ದಕ್ಷಿಣ ಕನ್ನಡ
kallega Tigers Akshya kallaega Murder : ಪುತ್ತೂರು : ಕಲ್ಲೇಗ ಟೈಗರ್ಸ್ ನ ಸಾರಥಿ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ – ಇಬ್ಬರು ಠಾಣೆಗೆ ಶರಣು?

ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರು ನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದೆ. ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್ ಕಲ್ಲೇಗ ಹತ್ಯೆಯಾದವರು.
24ರ ಹರೆಯದ ಅಕ್ಷಯ್ ಕಲ್ಲೇಗ ವಿವೇಕಾನಂದ ಕಾಲೇಜ್ ಬಳಿ ನಿವಾಸಿಯಾಗಿದ್ದು, ತಂದೆ ಚಂದ್ರಶೇಖರ, ತಾಯಿ ಕುಸುಮ, ಇಬ್ಬರು ಸಹೋದರರನ್ನು ಅಗಲಿದ್ದಾರೆ. ಕಳೆದ 6 ವರ್ಷಗಳಿಂದ ಕಲ್ಲೇಗ ಟೈಗರ್ಸ್ ಎಂಬ ಹುಲಿ ವೇಷ ತಂಡವನ್ನು ಅವರು ಮುನ್ನಡೆಸುತ್ತಿದ್ದರು. ಈ ತಂಡ ಪುತ್ತೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಭಾರೀ ಜನ ಪ್ರಿಯತೆಯನ್ನು ಗಳಿಸಿತ್ತು. ಹುಲಿ ಕುಣಿತದ ಪಂಥ ಕೂಟಗಳಲ್ಲಿ ಪ್ರಶಸ್ತಿಗಳನ್ನು ಬಾಚಿತ್ತು. ಈ ಮೂಲಕ ಪುತ್ತೂರಿನಲ್ಲಿ ಹುಲಿ ಕುಣಿತ ತಂಡಕ್ಕೆ ಸ್ಟಾರ್ ಗಿರಿಯನ್ನು ತಂದುಕೊಟ್ಟಿದ್ದರು.
ಕೆಲ ಗಂಟೆಗಳ ಮೊದಲು ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಅದರ ಮುಂದುವರಿದ ಭಾಗವಾಗಿ ಅಕ್ಷಯ್ ನನ್ನು ನೆಹರೂ ನಗರಕ್ಕೆ ಬರಲು ಹೇಳಿ ಹತ್ಯೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಕೃತ್ಯವು ರಾತ್ರಿ 11.30 ಗಂಟೆ ಸುಮಾರಿಗೆ ನಡೆದಿದೆ ಎಂದು ತಿಳಿದು ಬಂದಿದೆ.

ನೆಹರೂ ನಗರದಿಂದ ವಿವೇಕಾನಂದ ಕಾಲೇಜಿಗೆ ತೆರಳುವ ರಸ್ತೆಯಲ್ಲಿ ಹೆದ್ದಾರಿಯ ತುಸು ದೂರದಲ್ಲಿರುವ ಕೆನಾರ ಬ್ಯಾಂಕಿನ ಎಟಿಎಂ ಬಳಿ ಅಕ್ಷಯ್ ಮೇಲೆ ತಂಡ ದಾಳಿ ನಡೆಸಿದ್ದು, ಅಲ್ಲಿಂದ ಆತನನ್ನು ಅಟ್ಟಾಡಿಸಿಕೊಂಡು ಬಂದು ತಲಾವರುನಿಂದ ದಾಳಿ ನಡೆಸಿದ್ದಾರೆ. ಎಟಿಎಂ ಬಳಿಯಿಂದ ಮಾಣಿ ಮೈಸೂರು ಹೆದ್ದಾರಿಯನ್ನು ದಾಟಿ ಆಚೆ ಬದಿ ಗಿಡಗಂಟಿಗಳಿಂದ ಅವೃತ್ತವಾದ ಜಾಗದವರೆಗೂ ಅಟ್ಟಾಡಿಸಿಕೊಂಡು ಹೋಗಿ ಹತ್ಯೆ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಮಾಣಿ ಮೈಸೂರು ಹೆದ್ದಾರಿಯ ಒಂದು ಬದಿಯಿಂದ ಇನ್ನೊಂದು ಬದಿಯವರೆಗೆ ರಕ್ತದ ಕಲೆಗಳಿವೆ.

ಅಕ್ಷಯ್ ಮೃತದೇಹ ಕಾಲೇಜಿಗೆ ಹೋಗುವ ರಸ್ತೆಯ ವಿರುದ್ದ ದಿಕ್ಕಿನಲ್ಲಿ ಹೆದ್ದಾರಿಯ ಅಂಚಿನಲ್ಲಿರುವ ಗಿಡಗಂಟಿಗಳಿಂದ ಅವೃತ್ತವಾದ ಹಡೀಲು ಬಿದ್ದ ಜಾಗದಲ್ಲಿ ಬಿದ್ದು ಕೊಂಡಿತ್ತು. ಒಟ್ಟು ಮೂವರಿದ್ದ ತಂಡ ಕೃತ್ಯ ಎಸಗಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಈ ಪೈಕಿ ಇಬ್ಬರು ಕೃತ್ಯ ನಡೆದ ಕೆಲ ಗಂಟೆಯ ಬಳಿಕ ಮನೀಶ್ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದ್ದು . ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ. ಇನ್ನೊರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗುತ್ತಿದೆ.

ಸಂಜೆ ವೇಳೆ ವಾಹನ ಅಪಘಾತದ ವಿಚಾರದಲ್ಲಿ ಅಕ್ಷಯ್ ಹಾಗೂ ಎದುರಾಳಿ ತಂಡದ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದರ ನಷ್ಟದ ಬಾಬ್ತು ಮಾತನಾಡಲೆಂದು ಪುನ: ಅದೇ ತಂಡ ಅಕ್ಷಯ್ ನನ್ನು ರಾತ್ರಿ ವೇಳೆ ನೆಹರೂ ನಗರ ಬಳಿ ಕರೆದು ಕೃತ್ಯ ಎಸಗಿದೆ ಎನ್ನಲಾಗುತ್ತಿದೆ ಕೇವಲ 2 ಸಾವಿರ ರೂಪಾಯಿ ವಿಚಾರವಾಗಿ ಈ ಕೃತ್ಯ ನಡೆದಿದೆಯೇ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ಶಂಕೆ ವ್ಯಕ್ತವಾಗುತ್ತಿದೆ.

ಎರಡು ತಿಂಗಳ ಅಂತರದಲ್ಲಿ ನಡೆದ ಎರಡನೇ ಹತ್ಯೆ
ಪುತ್ತೂರು ಪೇಟೆಯಲ್ಲಿ ಎರಡು ತಿಂಗಳ ಅಂತರದಲ್ಲಿ ನಡೆದ ಎರಡನೇ ಹತ್ಯೆ ಇದಾಗಿದೆ. ಕಳೆದ ಅಗಷ್ಟ್ ತಿಂಗಳ ಕೊನೆ ವಾರದಲ್ಲಿ ಪಾಗಲ್ ಪ್ರೇಮಿಯೊಬ್ಬ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಮುಂಭಾಗ ಯುವತಿಯನ್ನು ಚೂರಿ ಇರಿದು ಹತ್ಯೆ ಮಾಡಿದ್ದ . ಆದಾಗಿ ಎರಡು ತಿಂಗಳು ಕಳೆಯುವಷ್ಟರಲ್ಲಿ ಠಾಣೆಯ ಒಂದೂವರೆ ಕಿಮೀ ದೂರದಲ್ಲಿ ಮತ್ತೊಂದು ಹತ್ಯೆ ನಡೆದಿದೆ. 4 ವರ್ಷಗಳ ಹಿಂದೆ ಪುತ್ತೂರು ಗ್ರಾಮಾಂತರ ಠಾಣೆಯ ಮುಂಭಾಗ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತ ಕಾರ್ತಿಕ್ ಮೇರ್ಲ ಎಂಬವರನ್ನು ತಡ ರಾತ್ರಿ ಚೂರಿ ಇರಿದು ಹತ್ಯೆ ಮಾಡಲಾಗಿತ್ತು.
ಪುತ್ತೂರು
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಪ್ರಾಚಿ ಪುರಾತನ ಆಭರಣಗಳ ಪ್ರದರ್ಶನ ಹಾಗೂ ಮಾರಾಟ

ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಡಿಸೆಂಬರ್ 8ರಿಂದ ಪ್ರಾಚಿ ಪುರಾತನ ಆಭರಣಗಳ ಪ್ರದರ್ಶನ ಹಾಗೂ ಮಾರಾಟವನ್ನು ಆಯೋಜಿಸಲಾಗಿದೆ. ಗ್ರಾಹಕರು ಪ್ರಾಚಿ ಆ್ಯಂಟಿಕ್ ಚಿನ್ನಾಭರಣಗಳ ಖರೀದಿಗೆ ವಿಶೇಷ ರಿಯಾಯಿತಿ ಹಾಗೂ ಅಚ್ಚರಿಯ ಕೊಡುಗೆಗಳನ್ನು ಪಡೆಯುವ ಅವಕಾಶವಿದೆ.
1957 ರಲ್ಲಿ ಆರಂಭಗೊಂಡ ಸಂಸ್ಥೆಯು ಆಭರಣಗಳ ಮಾರಾಟದಲ್ಲಿ ತನ್ನದೇ ಛಾಪು ಮೂಡಿಸಿದೆ. ವಿಶ್ವಾಸ, ಪರಿಶುದ್ಧತೆ, ಪರಂಪರೆ, ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸಂಸ್ಥೆ ಮನೆಮಾತಾಗಿದೆ. ಆ್ಯಂಟಿಕ್ ಆಭರಣಗಳು, ಅನ್ ಕಟ್ ಡೈಮಂಡ್ಸ್ ಹಾಗೂ ಅಮೂಲ್ಯ ಹರಳುಗಳ ವಿಪುಲ ಸಂಗ್ರಹವಿದ್ದು ಗ್ರಾಹಕರು ಆರಾಮದಾಯಕವಾಗಿ ಶಾಪಿಂಗ್ ಮಾಡಲು ಉತ್ತಮ ಪಾರ್ಕಿಂಗ್ ವ್ಯವಸ್ಥೆ ಕೂಡಾ ಲಭ್ಯವಿದೆ.
ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಷರತ್ತುಗಳು ಅನ್ವಯದೊಂದಿಗೆ ಈ ಆಫರ್ ಪುತ್ತೂರು ಹಾಗೂ ಸುಳ್ಯ ಮಳಿಗೆಗಳಲ್ಲಿ ಮಾತ್ರ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡ
ಧರ್ಮಸ್ಥಳ ಲಕ್ಷದೀಪೋತ್ಸವ : ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ – ಪಾದಯಾತ್ರಿಗಳಿಂದ ಭೀಷ್ಮ ಪ್ರತಿಜ್ಞೆ : ಹೆಗ್ಗಡೆಯವರ ಸಂಸದರ ನಿಧಿಯಿಂದ ಬೀದರ್ ನಲ್ಲಿ ಕ್ಷೀರಕ್ರಾಂತಿ

ಉಜಿರೆ: ಹೃದಯ ಪರಿವರ್ತನೆಯಿಂದ ಅದ್ಭುತ ಪ್ರಗತಿ ಸಾಧ್ಯವಾಗುತ್ತದೆ. ಎಲ್ಲರನ್ನೂ ಜಯಿಸಿ ಸರ್ವರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಬಹುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಲಕ್ಷದೀಪೋತ್ಸವ ಸಂದರ್ಭದಲ್ಲಿ ಶುಕ್ರವಾರ ಶಿವನಾಮ ಸ್ಮರಣೆಯೊಂದಿಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಹತ್ತು ಸಾವಿರಕ್ಕೂ ಮಿಕ್ಕಿ ಭಕ್ತರನ್ನು ಅಭಿನಂದಿಸಿ ಮಾತನಾಡಿದರು.

ನಾವು ಎಲ್ಲರಲ್ಲಿಯೂ ಒಳ್ಳೆಯತನವನ್ನು ಕಾಣಬೇಕು. ದೋಷವನ್ನು ಹುಡುಕಬಾರದು. ಯಾವಾಗಲೂ ಕೆಟ್ಟ ಯೋಚನೆ ಮಾಡದೆ ಸದಾಶಯದೊಂದಿಗೆ ಸತ್ಕಾರ್ಯಗಳನ್ನೇ ಮಾಡಿದರೆ ಲೋಕಕಲ್ಯಾಣವಾಗುತ್ತದೆ.
ಎಲ್ಲರಲ್ಲಿಯೂ ಪರಸ್ಪರ ಪ್ರೀತಿ-ವಿಶ್ವಾಸ, ನಂಬಿಕೆ ಮತ್ತು ಗೌರವ ಬೆಳೆಯುತ್ತದೆ. ದೇವರು ನನಗೆ ಕೊಟ್ಟ ಎಲ್ಲಾ ಅವಕಾಶಗಳನ್ನು ಮತ್ತು ಸಂಪತ್ತನ್ನು ಬಳಸಿ ಸತ್ಕಾರ್ಯಗಳನ್ನೇ ಮಾಡಿದ್ದೇನೆ. ಅಗಾಧ ಸಂಪತ್ತಿಗಿAತ ಸತ್ಕಾರ್ಯಕ್ಕೆ ಮೌಲ್ಯ ಜಾಸ್ತಿ. ಎಲ್ಲರೂ ಸೇರಿ ಜೊತೆಯಾಗಿ ಸತ್ಕಾರ್ಯಗಳನ್ನೇ ಮಾಡೋಣ ಎಂದು ಅವರು ಕಿವಿಮಾತು ಹೇಳಿದರು.

ಧರ್ಮಸ್ಥಳದ ಬಗ್ಗೆ ಯಾವುದೇ ಅನುಮಾನ, ಸಂಶಯ ಬೇಡ. ನೇರವಾಗಿ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಅವರು ಸಲಹೆ ನೀಡಿದರು.
ಸಂಸದರ ನಿಧಿಯಿಂದ ತನಗೆ ಮಂಜೂರಾದ ಎರಡೂವರೆ ಕೋಟಿ ರೂ. ಅನುದಾನವನ್ನು ಬೀದರ್ ಜಿಲ್ಲೆಗೆ ನೀಡಿದ್ದು ಅಲ್ಲಿ ಇದರಿಂದಾಗಿ ಕ್ಷೀರ ಕ್ರಾಂತಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಪಾದಯಾತ್ರೆ ಮೂಲಕ ಎಲ್ಲರೂ ನಿಮ್ಮ ಪ್ರೀತಿ-ವಿಶ್ವಾಸ, ಗೌರವ, ಭಕ್ತಿ ಮತ್ತು ಸಂತೋಷವನ್ನು ವ್ಯಕ್ತಪಡಿಸಿರುವಿರಿ. ಇದರಿಂದ ನನ್ನಲ್ಲಿ ತೃಪ್ತಿ, ಸಂತೋಷ ಮತ್ತು ಧನ್ಯತಾಭಾವ ಮೂಡಿಬಂದಿದೆ ಎಂದರು.
ಪಾದಯಾತ್ರಿಗಳ ಭೀಷ್ಮ ಪ್ರತಿಜ್ಞೆ: ಪಾದಯಾತ್ರಿಗಳೆಲ್ಲ ಸಂಘಟನೆ ಮೂಲಕ ಸತ್ಯ, ಧರ್ಮ, ನ್ಯಾಯ ಮತ್ತು ನೀತಿಗಾಗಿ ತಾವೆಲ್ಲರೂ ಧರ್ಮಸ್ಥಳದ ಜೊತೆ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಜೊತೆ ಸದಾ ಇದ್ದೇವೆ ಎಂದು ಸಾಮೂಹಿಕವಾಗಿ ದೃಢಸಂಕಲ್ಪದೊಂದಿಗೆ ಭೀಷ್ಮ ಪ್ರತಿಜ್ಞೆ ಮಾಡಿದರು.
ಹೇಮಾವತಿ ವಿ ಹೆಗ್ಗಡೆಯವರು, ಶ್ರದ್ಧಾ ಅಮಿತ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ನಿಶ್ಚಲ್ ಕುಮಾರ್, ಸೋನಿಯವರ್ಮ, ಪೂರನ್‌ವರ್ಮ, ಶರತ್‌ಕೃಷ್ಣ ಪಡ್ವೆಟ್ನಾಯ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ.ಎಸ್. ಸತೀಶ್ಚಂದ್ರ, ಎಸ್.ಡಿ.ಎಮ್. ಕಾಲೇಜು ಪ್ರಾಂಶುಪಾಲ ಕುಮಾರ ಹೆಗ್ಡೆ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಎಚ್. ಮಂಜುನಾಥ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್. ಜನಾರ್ದನ್, ಎಸ್.ಡಿ.ಎಮ್ ಆಸ್ಪತ್ರೆಯ ನಿರ್ದೇಶಕ ಎಮ್. ಜನಾರ್ದನ ಸಿ.ಒ.ಒ. ಅನಿಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ವಕೀಲ ಬಿ.ಕೆ. ಧನಂಜಯ ರಾವ್ ಸ್ವಾಗತಿಸಿದರು. ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಧನ್ಯವಾದವಿತ್ತರು. ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.
ದಕ್ಷಿಣ ಕನ್ನಡ
ಈಶ್ವರಮಂಗಲ ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ಬಸ್ಸು ಹರಿದು ಸಾವು – ಅದೇ ಬಸ್ಸಿನಿಂದ ಇಳಿದಿದ್ದರು..!

ಪುತ್ತೂರು : ಈಶ್ವರಮಂಗಲದ ಗಾಳಿಮುಖದಲ್ಲಿ ಖಾಸಗಿ ಬಸ್ಸಿನಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಡಿ. 8ರಂದು ಸಂಭವಿಸಿದೆ. ಮುಳ್ಳೇರಿಯಾದ ಕೋಳಿಕಾಲ ನಿವಾಸಿ, ಕೃಷಿಕ ಕುಂಞಿರಾಮ ಮಣಿಯಾಣಿ ಮೃತಪಟ್ಟವರು.ʼ ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಗಾಳಿಮುಖಕ್ಕೆ ಬಂದಿದ್ದ ಅವರು ಬಸ್ಸಿನಿಂದ ಇಳಿದು ರಸ್ತೆ ದಾಟುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಹಿಂಬದಿ ಬಾಗಿಲಿನಿಂದ ಇಳಿದಿದ್ದ ಕುಂಞಿರಾಮ ಮಣಿಯಾಣಿ ಅವರು, ಇನ್ನೊಂದು ಬದಿಗೆ ದಾಟುವಷ್ಟರಲ್ಲಿ ಬಸ್ ಚಲಿಸಿದ್ದು, ಬಸ್ಸಿನ ಮುಂಭಾಗದ ಚಕ್ರ ಕುಂಞಿರಾಮ ಅವರ ಎದೆಯ ಭಾಗದಿಂದ ಹರಿದಿದೆ. ಸಂಪ್ಯ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಚಾಲಕನ ಮೇಲೆ FIR
ಕೇರಳ ನೋಂದಣಿಯ ಖಾಸಗಿ ಬಸ್ಸಿನ ಚಾಲಕ ಸುಜೀತ್ ವಿ ಎಂಬವರು ನಿರ್ಲಕ್ಷತನ ಹಾಗೂ ಅಜಾಗರೂಕತೆಯಿಂದ ಬಸ್ಸನ್ನು ಚಲಾಯಿಸಿ ರಸ್ತೆ ದಾಟುತ್ತಿದ್ದ ಕುಂಞಿರಾಮ ಮಣಿಯಾಣಿ ಯವರಿಗೆ ಡಿಕ್ಕಿ ಹೊಡೆದಿದ್ದು , ಆಗ ಅವರು ಡಾಮಾರು ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ವೇಳೆ ಅವರ ಮೇಲೆ ಬಸ್ ಚಲಿಸಿರುತ್ತದೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಕುಂಞಿರಾಮ ಮಣಿಯಾಣಿರವರು ಮೃತಪಟ್ಟಿರುತ್ತಾರೆ ಎಂದು ಮೃತರ ಚಿಕ್ಕಪ್ಪನ ಮಗ ಕೃಷ್ಣ ಎ ಎಂಬವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಐಪಿಸಿ ಕಲಂ : 279,304(A) ರಂತೆ ಪ್ರಕರಣ ದಾಖಲಾಗಿದೆ.
-
ರಾಷ್ಟ್ರೀಯ2 days ago
Divorce under Hindu Marriage Act : ಹಿಂದು ವಿವಾಹ ಕಾಯ್ದೆಯಡಿ ವಿಚ್ಛೇದನ ಪಡೆಯಲು ʼಈʼ ನಿಯಮ ಪಾಲನೆ ಕಡ್ಡಾಯ – ಕೊರ್ಟು ಮಹತ್ವದ ಆದೇಶ ; ಏನದು ನಿಯಮ ?
-
ಅಪರಾಧ2 days ago
Dowry Harasment: ʼಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಡೆತ್ ನೋಟ್ ಬರೆದಿಟ್ಟು ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಯುವ ವೈದ್ಯೆ ಆತ್ಮಹತ್ಯೆ – ಅಷ್ಟಕ್ಕೂ ವರನ ಮನೆಯವರು ಇಟ್ಟ ಡಿಮ್ಯಾಂಡ್ ಎಷ್ಟು ಗೊತ್ತೆ ?
-
ಸುಳ್ಯ2 days ago
Arecanut Yellow leaf diseases ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದತ್ತ ಮಹತ್ವದ ಹೆಜ್ಜೆ – ಸಂಪಾಜೆಯಲ್ಲಿ ಇಂದೋರ್ ಕಂಪೆನಿಯ ಔಷಧಿ ಪ್ರಯೋಗಕ್ಕೆ ಆರಂಭಿಕ ಗೆಲುವು – ರೋಗವಿದ್ದ ಪ್ರದೇಶದಲ್ಲಿ ನಳನಳಿಸುತ್ತಿದೆ ಫಸಲು
-
ಮಂಗಳೂರು1 day ago
ಕುಡುಪು ಷಷ್ಟಿ ಮಹೋತ್ಸವ ಜಾತ್ರೆ – ಸಂತೆ ವ್ಯಾಪಾರದಲ್ಲಿ ಹಿಂದೂಯೇತರರಿಗಿಲ್ಲ ಅವಕಾಶ: ವ್ಯಾಪಾರಿಗಳ ಸಮನ್ವಯ ಸಮಿತಿ ಆಕ್ರೋಶ – ದೇವಸ್ಥಾನದ EOರಿಂದ ತಿರುಗೇಟು – ಕರಾವಳಿಯಲ್ಲಿ ನಿಲ್ಲೋದಿಲ್ವಾ ಧರ್ಮ ದಂಗಲ್ ?
-
ರಾಷ್ಟ್ರೀಯ2 days ago
Pancard latest update : ಪ್ಯಾನ್ ಕಾರ್ಡ್ ಕುರಿತು ಮಹತ್ವದ ಮಾಹಿತಿ – ಈ ತಪ್ಪು ಮಾಡಿದರೆ 10,000 ರೂ ದಂಡ ಗ್ಯಾರಂಟಿ
-
ಮಂಗಳೂರು23 hours ago
Interfaith Marriage ಮಂಗಳೂರು : ಭಿನ್ನಕೋಮಿನ ಜೋಡಿ ವಿವಾಹ?
-
ಬಿಗ್ ನ್ಯೂಸ್24 hours ago
Bride refuses Marriage in hall ತಾಳಿ ಕಟ್ಟುವ ವೇಳೆ ವರನ ಕೈಗೆ ಅಡ್ಡ ಹಿಡಿದು ಸಿನಿಮೀಯ ಶೈಲಿಯಲ್ಲಿ ಮದುವೆ ನಿರಾಕರಿಸಿದ ವಧು
-
ಸಿನೆಮಾ2 days ago
Pooja gandhi : ಕುವೆಂಪು ಪರಿಕಲ್ಪನೆಯ ’ಮಂತ್ರ ಮಾಂಗಲ್ಯ’ ಪದ್ದತಿಯಲ್ಲಿ ವಿವಾಹವಾದ ಪೂಜಾ ಗಾಂದಿ ದಂಪತಿಯಿಂದ ಕವಿ ಶೈಲ ಭೇಟಿ – ಹುಟ್ಟಿದ್ದು ಪಂಜಾಬಿನಲ್ಲಾದರೂ ಕನ್ನಡದ ಬಗೆಗಿನ ನಟಿಯ ಪ್ರೀತಿಗೆ ವ್ಯಾಪಕ ಮೆಚ್ಚುಗೆ