ಕೇವಲ ಒಂದು ಲಕ್ಷ ಸಾಲಕ್ಕೆ ದಿನಕ್ಕೆ ಬರೋಬ್ಬರಿ 10,000 ರೂಪಾಯಿ ಬಡ್ಡಿ..! ನೋಡನೋಡುತ್ತಿದ್ದಂತೆ ಸಾಲದ ಮೊತ್ತ 74 ಲಕ್ಷಕ್ಕೆ ಏರಿಕೆಯಾದ ಪರಿಣಾಮ, ರೈತನೊಬ್ಬ ಸಾಲ ತೀರಿಸಲು ವಿದೇಶಕ್ಕೆ ತೆರಳಿ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಮನಕಲಕುವ...
‘ಕೆಜಿಎಫ್ ಚಾಪ್ಟರ್-2’ ಚಿತ್ರದ ಸಹ-ನಿರ್ದೇಶಕರಾದ ಕೀರ್ತನ್ ನಾಡಗೌಡ ಅವರ ಕುಟುಂಬದಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಕೀರ್ತನ್ ಅವರ ನಾಲ್ಕು ವರ್ಷದ ಪುತ್ರ ಲಿಫ್ಟ್ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾನೆ. ಬೆಂಗಳೂರು: ‘ಕೆಜಿಎಫ್ ಚಾಪ್ಟರ್-2’ ಚಿತ್ರದ ಸಹ-ನಿರ್ದೇಶಕರಾದ ಕೀರ್ತನ್...
ಮಣಿಪಾಲ: ಐಪಿಎಲ್ ಹರಾಜು ಇತಿಹಾಸದಲ್ಲಿ ಅತಿ ಹೆಚ್ಚು ಬಿಡ್ ಪಡೆದ ಅನ್ ಕ್ಯಾಪ್ಸ್ ಆಟಗಾರರ ಪಟ್ಟಿಯಲ್ಲಿ ಇಂದು ಸೇರಿಕೊಂಡ ಮತ್ತೊಂದು ಹೆಸರು ಅಂದರೆ ಅದು ಕಾರ್ತಿಕ್ ಶರ್ಮಾ. ಚೆನ್ನೈ ಸೂಪರ್ ಕಿಂಗ್ಸ್ (Chennai Super Kings)...
ಹೈದರಾಬಾದ್: ಆಸ್ಟ್ರೇಲಿಯಾದ ಸಿಡ್ನಿಯಲ್ಲಿನ ಬೊಂಡಿ ಬೀಚ್ ಬಳಿ ನಡೆದ ಶೂಟೌಟ್ ನಡೆಸಿದ್ದ ಸಾಜಿದ್ ಅಕ್ರಂ (50) ಹಾಗೂ ಆತನ ಪುತ್ರ ನವೀದ್ ಅಕ್ರಂ (24) ಮೂಲತಃ ತೆಲಂಗಾಣದ ಹೈದರಾಬಾದ್ ನವರು ಎಂದು ಪೊಲೀಸರು ತಿಳಿಸಿದ್ದಾರೆ. ಸಾಜಿದ್...
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂ-ನರೇಗಾ)ಯ ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಡವರು ಮತ್ತು ಮಹಾತ್ಮ ಗಾಂಧೀಜಿ ಬಗೆಗಿನ ತಮ್ಮ ದ್ವೇಷವನ್ನು...
ಪುತ್ತೂರು ನಗರದ ಪ್ರಮುಖ ರಸ್ತೆಗಳಲ್ಲಿ ಬಿದ್ದಿರುವ ಹೊಂಡಗುಂಡಿಗಳ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ರಾಜಕೀಯ ಕೆಸರೆರೆಚಾಟ ಆರಂಭಗೊಂಡಿದೆ. ನಗರಸಭೆಯ ಬಿಜೆಪಿ ಆಡಳಿತ ಮಂಡಳಿ 41.3 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಗುಂಡಿ ಮುಚ್ಚುವ ಡಾಂಬರು ಪ್ಯಾಚ್ ವರ್ಕ್...
ಉಡುಪಿಯಲ್ಲಿ ಮುಂಜಾನೆ 4.30 ಸಮಯದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿ, ಯುವತಿಯ ವಿರುದ್ಧವೇ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಆರೋಪಿಸಿ, ಘಟನೆಗೆ ಕಾರಣೀಕರ್ತರಾದ ಪೊಲೀಸ್ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ...
ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವವು ಡಿಸೆಂಬರ್ 11ರಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಯುತ್ತ ನಾಯಕರವರ ಅಧ್ಯಕ್ಷತೆಯಲ್ಲಿ ನಡೆಯಿತು. ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವವು ಡಿಸೆಂಬರ್ 11ರಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಯುತ್ತ ನಾಯಕರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಸ್ಕಾರವೆಂಬುದು ಕೇವಲ ಶಾಲೆಗೆ ಸೀಮಿತವಲ್ಲ, ಮನೆಯಲ್ಲೂ ಸಂಸ್ಕಾರವನ್ನು ಆಚರಣೆ ಮಾಡಬೇಕು ಎಂದು ಅವರು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣು ಪ್ರಸಾದ್ ರವರು ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಕಲಿತ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯನ್ನು ಮಾತ್ರವಲ್ಲದೆ, ಉತ್ತಮ ನಾಗರಿಕರಾಗಿ ಬೆಳೆಯುವಲ್ಲಿ ಸಫಲರಾಗುತ್ತಿರುವುದು ಶ್ಲಾಘನೀಯ ಎಂದರು. ಇನ್ನೋರ್ವ ಮುಖ್ಯ ಅತಿಥಿ ಕೃಷ್ಣಪ್ರಸಾದ್ ರವರು ಸಭೆಯನ್ನು ಉದ್ದೇಶಿಸಿ ಪ್ಲಾಸ್ಟಿಕ ರಹಿತ ಸ್ವಚ್ಛ ಭಾರತ ನಿರ್ಮಾಣ ಮಾಡುವ ಪ್ರಯತ್ನ ನಮ್ಮಿಂದ ನಮ್ಮ ಮನೆಯಿಂದ ಆಗಬೇಕು ಎಂದರು. ಶಾಲಾ ಹಿರಿಯ ವಿದ್ಯಾರ್ಥಿ ಖ್ಯಾತ ಮನೋವೈದ್ಯರಾದ ಡಾ. ರಾಜೇಶ್ ಎಂ ರವರು ವಿದ್ಯಾರ್ಥಿಗಳು ತಮ್ಮ ಶರೀರ ಹಾಗೂ ಮನಸ್ಸಿಗೆ ಸಮಾನ ಮಹತ್ವ ನೀಡಬೇಕು, ಅಂಕ ಗಳಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಸಫಲತೆಯನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು. ಬಳಿಕ ಕಳೆದ ಶೈಕ್ಷಣಿಕ ವರ್ಷ 2024 – 25ರಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 600 ಕ್ಕಿಂತಲೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ಕೌಟ್ ನಲ್ಲಿರಾಜ್ಯ ಪುರಸ್ಕಾರದ ಪಡೆದ ವಿದ್ಯಾರ್ಥಿಗಳು ಹಾಗೂ ಸ್ಪೋರ್ಟ್ಸ್ ನಲ್ಲಿ ಎಸ್.ಜಿ.ಎಫ್.ಐ. ಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು . ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಸ್ವಾಗತಿಸಿ, ಸದಸ್ಯರಾದ ಚಂದ್ರಶೇಖರ್ ವಂದಿಸಿದರು. ವೇದಿಕೆಯಲ್ಲಿ ಆಡಳಿತ ಮಂಡಳಿಯ ಸಂಚಾಲಕರಾದ ರವಿ ನಾರಾಯಣ ಎಂ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ, ಮುಖ್ಯೋಪಾಧ್ಯಾಯರುಗಳು, ಪ್ರೌಢ ಹಾಗೂ ಪ್ರಾಥಮಿಕ ಶಾಲಾ ನಾಯಕರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಶಾಂತಿ, ಅನುರಾಧ ಹಾಗೂ ಕವಿತಾ ಸತೀಶ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬಂದಂತಹ ಎಲ್ಲಾ ಅತಿಥಿಗಳಿಗೆ, ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು.
ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ವಲಸೆ ಕಾರ್ಮಿಕನೋರ್ವ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಭೀಕರ ಘಟನೆ ಮಂಗಳವಾರ ಉಳ್ಳಾಲದ ಕಲ್ಲಾಪು ಸಮೀಪದ ಸೇವಂತಿಗುತ್ತು ಎಂಬಲ್ಲಿ ನಡೆದಿದೆ. ಬಾಳಪ್ಪ (35)...
ನಿರ್ದಿಷ್ಟ ಕಂಪನಿಯ ಮೊಟ್ಟೆಗಳಲ್ಲಿ ಕ್ಯಾನ್ಸರ್ಕಾರಕ ಅಂಶಗಳಿವೆ ಎಂಬ ಆತಂಕಕಾರಿ ವದಂತಿ ಜಾಲತಾಣಗಳಲ್ಲಿ ಹಬ್ಬಿದ್ದು, ಈ ಬಗ್ಗೆ ನೈಜತೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಗತ್ಯ ಬಿದ್ದರೆ ಮೊಟ್ಟೆಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಆರೋಗ್ಯ ಸಚಿವ...