Connect with us

ಮಂಗಳೂರು

Congress roadshow-ಉಳ್ಳಾಲದಲ್ಲಿ ರಾರಾಜಿಸಿದ ಕಾಂಗ್ರೆಸ್ ರೋಡ್ ಶೋ; ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಜನತೆ

Ad Widget

Ad Widget

Ad Widget

Ad Widget

ಉಳ್ಳಾಲ: ರೋಡ್ ಶೋ ಮೂಲಕ ನಡೆಸಿದ ಚುನಾವಣಾ ಪ್ರಚಾರ ಕಾರ್ಯ ಕಾಂಗ್ರೆಸ್’ಗೆ ಹೊಸ ಉತ್ಸಾಹ ತುಂಬುವಲ್ಲಿ ಸಫಲವಾಗಿದೆ.

Ad Widget

Ad Widget

Ad Widget

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದು, ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು.

Ad Widget

ಸಂಜೆ ಹೊತ್ತಿಗೆ ಮುಡಿಪು ತಲುಪಿದ ರೋಡ್ ಶೋಗೆ ಕಾರ್ಯಕರ್ತರು, ಮುಖಂಡರು ಭರ್ಜರಿ ಸ್ವಾಗತ ಕೋರಿದರು. ಅಲ್ಲಿ ಪ್ರಚಾರ ಕಾರ್ಯ ನಡೆಸಿ, ಪೂಪಾಡಿಕಲ್ಲು, ನರಿಂಗಾನ, ಕೈರಂಗಳ, ಮಂಜನಾಡಿ, ನಾಟೆಕಲ್ಲು, ಕಿನ್ಯಾ, ಮೀನಾದಿ, ಮಿಂಪ್ರಿ ಮೊದಲಾದ ಪ್ರದೇಶಗಳಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು.

Ad Widget

Ad Widget

ಅಭ್ಯರ್ಥಿ ಬರುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಿದರು. ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಹೂಮಾಲೆ ಹಾಕಿ ಗೆಲುವಿಗೆ ಹಾರೈಸಿದರು. ತೆರೆದ ವಾಹನದಲ್ಲಿ ಅಭ್ಯರ್ಥಿ ತೆರಳುತ್ತಿದ್ದರೆ ತುಂಬಿದ ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಹರ್ಷೋದ್ಘಾರ ಮಾಡಿದರು.

Ad Widget

Ad Widget

Ad Widget
Click to comment

Leave a Reply

ಮಂಗಳೂರು

Heat wave-ಕರಾವಳಿಯಲ್ಲಿ ಮೇ2ರ ವರೆಗೆ ಬಿಸಿಗಾಳಿ ಮುನ್ನೆಚ್ಚರಿಕೆ – ಶಾಖಾಘಾತದಿಂದ ಆರೋಗ್ಯ ಕಾಪಾಡಿಕೊಳ್ಳುವಂತೆ ಹವಾಮಾನ ಇಲಾಖೆ ಸೂಚನೆ

Ad Widget

Ad Widget

Ad Widget

Ad Widget

ಕರಾವಳಿಯಲ್ಲಿ ಮೇ 2ರವರೆಗೆ ಬಿಸಿಗಾಳಿಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದ.ಕ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ಅವಧಿಯಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆ ಸಾಧ್ಯತೆ ಇದೆ.

Ad Widget

Ad Widget

Ad Widget

ಹವಾಮಾನ ವೈಪರೀತ್ಯದ ಪರಿಣಾಮ ಉಷ್ಣ ಅಲೆಗಳಿಂದ ಬಿಸಿಲ ಬೇಗೆ ಹೆಚ್ಚಿದೆ. ಇದು ಜನರನ್ನು ಹೈರಾಣವಾಗಿಸಿದೆ. ಇದು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಮಕ್ಕಳು, ವಯಸ್ಕರು ಮತ್ತು ವೃದ್ಧರು ಎಲ್ಲರನ್ನು ಬಿಸಿಲ ಬೇಗೆ ತಟ್ಟುತ್ತಿದ್ದು, ಆರೋಗ್ಯದ ಕುರಿತು ಎಚ್ಚರದಿಂದ ಇರುವುದು ಅಗತ್ಯವಾಗಿದೆ. ಜನರು ಚಹಾ, ಕಾಫಿ, ತಂಪು ಪಾನೀಯಗಳು, ಮಸಾಲ ಪದಾರ್ಥಗಳನ್ನು ಆದಷ್ಟು ತ್ಯಜಿಸುವುದು ಒಳಿತು ಎಂದು ಹವಾಮಾನ ಇಲಾಖೆ ಹೇಳಿದೆ.
ಸನ್ ಸ್ಟೋಕ್ ಮತ್ತು ಇತರ ಸಮಸ್ಯೆ ಗಳಿಂದ ತಪ್ಪಿಸಿಕೊಳ್ಳಲು ಮಧ್ಯಾಹ್ನ 1ರಿಂದ 3 ಗಂಟೆಯವರೆಗೆ ಬಿಸಿಲಿನಲ್ಲಿ ಹೊರಗೆ ಹೋಗಬಾರದು. ತೆಳುವಾದ, ಹಗುರ ಬಟ್ಟೆಗಳನ್ನು ಧರಿಸಬೇಕು. ನಿರ್ಜಲೀಕರಣವಾಗದಂತೆ ತಡೆಯಲು ಆಗಾಗ ನೀರು ಕುಡಿಯುತ್ತಿರಬೇಕು ಎಂದು ಮುನ್ಸೂಚನೆ ನೀಡಲಾಗಿದೆ.

Ad Widget

ದ.ಕ. ಜಿಲ್ಲೆಯಲ್ಲಿ ಸೋಮವಾರ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಜಿಲ್ಲೆಯ ಬಹುತೇಕ ಕಡೆ ಸಂಜೆ ಹಾಗೂ ರಾತ್ರಿ ಮೋಡದ ವಾತಾವರಣ ಇರಲಿದೆ ಎಂದು ರಾಷ್ಟ್ರೀಯ ಹವಾಮಾನ ಮುನ್ಸೂಚನಾ ಕೇಂದ್ರ ತಿಳಿಸಿದೆ.

Ad Widget

Ad Widget

ಆರೋಗ್ಯ ಕಾಪಾಡಿಕೊಳ್ಳಿ:
ತಾಪಮಾನದ ವೈಪರೀತ್ಯಗಳು ಹೃದಯ ರಕ್ತನಾಳದ ಕಾಯಿಲೆ, ಉಸಿರಾಟದ ಕಾಯಿಲೆ ಮತ್ತು ಮಧುಮೇಹ ಸಂಬಂಧಿತ ಪರಿಸ್ಥಿತಿಗಳಂತಹ ದೀರ್ಘಕಾಲದ ಆರೋಗ್ಯ ಪರಿಸ್ಥಿತಿಗಳನ್ನು ಇನ್ನಷ್ಟು ಹದಗೆಡಿಸಬಹುದು. ನಿರ್ಜಲೀಕರಣ, ಬಿಸಿಲಿನ ಹೊಡೆತ, ಪಾರ್ಶವಾಯು, ಮೂತ್ರಪಿಂಡದ ತೊಂದರೆಗಳು ಮತ್ತು ಚರ್ಮದ ಸೋಂಕುಗಳು ಉಂಟಾಗಬಹುದು.

Ad Widget

Ad Widget

Ad Widget

ಹೇಗೆ ರಕ್ಷಿಸಿಕೊಳ್ಳಬಹುದು:
ಬಾಯಾರಿಕೆಯಾದರೆ ಅತಿಯಾಗಿ ನೀರು ಕುಡಿಯಬೇಕು. ಶುದ್ಧವಾದ ನೀರು, ಎಳನೀರು, ಅಕ್ಕಿ ಗಂಜಿ ಮತ್ತಿತರ ಆರೋಗ್ಯಕ್ಕೆ ಹಿತವಾದ ಪಾನೀಯಗಳನ್ನು ಸೇವನೆ, ಹಣ್ಣುಗಳ ಸೇವನೆ ಉತ್ತಮ. ಮಡಕೆಯಲ್ಲಿ ಸಂಗ್ರಹಿಸಿರುವ ತಣ್ಣನೆಯ ನೀರು ಕುಡಿದರೆ ಒಳ್ಳೆಯದು. ಮಾಂಸಾಹಾರ, ಮಸಾಲೆ ಪದಾರ್ಥಗಳ ಸೇವನೆ ಕಡಿಮೆ ಮಾಡಿ, ಅತಿಯಾಗಿ ಫ್ರಿಜ್ಜಿನಲ್ಲಿಟ್ಟ ತಣ್ಣನೆಯ ನೀರನ್ನು ಕುಡಿಯಬಾರದು.

ಜಾನುವಾರು ಸುರಕ್ಷತೆ ಕೂಡ ಮುಖ್ಯ:
ಮನೆಯಲ್ಲಿ ಸಾಕುವ ನಾಯಿ, ದನಗಳು ಹಾಗೂ ಪಂಜರದಲ್ಲಿ ಸಾಕಿರುವ ಪಕ್ಷಿಗಳ ಆರೋಗ್ಯವೂ ಮುಖ್ಯ. ದಿನವೂ ಕಾಲಕಾಲಕ್ಕೆ ನೀರು, ಆಹಾರ ಮಶಾಖಾಘಾತದಿಂದತ್ತು ಮೇವು ಕೊಡುತ್ತಿರಬೇಕು. ಬೇಸಿಗೆಯಲ್ಲಿ ನಮ್ಮಂತೆಯೇ ಪ್ರಾಣಿಗಳಿಗೂ ಕೂಡ ಜಾಸ್ತಿ ನೀರು ಬೇಕಾಗುತ್ತದೆ ಎಂಬುದನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು.

ದ್ವಿಚಕ್ರ ಸವಾರರೆ ಹುಷಾರ್:
ಬಿಸಿಲಿನಲ್ಲಿ ಸಮಯದಲ್ಲಿ ಸಾಗುವಾಗ ನಿರ್ಜಲೀಕರಣವಾಗುವುದು ಸಹಜ. ಈ ಹೊತ್ತಿನಲ್ಲಿ ನಿರ್ಜಲೀಕರಣದಿಂದ ನಿದ್ದೆಗೆ ಜಾರುವ ಸನ್ನಿವೇಶಗಳು ಉಂಟಾಗಿ ಅಪಘಾತಗಳು ಸಂಭವಿಸಬಹುದು. ಆದಷ್ಟು ಬಿಸಿಲಿನಲ್ಲಿ ಸಂಚರಿಸುವುದನ್ನು ತಪ್ಪಿಸಿ. ಆರೋಗ್ಯ ಕಾಪಾಡಿಕೊಳ್ಳಿ. ಬಸ್ನಲ್ಲಿ ಹೆಚ್ಚಾಗಿ ಸಂಚರಿಸಿ

Continue Reading

ಮಂಗಳೂರು

Adyar Bonda factory-ಅಡ್ಯಾರ್ ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ – ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ

Ad Widget

Ad Widget

Ad Widget

Ad Widget

ಮಂಗಳೂರು : ನಗರದ ಹೊರ ವಲಯದಲ್ಲಿ ಎಳನೀರು ಕುಡಿದು ಹಲವರು ಅಸ್ವಸ್ಥಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈಸೇರಿದ್ದು, ಸಹಜವಾಗಿತ್ತು ಎಂದು ವರದಿಯಲ್ಲಿ ತಿಳಿಸಲಾಗಿದೆ.

Ad Widget

Ad Widget

Ad Widget

ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಏ.9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.

Ad Widget

ಘಟನೆ ನಡೆದ ಎರಡು ದಿನಗಳ ನಂತರ ಇದು ಗಮನಕ್ಕೆ ಬಂದಿದ್ದು, ಆ ದಿನ ಫ್ಯಾಕ್ಟರಿಯಲ್ಲಿ ಸಂಗ್ರಹಿಸಿದ್ದ ಎಳನೀರನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಏ.22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.

Ad Widget

Ad Widget

ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟೀರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.

Ad Widget

Ad Widget

Ad Widget

ಕಾರ್‌ಸ್ಟ್ರೀಟ್ ಮತ್ತು ಕದ್ರಿಯಲ್ಲಿರುವ ಎಳನೀರು ಮಳಿಗೆ, ಅಡ್ಯಾರಿನಲ್ಲಿರುವ ಎಳನೀರು ಗಂಜಿಯಿಂದ ಐಸ್‌ಕ್ರೀಮ್ ತಯಾರಿಸುವ ಘಟಕಗಳನ್ನು ಬಂದ್‌ ಮಾಡಿಸಲಾಗಿದೆ. ಈಗಲೂ ಅವು ಬಂದ್ ಆಗಿಯೇ ಇವೆ. ಫ್ಯಾಕ್ಟರಿಯವರು ಸ್ವಯಂ ಪ್ರೇರಿತರಾಗಿ ಎಳನೀರು ನೀಡುವುದನ್ನು ನಿಲ್ಲಿಸಿದ್ದಾರೆ. ಅಡ್ಯಾರ್‌ನಲ್ಲಿ ಪಲ್ಪಿಂಗ್ ಘಟಕಗಳು ಮಾತ್ರ ಕಾರ್ಯಾಚರಿಸುತ್ತಿವೆ. ಗ್ರಾಹಕರಿಗೆ ಆಹಾರ ನೀಡುವಾಗ ನಿಯಮ ಪಾಲನೆ, ಶುಚಿತ್ವಕ್ಕೆ ಸಂಬಂಧಿಸಿ ಕೆಲವು ಅಂಶಗಳ ಕಟ್ಟುನಿಟ್ಟು ಪಾಲನೆಗೆ ಆಹಾರ ಸುರಕ್ಷಾ ಅಫಿದಾವಿತ್ ನ್ನು ಫ್ಯಾಕ್ಟರಿಯಿಂದ ಪಡೆಯಲು ಆಹಾರ ಸುರಕ್ಷಾ ಅಧಿಕಾರಿಗೆ ಸೂಚನೆ ನೀಡಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.

ಬಿಸಿಗಾಳಿ, ತಾಪಮಾನ ಹೆಚ್ಚಳ ಆಗುತ್ತಿರುವುದರಿಂದ ಜನರು ಆರೋಗ್ಯ ಕಾಳಜಿ ವಹಿಸಬೇಕು. ಆರೋಗ್ಯ ಇಲಾಖೆ ವಿಶೇಷ ನಿಗಾ ವಹಿಸಿದ್ದು, ಯಾವುದೇ ಪ್ರಕರಣ ದಾಖಲಾದರೂ ಇಲಾಖೆ ಗಮನಕ್ಕೆ ತರುವಂತೆ ಎಲ್ಲ ತಾಲೂಕು ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ. ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಅವರು ತಿಳಿಸಿದರು.

Continue Reading

ನಿಧನ ವಾರ್ತೆ

Suicide-ಸಂಘದ ಹಣಕಟ್ಟಲಾಗದೆ ಅವಮಾನದಿಂದ ನೇಣಿಗೆ ಶರಣಾದ ಇಬ್ಬರು ಮಕ್ಕಳ ತಂದೆ

Ad Widget

Ad Widget

Ad Widget

Ad Widget

ಉಳ್ಳಾಲ : ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದಲ್ಲಿ ಸೋಮವಾರ ಮುಂಜಾನೆ ನಡೆದಿದೆ.

Ad Widget

Ad Widget

Ad Widget

ಕುಂಪಲ ಹನುಮಾನ್ ನಗರದಲ್ಲಿ ಈ ಘಟನೆ ನಡೆದಿದ್ದು ಯೋಗೀಶ್(44) ಆತ್ಮಹತ್ಯೆಗೈದ ದುರ್ದೈವಿಯಾಗಿದ್ದಾರೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಇಂದು ಬೆಳಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದ ಮರದ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಯೋಗೀಶ್ ಸ್ವಸಹಾಯ ಗುಂಪೊಂದರ ಸದಸ್ಯರಾಗಿದ್ದು ಸಂಘದ ನಲ್ವತ್ತು ಸಾವಿರ ರೂಪಾಯಿಗಳನ್ನ ಬ್ಯಾಂಕಿಗೆ ಕಟ್ಟದೆ ಖರ್ಚು ಮಾಡಿದ್ದರು ಎನ್ನಲಾಗಿದೆ.

Ad Widget

ಈ ಬಗ್ಗೆ ಸಂಘದ ಉಳಿದ ಸದಸ್ಯರು ಭಾನುವಾರ ಬೆಳಗ್ಗೆ ಮತ್ತು ಸಂಜೆ ಯೋಗೀಶ್ ಅವರ ಮನೆಗೆ ತೆರಳಿ ಹಣ ಕಟ್ಟುವಂತೆ ಪೀಡನೆ ಮಾಡಿದ್ದರು ಎಂಬ ಆರೋಪ ಇದೆ. ಇದೇ ಅವಮಾನದಲ್ಲಿ ಯೋಗೀಶ್ ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಉಳ್ಳಾಲ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಮೃತ ಯೋಗೀಶ್ ಇಬ್ಬರು ಪುಟ್ಟ ಗಂಡು ಮಕ್ಕಳು, ಪತ್ನಿ, ತಾಯಿಯನ್ನು ಅಗಲಿದ್ದಾರೆ.

Ad Widget

Ad Widget
Continue Reading

Trending

error: Content is protected !!

Discover more from Nikhara News

Subscribe now to keep reading and get access to the full archive.

Continue reading

Discover more from Nikhara News

Subscribe now to keep reading and get access to the full archive.

Continue reading