Connect with us

ಶಿಕ್ಷಣ

Board Exams-5,8,9 ಮತ್ತು 11ನೇ ತರಗತಿಗಳ ಬೋರ್ಡ್‌ ಪರೀಕ್ಷೆ ಮುಂದುವರಿಸಲು ಹೈಕೋರ್ಟ್‌ ಆದೇಶ

Ad Widget

Ad Widget

Ad Widget

Ad Widget

ಬೆಂಗಳೂರು : ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5,8,9 ಮತ್ತು 11ನೇ ತರಗತಿಗಳಿಗೆ ಬೋರ್ಡ್‌ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್‌ ವಿಭಾಗೀಯ ಪೀಠ ಅನುಮತಿ ನೀಡಿ ಆದೇಶಿಸಿದೆ.

Ad Widget

Ad Widget

Ad Widget

5,8,9 ಹಾಗೂ 11 ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರಕಾರದ ಸುತ್ತೋಲೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಗೊಳಿಸಿತ್ತು. ಆದರೆ ಈ ಆದೇಶ ಪ್ರಶ್ನಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ. ತೀರ್ಪಿನಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ್ದ ಏಕಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠ ರದ್ದುಗೊಳಿಸಿ ಆದೇಶಿದೆ.

Ad Widget

ರಾಜ್ಯ ಸರಕಾರ ಬೋರ್ಡ್ ಪರೀಕ್ಷೆ ನಡೆಸಬಹುದು. ಪರೀಕ್ಷೆ ಪ್ರಕ್ರಿಯೆ ಸ್ಥಗಿತಗೊಂಡ ಹಂತದಿಂದಲೇ ಇದನ್ನು ಮುಂದುವರಿಸಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಬೇಕು ಎಂದು ಸರಕಾರಕ್ಕೆ ಪೀಠ ಸೂಚಿಸಿದೆ. ಈ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ರುಪ್ಸಾ ಹಾಗೂ ಅವರ್ಸ್ ಸ್ಕೂಲ್ ಸಲ್ಲಿಸಿದ ಮನವಿಯನ್ನೂ ಇದೇ ವೇಳೆ ಪೀಠ ತಿರಸ್ಕರಿಸಿದೆ. ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್‌ನಲ್ಲೇ ಕೋರುವಂತೆ ಹೈಕೋರ್ಟ್ ಸ್ಪಷ್ಟನೆ ನೀಡಿದೆ.

Ad Widget

Ad Widget
Click to comment

Leave a Reply

ಶಿಕ್ಷಣ

Balkrishna Borkar-ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ; ಬೌದ್ಧಿಕತೆಯಷ್ಟೇ ದೈಹಿಕ ಕ್ಷಮತೆಯೂ ಮುಖ್ಯ : ಬಾಲಕೃಷ್ಣ ಬೋರ್ಕರ್

Ad Widget

Ad Widget

Ad Widget

Ad Widget

ಪುತ್ತೂರು: ಬೌದ್ಧಿಕತೆಯಷ್ಟೇ ದೈಹಿಕ ಕ್ಷಮತೆಯೂ ಮುಖ್ಯ. ಆಧುನಿಕ ಶಿಕ್ಷಣ ಬೌದ್ಧಿಕತೆಗಷ್ಟೇ ಆದ್ಯತೆ ನೀಡುತ್ತಿದೆ. ಆದರೆ ದೈಹಿಕ ದೃಢತೆ ಸಾಧಿಸುವುದು ಅತ್ಯಂತ ಅಗತ್ಯ. ಕ್ರೀಡೆಗಳಲ್ಲಿ ತೊಡಗುವುದರಿಂದ ನಾವು ದೈಹಿಕವಾಗಿಯೂ ಸಮರ್ಥರೆನಿಸಿಕೊಳ್ಳಬಹುದು. ಶಾಲಾ ಕಾಲೇಜುಗಳಲ್ಲಿ ಅಧ್ಯಯನ ನಡೆಸುವ ವಿದ್ಯಾರ್ಥಿಗಳು ಅವಕಾಶಗಳನ್ನು ಸೃಜಿಸಿಕೊಂಡು ದೇಹಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಬಾಲಕೃಷ್ಣ ಬೋರ್ಕರ್ ಹೇಳಿದರು.

Ad Widget

Ad Widget

Ad Widget

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ 2024 ಅನ್ನು ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ ಉದ್ಘಾಟಿಸಿ ಮಂಗಳವಾರ ಮಾತನಾಡಿದರು.

Ad Widget

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಜೀವನದಲ್ಲಿ ಹಠ ಸಾಧನೆ ಮುಖ್ಯ. ಸಾವರ್ಕರ್ ಅವರಂತಹ ಮಹಾನ್ ಪುರುಷರು ಹಠ ಸಾಧನೆಗೆ ಉತ್ಕೃಷ್ಟ ಮಾದರಿಯಾಗಿ ನಮ್ಮ ಮುಂದಿದ್ದಾರೆ. ಅಂತಹವರನ್ನು ಆದರ್ಶವಾಗಿರಿಸಿಕೊಂಡು ಹಠದಲ್ಲಿ ಮುನ್ನಡೆಯಬೇಕು. ಕ್ರೀಡಾಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗುವುದರಿಂದ ಅಂತಹ ಹಠಸಾಧನೆ ಸಾಧ್ಯ ಎಂದರು.

Ad Widget

Ad Widget

ವೇದಿಕೆಯಲ್ಲಿ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ, ಕಾಲೇಜಿನ ಐಕ್ಯುಎಸಿ ಘಟಕದ ಸಂಯೋಜಕ ಚಂದ್ರಕಾAತ ಗೋರೆ, ವಿಶ್ರಾಂತ ದೈಹಿಕ ಶಿಕ್ಷಣ ನಿರ್ದೇಶಕ ವಿಶ್ವೇಶ್ವರ ಭಟ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಮಹಿಮಾ ಹೆಗಡೆ ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಿಯಾಲ್ ಆಳ್ವ ಸ್ವಾಗತಿಸಿದರು. ವಿದ್ಯಾರ್ಥಿನಿ ಪಂಚಮಿ ಬಾಕಿಲಪದವು ವಂದಿಸಿದರು. ವಿದ್ಯಾರ್ಥಿನಿ ಚೈತನ್ಯಾ ಸಿ ಕಾರ್ಯಕ್ರಮ ನಿರ್ವಹಿಸಿದರು.

Ad Widget

Ad Widget

Ad Widget
Continue Reading

ಶಿಕ್ಷಣ

Out of syllabus-ಔಟ್ ಆಫ್ ಸಿಲೆಬಸ್ ಪ್ರಶ್ನೆ – ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ : ಗೊಂದಲ ನಿವಾರಿಸಲು ಸರಕಾರ ತೆಗೆದುಕೊಂಡ ನಿರ್ಧಾರ ಏನು ಗೊತ್ತೇ ?

Ad Widget

Ad Widget

Ad Widget

Ad Widget

ಬೆಂಗಳೂರು: ಇದೇ ಏಪ್ರಿಲ್ 18 ಮತ್ತು 19ರಂದು ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಉತ್ತರ ಪತ್ರಿಕೆಗಳಲ್ಲಿ ಸಿಲೆಬಸ್ ಪ್ರಶ್ನೆಗಳನ್ನು ಬಿಟ್ಟು, ಪಠ್ಯದ ಪ್ರಶ್ನೆಗಳನ್ನು ಮಾತ್ರ ಮೌಲ್ಯ ಮಾಪನ ಮಾಡಲು ಸರ್ಕಾರ ತೀರ್ಮಾನಿಸಿದೆ.

Ad Widget

Ad Widget

Ad Widget

2023-24 ನೇ ಸಾಲಿನಲ್ಲಿ ನಡೆದ ಸಿಇಟಿ ಪ್ರಶ್ನೆ ಪತ್ರಿಕೆಯಲ್ಲಿ 4 ವಿಷಯಗಳಿಗೆ ಸಂಬಂಧಿಸಿದಂತೆ 50 ಔಟ್‌ ಆಫ್ ಸಿಲೆಬಸ್ ಪ್ರಶ್ನೆಗಳು ಬಂದಿದೆ ಎಂದು ತಜ್ಞರ ಸಮಿತಿ ವರದಿಯಲ್ಲಿ ತಿಳಿಸಿತ್ತು. ಭೌತಶಾಸ್ತ್ರ ವಿಷಯದಲ್ಲಿ 9 ಪ್ರಶ್ನೆಗಳು, ರಸಾಯನ ಶಾಸ್ತ್ರ ವಿಷಯದಲ್ಲಿ 15 ಪ್ರಶ್ನೆಗಳು ಗಣಿತ ವಿಷಯದಲ್ಲಿ 15 ಪ್ರಶ್ನೆಗಳು ಮತ್ತು ಜೀವಶಾಸ್ತ್ರ ವಿಷಯದಲ್ಲಿ 11 ಪ್ರಶ್ನೆಗಳು ಸಿಲೆಬಸ್‌ ಬಿಟ್ಟು ಬಂದಿದ್ದವು.

Ad Widget

ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳಿಂದಾಗಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಮರು ಪರೀಕ್ಷೆ ನಡೆಸಬೇಕು, ಇಲ್ಲವೇ ಕೃಪಾಂಕ ನೀಡಬೇಕು ಎಂದು ವಿದ್ಯಾರ್ಥಿ ಸಂಘಟನೆಗಳು, ಪೋಷಕರು ಮತ್ತು ಕಾಲೇಜು ಆಡಳಿತ ಮಂಡಳಿಗಳು ಒತ್ತಾಯಿಸಿದ್ದವು. ಮೂರು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಈ ಬಾರಿ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು.
ವಿದ್ಯಾರ್ಥಿಗಳ ಹಾಗೂ ಪೋಷಕರ ಒತ್ತಡ ಒತ್ತಾಯದ ಬಳಿಕ ತಜ್ಞರ ಸಮಿತಿ ರಚಿಸಿ ಒಂದು ವಾರದಲ್ಲಿ ವರದಿ ಪಡೆದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಭರವಸೆ ನೀಡಿತ್ತು. ಬಳಿಕ ಈ ಆರೋಪವನ್ನು ಪರಿಶೀಲಿಸಿ ವರದಿ ನೀಡಲು ಆಯಾ ವಿಷಯವಾರು ತಜ್ಞರನ್ನು ಒಳಗೊಂಡ ನಾಲ್ಕು ಸಮಿತಿಗಳನ್ನು ರಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು.

Ad Widget

Ad Widget

ತಜ್ಞರ ಸಮಿತಿಯ ಶಿಫಾರಸ್ಸಿನಂತೆ ವಿದ್ಯಾರ್ಥಿಗಳಿಗೆ ಮತ್ತೆ ಮರು ಪರೀಕ್ಷೆ ಮಾಡುವ ಬದಲು ಆ ಪ್ರಶ್ನೆಗಳನ್ನು ಹೊರತು ಪಡಿಸಿ ಉಳಿದ ಪ್ರಶ್ನೆಗಳ ಉತ್ತರಗಳನ್ನು ಮಾತ್ರ ಪರಿಗಣನೆಗೆ ತೆಗೆದುಕೊಂಡು ಮೌಲ್ಯಮಾಪನ ಮಾಡುವುದಾಗಿ ಇದೀಗ ಇಲಾಖೆಯ ಸ್ಪಷ್ಟನೆ ತಿಳಿಸಿದೆ.

Ad Widget

Ad Widget

Ad Widget

ಪಠ್ಯೇತರ ಪ್ರಶ್ನೆಗಳನ್ನು ಹೊರತುಪಡಿಸುವ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯ ಮತ್ತು ಪರೀಕ್ಷಾ ವ್ಯವಸ್ಥೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದೆ. ಸರಿಯಾದ ಕೀ ಉತ್ತರಗಳನ್ನು ಒದಗಿಸದ ಎರಡು ಪ್ರಶ್ನೆಗಳಿಗೆ ಗ್ರೇಸ್ ಅಂಕಗಳನ್ನು ನೀಡಲೂ ತೀರ್ಮಾನಿಸಿದೆ.

ಭವಿಷ್ಯದಲ್ಲಿ ಇಂತಹ ಅವಘಡಗಳನ್ನು ನಿಯಂತ್ರಿಸಲು ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವಾಗ ಎಚ್ಚರ ವಹಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚನೆ ನೀಡಲಾಗಿದೆ. ಪಠ್ಯೇತರ ಪ್ರಶ್ನೆಗಳು ಇನ್ನೂ ಹೆಚ್ಚು ಎಂದು ವಿದ್ಯಾರ್ಥಿಗಳು ವಾದಿಸುತ್ತಾರೆ. ಮೊದಲ ವರ್ಷದ ಪಿಯುಸಿಯ ಪಠ್ಯದ ಪ್ರಶ್ನೆಗಳನ್ನು ಕೇಳಲಾಗಿದ್ದು, ಇದು ಪಠ್ಯೇತರ ಅಲ್ಲ ಎಂದು ಎಂದು ತಜ್ಞರ ಸಮಿತಿ ಅಭಿಪ್ರಾಯಪಟ್ಟಿದೆ.

Continue Reading

ಶಿಕ್ಷಣ

Senior students-ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Ad Widget

Ad Widget

Ad Widget

Ad Widget

ಪುತ್ತೂರು: ಕಲಿತು ಹೊರಬಂದ ಪ್ರತಿಯೊಬ್ಬ ಹಿರಿಯ ವಿದ್ಯಾರ್ಥಿಯೂ ಆ ವಿದ್ಯಾ ಸಂಸ್ಥೆಯ ರಾಯಭಾರಿಯಾಗುವುದರ ಜತೆಯಲ್ಲಿ ಅಲ್ಲಿನ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡುತ್ತಾ ಸಂಸ್ಥೆಯ ಬೆಳವಣಿಗೆಗೆ ಸಹಾಯಕರಾಗಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು.

Ad Widget

Ad Widget

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಶ್ರೀರಾಮ ಸಭಾಭವನದಲ್ಲಿ ನಡೆದ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತಾಡಿದರು. ಸಂಸ್ಥೆಯಲ್ಲಿ ಕಲಿಯುವ ಕಿರಿಯ ವಿದ್ಯಾರ್ಥಿಗಳ ಹಿತಕ್ಕಾಗಿ ಕ್ಯಾಂಪಸ್ ನೇಮಕಾತಿ ಹಾಗೂ ತಂತ್ರಜ್ಞಾನ ವಿನಿಮಯ ಕಾರ್ಯಗಳಲ್ಲಿ ಹಿರಿಯ ವಿದ್ಯಾರ್ಥಿಗಳು ಸಹಕಾರಿಗಳಾಗಬೇಕು ಎಂದರು.

Ad Widget

ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ನರಸಿಂಹ ಪೈ ಮಾತನಾಡಿ ಇದುವರೆಗೆ ಕಲಿತು ಹೊರಹೋದ ಎಲ್ಲಾ ಹಿರಿಯ ವಿದ್ಯಾರ್ಥಿಗಳನ್ನು ಸಂಪರ್ಕಿಸುವ ಕಾರ್ಯ ನಡೆಯುತ್ತಿದ್ದು ಶೀಘ್ರದಲ್ಲಿಯೇ ದೊಡ್ಡ ಮಟ್ಟದ ಸಹಮಿಲನ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದರು.

Ad Widget

Ad Widget

ಈ ಸಂದರ್ಭದಲ್ಲಿ ತನ್ನ ಅನಿಸಿಕೆಯನ್ನು ವ್ಯಕ್ತಪಡಿಸಿದ ಕಾಲೇಜಿನ ಹಿರಿಯ ವಿದ್ಯಾರ್ಥಿ ಪ್ರಸ್ತುತ ಎಂಐಟಿ ಮಣಿಪಾಲದಲ್ಲಿ ಅಸೋಸಿಯೇಟೆಡ್ ಪ್ರೊಫೆಸರ್ ಆಗಿರುವ ಡಾ.ರಾಮಕೃಷ್ಣ.ಎಂ ಕಾಲೇಜು ಜೀವನದ ನೆನಪನ್ನು ಮೆಲುಕು ಹಾಕಿದರು. ಹಿರಿಯ ವಿದ್ಯಾರ್ಥಿ ಸಮ್ಮಿಲನವು ಒಂದು ಅವಿಭಾಜ್ಯ ಕಾರ್ಯಕ್ರಮವಾಗಬೇಕು ಇದರಲ್ಲಿ ಎಲ್ಲ ಹಿರಿಯ ವಿದ್ಯಾರ್ಥಿಗಳೂ ಭಾಗವಹಿಸಬೇಕು ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಸ್ವಾಗತಿಸಿ ಪ್ರಸ್ತಾವನೆಗೈದರು. ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಸಂಚಾಲಕ ಪ್ರೊ.ನವೀನ್‌ಕೃಷ್ಣ ವಂದಿಸಿದರು.

Ad Widget

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading