Connect with us

ಮಂಗಳೂರು

Congress Samavesha | ನಳಿನ್ ಕುಮಾರ್ ಕಟೀಲ್ ಅವರೇ ಒಂದೇ ಒಂದು ದಿನ ರಾಜ್ಯದ ಪರವಾಗಿ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿದಿಯೇನಪ್ಪಾ..? ತಾಯಿ ಶೋಭಾ ಕರಂದ್ಲಾಜೆ ನೀನಾದ್ರೂ ರಾಜ್ಯದ ಪರವಾಗಿ ಒಂದೇ ಒಂದು ಮಾತಾಡಿದ್ದೀಯೇನಮ್ಮಾ..? ನಿಮ್ಮನ್ನು ಮಂಗಳೂರು, ಉಡುಪಿ ಜಿಲ್ಲೆಯ ಸ್ವಾಭಿಮಾನಿ ಜನತೆ ಏಕೆ ಗೆಲ್ಲಿಸಬೇಕು..? ಮಂಗಳೂರಿನ ಬೃಹತ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ

Ad Widget

Ad Widget

Ad Widget

Ad Widget

ಮಂಗಳೂರು ಫೆ 17: ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Congress Samavesha) ಅವರು ಕರೆ ನೀಡಿದರು.

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಳಿನ್ ಕುಮಾರ್ ಕಟೀಲ್ ಅವರೇ ಒಂದೇ ಒಂದು ದಿನ ರಾಜ್ಯದ ಪರವಾಗಿ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿದಿಯೇನಪ್ಪಾ? ತಾಯಿ ಶೋಭಾ ಕರಂದ್ಲಾಜೆ ನೀನಾದ್ರೂ ರಾಜ್ಯದ ಪರವಾಗಿ ಒಂದೇ ಒಂದು ಮಾತಾಡಿದ್ದೀಯೇನಮ್ಮಾ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ನಿಮ್ಮನ್ನು ಮಂಗಳೂರು, ಉಡುಪಿ ಜಿಲ್ಲೆಯ ಸ್ವಾಭಿಮಾನಿ ಜನತೆ ಏಕೆ ಗೆಲ್ಲಿಸಬೇಕು ಎಂದು ಕೇಳಿದರು.

vAd Widget

Ad Widget

ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ. ಮೋದಿಯವರು ಇದುವರೆಗೂ ಹೇಳಿದ್ದರಲ್ಲಿ ಯಾವುದನ್ನಾದರೂ ಈಡೇರಿಸಿದ್ದಾರಾ? ಜನರ ಬದುಕಿಗೆ ನೆರವಾಗು, ದೇಶದ ಮಕ್ಕಳು-ಯುವಜನರ ಬದುಕು-ಭವಿಷ್ಯಕ್ಕೆ ಅನುಕೂಲ ಆಗುವ ಒಂದೇ ಒಂದನ್ನಾದರೂ ಈಡೇರಿಸಿದ್ದಾರಾ? ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಜನಸ್ತೋಮದ ಎದುರು ಪ್ರಶ್ನಿಸಿದರು.

Ad Widget

Ad Widget

ದಕ್ಷಿಣಕನ್ನಡದ ಜನತೆಗೆ ರಾಜಕೀಯ ಪ್ರಜ್ಞಾವಂತಿಕೆ ಹೆಚ್ಚಾಗಿದೆ. ಸತ್ಯ ಹೇಳುವವರು ಮತ್ತು ಸುಳ್ಳು ಹೇಳುವವರು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳುವ ಪ್ರಜ್ಞಾವಂತಿಕೆಯೂ ಇದೆ. ಈ ಕಾರಣಕ್ಕೆ ಮಂಗಳೂರಿನಲ್ಲೇ ಮೊದಲ ಸಭೆ ಮಾಡುವ ಮೂಲಕ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಿದ್ದೇವೆ ಎಂದರು.‌ಜಾತಿ-ಜಾತಿಗಳ ಮಧ್ಯೆ, ಧರ್ಮ-ಧರ್ಮಗಳ ಮಧ್ಯೆ ಕಿತ್ತಾಟ, ಜಗಳ ತಂದಿಟ್ಟಿರುವುದು ಬಿಟ್ಟರೆ ಜನ ಸಾಮಾನ್ಯರ ಬದುಕಿಗೆ ಅನುಕೂಲ ಆಗುವ ಒಂದೇ ಒಂದು ಕಾರ್ಯಕ್ರಮವನ್ನು ಕಳೆದ ಹತ್ತು ವರ್ಷಗಳಲ್ಲಿ ಜಾರಿ ಆಗಿದೆಯಾ?

Ad Widget

Ad Widget

Ad Widget

ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಆಯ್ತಾ? ಅಡುಗೆ ಗ್ಯಾಸ್ ಬೆಲೆ ಕಡಿಮೆ ಆಗಿದೆಯಾ? ಕಪ್ಪು ಹಣ ವಾಪಾಸ್ ಬಂದಿದೆಯಾ? ಅಚ್ಛೆ ದಿನ್ ಯಾರಿಗಾದರೂ ಬಂದಿದೆಯಾ? ಹೇಳಿ ಎಂದು ನೆರೆದಿದ್ದ ಜನಸ್ತೋಮಕ್ಕೆ ಮುಖ್ಯಮಂತ್ರಿಗಳು ಕೇಳಿದರು. ಜನರು ಇಲ್ಲ, ಇಲ್ಲ, ಏನಿಲ್ಲ ಎಂದು ಕೂಗಿದರು.

2013-18 ರ ವರೆಗೂ ನಾವು ಕೊಟ್ಟ ಭರವಸೆಗಳಲ್ಲಿ ಶೇ98 ರಷ್ಟನ್ನು ಈಡೇರಿಸಿದೆವು. ಈ ಬಾರಿ ಚುನಾವಣೆ ವೇಳೆ 5 ಗ್ಯಾರಂಟಿಗಳ ಜತೆಗೆ ಹಲವು ಭರವಸೆ ನೀಡಿದ್ದೆವು. ಕೇವಲ 8 ತಿಂಗಳಲ್ಲಿ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನೂ ಜಾರಿ ಮಾಡಿ ಇಡೀ ದೇಶಕ್ಕೆ ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಕೊಟ್ಟಿದ್ದೇವೆ. ನಾವು ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ನಾವು ಕೊಟ್ಟ ಭರವಸೆಗಳನ್ನು ಈಡೇರಿಸಲು ಶುರು ಮಾಡಿದೆವು.

ನಮ್ಮ ಮೊದಲ ಗ್ಯಾರಂಟಿ ಶಕ್ತಿ ಯೋಜನೆಯಿಂದ 155 ಕೋಟಿ ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಿದರು. ಬಿಜೆಪಿ ತನ್ನ ಇತಿಹಾಸದಲ್ಲಾಗಲೀ, ವರ್ತಮಾನದಲ್ಲಾಗಲೀ ಇಷ್ಟೊಂದು ಜನೋಪಯೋಗಿ ಕೆಲಸ ಮಾಡಿದ್ದರೆ ಒಂದೇ ಒಂದು ಉದಾಹರಣೆ ಕೊಡಿ ಎಂದು ಮುಖ್ಯಮಂತ್ರಿಗಳು ಜನರಿಗೆ ಕೇಳಿದರು. ಜನರು ಇಲ್ಲಾ ಇಲ್ಲಾ ಏನಿಲ್ಲ, ಯಾವುದೂ ಇಲ್ಲ ಎಂದು ಕೂಗಿದರು.

ಅದೇ ರೀತಿ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳಲ್ಲೂ ಕೋಟಿ ಕೋಟಿ ಮಹಿಳೆಯರು ಗ್ಯಾರಂಟಿಗಳ ಲಾಭವನ್ನು ಪ್ರತೀ ತಿಂಗಳು ಪಡೆಯುತ್ತಿದ್ದಾರೆ. ನಿಮಗೆಲ್ಲಾ ಈ ಯೋಜನೆಯ ಅನುಕೂಲ ಸಿಗುತ್ತಿದೆಯಾ ಎಂದು ಮುಖ್ಯಮಂತ್ರಿಗಳು ಕೇಳಿದ್ದಕ್ಕೆ ಸಿಗುತ್ತಿದೆ , ಸಿಗುತ್ತಿದೆ ಎಂದು ಕೂಗಿ ಮುಖ್ಯಮಂತ್ರಿಗಳಿಗೆ, ಸರ್ಕಾರಕ್ಕೆ ಜಯಕಾರ ಹಾಕಿದರು. ಬಡವರು, ಮಧ್ಯಮ ವರ್ಗದವರಿಗೆ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿದ ಬಳಿಕವೂ ರಾಜ್ಯದ ಆರ್ಥಿಕತೆಯನ್ನು ಸದೃಡವಾಗಿ ಪ್ರಗತಿ ಪಥದಲ್ಲಿ ಮುನ್ನಡೆಸುತ್ತಿದ್ದೇವೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿಬಿಡುತ್ತದೆ ಎಂದಿದ್ದ ಮೋದಿಯವರೇ ಈಗ ನಮ್ಮ ಗ್ಯಾರಂಟಿಯನ್ನು ಕದ್ದು ಈಗ “ಮೋದಿ ಗ್ಯಾರಂಟಿ-ಮೋದಿ ಗ್ಯಾರಂಟಿ” ಎಂದು ಭಜನೆ ಆರಂಭಿಸಿದ್ದಾರೆ ಎಂದು ಸಿಎಂ ವ್ಯಂಗ್ಯವಾಡಿದರು. ನಮ್ಮ ಗ್ಯಾರಂಟಿ ಪಡೆಯುವ ಫಲಾನುಭವಿಗಳನ್ನು ಅವಮಾನಿಸಬೇಡಿ ಎಂದರು.

AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, AICC ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಸಚಿವರುಗಳಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ವೆಂಕಟೇಶ್, ನಾಗೇಂದ್ರ, ಬೈರತಿ ಸುರೇಶ್, ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಮೋಟಮ್ಮ, ಆರ್.ವಿ.ದೇಶಪಾಂಡೆ, ಕಿಮ್ಮನೆ ರತ್ನಾಕರ್, ರಮಾನಾಥ ರೈ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಬಂಡಾರಿ, ಕೆಪಿಸಿಸಿ ಸಂವಹನ ವಿಭಾಗದ ಲಾವಣ್ಯ ಬಲ್ಲಾಳ್ ಸೇರಿ ಹಲವು ಮುಖಂಡರು ವೇದಿಕೆಯಲ್ಲಿದ್ದರು.

Click to comment

Leave a Reply

ಮಂಗಳೂರು

Luxury ship-ಮಂಗಳೂರಿಗೆ ಬಂದ 8ನೇ ಬೃಹತ್ ಐಷಾರಾಮಿ ಹಡಗು

Ad Widget

Ad Widget

Ad Widget

Ad Widget

ಪಣಂಬೂರು ಮೇ 5: ಈ ವರ್ಷದ 8ನೇ ಐಷಾರಾಮಿ ಕ್ರೂಸ್ ‘ಎಂಎಸ್ ಇನ್‌ಸೈನಿಯಾ’ ನವಮಂಗಳೂರು ಬಂದರಿಗೆ ರವಿವಾರ ಆಗಮಿಸಿತು. ನವಮಂಗಳೂರು ಬಂದರು ಪ್ರಾಧಿಕಾರ(ಎನ್‌ಎಂಪಿಎ) ದ ವತಿಯಿಂದ ಭರತನಾಟ್ಯ, ಯಕ್ಷಗಾನ ಸಹಿತ ಭಾರತೀಯ, ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು ವಿದೇಶೀ ಪ್ರವಾಸಿಗರಿಗೆ ಪರಿಚಯಿಸಿ ಅವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು.

Ad Widget

Ad Widget

Ad Widget

ನಾರ್ವೇಜಿಯನ್ ಕ್ರೂಸ್ ಲೈನರ್ 509 ಪ್ರಯಾಣಿಕರು ಮತ್ತು 407 ಸಿಬಂದಿ ಒಳಗೊಂಡಿದೆ. ಎನ್‌ ಎಂಪಿಎಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಕ್ಷಿಪ್ರ ಕ್ಲಿಯರಿಂಗ್ ವ್ಯವಸ್ಥೆ ಸೌಲಭ್ಯ ಅಳವಡಿಸಲಾಗಿದೆ.

vAd Widget

Ad Widget

ಕಾರ್ಕಳ ಗೋಮಟೇಶ್ವರ ಬೆಟ್ಟ ಮೂಡಬಿದಿರೆಯ ಸಾವಿರ ಕಂಬಗಳ ಬಸದಿ, ಸೋನ್ಸ್ ಫಾರ್ಮ್, ಗೋಡಂಬಿ ಕಾರ್ಖಾನೆ, ಗೋಕರ್ಣನಾಥ ದೇವಸ್ಥಾನ, ಸೈಂಟ್ ಅಲೋಶಿಯಸ್ ಚಾಪೆಲ್, ಸ್ಥಳೀಯ ಮಾರುಕಟ್ಟೆ ಮತ್ತು ಸಾಂಪ್ರದಾಯಿಕ ಮನೆಗಳಂತಹ ವಿವಿಧ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡಿದರು.

Ad Widget

Ad Widget
Continue Reading

ಮಂಗಳೂರು

Panolibail-ಪಣೋಲಿಬೈಲ್ನಲ್ಲಿ 23 ಸಾವಿರಕ್ಕೂ ಅಧಿಕ ಕೋಲ ಸೇವೆ ಬುಕ್ಕಿಂಗ್; ಪೂರ್ಣಗೊಳ್ಳಬೇಕಾದರೆ ಕನಿಷ್ಠ ಎಷ್ಟು ವರ್ಷ  ಬೇಕು ಗೊತ್ತೇ ?

Ad Widget

Ad Widget

Ad Widget

Ad Widget

ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನ ಕಾರಣಿಕ ಕ್ಷೇತ್ರವಾಗಿದ್ದು, ದೈವಗಳನ್ನು ನಂಬುವ ಭಕ್ತರು ಅಪಾರ ಸಂಖ್ಯೆಯಲ್ಲಿದ್ದಾರೆ. ಯಾವುದಾದರೂ ಸಂದರ್ಭದಲ್ಲಿ ಪಣೋಲಿಬೈಲು ದೈವಕ್ಕೆ ಹರಕೆ ಹೇಳಿಕೊಳ್ಳುವುದುಂಟು. ಅದನ್ನು ಈಡೇರಿಸಲು ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಾರೆ.

Ad Widget

Ad Widget

Ad Widget

ಇಲ್ಲಿ ಅಗೇಲು ಸೇವೆ (ಕೋಳಿ, ಕುಚ್ಚಲಕ್ಕಿ, ಬಾಳೆ, ತೆಂಗಿನಕಾಯಿ, ಕೇಪುಳ ಹೂ ಒಪ್ಪಿಸುವುದು) ಹಾಗೂ ಕೋಲ ಸೇವೆ ಪ್ರಸಿದ್ಧ. ಕೋಲ ಸೇವೆಗಾಗಿ ಭಕ್ತರು ಬುಕ್ ಮಾಡುವುದುಂಟು. ಹೀಗೆ 23 ಸಾವಿರ ಸೇವೆಗಳು ಈ ಸನ್ನಿಧಿಯಲ್ಲಿ ಬುಕ್ ಆಗಿವೆ. ದಿನವೊಂದಕ್ಕೆ 4, ವಾರದಲ್ಲಿ 5 (ಕೆಲವು ದಿನ, ತಿಂಗಳು ಇರುವುದಿಲ್ಲ) ಸೇರಿ ಒಟ್ಟು 600ರಿಂದ 700 ಕೋಲ ಸೇವೆಗಳು ಇಲ್ಲಿ ನಡೆಯುತ್ತವೆ ಎಂದು ಲೆಕ್ಕ ಹಾಕಿದರೆ, ಇವತ್ತು ಬುಕ್ ಮಾಡಿದವರಿಗೆ 35 ವರ್ಷಗಳ ನಂತರ ಇಲ್ಲಿ ಸೇವೆ ಮಾಡಿಸಲು ಅವಕಾಶ ದೊರೆಯುತ್ತದೆ. ಈ ಹಿನ್ನೆಲೆಯಲ್ಲಿ ಇಲ್ಲಿ ಈಗ ಕೋಲಸೇವೆಯಲ್ಲಿ 4ರ ಬದಲಿಗೆ 8 ಮಂದಿಗೆ ಸೇವೆ ಸಂದಾಯಕ್ಕೆ ಅವಕಾಶ ಕಲ್ಪಿಸಲಾಗಿದೆ.

vAd Widget

Ad Widget

23 ಸಾವಿರಕ್ಕೂ ಅಧಿಕ ಕೋಲ ಸೇವೆ ಬುಕ್ಕಿಂಗ್ :
ಪಣೋಲಿಬೈಲಿಗೆ ತುಳುನಾಡ ಜಿಲ್ಲೆಗಳಷ್ಟೇ ಅಲ್ಲ, ಹೊರಗಿನಿಂದಲೂ ಆಗಮಿಸುವ ಭಕ್ತರು ಅಗೇಲು, ಕೋಲ ಸೇವೆ ನಡೆಸುತ್ತಾರೆ. ವಿಶೇಷ ಹರಕೆ ರೂಪದಲ್ಲಿ ಕೋಲ ಸೇವೆಯನ್ನು ನೀಡುತ್ತಾರೆ. ಇದುವರೆಗೆ 23 ಸಾವಿರಕ್ಕೂ ಅಧಿಕ ಕೋಲ ಸೇವೆಗಳ ಬುಕ್ ಆಗಿದೆ. ಕ್ಷೇತ್ರದಲ್ಲಿ ಅಗೇಲು ಮತ್ತು ಕೋಲ ಸೇವೆಗಳು ವಿಶೇಷವಾಗಿದೆ. ವಾರದ ಮೂರು ದಿನಗಳು ಅಗೇಲು ಹಾಗೂ ವಾರದ 5 ದಿನಗಳ ಕೋಲ ಸೇವೆ ಸಂದಾಯವಾಗುತ್ತದೆ. ಬೆಳಗ್ಗೆ ನಿಗದಿತ ಸಮಯದೊಳಗೆ ಬಂದವರಿಗೆ ಎಷ್ಟು ಬೇಕಾದರೂ ಅಗೇಲು ಸೇವೆ ನೀಡುವುದಕ್ಕೆ ಅವಕಾಶವಿದೆ. ದಿನವೊಂದಕ್ಕೆ ಕೋಲ ಸೇವೆ ನೀಡುವುದಕ್ಕೆ ಕೇವಲ ನಾಲ್ವರಿಗೆ ಮಾತ್ರ ಅವಕಾಶವಿತ್ತು. ಕೋಲ ಸೇವೆಗಳ ಬುಕ್ಕಿಂಗ್ ಹೆಚ್ಚಾಗುತ್ತಿದ್ದು, ಅದು ಪೂರ್ಣಗೊಳ್ಳಬೇಕಾದರೆ ಕನಿಷ್ಠ 35 ವರ್ಷ ಬೇಕಾಗುತ್ತದೆ ಎಂದು ಅಂದಾಜಿಸಲಾಗುತ್ತಿದೆ.

Ad Widget

Ad Widget

ಸುದೀರ್ಘ ವರ್ಷಕ್ಕೆ ಬುಕ್ಕಿಂಗ್ ಮಾಡಿದವರಿಗೆ ಶೀಘ್ರ ಸೇವೆ :
ಕೋಲಸೇವೆಯಲ್ಲಿ 4ರ ಬದಲಿಗೆ 8 ಮಂದಿಗೆ ಸೇವೆ ಸಂದಾಯಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಈ ವ್ಯವಸ್ಥೆ ಮೇ 3ರಂದು ಆರಂಭಗೊಂಡಿದ್ದು, ಇದು ವಾರದಲ್ಲಿ 5 ದಿನ ಇರುತ್ತದೆ. ಇದರಿಂದ ಸುದೀರ್ಘ ವರ್ಷಕ್ಕೆ ಬುಕ್ಕಿಂಗ್ ಮಾಡಿದವರಿಗೆ ಶೀಘ್ರ ಸೇವೆ ಸಂದಾಯವಾಗುವ ವ್ಯವಸ್ಥೆ ಕಲ್ಪಿಸಿದಂತಾಗುತ್ತದೆ. ಇದುವರೆಗೆ ವರ್ಷಕ್ಕೆ 600ರಿಂದ 700 ಮಂದಿಗೆ ಮಾತ್ರ ಕೋಲ ಸೇವೆಗೆ ಅವಕಾಶ ಸಿಗುತ್ತಿತ್ತು. ಬುಕಿಂಗ್ ಸಂಖ್ಯೆ ವರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಭಕ್ತರಿಗೆ ಶೀಘ್ರ ಸೇವೆಗೆ ಅವಕಾಶ ನೀಡುವ ದೃಷ್ಟಿಯಿಂದ ದೈವದ ಬಳಿ ಹರಕೆ ಮಾಡಿ, ಮಾಗಣೆಯ ದೈವದ ಅಪ್ಪಣೆ ಪಡೆದು, ದಿನಕ್ಕೆ ನಾಲ್ಕು ಕೋಲ ಸೇವೆ ನೀಡಿದರೂ ಪ್ರತಿ ಕೋಲದಲ್ಲಿ ಇಬ್ಬರಿಗೆ ಪ್ರಸಾದದಂತೆ 8 ಮಂದಿಗೆ ಪ್ರಸಾದ ನೀಡುವುದಕ್ಕೆ ನಿರ್ಧರಿಸಲಾಯಿತು. ಹೀಗಾಗಿ ಮುಂದಿನ ದಿನಗಳಲ್ಲಿ ಕೋಲ ಸೇವೆ ನೀಡಲು ಬುಕಿಂಗ್ ಮಾಡುವವರಿಗೆ ಅನುಕೂಲವಾಗಲಿದೆ. ಪ್ರತಿದಿನ ನಡೆಯುತ್ತಿದ್ದ ಕೋಲ ಸೇವೆಯಲ್ಲಿ 4ರ ಬದಲಿಗೆ 8 ಮಂದಿಗೆ ಸೇವೆ ಸಂದಾಯಕ್ಕೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಸೇವೆ ಮಾಡಿಸುವವರಿಗೂ ಅನುಕೂಲವಾಗಿದೆ.

Ad Widget

Ad Widget

Ad Widget

ಕ್ಷೇತ್ರ ಪಣೋಲಿಬೈಲ್ ಎಲ್ಲಿದೆ
ಮಂಗಳೂರಿನಿಂದ ಬಿಸಿ ರೋಡಿಗೆ ಹೆದ್ದಾರಿಯಲ್ಲಿ ಬಂದು ಮುಂದಕ್ಕೆ ಸಾಗಿದಾಗ ಮೇಲ್ಕಾರ್‌ನಿಂದ ಬಲಭಾಗಕ್ಕೆ ಕೊಣಾಜೆ ಮಾರ್ಗದಲ್ಲಿ ಸಾಗುವ ಸಂದರ್ಭ ಮಾರ್ನಬೈಲ್ ನಲ್ಲಿ ಎಡಭಾಗಕ್ಕೆ ತಿರುಗಿ ಸುಮಾರು 4 ಕಿಮೀ ದೂರದಲ್ಲಿ ಸಾಗಿದರೆ, ಪಣೋಲಿಬೈಲ್ ಕ್ಷೇತ್ರ ಕಾಣಲು ಸಿಗುತ್ತದೆ. ಇಲ್ಲಿ ಕಲ್ಲುರ್ಟಿ ಕಲ್ಕುಡರು ನೆಲೆಯಾಗಿದ್ದಾರೆ.

ಕೋಲ ಯಾವಾಗೆಲ್ಲ ಇರುತ್ತದೆ
ಸೋಮವಾರ ಹಾಗೂ ಶನಿವಾರ ಹೊರತುಪಡಿಸಿ ವಾರದಲ್ಲಿ 5 ದಿನ ಕೋಲ ಸೇವೆಗೆ ಅವಕಾಶವಿದೆ. ಆಟಿ ತಿಂಗಳು, ಅಮಾವಾಸ್ಯೆ, ಷಷ್ಠಿ, ಸಜಿಪಮಾಗಣೆಯ ಜಾತ್ರೆ, ಉತ್ಸವಾದಿಗಳ ಸಂದರ್ಭ ಕೋಲ ಸೇವೆ ಇರುವುದಿಲ್ಲ.

ಪಣೋಲಿಬೈಲ್ ಕಲ್ಲುರ್ಟಿ ಕ್ಷೇತ್ರ ತುಳುನಾಡಿನ ಅತ್ಯಂತ ಶ್ರೀಮಂತ ಕ್ಷೇತ್ರ. ವಾರಕ್ಕೆ ಐದು ದಿವಸ ಇಪ್ಪತ್ತು ಹರಕೆಯ ಕೋಲ ಅದೇ ರೀತಿ ವಾರದ ಮೂರು ದಿನ ನಾಲ್ಕು ಸಾವಿರಕ್ಕೂ ಹೆಚ್ಚು ಅಗೆಲು ಸೇವೆ ಹರಕೆಯನ್ನು ಪಡೆಯುತ್ತಿರುವ ಕ್ಷೇತ್ರವಿದು. ಮದುವೆ, ವಿದ್ಯೆ, ಕಷ್ಟಕಾರ್ಪಣ್ಯ, ಕಳ್ಳತನ ಉದ್ಯೋಗಕ್ಕೆ ಅಲ್ಲದೆ ಶರೀರದಲ್ಲಿರುವ ಪ್ರೇತಾತ್ಮ ಇನ್ನಿತ್ತರ ದುಷ್ಟಶಕ್ತಿಗಳನ್ನು ಕೋಲದಲ್ಲಿ ವಿಮೋಚನೆಗೊಳಿಸುತ್ತಾರೆ. ಈ ಜಾಗದಲ್ಲಿ ಪಟ್ಟ ಹರಕೆ ಹೇಳುತ್ತಾ ಜನರು ಕಷ್ಟ ಕಳೆಯುತ್ತಾ ಇರುವ ಶ್ರೀ ಕ್ಷೇತ್ರ ಪಣೋಲಿಬೈಲು.

ಇಲ್ಲಿಗೆ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಬ್ರಹ್ಮಣ್ಯ, ನೆಲ್ಯಾಡಿ, ಮಡಿಕೇರಿ, ಮಂಗಳೂರು, ಮಂಜೇಶ್ವರ, ಕಾಸರಗೋಡು, ಉಡುಪಿ, ಕುಂದಾಪುರ, ಕಾರ್ಕಳ, ಮೂಡಬಿದ್ರೆ, ಕೊಡಗು ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಬರುತ್ತಾರೆ. ಇತರ ಪ್ರದೇಶಗಳಿಂದಲೂ ಗಮನಾರ್ಹ ಪ್ರಮಾಣದ ಭಕ್ತರು ನಡೆದುಕೊಳ್ಳುತ್ತಾರೆ. ಹರಕೆ ಕಾಣಿಕೆ, ಅಗೇಲು ಕೋಲ ಬೆಳ್ಳಿ ಬಂಗಾರದ ಸೇವೆಯನ್ನು ಕೊಡುತ್ತಿದ್ದಾರೆ. ಆಸ್ತಿ ವಿಚಾರ ತಕರಾರು, ಕೋರ್ಟ್ ವಿಚಾರ ಇನ್ನಿತರ ಕಷ್ಟ ಕಾರ್ಪಣ್ಯದಲ್ಲಿದ್ದವರು ಈ ಕ್ಷೇತ್ರಕ್ಕೆ ಬಂದು ದೈವದ ಮುಂದೆ ತಮ್ಮ ಕಷ್ಟ ತೋಡಿಕೊಂಡು ಹರಕೆಯನ್ನು ಹೇಳಿಕೊಳ್ಳುತ್ತಾರೆ. ಸತ್ಯ, ಧರ್ಮ, ನ್ಯಾಯವನ್ನು ಎತ್ತಿ ಹಿಡಿಯುವ ಈ ದೈವವು ಎಲ್ಲಾ ಮೂಲೆಗಳಂದಲೂ ಭಕ್ತರನ್ನು ಸೆಳೆದುಕೊಳ್ಳುತ್ತಿದೆ.

Continue Reading

ಮಂಗಳೂರು

ವಿಟ್ಲ: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮಗು ಸಹಿತ ಮೂವರಿಗೆ ಗಾಯ

Ad Widget

Ad Widget

Ad Widget

Ad Widget


ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ.
ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡುಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

Ad Widget

Ad Widget

Ad Widget

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟ ಗಾಯವಾಗಿದೆ.

vAd Widget

Ad Widget

ಗಂಭೀರ ಗಾಯಗೊಂಡ ಮಗುವನ್ನು ಪುತ್ತೂರು ಆಸ್ಪತ್ರೆ ಕೊಂಡೊಯ್ಯಲಾಗಿತ್ತು. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ತಿಳಿದು ಬಂದಿದೆ. ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
,

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading