Connect with us

ರಾಜಕೀಯ

DK Shivakumar-ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕ್ ಪರ ಘೋಷಣೆ ಕೂಗಿದ ಪ್ರಕರಣವನ್ನು ರಾತ್ರೋರಾತ್ರಿ ಮುಚ್ಚಿ ಹಾಕಿದ್ಯಾಕೆ ? : ಡಿಕೆ ಶಿವಕುಮಾರ್

Ad Widget

Ad Widget

Ad Widget

Ad Widget

ಹುಬ್ಬಳ್ಳಿ: ಬೆಂಗಳೂರಿನಿಂದ ಇಂದು ಬೆಳಗ್ಗೆ ಹುಬ್ಬಳ್ಳಿಗೆ ಆಗಮಿಸಿದ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ, ವಿಧಾನ ಸೌಧದ ಒಳಗಡೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣದ ಹಿನ್ನೆಲೆಯಲ್ಲಿ ತಾವು ರಾಜೀನಾಮೆ ನೀಡಬೇಕು ಎನ್ನುತ್ತಿರುವ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು.

Ad Widget

Ad Widget

Ad Widget

ಅದ್ಯಾವ ನೈತಿಕತೆಯಿಂದ ಅವರು ರಾಜೀನಾಮೆ ಕೇಳುತ್ತಾರೆ? ದೇಶಭಕ್ತಿಯ ಬಗ್ಗೆ ಮಾತಾಡುವ ಬಿಜೆಪಿ ನಾಯಕರು ಮಂಡ್ಯದಲ್ಲಿ ತಮ್ಮ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ ಪ್ರಕರಣವನ್ನು ಯಾಕೆ ಮುಚ್ಚಿಹಾಕಿದರು? ನಾವಾದರೋ ವಿಧಾನ ಸೌಧದಲ್ಲಿ ಕೂಗಿದ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ಮಾಡಿಸುತ್ತಿದ್ದೇವೆ. ದೇಶದ ಬಗ್ಗೆ ನಮಗಿರುವ ಬದ್ಧತೆ ಅವರಿಗಿದೆಯಾ? ನಮ್ಮಲ್ಲಿರುವ ರಾಷ್ಟ್ರಭಕ್ತಿ ಅವರಲ್ಲಿದೆಯಾ? ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶ್ನಿಸಿದರು.

Ad Widget

ಹುಬ್ಬಳ್ಳಿಗೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾನಾಡಿದ ಅವರು , “ ಮಂಡ್ಯದ ಪ್ರಕರಣಕ್ಕೆ ಎಫ್ ಎಸ್ ಎಲ್ ವೆರಿಫಿಕೇಶನ್ ಬೇಕಿಲ್ಲ. ಯಾಕೆಂದರೆ, ಒಬ್ಬ ಕಾರ್ಯಕರ್ತ ಪಾಕಿಸ್ತಾನ್ ಜಿಂದಾಬಾದ್ ಅಂತ ಕೂಗಿದ ಬಳಿಕ ಅವನ ಹಿಂದೆ ನಿಂತಿದ್ದ ಮತ್ತೊಬ್ಬ ಕಾರ್ಯಕರ್ತ ಅವನ ಬಾಯಿ ಮುಚ್ಚುತ್ತಾನೆ ಆ ಪ್ರಕರಣವನ್ನು ಆಗಿನ ಬಿಜೆಪಿ ಸರ್ಕಾರ ರಾತ್ರೋರಾತ್ರಿ ಮುಚ್ಚಿಹಾಕಿದ್ಯಾಕೆ? ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.

Ad Widget

Ad Widget
Click to comment

Leave a Reply

ಅಂತರ ರಾಜ್ಯ

Priyanka Gandhi-ಪ್ರಜ್ವಲ್ ರೇವಣ್ಣ ಪ್ರಕರಣ: ಇನ್ನೂ ಮೌನವಾಗಿರ್ತೀರಾ ಮೋದಿಜಿ?-ಪ್ರಿಯಾಂಕಾ ಗಾಂಧಿ

Ad Widget

Ad Widget

Ad Widget

Ad Widget

ನವದೆಹಲಿ: ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Ad Widget

Ad Widget

Ad Widget

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ‘ಪ್ರಧಾನಿಗಳು ಈ ನಾಯಕನ ಭುಜದ ಮೇಲೆ ಕೈ ಹಾಕಿ ಫೋಟೋಗೆ ಪೋಸ್ಟ್ ಕೊಟ್ಟಿದ್ದರು. ಚುನಾವಣೆಗೆ 10 ದಿನದ ಹಿಂದೆ ಈ ನಾಯಕನ ಪರವಾಗಿ ಪ್ರಧಾನಿ ಪ್ರಚಾರಕ್ಕೆ ಹೋಗುತ್ತಾರೆ. ವೇದಿಕೆಯಲ್ಲಿ ಹಾಡಿ ಹೊಗಳುತ್ತಾರೆ.

