ಉದ್ಯೋಗ
Indian air force recruitment 2023: ಭಾರತೀಯ ವಾಯುಪಡೆಯಿಂದ 317 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ವಾಯುಪಡೆಯ ನವೆಂಬರ್ 2023 ರಲ್ಲಿ ಅಧಿಕೃತ ಅಧಿಸೂಚನೆಯನ್ನು ಹೊರದಿಸುವುದರ ಮೂಲಕ AFCAT ಪ್ರವೇಶ, NCC ವಿಶೇಷ ಪ್ರವೇಶ ಪೋಸ್ಟ್‌ಗಳನ್ನು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 30-Dec-2023 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
IAF ಹುದ್ದೆಯ ಅಧಿಸೂಚನೆ
*ಸಂಸ್ಥೆಯ ಹೆಸರು: ಇಂಡಿಯನ್ ಏರ್ ಫೋರ್ಸ್ (IAF)
*ಹುದ್ದೆಗಳ ಸಂಖ್ಯೆ: 317
*ಉದ್ಯೋಗ ಸ್ಥಳ: ಅಖಿಲ ಭಾರತ
*ಹುದ್ದೆಯ ಹೆಸರು: AFCAT ಪ್ರವೇಶ, NCC ವಿಶೇಷ ಪ್ರವೇಶ
*ವೇತನ: ರೂ.56100-177500/- ಪ್ರತಿ ತಿಂಗಳು
IAF ಹುದ್ದೆಯ ವಿವರಗಳು:
*ಫ್ಲೈಯಿಂಗ್ ಬ್ರಾಂಚ್- 38
*ಗ್ರೌಂಡ್ ಡ್ಯೂಟಿ (ತಾಂತ್ರಿಕ)- 165
*ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ)- 114
*IAF ನೇಮಕಾತಿ 2023
ಅರ್ಹತೆಯ ವಿವರಗಳು:
*ಫ್ಲೈಯಿಂಗ್ ಬ್ರಾಂಚ್: 12ನೇ, B.E ಅಥವಾ B.Tech, ಪದವಿ
*ಗ್ರೌಂಡ್ ಡ್ಯೂಟಿ (ತಾಂತ್ರಿಕ): 12 ನೇ, ಪದವಿ, ಸ್ನಾತಕೋತ್ತರ ಪದವಿ
*ಗ್ರೌಂಡ್ ಡ್ಯೂಟಿ (ನಾನ್-ಟೆಕ್ನಿಕಲ್): CA, CMA, CS, CFA, 12th, B.Sc, B.Com, B.E ಅಥವಾ B.Tech, ಪದವಿ
IAF ವಯಸ್ಸಿನ ಮಿತಿ ವಿವರಗಳು:
*ಫ್ಲೈಯಿಂಗ್ ಬ್ರಾಂಚ್- 20-24
*ಗ್ರೌಂಡ್ ಡ್ಯೂಟಿ (ತಾಂತ್ರಿಕ)- 20-26
*ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ)- 20-26
*ವಯೋಮಿತಿ ಸಡಿಲಿಕೆ: ಭಾರತೀಯ ವಾಯುಪಡೆಯ ನಿಯಮಗಳ ಪ್ರಕಾರ
*ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳು: ರೂ.550/-
*ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ
IAF ಸಂಬಳದ ವಿವರಗಳು:
*ಫ್ಲೈಯಿಂಗ್ ಬ್ರಾಂಚ್- ರೂ.56100-177500/-
*IAF ಮಾನದಂಡಗಳ ಪ್ರಕಾರ ಗ್ರೌಂಡ್ ಡ್ಯೂಟಿ (ತಾಂತ್ರಿಕ).- ರೂ.56100-177500/-
*ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ)- ರೂ.56100-177500/-
ಅರ್ಜಿ ಸಲ್ಲಿಸುವುದು ಹೇಗೆ?
*ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
IAF AFCAT ಪ್ರವೇಶದ ಮೇಲೆ ಕ್ಲಿಕ್ ಮಾಡಿ, NCC ವಿಶೇಷ ಪ್ರವೇಶವನ್ನು ಆನ್‌ಲೈನ್‌ನಲ್ಲಿ ಅನ್ವಯಿಸಿ
*IAF ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
*ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
*IAF ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ *ಸಲ್ಲಿಸಲು ಪ್ರಾರಂಭ ದಿನಾಂಕ: 01-12-2023
*ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-ಡಿಸೆಂಬರ್-2023
ಉದ್ಯೋಗ
SBI Recruitment 2023: ಎಸ್‌ಬಿಐ ನಿಂದ 8283 ಜೂನಿಯರ್ ಅಸೋಸಿಯೇಟ್ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ….ಈ ಕೂಡಲೇ ಅರ್ಜಿ ಸಲ್ಲಿಸಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು 8283 ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಿದೆ. ಪದವಿ ಪಾಸ್ ಆದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.ಆಸಕ್ತರು ಆನ್ಲೈನ್ (Online) ಮೂಲಕ ಅಪ್ಲೈ ಮಾಡಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾದ ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಲಿಂಕ್, ವೇತನ , ಆಯ್ಕೆ ಪ್ರಕ್ರಿಯೆಯ ಬಗ್ಗೆ ಈ ಕೆಳಗಿನಂತೆ ಮಾಹಿತಿ ನೀಡಲಾಗಿದೆ, ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
*ಅಪ್ಲಿಕೇಶನ್ ಸಲ್ಲಿಸಲು ಹಾಗೂ ಇತರೆ ಮಾಹಿತಿಗಾಗಿ ಎಸ್‌ಬಿಐ’ನ ಕರಿಯರ್ ವೆಬ್‌ಸೈಟ್ ವಿಳಾಸ https://sbi.co.in/web/careers ಗೆ ಭೇಟಿ ನೀಡಬಹುದು. ಒಬ್ಬ ಅಭ್ಯರ್ಥಿ ಒಂದು ರಾಜ್ಯದ ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನು ಜನವರಿ 2024 ರಲ್ಲಿ ನಡೆಸಲಾಗುತ್ತದೆ
*ನೇಮಕಾತಿ ಬ್ಯಾಂಕ್ : ಭಾರತೀಯ ಸ್ಟೇಟ್ ಬ್ಯಾಂಕ್
ಹುದ್ದೆ ಹೆಸರು: ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್)
ಹುದ್ದೆಗಳ ಸಂಖ್ಯೆ : 8283
ಕರ್ನಾಟಕದಲ್ಲಿ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ಸಂಖ್ಯೆ : 450
- ಶೈಕ್ಷಣಿಕ ಅರ್ಹತೆ:
ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಪದವಿ ಪಾಸ್ ಮಾಡಿರಬೇಕು.
ಯಾವುದೇ ಪದವಿಯ ಅಂತಿಮ ಸೆಮಿಸ್ಟರ್ / ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆದರೆ ತಾತ್ಕಾಲಿಕವಾಗಿ ಆಯ್ಕೆಯಾದ ನಂತರ ಪದವಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.
*ವಯಸ್ಸಿನ ಅರ್ಹತೆಗಳು:
ದಿನಾಂಕ 01-04-2023 ಕ್ಕೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 28 ವರ್ಷ ಮೀರಿರಬಾರದು.
ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಸರ್ಕಾರದ ಆದೇಶದಂತೆ ಅನ್ವಯವಾಗಲಿದೆ.
*ವೇತನ ಶ್ರೇಣಿ : ರೂ.17900 – 47920.
*ಸೆಲೆಕ್ಷನ್ ಪ್ರಕ್ರಿಯೆ ಹೇಗಿರುತ್ತದೆ?
ಆನ್‌ಲೈನ್ ಪ್ರಿಲಿಮ್ಸ್ ಪರೀಕ್ಷೆ, ಮೇನ್ಸ್ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಿಲಿಮ್ಸ್ / ಮೇನ್ಸ್ ಪರೀಕ್ಷೆ ಅಂಕಗಳನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ 1:3 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಇದರಲ್ಲಿ ಬ್ಯಾಂಕ್ ನಿಗದಿಪಡಿಸಿದ ಕನಿಷ್ಠ ಅಂಕಗಳನ್ನು ಅಭ್ಯರ್ಥಿಗಳು ಗಳಿಸಬೇಕು. ನಂತರ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
*ಪ್ರಮುಖ ದಿನಾಂಕಗಳು:
-ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 17-11-2023
-ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 07-12-2023
*ಅಪ್ಲಿಕೇಶನ್ ಶುಲ್ಕ ವಿವರ:
ಸಾಮಾನ್ಯ ಕೆಟಗರಿ / ಇತರೆ ಹಿಂದುಳಿದ ವರ್ಗಗಳು / EWS ಅಭ್ಯರ್ಥಿಗಳಿಗೆ ರೂ.750.
ಇತರೆ ಅಭ್ಯರ್ಥಿಗಳಿಗೆ ಪ್ರೋಸೆಸಿಂಗ್ ಶುಲ್ಕ ಮಾತ್ರ ಇರುತ್ತದೆ.
ಉದ್ಯೋಗ
Job Alert: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ – ಸದ್ಯದಲ್ಲೆ ಸಾರಿಗೆ ಇಲಾಖೆಗೆ 9 ಸಾವಿರ ಸಿಬ್ಬಂದಿಗಳ ನೇಮಕ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ:ನಾನು ಸಾರಿಗೆ ಸಚಿವರಾಗಿದ್ದಾಗ ಸಾರಿಗೆ ಸಿಬ್ಬಂದಿಗಳ ನೇಮಕಾತಿ ನಡೆದಿತ್ತು.ಅಲ್ಲಿಂದ ಇಲ್ಲಿಯವರೆಗೆ ನೇಮಕಾತಿ ನಡೆದಿಲ್ಲ. ಕಳೆದ 7ವರ್ಷಗಳಿಂದ 13,888 ಸಿಬ್ಬಂದಿ ನಿವೃತ್ತಿಯಾಗಿದ್ದಾರೆ. ಈಗ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವಂತ 9,000 ಸಿಬ್ಬಂದಿಗಳ ನೇಮಕ ಮತ್ತು 5500 ಹೊಸಬಸ್ ಖರೀದಿ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಕ್ತಿ ಯೋಜನೆ ಜಾರಿಯಾದ ಮೇಲೆ ಮೇಲೆ ಜನರು ಹೆಚ್ಚು ಓಡಾಡುತ್ತಿದ್ದಾರೆ. ಮೊದಲು 85 ಲಕ್ಷ ಜನರು ಓಡಾಡುತ್ತಿದ್ದರು. ಈಗ 1 ಕೋಟಿ ಜನರು ಓಡಾಟ ಮಾಡುತ್ತಿದ್ದಾರೆ. ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಮಹಿಳೆಯರ ಓಡಾಟ ಕೂಡ ಹೆಚ್ಚಾಗಿದೆ ಎಂದರು.
ಇದಕ್ಕೆಲ್ಲಾ ಪ್ರಮುಖ ಕಾರಣ ಕಳೆದ ನಾಲ್ಕು ವರ್ಷದಲ್ಲಿ ಒಂದೇ ಒಂದು ಬಸ್ ಖರೀದಿ ಮಾಡಿಲ್ಲ. ಹೊಸ ಬಸ್ ತಗೊಂಡು ಹಳೆಯ ಬಸ್ಸುಗಳನ್ನು ಸ್ಕ್ರ್ಯಾಪ್ ಮಾಡಬೇಕು. ಹೀಗೆ ಆಗಿದ್ದರೆ ಏನು ಸಮಸ್ಯೆ ಆಗುತ್ತಿರಲಿಲ್ಲ ಎಂದರು.
ಬೆಳಗಾವಿ ಸಾರಿಗೆ ವಿಭಾಗಕ್ಕೆ ಬಿಎಂಟಿಸಿ ಹಳೆ ಬಸ್ ಬಿಟ್ಟಿರುವುದಕ್ಕೆ ಇಲ್ಲಿ ಬಸ್ ಇಲ್ಲ ಎಂಬ ಕಾರಣಕ್ಕೆ ತೆಗೆದುಕೊಂಡಿದ್ದಾರೆ. ಮತ್ತೆ ಆ ಬಸ್ಸುಗಳನ್ನು ವಾಪಸ್ ಕಳುಹಿಸಿದ್ದಾರೆ. ಸತತವಾಗಿ ನಾಲ್ಕು ವರ್ಷ ಬಸ್ ಖರೀದಿ ಮಾಡಿಲ್ಲ, ಏಳು ವರ್ಷಗಳಿಂದ ನೇಮಕಾತಿ ಮಾಡಿಲ್ಲ, ಹೀಗಾಗಿ ಸಮಸ್ಯೆ ಆಗುತ್ತಿದೆ. ಹಾಗಾಗಿ 5500 ಹೊಸ ಬಸ್ ಖರೀದಿ ಮಾಡುತ್ತಿದ್ದು, 9 ಸಾವಿರ ಸಿಬ್ಬಂದಿ ನೇಮಕಾತಿ ಮಾಡಲಿದ್ದೇವೆ ಎಂದು ತಿಳಿಸಿದರು.
ಬೆಳಗಾವಿ, ಬಾಗಲಕೋಟೆ, ಗದಗ, ಹುಬ್ಬಳ್ಳಿ ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಅತಿಹೆಚ್ಚು ಬಸ್ ನಿಲ್ದಾಣವನ್ನು 2013ರಿಂದ 2017ರವರೆಗೆ ನಾನು ಸಾರಿಗೆ ಸಚಿವ ಇದ್ದಾಗ ಈ ಭಾಗಕ್ಕೆ ಹಲವು ಬಸ್ಸು ಕೊಟ್ಟಿದ್ದೇನೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣಕ್ಕೆ ಎರಡು ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ಹಾಕಲು ಸೂಚನೆ ನೀಡಿದ್ದೇನೆ. ಬೆಳಗಾವಿ ನಗರಕ್ಕೆ 100 ಹೊಸ ಬಸ್ ಖರೀದಿ ಮಾಡುತ್ತೇನೆ. ಮೂರು ತಿಂಗಳಲ್ಲಿ ಅವಧಿಯಲ್ಲಿ ಈ ಹೊಸ ಬಸ್ ಗಳು ಬರುತ್ತವೆ ಎಂದು ಹೇಳಿದ್ದಾರೆ.
ಉದ್ಯೋಗ
Colse Road Side Nonveg Hotel: ರಸ್ತೆ ಬದಿಯಿರುವ ನಾನ್ ವೆಜ್ ಹೋಟೆಲ್ಗಳನ್ನು ಮುಚ್ಚಿ : ಚುನಾವಣೆಯಲ್ಲಿ ಗೆಲ್ಲುತ್ತಲೇ ನೂತನ ಬಿಜೆಪಿ ಶಾಸಕನ ಆದೇಶ

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 115 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಆಡಳಿತ ಚುಕ್ಕಾಣಿ ಹಿಡಿದಿದೆ. ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಸೋಲನ್ನು ಕಂಡಿದೆ.
ತಾನು ಚುನಾವಣೆಯಲ್ಲಿ ಗೆದ್ದ ಬೆನ್ನಲೆ , ಜೈಪುರದ ಹವಾ ಮಹಾಲ್ ಕ್ಷೇತ್ರದ ಬಿಜೆಪಿ ಶಾಸಕ ಬಾಲಮುಕುಂದ್ ಆಚಾರ್ಯ ತಮ್ಮ ಕ್ಷೇತ್ರದ ರಸ್ತೆಯ ಬದಿಗಳಲ್ಲಿರುವ ನಾನ್ ವೆಜ್ ಹೋಟೆಲ್ಗಳನ್ನು ಮುಚ್ಚುವಂತೆ ಆದೇಶ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
ವೈರಲ್ ಆಗಿರುವ ಈ ವಿಡಿಯೋದಲ್ಲಿ ಬಿಜೆಪಿ ಶಾಸಕ ಬಾಲಮುಕುಂದ್ ಆಚಾರ್ಯ ಅಧಿಕಾರಿಯೊಬ್ಬರಿಗೆ ಕರೆ ಮಾಡಿ, ರಸ್ತೆ ಬದಿಯಲ್ಲಿರುವ ನಾನ್ ವೆಜ್ ಹೋಟೆಲ್ಗಳನ್ನು ಸಂಜೆ ಒಳಗೆ ಮುಚ್ಚಿಸುವಂತೆ ಸೂಚನೆ ನೀಡಿದ್ದಾರೆ.
ನಾನ್ ವೆಜ್ ಅನ್ನು ರಸ್ತೆಯಲ್ಲಿ ಬಹಿರಂಗವಾಗಿ ಮಾರಾಟ ಮಾಡಬಹುದೇ? ಹೌದೋ ಅಥವಾ ಇಲ್ಲವೋ ಉತ್ತರಿಸಿ. ಹಾಗಾದ್ರೆ ನೀವು ಇದನ್ನು ಬೆಂಬಲಿಸುತ್ತೀರಿ. ಕೂಡಲೇ ರಸ್ತೆ ಬದಿಯ ಎಲ್ಲ ಮಾಂಸಾಹಾರಿ ಅಂಗಡಿಗಳನ್ನು ಮುಚ್ಚಬೇಕು. ಸಂಜೆ ನಿಮ್ಮಿಂದ ವರದಿ ತರಿಸಿಕೊಳ್ಳುತ್ತೇನೆ. ಅಧಿಕಾರಿ ಯಾರೆಂಬುದನ್ನು ಸಹ ನಾನು ನೋಡುವುದಿಲ್ಲ ಎಂದು ಬಾಲಮುಕುಂದ್ ಆಚಾರ್ಯ ಎಚ್ಚರಿಕೆ ನೀಡಿದ್ದಾರೆ.
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಪ್ರತಿಕ್ರಿಯೆ:
ಈ ಬಗ್ಗೆ ಪ್ರತಿಕ್ರಿಯಿಸಿದ ಅಸಾದುದ್ದೀನ್ ಓವೈಸಿ ಈ ಆದೇಶ ಸರಿಯಲ್ಲ ,ನಾನ್ವೆಜ್ ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಯಾರಾದರೂ ಮಾಂಸಾಹಾರಿ ಆಹಾರದ ಮಳಿಗೆ ಸ್ಥಾಪಿಸಲು ಬಯಸಿದರೆ ಅದನ್ನು ತಡೆಯುವುದು ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಶಾಸಕ ಬಾಲಮುಕುಂದ್ ಆಚಾರ್ಯ ರವರು ರಾಜಸ್ಥಾನದ ಹವಾ ಮಹಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಆರ್ಆರ್ ತಿವಾರಿ ಅವರನ್ನು 600 ಮತಗಳಿಂದ ಸೋಲಿಸುವ ಮೂಲಕ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದರೆ, ಕಾಂಗ್ರೆಸ್ 69 ಸ್ಥಾನಗಳನ್ನು ಗಳಿಸುವ ಮೂಲಕ ಎರಡನೇ ಸ್ಥಾನಕ್ಕೆ ಕುಸಿಯಿತು
-
ರಾಷ್ಟ್ರೀಯ2 days ago
Divorce under Hindu Marriage Act : ಹಿಂದು ವಿವಾಹ ಕಾಯ್ದೆಯಡಿ ವಿಚ್ಛೇದನ ಪಡೆಯಲು ʼಈʼ ನಿಯಮ ಪಾಲನೆ ಕಡ್ಡಾಯ – ಕೊರ್ಟು ಮಹತ್ವದ ಆದೇಶ ; ಏನದು ನಿಯಮ ?
-
ಅಪರಾಧ2 days ago
Dowry Harasment: ʼಪ್ರತಿಯೊಬ್ಬರಿಗೂ ಹಣ ಬೇಕು ಮತ್ತು ಹಣ ಎಲ್ಲಕ್ಕಿಂತ ಪರಮೊಚ್ಚʼ ಡೆತ್ ನೋಟ್ ಬರೆದಿಟ್ಟು ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಯುವ ವೈದ್ಯೆ ಆತ್ಮಹತ್ಯೆ – ಅಷ್ಟಕ್ಕೂ ವರನ ಮನೆಯವರು ಇಟ್ಟ ಡಿಮ್ಯಾಂಡ್ ಎಷ್ಟು ಗೊತ್ತೆ ?
-
ಸುಳ್ಯ2 days ago
Arecanut Yellow leaf diseases ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದತ್ತ ಮಹತ್ವದ ಹೆಜ್ಜೆ – ಸಂಪಾಜೆಯಲ್ಲಿ ಇಂದೋರ್ ಕಂಪೆನಿಯ ಔಷಧಿ ಪ್ರಯೋಗಕ್ಕೆ ಆರಂಭಿಕ ಗೆಲುವು – ರೋಗವಿದ್ದ ಪ್ರದೇಶದಲ್ಲಿ ನಳನಳಿಸುತ್ತಿದೆ ಫಸಲು
-
ಮಂಗಳೂರು2 days ago
ಕುಡುಪು ಷಷ್ಟಿ ಮಹೋತ್ಸವ ಜಾತ್ರೆ – ಸಂತೆ ವ್ಯಾಪಾರದಲ್ಲಿ ಹಿಂದೂಯೇತರರಿಗಿಲ್ಲ ಅವಕಾಶ: ವ್ಯಾಪಾರಿಗಳ ಸಮನ್ವಯ ಸಮಿತಿ ಆಕ್ರೋಶ – ದೇವಸ್ಥಾನದ EOರಿಂದ ತಿರುಗೇಟು – ಕರಾವಳಿಯಲ್ಲಿ ನಿಲ್ಲೋದಿಲ್ವಾ ಧರ್ಮ ದಂಗಲ್ ?
-
ರಾಷ್ಟ್ರೀಯ2 days ago
Pancard latest update : ಪ್ಯಾನ್ ಕಾರ್ಡ್ ಕುರಿತು ಮಹತ್ವದ ಮಾಹಿತಿ – ಈ ತಪ್ಪು ಮಾಡಿದರೆ 10,000 ರೂ ದಂಡ ಗ್ಯಾರಂಟಿ
-
ಮಂಗಳೂರು1 day ago
Interfaith Marriage ಮಂಗಳೂರು : ಭಿನ್ನಕೋಮಿನ ಜೋಡಿ ವಿವಾಹ?
-
ಬಿಗ್ ನ್ಯೂಸ್1 day ago
Bride refuses Marriage in hall ತಾಳಿ ಕಟ್ಟುವ ವೇಳೆ ವರನ ಕೈಗೆ ಅಡ್ಡ ಹಿಡಿದು ಸಿನಿಮೀಯ ಶೈಲಿಯಲ್ಲಿ ಮದುವೆ ನಿರಾಕರಿಸಿದ ವಧು
-
ಸಿನೆಮಾ2 days ago
Pooja gandhi : ಕುವೆಂಪು ಪರಿಕಲ್ಪನೆಯ ’ಮಂತ್ರ ಮಾಂಗಲ್ಯ’ ಪದ್ದತಿಯಲ್ಲಿ ವಿವಾಹವಾದ ಪೂಜಾ ಗಾಂದಿ ದಂಪತಿಯಿಂದ ಕವಿ ಶೈಲ ಭೇಟಿ – ಹುಟ್ಟಿದ್ದು ಪಂಜಾಬಿನಲ್ಲಾದರೂ ಕನ್ನಡದ ಬಗೆಗಿನ ನಟಿಯ ಪ್ರೀತಿಗೆ ವ್ಯಾಪಕ ಮೆಚ್ಚುಗೆ