Connect with us

ಕಾರ್ಯಕ್ರಮಗಳು

G.L. Acharya Jewellers-ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್‌ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ”

Ad Widget

Ad Widget

Ad Widget

Ad Widget

ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ಏ. 1 ರಿಂದ ಏ. 7ರವರೆಗೆ ಆಯೋಜಿಸಿದೆ. ಗ್ರಾಹಕರಿಗೆ ವಜ್ರದ ಆಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಅದ್ಭುತ ರಿಯಾಯಿತಿಗಳನ್ನು ಪ್ರಕಟಿಸಲಾಗಿದೆ. ಚಿನ್ನಾಭರಣ ಖರೀದಿಗೆ ಪ್ರತಿ ಗ್ರಾಂಗೆ ರೂ. 150/-ರವರೆಗೆ ರಿಯಾಯಿತಿ, ವಜ್ರಾಭರಣಗಳ ಮೇಲೆ ರೂ.7,000/- ವರೆಗೆ ಪ್ರತಿ ಕ್ಯಾರೆಟ್ ಮೇಲೆ ರಿಯಾಯಿತಿ ಹಾಗೂ ಬೆಳ್ಳಿಯ ಆಭರಣಗಳ ಮೇಲೆ ರೂ.2000/- ಪ್ರತಿ ಕೆಜಿಗೆ ರಿಯಾಯಿತಿ ನೀಡಲಾಗುವುದು.

Ad Widget

Ad Widget

Ad Widget

ಎಲ್ಲಾ ವಯೋಮಿತಿಯ ಗ್ರಾಹಕರಿಗೆ ತಕ್ಕಂತೆ ಚಿನ್ನ ಹಾಗೂ ವಜ್ರಾಭರಣಗಳ ಆಯ್ಕೆ ಲಭ್ಯವಿದೆ. ಮಕ್ಕಳ, ಮಹಿಳೆಯರ ಹಾಗೂ ಪುರುಷರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ಚಿನ್ನ ಹಾಗೂ ವಜ್ರಾಭರಣಗಳ ಸಂಗ್ರಹವಿದ್ದು ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ. ಪುರಾತನ ಆಭರಣಗಳ ವಿಭಾಗ “ಪ್ರಾಚಿ”ಯಲ್ಲಿ ಗ್ರಾಹಕರ ಮನಸೂರೆಗೊಳ್ಳುವ ವಿನೂತನ ವಿನ್ಯಾಸದ ಆ್ಯಂಟಿಕ್ ಚಿನ್ನಾಭರಣಗಳ ವಿವಿಧ ವಿನ್ಯಾಸಗಳು ಲಭ್ಯವಿದೆ. ಅದೇ ರೀತಿ “ಗ್ಲೋ” ವಜ್ರಾಭರಣ ವಿಭಾಗದಲ್ಲಿ ಸುಮಾರು 2,000ಕ್ಕೂ ಮಿಕ್ಕಿದ ಡಿಸೈನ್‌ಗಳಲ್ಲಿ ಪ್ರಜ್ವಲಿಸುವ ಅದ್ಭುತ ವಜ್ರಾಭರಣಗಳ ಸಂಗ್ರಹವಿದೆ. “ಪಾರ್ಥ” ಪುರುಷರ ಚಿನ್ನಾಭರಣಗಳ ವಿಭಾಗದಲ್ಲಿ ಪುರುಷರ ಕರ್ಟಿಯರ್ ಕಡ, ಲೇಸರ್ ಕಟ್ಟಿಂಗ್ ಕಡ, ಹೊಸ ವಿನ್ಯಾಸದ ಕ್ಯೂಬನ್ ಚೈನ್ಸ್, ಇಂಡೋ ಇಟಲಿಯನ್ ಚೈನ್ಸ್, ನವರತ್ನ ಉಂಗುರ, ವಿವಿಧ ವಿನ್ಯಾಸದ ಆ್ಯಂಟಿಕ್ ಪದಕ, ಕಾಸ್ಟಿಂಗ್ ಪದಕ, ಹೊಸ ವಿನ್ಯಾಸದ ವಾಚ್ ಚೈನ್ಸ್ ಅಲ್ಲದೇ ಇನ್ನು ಹಲವು ವಿನೂತನ ವಿನ್ಯಾಸದ ಆಭರಣಗಳ ಸಂಗ್ರಹವಿದೆ.

Ad Widget

ವಿಶ್ವಾಸ, ಪರಿಶುದ್ಧತೆ, ಪರಂಪರೆ, ನವನವೀನ ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸದಾ ಸಂಸ್ಥೆ ಬದ್ಧವಾಗಿದ್ದು, ಪರಿಪೂರ್ಣತೆ ಮತ್ತು ಅಸಾಧಾರಣ ಕರಕುಶಲತೆಯ ನೈಪುಣ್ಯತೆಯಿಂದ ಹೊರಹೊಮ್ಮಿರುವ ಈ ವಿಶಿಷ್ಟ ಸಂಗ್ರಹ ಎಲ್ಲರ ಕಣ್ಮನ ಸೆಳೆಯುತ್ತದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Ad Widget

Ad Widget
Click to comment

Leave a Reply

ಸ್ಥಳೀಯ

“Creative Book House”-ಮೂಡಬಿದಿರೆಯಲ್ಲಿ ಮೇ 5 ರಂದು “ಕ್ರಿಯೇಟಿವ್ ಪುಸ್ತಕಮನೆ” ಶುಭಾರಂಭ

Ad Widget

Ad Widget

Ad Widget

Ad Widget

ಕ್ರಿಯೇಟಿವ್ ಪುಸ್ತಕ ಮನೆ ಮೂಡಬಿದಿರೆಯ ಪಂಚರತ್ನ ಕಟ್ಟಡದಲ್ಲಿ ಮೇ 5ರಂದು ಬೆಳಗ್ಗೆ 10.00ಗಂಟೆಗೆ ಶುಭಾರಂಭಗೊಳ್ಳಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರು ಹಾಗೂ ಯುವರಾಜ್ ಜೈನ್, ಅಧ್ಯಕ್ಷರು, ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳು, ಕಲ್ಲಬೆಟ್ಟು ಇವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

Ad Widget

Ad Widget

Ad Widget

ಈಗಾಗಲೇ ಕಾರ್ಕಳದಲ್ಲಿ ‘ಪುಸ್ತಕ ಮನೆ’ಯು ಪುಸ್ತಕ ಪ್ರೇಮಿಗಳ, ಸಾಹಿತ್ಯಾಸಕ್ತರ ಮನಗೆದ್ದಿದ್ದು ಕರಾವಳಿಯಲ್ಲಿ ಸುಪ್ರಸಿದ್ಧ ಪುಸ್ತಕ ಮಳಿಗೆಯಾಗಿ ಗುರುತಿಸಿಕೊಂಡಿದೆ. ಪುಸ್ತಕ ಪ್ರಕಾಶನವು ಸೇರಿದಂತೆ ‘ಪುಸ್ತಕ ಸಂತೆ’, ಸರಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಪುಸ್ತಕಗಳನ್ನು ಒದಗಿಸುವ ‘ಪುಸ್ತಕ ಪೋಷಕ ಯೋಜನೆ’, ‘ಮೊಬೈಲ್ ಬಿಡಿ ಪುಸ್ತಕ ಹಿಡಿ’ ಇಂತಹ ಹಲವಾರು ಯೋಜನೆಗಳನ್ನು ಕಾರ್ಯಗತ ಮಾಡಿ ಜನಮಾನಸದಲ್ಲಿ ಗುರುತಿಸಿಕೊಂಡಿದೆ.

Ad Widget

ಇದೀಗ ಪುಸ್ತಕ ಮನೆಯ ಎರಡನೇ ಶಾಖೆಯು ಮೂಡಬಿದಿರೆಯಲ್ಲಿ ಶುಭಾರಂಭಗೊಳ್ಳುತ್ತಿದ್ದು, ಪುಸ್ತಕಗಳು ಹಾಗೂ ಎಲ್ಲಾ ರೀತಿಯ ಉಡುಗೊರೆಗಳ ಮೇಲೆ ವಿಶೇಷ ರಿಯಾಯಿತಿ ಇದ್ದು, ಎಲ್ಲರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.

