ದಕ್ಷಿಣ ಕನ್ನಡ-ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು, 2026–27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿಗೊಳಿಸಲು ಅಗತ್ಯ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ....
ಕುರಿಯ ಗ್ರಾಮದ ಬೂಡಿಯಾರು ಎಂಬಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದುದರ ಪರಿಣಾಮ ಉಂಟಾದ ಅಗ್ನಿ ದುರಂತದಲ್ಲಿ ಕೃಷಿಕ ಗಣೇಶ್ ರೈ ಬೂಡಿಯಾರು ಅವರಿಗೆ ಸೇರಿದ ಅಡಿಕೆ ತೋಟ ಸಂಪೂರ್ಣ ಸುಟ್ಟು ಕರಕಲಾಗಿ ಅಪಾರ ನಷ್ಟ ಸಂಭವಿಸಿದೆ....
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಹಾಗೂ ಬಿಜೆಪಿ ದಲಿತ ನಾಯಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿರುವ ಘಟನೆ ನಡೆದಿದ್ದು, ಜಿಲ್ಲೆಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಕಿಡಿಗೇಡಿಗಳ ವಿರುದ್ಧ...
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ....
ರಾಷ್ಟ್ರದ ಭದ್ರತೆ ದೃಷ್ಟಿಯಿಂದ ಹಿಂದೂಗಳು ಕುಟುಂಬದಲ್ಲಿ ಜನಸಂಖ್ಯೆ ಹೆಚ್ಚಿಸಲು 4 ಮಕ್ಕಳನ್ನಾದ್ರೂ ಹೊಂದಬೇಕು ಎಂದಿದ್ದ ಬಿಜೆಪಿ (BJP) ನಾಯಕಿ ನವನೀತ್ ರಾಣಾ (Navneet Rana) ವಿರುದ್ಧ AIMIM ಮುಖ್ಯಸ್ಥ ಅಸದುದ್ದೀನ್ ಓವೈಸಿ (Asaduddin Owaisi) ವಾಗ್ದಾಳಿ...
ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ ಬಗ್ಗೆ ವೇದಿಕೆಯಲ್ಲಿ ಅವಹೇಳನಕಾರಿಯಾಗಿ ಭಾಷಣ ಮಾಡಿದ ಘಟನೆ ನಡೆದಿದ್ದು ಘಟನೆಗೆ ವೇದಿಕೆ ಕಲ್ಪಿಸಿದ ಕೊಯಿಲ ಬಡಗನ್ನೂರು ಸರಕಾರಿ ಹಿ ಪ್ರಾ ಶಾಲೆ ಮುಖ್ಯ ಶಿಕ್ಷಕಿ,...
ತಿರುವನಂತಪುರಂನ ಮೇಯರ್ ಹುದ್ದೆಯಿಂದ ತಮ್ಮನ್ನು ಕೈಬಿಟ್ಟಿರುವುದಕ್ಕೆ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಸಸ್ತಮಂಗಲದ ಬಿಜೆಪಿ ಕೌನ್ಸಿಲರ್ ಆರ್. ಶ್ರೀಲೇಖಾ ಅವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಿರುವನಂತಪುರಂ: ತಿರುವನಂತಪುರಂನ ಮೇಯರ್ ಹುದ್ದೆಯಿಂದ ತಮ್ಮನ್ನು ಕೈಬಿಟ್ಟಿರುವುದಕ್ಕೆ ಮಾಜಿ ಐಪಿಎಸ್...
ಕಿನ್ನಿಗೋಳಿ ಹಾಗೂ ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ಗೆಲುವು ಕರಾವಳಿ ಜನರ ಸ್ವಾಭಿಮಾನ ಕೆಣಕಿರುವ ಕಾಂಗ್ರೆಸ್ಗೆ ತಕ್ಕ ಉತ್ತರವಾಗಿದ್ದು, ಆ ಮೂಲಕ ಬಿಜೆಪಿಯ ಈ ವಿಜಯಯಾತ್ರೆಯು ಇದೀಗ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದಿಂದಲೇ ಆರಂಭವಾಗಿದೆ...
ನಾವು ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ ಆದರೆ ನಮ್ಮ ರಸ್ತೆಯನ್ನು ಇದುವರೆಗೂ ಯಾರೂ ಅಭಿವೃದ್ದಿ ಮಾಡಿಲ್ಲ, ನೀವು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿದ್ದೀರಿ, ಪಕ್ಷ ಬೇಧವಿಲ್ಲದೆ ಅನುದಾನವನ್ನು ನೀಡುತ್ತಿದ್ದೀರಿ, ನಮ್ಮ ಬೇಡಿಕೆಯನ್ನು ಈಡೇರಿಸಿದ್ದಲ್ಲಿ ನಾವು ನಿಮ್ಮ ಪರ ಬಹಿರಂಗ ಪ್ರಚಾರ ಮಾಡಿಯೇ ಮಾಡುತ್ತೇವೆ ಎಂದು ಪೆರುವಾಯಿ ಗ್ರಾಮದ ಬಿಜೆಪಿ ಕಾರ್ಯಕರ್ತರ ನಿಯೋಗವೊಂದು ಪುತ್ತೂರು ಶಾಸಕ ಅಶೋಕ್ ರೈ ನಿವಾಸಕ್ಕೆ ಬಂದು ಭರವಸೆಯ ಜೊತೆಗೆ ಶಪಥ ಮಾಡಿದ್ದಾರೆ. ಪುತ್ತೂರು: ನಾವು ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ ಆದರೆ ನಮ್ಮ ರಸ್ತೆಯನ್ನು ಇದುವರೆಗೂ ಯಾರೂ ಅಭಿವೃದ್ದಿ ಮಾಡಿಲ್ಲ, ನೀವು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿದ್ದೀರಿ, ಪಕ್ಷ ಬೇಧವಿಲ್ಲದೆ ