ಶಾಸಕರು ಕೇಳಿದ ಲಿಖಿತ ಪ್ರಶ್ನೆಗಳಿಗೆ ಉತ್ತರ ನೀಡುವಲ್ಲಿ ಸಚಿವರು ಮತ್ತು ಕಾರ್ಯದರ್ಶಿಗಳು ತೋರುತ್ತಿರುವ ವಿಳಂಬ ಧೋರಣೆಗೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಸೋಮವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ ನಡೆಯಿಂದ ಅಸಮಾಧಾನಗೊಂಡ ಅವರು, ಕಲಾಪ...
ರಾಜಕೀಯ ಕ್ಷೇತ್ರದಲ್ಲಿ ಪರಸ್ಪರ ಟೀಕೆ-ಟಿಪ್ಪಣಿಗಳು ಸಾಮಾನ್ಯ. ಆದರೆ, ಪಕ್ಷಭೇದ ಮರೆತು ವಿರೋಧ ಪಕ್ಷದ ಶಾಸಕರೊಬ್ಬರು ಆಡಳಿತ ಪಕ್ಷದ ಸಚಿವರ ಕಾರ್ಯವೈಖರಿಯನ್ನು ಮುಕ್ತವಾಗಿ ಪ್ರಶಂಸಿಸಿದ ಅಪರೂಪದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ನಡೆದಿದೆ. ಮೂಡಬಿದಿರೆ ಕ್ಷೇತ್ರದ...
ಸೇಡಿಯಾಪಿನಲ್ಲಿ ವೈದ್ಯಕೀಯ ಕಾಲೇಜಿಗೆ ಸಂಬಂಧಿಸಿದ 300 ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ 180 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಮೂಲಸೌಕರ್ಯಗಳ ದೃಷ್ಠಿಯಿಂದ ಸೇಡಿಯಾಪಿನ ಜಾಗ ಹೆಚ್ಚು ಸೂಕ್ತವಾಗಿದೆ. ಗ್ರಾಮೀಣ ಜನರಿಗೆ ಹೆಚ್ಚಿನ ಅವಕಾಶಗಳಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ...
ಪಶ್ಚಿಮ ಏಷ್ಯಾದಲ್ಲಿ ಸದ್ಯ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ತಕ್ಷಣವೇ ಕೊನೆಗೊಳ್ಳುವ ಅಗತ್ಯವಿದೆ ಎಂದು ಮಾಜಿ ವಿದೇಶಾಂಗ ಕಾರ್ಯದರ್ಶಿ ಕನ್ವಾಲ್ ಸಿಬಲ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು ಮೂಲದ ಸಂಶೋಧನಾ ಸಂಸ್ಥೆಯಾದ ‘ಸಿನರ್ಜಿಯಾ’ ಗುರುವಾರ ದೆಹಲಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸಮಾವೇಶದಲ್ಲಿ...
ಹವಾಮಾನ ಆಧಾರಿತ ಬೆಳೆ ವಿಮಾ ಪರಿಹಾರ ಮೊತ್ತ ಪಾವತಿಸಲು ಬಾಕಿ ಇರುವ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮಸದ ಕೃಷಿಕರಿಗೆ ವಿಮಾ ಮೊತ್ತವನ್ನು ತಕ್ಷಣ ಪಾವತಿ ಮಾಡುವಂತೆ ರಾಜ್ಯ ತೋಟಗಾರಿಕಾ ಸಚಿವ ಮಲ್ಲಿಕಾರ್ಜುನ ಎಸ್ ಎಸ್ ರವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮಾ ಪರಿಹಾರ ಮೊತ್ತ ಪಾವತಿಸಲು ಬಾಕಿ ಇರುವ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮಸದ ಕೃಷಿಕರಿಗೆ ವಿಮಾ ಮೊತ್ತವನ್ನು ತಕ್ಷಣ ಪಾವತಿ ಮಾಡುವಂತೆ ರಾಜ್ಯ ತೋಟಗಾರಿಕಾ ಸಚಿವ ಮಲ್ಲಿಕಾರ್ಜುನ ಎಸ್ ಎಸ್ ರವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಗುರುವಾರ ಸಚಿವರನ್ನು ಭೇಟಿ ಮಾಡಿದ ಶಾಸಕರು ದ ಕ ಜಿಲ್ಲೆಯ ಹಲವು ಕಡೆಗಳಲ್ಲಿ ಹವಾಮಾನ ವೈಪರೀತ್ಯದಿಂದ ರೈತರು ಬೆಳೆ ನಷ್ಟವನ್ನು ಅನುಭವಿಸಿದ್ದಾರೆ.ರೈತರಿಗೆ ಪರಿಹಾರವಾಗಿ ಹವಮಾನ ಆಧರಿತ ಬೆಳೆ ವಿಮೆ ಯೋಜನೆಯಡಿ ನೀಡಬೇಕಾದ ವಿಮಾ ಮೊತ್ತ ಜಿಲ್ಲೆಯ ಕೆಲವು ಗ್ರಾಮಗಳ ರೈತರಿಗೆ ಇನ್ನೂ ಪಾವತಿಯಾಗಿಲ್ಲ. ಈ ಬಗ್ಗೆ ಅಧಿಕಾರಿಗಳ ಜೊತೆ ಈಗಾಗಲೇ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಬಾಕಿ ಇರುವ ಮೊತ್ತವನ್ನು ತಕ್ಷಣ ನೀಡುವಂತೆ ಸಚಿವರಿಗೆ ನೀಡಿದ ಮನವಿಯಲ್ಲಿ ತಿಳಿಸಲಾಗಿದೆ. ಬಾಕಿ ಇರುವ ಗ್ರಾಮಗಳು ಪುತ್ತೂರು ತಾಲೂಕಿನ ಬಲ್ನಾಡು, ಬಂಠ್ವಾಳ ತಾಲೂಕು ವ್ಯಾಪ್ತಿಯ ವಿಟ್ಲ, ನರಿಕೊಂಬು, ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಕೊಕ್ಕಡ ಹಾಗೂ ಅರಸಿನಮಕ್ಕಿ, ಕಡಬ ತಾಲೂಕಿನ ಗೋಳಿತೊಟ್ಟು, ಕಡಬ, ಕೌಕ್ರಾಡಿ, ನೆಲ್ಯಾಡಿ, ಮಂಗಳೂರು ತಾಲೂಕಿನ ಮೂಡುಶೆಡ್ಡೆ, ಸುಳ್ಯ ತಾಲೂಕಿನ ಅಮರಮುಡ್ನೂರು, ಉಬರಡ್ಕ, ಮಿತ್ತೂರು, ಅಲೆಟ್ಟಿ ಹಾಗೂ ಅರಂತೋಡು ಗ್ರಾಮಗಳ ಕೃಷಿಕರ ವಿಮಾ ಮೊತ್ತ ಪಾವತಿಯಾಗಲು ಬಾಕಿ ಇದೆ . ಈ ಪಟ್ಟಿಯನ್ನು ಸಚಿವರಿಗೆ ಹಾಗೂ ಸಂಬಂದಿಸಿದ ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ನೀಡಿದ್ದಾರೆ. ಹವಾಮಾನ ಆಧಾರಿತ ಬೆಳೆ ವಿಮಾ ಪರಿಹಾರ ಮೊತ್ತ ವಿತರಣೆಯಲ್ಲಿ ಪ್ರಾರಂಭದಲ್ಲಿ ಲೋಪವಾಗಿತ್ತು ಈ ಬಗ್ಗೆ ಸದನದಲ್ಲಿ ಸರಕಾರದ ಗಮನಸೆಳೆದು ಆ ಬಳಿಕ ಅಧಿಕಾರಿಗಳ ಸಭೆ ಕರೆದು ಬಹುತೇಕ ಕೃಷಿಕರಿಗೆ ವಿಮಾ ಪರಿಹಾರ ಮೊತ್ತವನ್ನು ಒದಗಿಸಲಾಗಿದೆ. ಆ ಬಳಿಕ ಕೆಲವು ಗ್ರಾಮಗಳು ಬಾಕಿ ಇದೆ. ದಕ ಜಿಲ್ಲೆಯ ಯಾವ ಗ್ರಾಮಗಳ ಕೃಷಿಕರಿಗೆ ವಿಮಾ ಮೊತ್ತ ನೀಡಲು ಬಾಕಿ ಇದೆ ಆ ಗ್ರಾಮಗಳ ಪಟ್ಟಿಯನ್ನು ಸರಕಾರಕ್ಕೆ ಸಲ್ಲಿಸಿದ್ದೇನೆ. ಶೀಘ್ರವೇ ಬಾಕಿ ಇರುವ ಎಲ್ಲಾ ಗ್ರಾಮಗಳ ವಿಮಾ ಪರಿಹಾರ ಮೊತ್ತ ಬಿಡುಗಡೆಯಾಗಲಿದೆ ಎಂಬ ಪೂರ್ಣ ವಿಶ್ವಾಸವಿದೆ. ಮನವಿ ಮಾಡಿದ ತಕ್ಷಣ ಸೂಕ್ತ ಕ್ರಮಕ್ಕೆ ಸಚಿವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ರೈತರಿಗೆ ತೊಂದರೆಯಾದಲ್ಲಿ ಸುಮ್ಮನಿರುವ ಪ್ರಶ್ನೆಯೇ ಇಲ್ಲ , ರೈತರ ಪರವಾಗಿ ಸದಸನದ ಒಳಗೆ , ಹೊರಗೆ ನ್ಯಾಯಯುತ ಹೋರಾಟ ಮಾಡಿಯೇ ಮಾಡುತ್ತೇನೆ. -ಅಶೋಕ್ ರೈ ಶಾಸಕರು ಪುತ್ತೂರು
ಪಶ್ಚಿಮ ಏಷ್ಯಾದಲ್ಲಿ ದಿನೇ ದಿನೇ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾತ್ರಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ದೂರವಾಣಿ ಮೂಲಕ ಮಹತ್ವದ ಚರ್ಚೆ ನಡೆಸಿದ್ದಾರೆ. ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ...
ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿ: ಮುಂಬರುವ ವಿಧಾನ...
ಬಹುನಿರೀಕ್ಷಿತ ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆ ವಿಚಾರದಲ್ಲಿ ಇದೀಗ ಭಾರೀ ಚರ್ಚೆಯೊಂದು ಶುರುವಾಗಿದೆ. ಉದ್ದೇಶಿತ ಸರ್ಕಾರಿ ಮೆಡಿಕಲ್ ಕಾಲೇಜನ್ನು ನಗರದ ಹೊರವಲಯದ ಸೇಡಿಯಾಪಿನಲ್ಲಿ ನಿರ್ಮಿಸಿದರೂ ಅಭ್ಯಂತರವಿಲ್ಲ. ಆದರೆ, ಆಸ್ಪತ್ರೆ ಸ್ಥಳಾಂತರದ ಹೆಸರಿನಲ್ಲಿ ರಿಯಲ್ ಎಸ್ಟೇಟ್ ದಂಧೆಗೆ...
ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಸೇರುವ ಅತಿ ಹೆಚ್ಚು ಆದಾಯ ಹೊಂದಿರುವ ‘ಎ’ ಮತ್ತು ‘ಬಿ’ ವರ್ಗದ ದೇವಾಲಯಗಳ ಹಣವನ್ನು, ‘ಸಿ’ ವರ್ಗದ (ಕಡಿಮೆ ಆದಾಯವಿರುವ) ದೇವಾಲಯಗಳ ಅಭಿವೃದ್ಧಿಗೆ ಬಳಸಲು ಅನುಮತಿ ನೀಡಲಾಗುವುದು ಎಂದು ಮುಜರಾಯಿ ಸಚಿವ...
ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ (Social Media) ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ (Social...