Ad Widget

Ad Widget
Continue Reading

ಸ್ಥಳೀಯ

Dharmasthala-ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

Ad Widget

Ad Widget

Ad Widget

Ad Widget

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಮದುವೆ ಮನೆಯ ಸಂಭ್ರಮ-ಸಡಗರ. ಸಂಜೆ ಗಂಟೆ 645ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 39 ಜೊತೆ ಅಂತರ್ಜಾತಿಯ ವಿವಾಹ ಸೇರಿದಂತೆ ಒಟ್ಟು 123 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು.

Ad Widget

Ad Widget

Ad Widget

ಬುಧವಾರ ಬೆಳಿಗ್ಯೆಯಿಂದಲೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ಬೀಡಿನಲ್ಲಿ ವಧುವಿಗೆ ಸೀರೆ, ರವಿಕೆ ಮತ್ತು ವರನಿಗೆ ಧೋತಿ, ಶಾಲು ವಿತರಿಸಿದರು. ಸಂಜೆ 6 ಗಂಟೆಯಿಂದ ವಧೂ-ವರ ಜೋಡಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ಸಭಾಭವನಕ್ಕೆ ಹೋದರು.

Ad Widget

ಮುಹೂರ್ತಕ್ಕೆ ಅರ್ಧ ಗಂಟೆ ಮುಂಚಿತವಾಗಿ ಹೆಗ್ಗಡೆ ದಂಪತಿ ಮತ್ತು ಚಲನಚಿತ್ರ ನಟ ದೊಡ್ಡಣ್ಣ ದಂಪತಿ ಮಂಗಳಸೂತ್ರ ವಿತರಿಸಿದರು. ಆಯಾ ಜಾತಿ-ಮತ ಸಂಪ್ರದಾಯದಂತೆ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು.

Ad Widget

Ad Widget

ಸಂಜೆ ಗಂಟೆ: 6.45ಕ್ಕೆ ಸರಿಯಾಗಿ ಗೋಧೂಳಿಲಗ್ನ ಸುಮುಹೂರ್ತದಲ್ಲಿ ವೇದಿಕೆಯಿಂದ ವೇದ-ಮಂತ್ರ ಘೋಷ ಪಠಣದೊಂದಿಗೆ ವರನು ವಧುವಿಗೆ ಮಂಗಳಸೂತ್ರ ಧಾರಣೆ ಮಾಡಿದರು.

Ad Widget

Ad Widget

Ad Widget

ಗಣ್ಯರ ಹಿತವಚನ:
ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು : ಚಲನಚಿತ್ರನಟ ದೊಡ್ಡಣ್ಣ
ತಾಯಿ-ತಂದೆ ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ ನೀಡಿ ಸಮಾಜದ ಸಜ್ಜನರಾಗಿ, ಉತ್ತಮ ಚಾರಿತ್ರö್ಯವಂತರಾಗಿ ಮತ್ತು ಸಭ್ಯ-ಸುಸಂಸ್ಕೃತ ನಾಗರಿಕರಾಗಿ ರೂಪಿಸಬೇಕು. ತನ್ಮೂಲಕ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗಬೇಕು ಎಂದು ಚಲನಚಿತ್ರನಟ ದೊಡ್ಡಣ್ಣ ನೂತನ ದಂಪತಿಗಳಿಗೆ ಕಿವಿಮಾತು ಹೇಳಿದರು.
ತಾಯಿ-ತಂದೆ ಮಾಡಿದ ದಾನ-ಧರ್ಮ, ಸತ್ಕಾರ್ಯದ ಪುಣ್ಯ ಅವರ ಮಕ್ಕಳಿಗೂ ಲಭಿಸುತ್ತದೆ. ಯಾವುದೇ ನೀತಿ, ಧರ್ಮ, ಸಂಸ್ಕಾರ ಕಲಿಯಲು ವಯಸ್ಸಿನ ಇತಿ-ಮಿತಿ ಇಲ್ಲ. ರಾಮಾಯ ಮತ್ತು ಮಹಾಭಾರತದಂತಹ ಪೌರಾಣಿಕ ಕೃತಿಗಳ ಅಧ್ಯಯನದೊಂದಿಗೆ ಸ್ವಾಧ್ಯಾಯ ಮಾಡಬೇಕು. ದೇವಸ್ಥಾನಕ್ಕೆ ಹೋಗುವಾಗ ಸಂಚಾರಿದೂರವಾಣಿ ಕೊಂಡುಹೋಗಬಾರದು. ದೇವರ ಎದುರು ಕಣ್ಣು ಮುಚ್ಚಬಾರಾದು. ತೆರೆದ ಕಣ್ಣುಗಳಿಂದ ಏಕಾಗ್ರತೆಯೊಂದಿಗೆ ದೇವರ ದರ್ಶನ, ಧ್ಯಾನ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು.

ಪ್ರೀತಿ-ವಿಶ್ವಾಸ, ಪರೋಪಕಾರ ಸೇವಾಕಳಕಳಿ, ಸಾಮಾಜಿಕ ಬದ್ಧತೆ ಮೊದಲಾದ ಮಾನವೀಯಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಸಾಮೂಹಿಕ ವಿವಾಹ ಅಂದರೆ ಸರಳ ವಿವಾಹ. ಸಾಮೂಹಿಕ ವಿವಾಹದಿಂದಾಗಿ ವರದಕ್ಷಿಣೆ ಪಿಡುಗು ಮತ್ತು ಮದುವೆಗಾಗುವ ದುಂದುವೆಚ್ಚ ಕಡಿಮೆಯಾಗಿದೆ. ನೂತನ ದಂಪತಿಗಳು ಸತ್ಸಂಗ ಮಾಡಿ ಸಂಸಾರವನ್ನು ಹೊಣೆಗಾರಿಕೆ ಮತ್ತು ಜವಬ್ದಾರಿಯಿಂದ ಅರ್ಥಪೂರ್ಣವಾಗಿ ನಿರ್ವಹಿಸಬೇಕು. ಮದುವೆಯ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಸಂಸ್ಕಾರಯುತ ಜೀವನ ನಡೆಸಬೇಕು. ಗ್ರಾಮೀಣ ಪ್ರದೇಶವನ್ನು ತ್ಯಜಿಸಿ ನಗರಕ್ಕೆ ವಲಸೆ ಹೋಗುವುದನ್ನು ತಡೆಯಬೇಕು ಎಂದು ಕಿವಿಮಾತು ಹೇಳಿದರು.

ಸಾಮೂಹಿಕ ವಿವಾಹಕ್ಕೆ ಅನೇಕ ಮಂದಿ ದಾನಿಗಳು ಸೀರೆ, ಮಂಗಳಸೂತ್ರ ಹಾಗೂ ಹೂಮಾಲೆಯನ್ನು ಉದಾರವಾಗಿ ದಾನ ನೀಡಿದ್ದಾರೆ. ನಿರೀಕ್ಷೆಗಿಂತಲೂ ಮಿಗಿಲಾಗಿ ದಾನ ಹರಿದುಬರುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಶಾಂತಾ ದೊಡ್ಡಣ್ಣ ಮತ್ತು ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು. ಹರ್ಷೇಂದ್ರಕುಮಾರ್ ಸ್ವಾಗತಿಸಿದರು. ರತ್ನವರ್ಮ ಜೈನ್ ಧನ್ಯವಾದವಿತ್ತರು. ಶ್ರೀನಿವಾಸ ರಾವ್ ಧರ್ಮಸ್ಥಳ ಮತ್ತು ಪೂಜಾ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು. ನೂತನ ದಂಪತಿಗಳು ದೇವರ ದರ್ಶನ ಮಾಡಿ ಅನ್ನಪೂರ್ಣ ಭೋಜನಾಲಯದಲ್ಲಿ ಮದುವೆ ಊಟ ಮಾಡಿ ಊರಿಗೆ ಹೋದರು.

ಮುಖ್ಯಾಂಶಗಳು:
* ಮದುವೆಗಾಗುವ ದುಂದುವೆಚ್ಚ ಮತ್ತು ವರದಕ್ಷಿಣೆ ತಡೆಗಟ್ಟಲು ೧೯೭೨ ರಲ್ಲಿ ೮೮ ಜೊತೆ ಮದುವೆಯೊಂದಿಗೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಚಿತ ಸಾಮೂಹಿಕ ವಿವಾಹ ಪ್ರಾರಂಭಿಸಿದರು.
* ಪ್ರತಿವರ್ಷ ಎಪ್ರಿಲ್/ಮೇ ತಿಂಗಳಿನಲ್ಲಿ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ ನಡೆಸಲಾಗುತ್ತದೆ.
* ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಮತ್ತು ಮಂಗಳಸೂತ್ರ ನೀಡಿ ಮದುವೆಯ ಎಲ್ಲಾ ವೆಚ್ಚವನ್ನು ಧರ್ಮಸ್ಥಳದ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುತ್ತದೆ.
* ಕಳೆದ ವರ್ಷದವರೆಗೆ 12777 ಜೊತೆ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಈವರೆಗೆ ಒಂದು ಕೂಡಾ ವಿಚ್ಛೇದನ ಪ್ರಕರಣ ವರದಿಯಾಗಿಲ್ಲ ಎಂಬುದು ಗಮನಿಸಬೇಕಾದ ಅಂಶ.
* ದೇವರ ದರ್ಶನ ಮಾಡುವಾಗ ಕಣ್ಣುಮುಚ್ಚಬಾರದು : ದೊಡ್ಡಣ್ಣ
* ಅಪಘಾತದಲ್ಲಿ ಕಾಲಿಗೆ ಪೆಟ್ಟಾದ ಗದಗದ ಪ್ರವೀಣ ಖನ್ನೂರು ಮತ್ತು ಕವಿತಾ ಗಿಡಕೆಂಚಣ್ಣವರ್ ಪರಸ್ಪರ ಪ್ರೀತಿಸಿ ಮದುವೆಗೆ ಒಪ್ಪಿದ್ದು ಅವರಿಗೆ 12900ನೇ ಜೋಡಿ ಎಂಬ ವಿಶೇಷ ಮಾನ್ಯತೆಯೊಂದಿಗೆ ಪ್ರತ್ಯೇಕ ವೇದಿಕೆ ನಿರ್ಮಿಸಲಾಯಿತು.
* ಸಾಂಪ್ರದಾಯಿಕ ಶೋಭಾನೆ ಹಾಡುಗಳು ಮದುವೆಗೆ ವಿಶೇಷ ಶೋಭೆ ನೀಡಿದವು.
* ಧರ್ಮಸ್ಥಳದ ವತಿಯಿಂದ ನೂತನ ದಂಪತಿಗಳಿಗೆ ವಿಶೇಷ ಉಡುಗೊರೆ ನೀಡಿ ಸತ್ಕರಿಸಲಾಯಿತು
* ಧರ್ಮ, ಅರ್ಥ ಮತ್ತು ಕಾಮದಲ್ಲಿ ಪರಸ್ಪರ ಪ್ರೀತಿ ವಿಶ್ವಾಸದಿಂದ ಸಹಚರರಾಗಿ, ಯಾವುದೇ ದುರಭ್ಯಾಸಕ್ಕೆ ಬಲಿಯಾಗದೆ ಸಾರ್ಥಕ ಜೀವನ ನಡೆಸುವುದಾಗಿ ದಾಂಪತ್ಯದೀಕ್ಷೆಯನ್ನು ಸ್ವೀಕರಿಸಿದರು.
* ಅನೇಕ ಮಠ-ಮಂದಿರಗಳು ಹಾಗೂ ರೋಟರಿ ಕ್ಲಬ್ ನಂತಹ ಸೇವಾ ಸಂಸ್ಥೆಗಳು ಇದನ್ನು ಮಾದರಿ ಕಾರ್ಯಕ್ರಮ ಎಂದು ಮಾನ್ಯತೆ ನೀಡಿ ಅಲ್ಲಲ್ಲಿ ಸಾಮೂಹಿಕ ವಿವಾಹ ನಡೆಸುತ್ತಿರುವುದು ತನಗೆ ಸಂತೋಷ ನೀಡುತ್ತಿದೆ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.
* ಸಾಮೂಹಿಕ ವಿವಾಹದಲ್ಲಿ ಮದುವೆಯಾದ ದಂಪತಿಗೆ ವಿವಾಹ ನೋಂದಣಿ ಕಚೇರಿಯ ಅಧಿಕಾರಿಗಳು ಅಧೀಕೃತ ಪ್ರಮಾಣಪತ್ರ ನೀಡುತ್ತಾರೆ.

Continue Reading

ಕಾರ್ಯಕ್ರಮಗಳು

Sringeri Sri-ಕಹಳೆ ನ್ಯೂಸ್ ಮುಖ್ಯಸ್ಥರ ಹೊಸಮೂಲೆ ಮನೆಗೆ ಶೃಂಗೇರಿ ಶ್ರೀ ಜಗದ್ಗುರುಗಳ ಭೇಟಿ – ಪಾದಪೂಜೆ

Ad Widget

Ad Widget

Ad Widget

Ad Widget

ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿರುವ ಕಹಳೆ ನ್ಯೂಸ್ ವಾಹಿನಿಯ ಮುಖ್ಯಸ್ಥರು ಹಾಗೂ ಪ್ರಧಾನ ಸಂಪಾದಕರಾದ ಶ್ಯಾಮ ಸುದರ್ಶನ ಭಟ್ ಅವರ ಹೊಸಮೂಲೆ ಮನೆಗೆ ಶ್ರೀ ದಕ್ಷಿಣಾಮ್ಮಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರರಾದ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರ ಕರಕಮಲಸಂಜಾತರಾದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭೇಟಿ ನೀಡಿ‌ ಹರಸಿದರು.

Ad Widget

Ad Widget

Ad Widget

ಪೂಜ್ಯ ಜಗದ್ಗುರುಗಳಿಗೆ ಮನೆಯ ಯಜಮಾನರಾದ ಗೋಪಾಲಕೃಷ್ಣ ಭಟ್ ದಂಪತಿಗಳು ಪಾದ ಪೂಜೆಯನ್ನು ನೆರವೇರಿಸಿದರು. ವೇ.ಮೂ.‌ ಕೊಂಡಗೆ ಈಶ್ವರ ಭಟ್ ಅವರು ವೈದಿಕ ವಿಧಿಯನ್ನು ನೆರವೇರಿಸಿದರು.

Ad Widget

ಶೃಂಗೇರಿ ಮಠದ ಆಡಳಿತಾಧಿಕಾರಿಗಳಾದ ಮುರಳಿಯವರು ಉಪಸ್ಥಿತರಿದ್ದರು.

Ad Widget

Ad Widget

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸುದರ್ಶನ್ ಮೂಡಬಿದಿರೆ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಪಿ.ಜಿ.‌ ಜಗನ್ನಿವಾಸ್ ರಾವ್, ಉಪ್ಪಿನಂಗಡಿ ಸಿ.ಎ.‌ಬ್ಯಾಂಕ್ ಅಧ್ಯಕ್ಷರಾದ ಕೆ.ವಿ. ಪ್ರಸಾದ್, ಡಾ. ರವಿನಾರಾಯಣ್ ಸಿ., ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ತಿಮ್ಮಪ್ಪ ಗೌಡ ಇಳಂತಿಲ ಭಾಗಿಯಾಗಿದ್ದರು.

Ad Widget

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading