಡ ಅಶೋಕ್, ಸಭಾತ್ಯಾಗಕ್ಕೆ ತೀರ್ಮಾನ ಮಾಡಿದ್ದೇವೆ ಎಂದರು. ಆಗಲೂ ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು.
ಇನ್ನು, ಅಭಯಪಾಟೀಲ್ ಸಹ ಕೋಪಗೊಂಡು, ಬಾವಿಗಿಳಿದು ಧರಣಿ ಮಾಡಬೇಕು ಎಂದುಕೊಂಡಿದ್ದೆವು. ಆದರೆ ಸಭಾತ್ಯಾಗ ಮಾಡಲಾಯಿತು. ಇನ್ನು ಮುಂದೆ ಶಾಸಕಾಂಗ ಸಭೆಗೆ ಬರುವುದಿಲ್ಲ. ಇವರಿಂದ ನಾನು ರಾಜಕೀಯಕ್ಕೆ ಬಂದಿಲ್ಲ. ರಾಜಕಾರಣ ಮಾಡುವುದು ನನಗೆ ಗೊತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಭಯ್ ಪಾಟೀಲ್ ಅವರನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾಧಾನ ಮಾಡಲು ಪ್ರಯತ್ನಿಸಿದರು. ‘ನಾನು ನಿನ್ನೊಂದಿಗೆ ಇದ್ದೇನೆ. ನಾನು ನಿನ್ನ ಜತೆ ಇದ್ದೇನೆ ಬಾ’ ಎಂದರು.
ಆದರೂ ಅಭಯ್ ಪಾಟೀಲ್, ನನಗೆ ಈ ರಾಜಕಾರಣವೇ ಬೇಕಿಲ್ಲ ಎಂದು ಹೇಳಿ ಕೋಪದಲ್ಲಿಯೇ ಅಲ್ಲಿಂದ ತೆರಳಿದರು.
ಉದ್ಯೋಗ
Job Alert: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ – ಸದ್ಯದಲ್ಲೆ ಸಾರಿಗೆ ಇಲಾಖೆಗೆ 9 ಸಾವಿರ ಸಿಬ್ಬಂದಿಗಳ ನೇಮಕ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ:ನಾನು ಸಾರಿಗೆ ಸಚಿವರಾಗಿದ್ದಾಗ ಸಾರಿಗೆ ಸಿಬ್ಬಂದಿಗಳ ನೇಮಕಾತಿ ನಡೆದಿತ್ತು.ಅಲ್ಲಿಂದ ಇಲ್ಲಿಯವರೆಗೆ ನೇಮಕಾತಿ ನಡೆದಿಲ್ಲ. ಕಳೆದ 7ವರ್ಷಗಳಿಂದ 13,888 ಸಿಬ್ಬಂದಿ ನಿವೃತ್ತಿಯಾಗಿದ್ದಾರೆ. ಈಗ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವಂತ 9,000 ಸಿಬ್ಬಂದಿಗಳ ನೇಮಕ ಮತ್ತು 5500 ಹೊಸಬಸ್ ಖರೀದಿ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಕ್ತಿ ಯೋಜನೆ ಜಾರಿಯಾದ ಮೇಲೆ ಮೇಲೆ ಜನರು ಹೆಚ್ಚು ಓಡಾಡುತ್ತಿದ್ದಾರೆ. ಮೊದಲು 85 ಲಕ್ಷ ಜನರು ಓಡಾಡುತ್ತಿದ್ದರು. ಈಗ 1 ಕೋಟಿ ಜನರು ಓಡಾಟ ಮಾಡುತ್ತಿದ್ದಾರೆ. ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಮಹಿಳೆಯರ ಓಡಾಟ ಕೂಡ ಹೆಚ್ಚಾಗಿದೆ ಎಂದರು.
ಇದಕ್ಕೆಲ್ಲಾ ಪ್ರಮುಖ ಕಾರಣ ಕಳೆದ ನಾಲ್ಕು ವರ್ಷದಲ್ಲಿ ಒಂದೇ ಒಂದು ಬಸ್ ಖರೀದಿ ಮಾಡಿಲ್ಲ. ಹೊಸ ಬಸ್ ತಗೊಂಡು ಹಳೆಯ ಬಸ್ಸುಗಳನ್ನು ಸ್ಕ್ರ್ಯಾಪ್ ಮಾಡಬೇಕು. ಹೀಗೆ ಆಗಿದ್ದರೆ ಏನು ಸಮಸ್ಯೆ ಆಗುತ್ತಿರಲಿಲ್ಲ ಎಂದರು.
ಬೆಳಗಾವಿ ಸಾರಿಗೆ ವಿಭಾಗಕ್ಕೆ ಬಿಎಂಟಿಸಿ ಹಳೆ ಬಸ್ ಬಿಟ್ಟಿರುವುದಕ್ಕೆ ಇಲ್ಲಿ ಬಸ್ ಇಲ್ಲ ಎಂಬ ಕಾರಣಕ್ಕೆ ತೆಗೆದುಕೊಂಡಿದ್ದಾರೆ. ಮತ್ತೆ ಆ ಬಸ್ಸುಗಳನ್ನು ವಾಪಸ್ ಕಳುಹಿಸಿದ್ದಾರೆ. ಸತತವಾಗಿ ನಾಲ್ಕು ವರ್ಷ ಬಸ್ ಖರೀದಿ ಮಾಡಿಲ್ಲ, ಏಳು ವರ್ಷಗಳಿಂದ ನೇಮಕಾತಿ ಮಾಡಿಲ್ಲ, ಹೀಗಾಗಿ ಸಮಸ್ಯೆ ಆಗುತ್ತಿದೆ. ಹಾಗಾಗಿ 5500 ಹೊಸ ಬಸ್ ಖರೀದಿ ಮಾಡುತ್ತಿದ್ದು, 9 ಸಾವಿರ ಸಿಬ್ಬಂದಿ ನೇಮಕಾತಿ ಮಾಡಲಿದ್ದೇವೆ ಎಂದು ತಿಳಿಸಿದರು.
ಬೆಳಗಾವಿ, ಬಾಗಲಕೋಟೆ, ಗದಗ, ಹುಬ್ಬಳ್ಳಿ ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಅತಿಹೆಚ್ಚು ಬಸ್ ನಿಲ್ದಾಣವನ್ನು 2013ರಿಂದ 2017ರವರೆಗೆ ನಾನು ಸಾರಿಗೆ ಸಚಿವ ಇದ್ದಾಗ ಈ ಭಾಗಕ್ಕೆ ಹಲವು ಬಸ್ಸು ಕೊಟ್ಟಿದ್ದೇನೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣಕ್ಕೆ ಎರಡು ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ಹಾಕಲು ಸೂಚನೆ ನೀಡಿದ್ದೇನೆ. ಬೆಳಗಾವಿ ನಗರಕ್ಕೆ 100 ಹೊಸ ಬಸ್ ಖರೀದಿ ಮಾಡುತ್ತೇನೆ. ಮೂರು ತಿಂಗಳಲ್ಲಿ ಅವಧಿಯಲ್ಲಿ ಈ ಹೊಸ ಬಸ್ ಗಳು ಬರುತ್ತವೆ ಎಂದು ಹೇಳಿದ್ದಾರೆ.
-
ರಾಷ್ಟ್ರೀಯ2 days ago
Divorce under Hindu Marriage Act : ಹಿಂದು ವಿವಾಹ ಕಾಯ್ದೆಯಡಿ ವಿಚ್ಛೇದನ ಪಡೆಯಲು ʼಈʼ ನಿಯಮ ಪಾಲನೆ ಕಡ್ಡಾಯ – ಕೊರ್ಟು ಮಹತ್ವದ ಆದೇಶ ; ಏನದು ನಿಯಮ ?
-
ಅಪರಾಧ2 days ago
Dowry Harasment: ʼಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಡೆತ್ ನೋಟ್ ಬರೆದಿಟ್ಟು ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಯುವ ವೈದ್ಯೆ ಆತ್ಮಹತ್ಯೆ – ಅಷ್ಟಕ್ಕೂ ವರನ ಮನೆಯವರು ಇಟ್ಟ ಡಿಮ್ಯಾಂಡ್ ಎಷ್ಟು ಗೊತ್ತೆ ?
-
ಸುಳ್ಯ2 days ago
Arecanut Yellow leaf diseases ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದತ್ತ ಮಹತ್ವದ ಹೆಜ್ಜೆ – ಸಂಪಾಜೆಯಲ್ಲಿ ಇಂದೋರ್ ಕಂಪೆನಿಯ ಔಷಧಿ ಪ್ರಯೋಗಕ್ಕೆ ಆರಂಭಿಕ ಗೆಲುವು – ರೋಗವಿದ್ದ ಪ್ರದೇಶದಲ್ಲಿ ನಳನಳಿಸುತ್ತಿದೆ ಫಸಲು
-
ಮಂಗಳೂರು2 days ago
ಕುಡುಪು ಷಷ್ಟಿ ಮಹೋತ್ಸವ ಜಾತ್ರೆ – ಸಂತೆ ವ್ಯಾಪಾರದಲ್ಲಿ ಹಿಂದೂಯೇತರರಿಗಿಲ್ಲ ಅವಕಾಶ: ವ್ಯಾಪಾರಿಗಳ ಸಮನ್ವಯ ಸಮಿತಿ ಆಕ್ರೋಶ – ದೇವಸ್ಥಾನದ EOರಿಂದ ತಿರುಗೇಟು – ಕರಾವಳಿಯಲ್ಲಿ ನಿಲ್ಲೋದಿಲ್ವಾ ಧರ್ಮ ದಂಗಲ್ ?
-
ರಾಷ್ಟ್ರೀಯ2 days ago
Pancard latest update : ಪ್ಯಾನ್ ಕಾರ್ಡ್ ಕುರಿತು ಮಹತ್ವದ ಮಾಹಿತಿ – ಈ ತಪ್ಪು ಮಾಡಿದರೆ 10,000 ರೂ ದಂಡ ಗ್ಯಾರಂಟಿ
-
ಮಂಗಳೂರು24 hours ago
Interfaith Marriage ಮಂಗಳೂರು : ಭಿನ್ನಕೋಮಿನ ಜೋಡಿ ವಿವಾಹ?
-
ಬಿಗ್ ನ್ಯೂಸ್1 day ago
Bride refuses Marriage in hall ತಾಳಿ ಕಟ್ಟುವ ವೇಳೆ ವರನ ಕೈಗೆ ಅಡ್ಡ ಹಿಡಿದು ಸಿನಿಮೀಯ ಶೈಲಿಯಲ್ಲಿ ಮದುವೆ ನಿರಾಕರಿಸಿದ ವಧು
-
ಸಿನೆಮಾ2 days ago
Pooja gandhi : ಕುವೆಂಪು ಪರಿಕಲ್ಪನೆಯ ’ಮಂತ್ರ ಮಾಂಗಲ್ಯ’ ಪದ್ದತಿಯಲ್ಲಿ ವಿವಾಹವಾದ ಪೂಜಾ ಗಾಂದಿ ದಂಪತಿಯಿಂದ ಕವಿ ಶೈಲ ಭೇಟಿ – ಹುಟ್ಟಿದ್ದು ಪಂಜಾಬಿನಲ್ಲಾದರೂ ಕನ್ನಡದ ಬಗೆಗಿನ ನಟಿಯ ಪ್ರೀತಿಗೆ ವ್ಯಾಪಕ ಮೆಚ್ಚುಗೆ