Ad Widget

ಇವತ್ತು ಕರ್ನಾಟಕದ ಆ ನಾಯಕ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಆ ವ್ಯಕ್ತಿಯ ಘೋರ ಅಪರಾಧಗಳ ಬಗ್ಗೆ ಕೇಳಿದರೇ ಸಾಕು ಹೃದಯ ನಡುಗುತ್ತದೆ. ಆ ವ್ಯಕ್ತಿ ನೂರಾರು ಮಹಿಳೆಯರ ಜೀವನ ಹಾಳು ಮಾಡಿದ್ದಾನೆ. ಆದರೂ ಮೋದಿ ಅವರೆ ನೀವಿನ್ನೂ ಮೌನವಾಗಿಯೇ ಇರುತ್ತೀರಾ?’ ಎಂದು ಹೇಳಿದ್ದಾರೆ

Ad Widget

Ad Widget
Continue Reading

ರಾಜಕೀಯ

Dinesh Panjiga-ದಿನೇಶ್ ಪಂಜಿಗ ಸಹಿತ ಹಿಂಜಾವೇ ಮುಖಂಡರ ಗಡಿಪಾರಿಗೆ ಕಾಂಗ್ರೆಸ್‌ ಸರಕಾರದ ಆದೇಶ ಆರೋಪ‌-ಹಿಂದೂ ಜಾಗರಣೆ ವೇದಿಕೆಯಿಂದ ಕಾನೂನು ಹೋರಾಟ

Ad Widget

Ad Widget

Ad Widget

Ad Widget

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಹಿಂದೂ ಮುಖಂಡರು, ಕಾರ್ಯಕರ್ತರನ್ನು ದಮನಿಸುವ ಕೆಲಸ ಮಾಡುತ್ತಿದೆ. ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರನ್ನು ಗಡಿಪಾರು ಮಾಡಲಾಗಿದೆ. ಈ ಕುರಿತು ಹಿಂದೂ ಜಾಗರಣ ವೇದಿಕೆ ದಕ್ಷಿಣ ಪ್ರಾಂತ ಸಹ ಸಂಯೋಜಕ ಮಹೇಶ್ ಕಡಗದಾರು ಇದರ ವಿರುದ್ಧ ಆಂದೋಲನ ನಡೆಸಲಾಗುವುದು ಹಾಗೂ ಗಡಿಪಾರು ಮಾಡಿದ ಜಿಲ್ಲಾಡಳಿತದ ಆದೇಶ ಪ್ರಶ್ನಿಸಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.

Ad Widget

Ad Widget

Ad Widget

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲಾಡಳಿತವು ಹಿಂದೂ ಜಾಗರಣ ವೇದಿಕೆ ಮುಖಂಡರಾದ ಪುತ್ತೂರಿನ ದಿನೇಶ್ ಪಂಜಿಗ, ಯಶೋಧರ ಬಳಾಲು, ಅವಿನಾಶ್ ಪುರುಷರಕಟ್ಟೆ, ಪ್ರವೇಶ್ ಅವರಿಗೆ ದ.ಕ. ಜಿಲ್ಲೆಯಿಂದ ಗಡಿಪಾರು ಮಾಡಲು ನೋಟಿಸ್ ನೀಡಿದ್ದು, ಅಕ್ಷಯ ರಜಪೂತ್ ಅವರನ್ನು ಗಡಿಪಾರು ಮಾಡಿದೆ. ಜಿಲ್ಲಾಡಳಿತದ ಈ ಕ್ರಮ ಖಂಡನೀಯ ಎಂದರು.

Ad Widget

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹಿಂದೂ ಕಾರ್ಯಕರ್ತರ ಮೇಲೆ ಮುಸಲ್ಮಾನ ಪುಂಡರಿಂದ ರಾಜ್ಯದ ವಿವಿಧೆಡೆ ನಿರಂತರ ಹಲ್ಲೆ ನಡೆಯುತ್ತಿದೆ ಎಂದು ಮಹೇಶ್ ಆರೋಪಿಸಿದರು.

Ad Widget

Ad Widget

ಹಿಂದೂ ಸಂಘಟನೆ ಕಾರ್ಯಕರ್ತರು, ಮುಖಂಡರನ್ನು ಗುರಿ ಮಾಡಿಕೊಂಡು ಅವರ ಮಾನಸಿಕ ಸ್ಥೆರ್ಯ ಕುಗ್ಗಿಸುವ ಕೆಲಸ ಮಾಡುತ್ತಿದೆ. ಅನಾವಶ್ಯಕವಾಗಿ ಕಲಂ 107, 1100 ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಇಂಥ ಗೊಡ್ಡು ಬೆದರಿಕೆಗಳಿಗೆ ಹಿಂದೂ ಜಾಗರಣ ವೇದಿಕೆ ಹೆದರುವುದಿಲ್ಲ. ಇದೇ ವಿಚಾರ ಮುಂದಿಟ್ಟುಕೊಂಡು ಆಂದೋಲನ ನಡೆಸುತ್ತೇವೆ ಮತ್ತು ಕಾನೂನು ಹೋರಾಟ ಕೈಗೊಳ್ಳಲಿದ್ದೇವೆ ಎಂದು ಹೇಳಿದರು.

Ad Widget

Ad Widget

Ad Widget

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ರಾಜಕೀಯ ಪಕ್ಷದವರಲ್ಲ. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಖಂಡಿಸುವುದಾಗಿ ತಿಳಿಸಿದರು. ಸಂಘಟನೆ ಮುಖಂಡರಾದ ರವಿರಾಜ್ ಶೆಟ್ಟಿ ಕಡಬ, ಹರೀಶ್ ಶಕ್ತಿನಗರ, ಹರ್ಷಿತ್ ಮಂಗಳೂರು, ನರಸಿಂಹ ಮಾಣಿ ಇದ್ದರು.

Continue Reading

ಸ್ಥಳೀಯ

H D Kumaraswamy-ನಮ್ಮ ಕುಟುಂಬವೇ ಬೇರೆ. ಎಚ್‌.ಡಿ.ರೇವಣ್ಣ ಅವರ ಕುಟುಂಬವೇ ಬೇರೆ : ಎಚ್‌. ಡಿ. ಕುಮಾರ ಸ್ವಾಮಿ

Ad Widget

Ad Widget

Ad Widget

Ad Widget

ಶಿವಮೊಗ್ಗ: ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದೆ ಎನ್ನಲಾದ ಪೆನ್‌ಡ್ರೈವ್ ವಿಚಾರದಲ್ಲಿ ನನ್ನೊಬ್ಬನಿಗೇ ಅಲ್ಲ ಇಡೀ ಸಮಾಜಕ್ಕೆ ಮುಜುಗರ ಆಗಿದೆ ಎಂದು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಈ ವಿಚಾರದಲ್ಲಿ ದೇವೇಗೌಡರ ಕುಟುಂಬದ ಹೆಸರು ಎಳೆದು ತರಬೇಡಿ ಎಂದು ಕಾಂಗ್ರೆಸ್‌ ಮುಖಂಡರಿಗೆ ತಾಕೀತು ಮಾಡಿದರು.

Ad Widget

Ad Widget

Ad Widget

’ಕಾಂಗ್ರೆಸ್‌ ಮಹಾನುಭಾವರು ನೀವು ಕಳಂಕವಿಲ್ಲದೇ ಬಂದವರಾ? ಇಲ್ಲಿ ದೇವೇಗೌಡರು, ಕುಮಾರಸ್ವಾಮಿ ಹೆಸರು ಯಾಕೆ ತರುತ್ತೀರಿ. ಯಾರು ಮಾಡಿದ್ದಾರೋ ಅವರು ಶಿಕ್ಷೆ ಅನುಭವಿಸಬೇಕು ಎಂದು ನಾನೇ ಸ್ಪಷ್ಟಪಡಿಸಿದ್ದೇನಲ್ಲ‘ ಎಂದು ಹರಿಹಾಯ್ದರು.

Ad Widget

’ನಮ್ಮ ಕುಟುಂಬವೇ ಬೇರೆ. ಎಚ್‌.ಡಿ.ರೇವಣ್ಣ ಅವರ ಕುಟುಂಬವೇ ಬೇರೆ. ಹಾಸನದಲ್ಲಿ ಅವರು ನಾಲ್ಕು ಜನ ಪ್ರತ್ಯೇಕವಾಗಿ ವಾಸವಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರಿಗೆ ಹೇಳುತ್ತಿದ್ದೇನೆ. ಇಲ್ಲಿ ಕುಟುಂಬದ ಹೆಸರು ತರಬೇಡಿ. ಇದು ವ್ಯಕ್ತಿಯ ಪ್ರಶ್ನೆಯೇ ಹೊರತು ಕುಟುಂಬದ ಪ್ರಶ್ನೆ ಅಲ್ಲ. ವ್ಯಕ್ತಿಯ ಬಗ್ಗೆ ಚರ್ಚೆ ಮಾಡಿಕೊಳ್ಳಿ. ವ್ಯಕ್ತಿಗತವಾಗಿ ಒಬ್ಬೊಬ್ಬರದ್ದು ಒಂದೊಂದು ವರ್ತನೆ ಇರುತ್ತದೆ ಎಂದು ಹೇಳಿದರು.

Ad Widget

Ad Widget

ಪ್ರಜ್ವಲ್‌ ವಿಚಾರದಲ್ಲಿ ಮಹಿಳೆಯರೊಂದಿಗೆ ತಪ್ಪು ಆಗಿದ್ದರೆ ಅದು ಆಗಬಾರದಿತ್ತು. ಸಮಾಜದಲ್ಲಿ ಇಂತಹದ್ದು ಮತ್ತೆ ನಡೆಯಬಾರದು ಎಂಬುದು ನನ್ನ ಅಭಿಪ್ರಾಯ. ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಿ ಆಗಿದ್ದಾಗ, ನಾನು ಮುಖ್ಯಮಂತ್ರಿ ಆಗಿದ್ದಾಗಲೂ ಲಕ್ಷಾಂತರ ಮಹಿಳೆಯರು ಕಷ್ಟ–ಸುಖ ಹೇಳಿಕೊಂಡು ನಮ್ಮ ಬಳಿಗೆ ಬಂದಿದ್ದಾರೆ. ಅವರ ಜೊತೆ ಗೌರವಯುತವಾಗಿ ನಡೆದುಕೊಂಡಿದ್ದೇವೆ. ಅವರಿಗೆ ನೆರವು ಕೊಟ್ಟು ಸಂಕಷ್ಟದಿಂದ ಪಾರು ಮಾಡಿದ್ದೇವೆ ಎಂದು ಸ್ಮರಿಸಿದರು.

Ad Widget

Ad Widget

Ad Widget

ಯಾರು ತಪ್ಪು ಮಾಡಿದ್ದರೂ ಈ ನೆಲದ ಕಾನೂನಿಗೆ ತಲೆಬಾಗಲೇಬೇಕು. ಶಿಕ್ಷೆ ಅನುಭವಿಸಬೇಕು. ಹೀಗಾಗಿ ಮುಂದಿನ ವಿಷಯಗಳು ನನಗೆ ಸಂಬಂಧವಿಲ್ಲ. ಎಸ್‌ಐಟಿ ತನಿಖೆ ವಿಚಾರದಲ್ಲಿ ಯಾರ ಮೇಲೂ ಪ್ರಭಾವ ಬೀರುವ ಪ್ರಶ್ನೆಯೇ ಇಲ್ಲ. ಇಲ್ಲಿ ಯಾರನ್ನೂ ವಹಿಸಿಕೊಳ್ಳುವುದಿಲ್ಲ. ಆದರೆ ಪಾರದರ್ಶಕ ತನಿಖೆ ನಡೆಯಲಿ ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಫಲಿತಾಂಶದ ಮೇಲೆ ಪೆನ್‌ಡ್ರೈವ್‌ ವಿಚಾರ ಪರಿಣಾಮ ಬೀರೊಲ್ಲ ಎಂದು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಪಕ್ಷದಿಂದಲೂ ಪ್ರಜ್ವಲ್‌ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

’ಪೆನ್‌ಡ್ರೈವ್ ವಿಚಾರದಲ್ಲಿ ಎಲ್ಲವೂ ವೈಯಕ್ತಿಕವಾಗಿ ನಡೆದ ಸಂಗತಿಗಳು. ಮೊದಲೇ ನಮ್ಮ ಗಮನಕ್ಕೆ ಬಂದಿದ್ದರೆ ತಪ್ಪಿಸಬಹುದಿತ್ತು. ಮಕ್ಕಳು ಎಲ್ಲಿಗೆ ಹೋಗುತ್ತಾರೆ ಏನು ಮಾಡುತ್ತಾರೆ ಎಂದು ಕಾಯಲು ಆಗುತ್ತದೆಯೇ. ಅದೇ ರೀತಿ ಪ್ರಜ್ವಲ್ ವಿದೇಶಕ್ಕೆ ಹೋಗುವಾಗಲೂ ನನ್ನ ಕೇಳಿ ಹೋಗುತ್ತಾನಾ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಪ್ರಜ್ವಲ್ ಅವರನ್ನು ವಿದೇಶದಿಂದ ವಾಪಸ್ ಕರೆಸಿಕೊಳ್ಳುವ ವಿಚಾರದಲ್ಲಿ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.

Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading