ಪುತ್ತೂರು
ಗಡಿಪಾರು ಆದೇಶ ವಿರುದ್ಧ ಭಜರಂಗದಳದ ವತಿಯಿಂದ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ : ಪಟ್ಟಿ ನಾವು ನೀಡುತ್ತೇವೆ ಅವರನ್ನು ಗಡಿಪಾರು ಮಾಡಿದ – ಭಜರಂಗದಳ ಮುಖಂಡ ಸುನೀಲ್ ಕೆ.ಆರ್

ಪುತ್ತೂರು: ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ನೋಟೀಸ್ ಜಾರಿ ಮಾಡಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಹತ್ತಿಕ್ಕುವ ಹಿಂದೂ ವಿರೋಧಿ ಆಡಳಿತ ವ್ಯವಸ್ಥೆಯ ವಿರುದ್ಧ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಬಿಜೆಪಿ ಹಾಗೂ ಪರಿವಾರ ಸಂಘಟನೆಗಳ ಸಹಕಾರದೊಂದಿಗೆ ಬೃಹತ್ ಪ್ರತಿಭಟನೆಯನ್ನು ಸೋಮವಾರ ಮಿನಿ ವಿಧಾನಸೌಧದ ಎದುರಿನ ಜೈ ಜವಾನ್ ಸ್ಮಾರಕದ ಬಳಿ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್. ಮಾತನಾಡಿ, ಬಹುಸಂಖ್ಯಾತ ಹಿಂದೂಗಳು ಇರುವ ಭಾರತದಲ್ಲಿ ಸ್ವಾಭಿಮಾನದ ಬದುಕಿಗಾಗಿ ನಿರಂತರ ಜಾಗೃತಿ, ಸಂಘಟಿತ ಕೆಲಸಗಳನ್ನು ಮಾಡುತ್ತಿರುವುದು ನಮ್ಮ ಸಂಘಟನೆ. ದೇಶದ ಪರವಾಗಿ ಕೆಲಸ ಮಾಡುತ್ತಿರುವ, ದೇಶದ ಸಾಂಸ್ಕೃತಿಕತೆಯ ಪ್ರತೀಕವಾದ ಗೋವಿನ ರಕ್ಷಣೆ, ಹಿಂದೂ ಹೆಣ್ಣು ಮಕ್ಕಳ ರಕ್ಷೆಯಲ್ಲಿ ತೊಡಗಿಕೊಂಡಿರುವ ಬಜರಂಗದಳ ಕಾರ್ಯಕರ್ತರನ್ನು ಗಡಿಪಾರಿಗೆ ಆದೇಶಿಸಿರುವುದು ಖಂಡನೀಯ ಎಂದರು.
ಜಿಹಾದಿ, ಭಯೋತ್ಪಾದಕರಂತಹ ರಾಷ್ಟ್ರದ್ರೋಹದ ಕೆಲಸ ಮಾಡುವವರನ್ನು ಗಡಿಪಾರು ಮಾಡಿ. ಅದನ್ನು ಬಿಟ್ಟು ದೇಶ ರಕ್ಷಣೆಯಲ್ಲಿ ತೊಡಗಿಕೊಂಡಿರುವ, ಜಿಹಾದಿಗಳಿಂದ ಹಿಂದೂ ಸಹೋದರಿಯನ್ನು ರಕ್ಷಿಸಿದವರ ಮೇಲೆ ಕೇಸು ದಾಖಲಿಸುವುದಲ್ಲ. ನಾಲ್ಕು ಗೋಡೆಗಳ ಮಧ್ಯೆ ಕಾರ್ಯನಿರ್ವಹಿಸುವ ಸಹಾಯಕ ಆಯುಕ್ತರು ಹೊರಗೆ ಬಂದು ನೋಡಿ ಸಂಘಟನೆಯ ಕಾರ್ಯಕರ್ತರ ಸೇವಾ ಕೆಲಸಗಳನ್ನು ಗಮನಿಸಲಿ. ಬಜರಂಗದಳ ಕಾರ್ಯಕರ್ತರನ್ನು ಈ ರೀತಿಯ ಶಿಕ್ಷೆಗೆ ಗುರಿಪಡಿಸಿದರೆ ಯಾವುದೇ ಹೋರಾಟಕ್ಕೆ ನಾವು ಸಿದ್ಧ. ತಕ್ಷಣ ಗಡಿಪಾರು ವಿಚಾರದ ಕುರಿತು ಮತ್ತೊಮ್ಮೆ ಚರ್ಚೆ ನಡೆಸಿ ಗಡಿಪಾರು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಪಟ್ಟಿ ನಾವು ನೀಡುತ್ತೇವೆ
ದೇಶ, ಧರ್ಮ, ಗೋವು, ಸಹೋದರಿಯರ ರಕ್ಷಣೆಗಾಗಿ ನಾವು ರೌಡಿಗಳೇ. ಪುತ್ತೂರಿನಲ್ಲಿ ಬ್ಯಾನರ್ ಪ್ರಕರಣದಲ್ಲಿ ಎಫ್‌ಐಆರ್ ಆದ ಪೊಲೀಸರನ್ನು ಗಡೀಪಾರು ಮಾಡಬೇಕಿತ್ತು. ಓಟಿನ ಆಸೆಗಾಗಿ ತುಷ್ಟೀಕರಣ ನೀತಿಯನ್ನು ಸರಕಾರ ನಡೆಸುವುದು ಬೇಡ. ಗಡಿಪಾರು ಯಾರನ್ನು ಮಾಡಬೇಕು ಎಂಬ ಪಟ್ಟಿಯನ್ನು ನಾವು ನೀಡುತ್ತೇವೆ. ಅವರನ್ನು ಗಡಿಪಾರು ಮಾಡಿ ಎಂದು ಆಗ್ರಹಿಸಿದರು.
ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಐದು ವರ್ಷದ ಹಿಂದೆ ಇದ್ದ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರ ಈಗ ಅಧಿಕಾರಕ್ಕೆ ಬಂದು ಪುನರಪಿ ಅದನ್ನೇ ಮಾಡುತ್ತಿದೆ. ಸುಳ್ಳು ಮೊಕದ್ದಮೆಗಳನ್ನು ದಾಖಲಿಸಿ ಗಡಿಪಾರಿನಂತಹ ಶಿಕ್ಷೆ ವಿಧಿಸಿ ಹಿಂದೂಗಳ ಮನಸ್ಥೈರ್ಯವನ್ನು ಕುಸಿಯುವಂತಹ ಕೆಲಸ ಮಾಡುತ್ತಿದೆ. ಈ ಕುರಿತು ಸಂಸದರ ಬಳಿ ಮಾತನಾಡಿ, ಮುಂದಿನ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇವೆ. ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಗಮನಕ್ಕೂ ತರಲಾಗುವುದು. ಅಧಿಕಾರಿಗಳು ಮರು ಪರಿಶೀಲಿಸಿ ಗಡಿಪಾರಿನ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಬಿಜೆಪಿ ಮುಖಂಡರಾದ ಜೀವಂಧರ್ ಜೈನ್, ಯುವರಾಜ ಪೆರಿಯತ್ತೋಡಿ, ಪುರುಷೋತ್ತಮ ಮುಂಗ್ಲಿಮನೆ, ಹರಿಪ್ರಸಾದ್ ಯಾದವ್, ಹರೀಶ್ ಬಿಜತ್ರೆ, ಸಚಿನ್ ಶೆಣೈ, ಸಂಘಟನೆಗಳ ಮುಖಂಡರಾದ ಶ್ರೀಧರ್ ತೆಂಕಿಲ, ಅಜಿತ್ ರೈ ಹೊಸಮನೆ, ದಿನೇಶ್ ಪಂಜಿಗ, ನ್ಯಾಯವಾದಿ ಮಾಧವ ಪೂಜಾರಿ, ದಿನೇಶ್ ಜೈನ್, ಜನಾರ್ದನ ಬೆಟ್ಟ, ಹರೀಶ್ ಕುಮಾರ್ ದೋಳ್ಪಾಡಿ, ಅಜಿತ್ ಕೆಯ್ಯೂರು, ವಿರೂಪಾಕ್ಷ ಮಚ್ಚಿಮಲೆ, ಮೋಹಿನಿ ದಿವಾಕರ್, ಸುಕೀರ್ತಿ ಮತ್ತಿತರರು ಪಾಲ್ಗೊಂಡಿದ್ದರು. ಬಜರಂಗದಳ ಗ್ರಾಮಾಂತರ ಸಂಯೋಜಕ ವಿಶಾಖ್ ರೈ ಸಸಿಹಿತ್ಲು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಪುತ್ತೂರು
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಪ್ರಾಚಿ ಪುರಾತನ ಆಭರಣಗಳ ಪ್ರದರ್ಶನ ಹಾಗೂ ಮಾರಾಟ

ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಡಿಸೆಂಬರ್ 8ರಿಂದ ಪ್ರಾಚಿ ಪುರಾತನ ಆಭರಣಗಳ ಪ್ರದರ್ಶನ ಹಾಗೂ ಮಾರಾಟವನ್ನು ಆಯೋಜಿಸಲಾಗಿದೆ. ಗ್ರಾಹಕರು ಪ್ರಾಚಿ ಆ್ಯಂಟಿಕ್ ಚಿನ್ನಾಭರಣಗಳ ಖರೀದಿಗೆ ವಿಶೇಷ ರಿಯಾಯಿತಿ ಹಾಗೂ ಅಚ್ಚರಿಯ ಕೊಡುಗೆಗಳನ್ನು ಪಡೆಯುವ ಅವಕಾಶವಿದೆ.
1957 ರಲ್ಲಿ ಆರಂಭಗೊಂಡ ಸಂಸ್ಥೆಯು ಆಭರಣಗಳ ಮಾರಾಟದಲ್ಲಿ ತನ್ನದೇ ಛಾಪು ಮೂಡಿಸಿದೆ. ವಿಶ್ವಾಸ, ಪರಿಶುದ್ಧತೆ, ಪರಂಪರೆ, ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸಂಸ್ಥೆ ಮನೆಮಾತಾಗಿದೆ. ಆ್ಯಂಟಿಕ್ ಆಭರಣಗಳು, ಅನ್ ಕಟ್ ಡೈಮಂಡ್ಸ್ ಹಾಗೂ ಅಮೂಲ್ಯ ಹರಳುಗಳ ವಿಪುಲ ಸಂಗ್ರಹವಿದ್ದು ಗ್ರಾಹಕರು ಆರಾಮದಾಯಕವಾಗಿ ಶಾಪಿಂಗ್ ಮಾಡಲು ಉತ್ತಮ ಪಾರ್ಕಿಂಗ್ ವ್ಯವಸ್ಥೆ ಕೂಡಾ ಲಭ್ಯವಿದೆ.
ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಷರತ್ತುಗಳು ಅನ್ವಯದೊಂದಿಗೆ ಈ ಆಫರ್ ಪುತ್ತೂರು ಹಾಗೂ ಸುಳ್ಯ ಮಳಿಗೆಗಳಲ್ಲಿ ಮಾತ್ರ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡ
ಈಶ್ವರಮಂಗಲ ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ಬಸ್ಸು ಹರಿದು ಸಾವು – ಅದೇ ಬಸ್ಸಿನಿಂದ ಇಳಿದಿದ್ದರು..!

ಪುತ್ತೂರು : ಈಶ್ವರಮಂಗಲದ ಗಾಳಿಮುಖದಲ್ಲಿ ಖಾಸಗಿ ಬಸ್ಸಿನಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಡಿ. 8ರಂದು ಸಂಭವಿಸಿದೆ. ಮುಳ್ಳೇರಿಯಾದ ಕೋಳಿಕಾಲ ನಿವಾಸಿ, ಕೃಷಿಕ ಕುಂಞಿರಾಮ ಮಣಿಯಾಣಿ ಮೃತಪಟ್ಟವರು.ʼ ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಗಾಳಿಮುಖಕ್ಕೆ ಬಂದಿದ್ದ ಅವರು ಬಸ್ಸಿನಿಂದ ಇಳಿದು ರಸ್ತೆ ದಾಟುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಹಿಂಬದಿ ಬಾಗಿಲಿನಿಂದ ಇಳಿದಿದ್ದ ಕುಂಞಿರಾಮ ಮಣಿಯಾಣಿ ಅವರು, ಇನ್ನೊಂದು ಬದಿಗೆ ದಾಟುವಷ್ಟರಲ್ಲಿ ಬಸ್ ಚಲಿಸಿದ್ದು, ಬಸ್ಸಿನ ಮುಂಭಾಗದ ಚಕ್ರ ಕುಂಞಿರಾಮ ಅವರ ಎದೆಯ ಭಾಗದಿಂದ ಹರಿದಿದೆ. ಸಂಪ್ಯ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಚಾಲಕನ ಮೇಲೆ FIR
ಕೇರಳ ನೋಂದಣಿಯ ಖಾಸಗಿ ಬಸ್ಸಿನ ಚಾಲಕ ಸುಜೀತ್ ವಿ ಎಂಬವರು ನಿರ್ಲಕ್ಷತನ ಹಾಗೂ ಅಜಾಗರೂಕತೆಯಿಂದ ಬಸ್ಸನ್ನು ಚಲಾಯಿಸಿ ರಸ್ತೆ ದಾಟುತ್ತಿದ್ದ ಕುಂಞಿರಾಮ ಮಣಿಯಾಣಿ ಯವರಿಗೆ ಡಿಕ್ಕಿ ಹೊಡೆದಿದ್ದು , ಆಗ ಅವರು ಡಾಮಾರು ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ವೇಳೆ ಅವರ ಮೇಲೆ ಬಸ್ ಚಲಿಸಿರುತ್ತದೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಕುಂಞಿರಾಮ ಮಣಿಯಾಣಿರವರು ಮೃತಪಟ್ಟಿರುತ್ತಾರೆ ಎಂದು ಮೃತರ ಚಿಕ್ಕಪ್ಪನ ಮಗ ಕೃಷ್ಣ ಎ ಎಂಬವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಐಪಿಸಿ ಕಲಂ : 279,304(A) ರಂತೆ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡ
Kidnap and Murder 20 ದಿನಗಳ ಹಿಂದೆ ಪುತ್ತೂರಿನಿಂದ ಅಪಹರಣವಾದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಆಗುಂಬೆ ಘಾಟ್ ನಲ್ಲಿ ಪತ್ತೆ- ಅನೈತಿಕ ಸಂಬಂಧದ ಹಿನ್ನಲೆ ಕೊಂದು ಎಸೆದಿರುವ ಶಂಕೆ | ಇಬ್ಬರು ಪೊಲೀಸ್ ವಶ

ಪುತ್ತೂರು :20 ದಿನಗಳ ಹಿಂದೆ ಪುತ್ತೂರಿನ ಕುಂಬ್ರದಿಂದ ಅಪಹರಣವಾಗಿದ್ದ (Kidnap) ಯುವಕನ ಮೃತದೇಹ ಆಗುಂಬೆ ಘಾಟ್ ನಲ್ಲಿ (Agumbe Ghat) ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈತನನ್ನುನ್ನು ಕೊಲೆ (Murder) ಮಾಡಿ ಆಗುಂಬೆ ಘಾಟ್ ನಲ್ಲಿ ಬೀಸಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇವರು ಕೊಲೆ ನಡೆಸಿರುವುದನ್ನು ಒಪ್ಪಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.
ಬಾಗಲಕೋಟೆ ಜಿಲ್ಲೆ ಬಾದಮಿ ತಾಲೊಕಿನ ಡಾಣಕಶಿರೂರು ನಿವಾಸಿ ಹನುಮಂತ (22) ಮೃತಪಟ್ಟವರು . ಕುಂಬ್ರದ ಉದ್ಯಮಿ ಮೋಹನ್ ದಾಸ್ ರೈಯವರ ಟಿಪ್ಪರ್ ಚಾಲಕರನಾಗಿ ದುಡಿಯುತ್ತಿದ್ದ ಈತ, ಅಪಹರಣವಾದ 5 ದಿನದ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರ. ನ 17 ರಂದು ಸಂಜೆ KA-26-B-3833 ನೋಂದಣಿಯ ಮ್ಯಾಕ್ಸಿ ವಾಹನದಲ್ಲಿ ಬಂದ ತಂಡವೊಂದು ಕುಂಬ್ರ ಮಸೀದಿ ಬಳಿಯ ರೂಮ್ ನಿಂದ ಹನುಮಂತನನ್ನು ಅಪಹರಿಸಿರುವುದಾಗಿ ಆತನ ತಾಯಿ ತಾಯಿ ರೇಣವ್ವ ಮಾದರರವರು ಸಂಪ್ಯ ಠಾಣೆಗೆ ನ 20 ರಂದು ದೂರು ನೀಡಿದ್ದರು
ಅಕ್ರಮ ಸಂಬಂಧ (illicit Relationship) ಹಿನ್ನಲೆಯಲ್ಲಿ ಅಪಹರಣ ಮತ್ತು ಕೊಲೆ ನಡೆದಿದೆಯೆಂದು ಮೇಲ್ನೋಟಕ್ಕೆ ಕಂಡು ಬಂದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದ ಪ್ರಮುಖ ಆರೋಪಿ ಬಾದಮಿ ತಾಲೂಕಿನ ಶಿವಪ್ಪ (45) ಎಂಬಾತನ ಪತ್ನಿಯ ಜತೆ ಹನುಮಂತ ಅಕ್ರಮ ಸಂಬಂಧ ಹೊಂದಿರುವ ದ್ವೇಷವೇ ಕೊಲೆಗೆ ಕಾರಣವಾಯಿತು ಎನ್ನಲಾಗುತ್ತಿದೆ.
ಅಪಹರಣ ನಡೆಯುವುದಕ್ಕೆ ಕೆಲ ದಿನಗಳ ಹಿಂದೆ ಆರೋಪಿ ಶಿವಪ್ಪನು ಹನುಮಂತನ ಮಾವ ಮಂಜುನಾಥ ಎಂಬವರ ಬಳಿ ಹನುಮಂತ ತನ್ನ ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದು ,ಅವನನ್ನು ಎಲ್ಲಿಯಾದರೂ ದೂರ ಕಳುಹಿಸು ಎಂದು ಹೇಳಿದ್ದ. ಹೀಗಾಗಿ ನ 10 ರಂದು ಹನುಮಂತನನ್ನು ಮಂಜುನಾಥರವರು ತನ್ನ ಗೆಳೆಯ ಸಂತೋಷ್ ಗದ್ದಿ ಗೌಡ್ರನೊಂದಿಗೆ ಪುತ್ತೂರಿನ ಕುಂಬ್ರಕ್ಕೆ ಟಿಪ್ಪರ್ ಚಾಲಕನಾಗಿ ಕಳುಹಿಸಿ ಕೊಟ್ಟಿದ್ದರು.
ಇದಾದ ಬಳಿಕನ ನ 17 ರಂದು ಮಂಜುನಾಥನರವರಿಗೆ ಕರೆ ಮಾಡಿದ ಶಿವಪ್ಪ ನಿನ್ನ ಅಕ್ಕನ ಮಗ ಸಿಕ್ಕಲ್ಲಿ ಬಿಡುವುದಿಲ್ಲ ಎಂದು ಬೆದರಿಸಿದ್ದರು. ಇದನ್ನು ಮಂಜುನಾಥನವರು ತನ್ನ ಅಕ್ಕ ರೇಣವ್ವ ಮಾದರರವರ ಬಳಿ ತಿಳಿಸಿದ್ದಾರೆ. ಗಾಬರಿಯಾದ ಆಕೆ ಕುಂಬ್ರದಲ್ಲಿರುವ ಸಂತೋಷ್ ಗದ್ದಿ ಗೌಡ್ರರಿಗೆ ಕರೆ ಮಾಡಿ ತಿಳಿಸಿದ್ದು ಅಷ್ಟರಾಗಲೇ ಆರೋಪಿಗಳಾದ ಶಿವಪ್ಪ, ಮಂಜುನಾಥ ಮತ್ತು ದುರ್ಗಾಪ್ಪ ನವರು ಹನುಮಂತನನ್ನು ಅಪಹರಿಸಿಕೊಂಡು ಹೋಗಿದ್ದರು ಎಂದು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಆದರೇ ಸ್ಥಳಿಯ ಮೂಲಗಳ ಪ್ರಕಾರ ನ 17 ರಂದು ಕುಂಬ್ರಕ್ಕೆ ಬಂದಿದ್ದ ಶಿವಪ್ಪ, ಮಂಜುನಾಥ ಮತ್ತು ದುರ್ಗಾಪ್ಪನವರು ಹನುಮಂತನನ್ನು ಊರಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಜತೆಗಿದ್ದವರ ಬಳಿ ತಿಳಿಸಿಯೆ ಕರೆದುಕೊಂಡು ಹೋಗಿದ್ದರು. ಬಂದವರ ಪೋಟೋ ತೆಗೆದಿರಿಸುವಂತೆ ಟಿಪ್ಪರ್ ಮಾಲಕ ಮೋಹನ್‌ದಾಸ ರೈ ಅವರು ತನ್ನ ಕೆಲಸದವರಿಗೆ ಸೂಚಿಸಿದ್ದರು. ಹಾಗಾಗಿ ಕೆಲಸದವರು ಆ ಮೂವರು ಪೋಟೋವನ್ನು ಮೊಬೈಲ್‌ನಲ್ಲಿ ತೆಗೆಸಿ ಇಟ್ಟುಕೊಂಡಿದ್ದರು ಎಂದು ತಿಳಿದು ಬಂದಿದೆ.

ಹನುಮಂತನ ತಾಯಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಬಳಿಕ ತನಿಖೆ ಆರಂಭಿಸಿದ ಪೊಲೀಸರಿಗೆ ಈ ಗ್ರೂಫ್ ಫೋಟೊವನ್ನು ನೀಡಲಾಗಿತ್ತು. ಇದನ್ನು ಅನುಸರಿಸಿ ಹನುಮಂತನನ್ನು ಕರೆದುಕೊಂಡು ಹೋಗಿದ್ದ ಇಬರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ ಅತನನ್ನು ಕೊಲೆ ಮಾಡಿ ಎಸೆದಿರುವುದನ್ನು ಅವರು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಆಗುಂಬೆ ಘಾಟ್‌ನ ಮೂರನೇ ತಿರುವಿನ ರಸ್ತೆ ಬಳಿ ಮೃತದೇಹ ಪತ್ತೆಯಾಗಿದ್ದು ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ. ಕತ್ತು ಹಿಸುಕಿ ಅಥವಾ ಮಾರಕಾಯುಧಗಳಿಂದ ಹೊಡೆದು ಕೊಲೆ ಮಾಡಿರುವ ಶಂಕೆ ಮೂಡಿದೆ.
ಈ ಪ್ರಕರಣದಲ್ಲಿ ಶಿವಪ್ಪ, ಮಂಜುನಾಥ ಪೊಲೀಸ್ ವಶದಲ್ಲಿದ್ದು, ದುರ್ಗಾಪ್ಪ ತಲೆ ಮರೆಸಿಕೊಂಡಿರುವುದಾಗಿ ತಿಳಿದು ಬಂದಿದೆ. ಅಪಹರಣ ಹಾಗೂ ಕೊಲೆ ಪ್ರಕರಣ ಹಾಗೂ ಆರೋಪಿಗಳ ಬಂಧನದ ಬಗ್ಗೆ ಪೊಲೀಸ್ ಇಲಾಖೆ ಇಲ್ಲಿಯವರೆಗೆ ಯಾವುದೇ ಮಾಹಿತಿಯನ್ನು ಬಿಟ್ಟು ಕೊಟ್ಟಿಲ್ಲದಿರುವುದು ವಿಶೇಷವಾಗಿದೆ.
-
ರಾಷ್ಟ್ರೀಯ2 days ago
Divorce under Hindu Marriage Act : ಹಿಂದು ವಿವಾಹ ಕಾಯ್ದೆಯಡಿ ವಿಚ್ಛೇದನ ಪಡೆಯಲು ʼಈʼ ನಿಯಮ ಪಾಲನೆ ಕಡ್ಡಾಯ – ಕೊರ್ಟು ಮಹತ್ವದ ಆದೇಶ ; ಏನದು ನಿಯಮ ?
-
ಅಪರಾಧ2 days ago
Dowry Harasment: ʼಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಡೆತ್ ನೋಟ್ ಬರೆದಿಟ್ಟು ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಯುವ ವೈದ್ಯೆ ಆತ್ಮಹತ್ಯೆ – ಅಷ್ಟಕ್ಕೂ ವರನ ಮನೆಯವರು ಇಟ್ಟ ಡಿಮ್ಯಾಂಡ್ ಎಷ್ಟು ಗೊತ್ತೆ ?
-
ಸುಳ್ಯ2 days ago
Arecanut Yellow leaf diseases ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದತ್ತ ಮಹತ್ವದ ಹೆಜ್ಜೆ – ಸಂಪಾಜೆಯಲ್ಲಿ ಇಂದೋರ್ ಕಂಪೆನಿಯ ಔಷಧಿ ಪ್ರಯೋಗಕ್ಕೆ ಆರಂಭಿಕ ಗೆಲುವು – ರೋಗವಿದ್ದ ಪ್ರದೇಶದಲ್ಲಿ ನಳನಳಿಸುತ್ತಿದೆ ಫಸಲು
-
ಮಂಗಳೂರು2 days ago
ಕುಡುಪು ಷಷ್ಟಿ ಮಹೋತ್ಸವ ಜಾತ್ರೆ – ಸಂತೆ ವ್ಯಾಪಾರದಲ್ಲಿ ಹಿಂದೂಯೇತರರಿಗಿಲ್ಲ ಅವಕಾಶ: ವ್ಯಾಪಾರಿಗಳ ಸಮನ್ವಯ ಸಮಿತಿ ಆಕ್ರೋಶ – ದೇವಸ್ಥಾನದ EOರಿಂದ ತಿರುಗೇಟು – ಕರಾವಳಿಯಲ್ಲಿ ನಿಲ್ಲೋದಿಲ್ವಾ ಧರ್ಮ ದಂಗಲ್ ?
-
ರಾಷ್ಟ್ರೀಯ2 days ago
Pancard latest update : ಪ್ಯಾನ್ ಕಾರ್ಡ್ ಕುರಿತು ಮಹತ್ವದ ಮಾಹಿತಿ – ಈ ತಪ್ಪು ಮಾಡಿದರೆ 10,000 ರೂ ದಂಡ ಗ್ಯಾರಂಟಿ
-
ಮಂಗಳೂರು1 day ago
Interfaith Marriage ಮಂಗಳೂರು : ಭಿನ್ನಕೋಮಿನ ಜೋಡಿ ವಿವಾಹ?
-
ಬಿಗ್ ನ್ಯೂಸ್1 day ago
Bride refuses Marriage in hall ತಾಳಿ ಕಟ್ಟುವ ವೇಳೆ ವರನ ಕೈಗೆ ಅಡ್ಡ ಹಿಡಿದು ಸಿನಿಮೀಯ ಶೈಲಿಯಲ್ಲಿ ಮದುವೆ ನಿರಾಕರಿಸಿದ ವಧು
-
ಸಿನೆಮಾ2 days ago
Pooja gandhi : ಕುವೆಂಪು ಪರಿಕಲ್ಪನೆಯ ’ಮಂತ್ರ ಮಾಂಗಲ್ಯ’ ಪದ್ದತಿಯಲ್ಲಿ ವಿವಾಹವಾದ ಪೂಜಾ ಗಾಂದಿ ದಂಪತಿಯಿಂದ ಕವಿ ಶೈಲ ಭೇಟಿ – ಹುಟ್ಟಿದ್ದು ಪಂಜಾಬಿನಲ್ಲಾದರೂ ಕನ್ನಡದ ಬಗೆಗಿನ ನಟಿಯ ಪ್ರೀತಿಗೆ ವ್ಯಾಪಕ ಮೆಚ್ಚುಗೆ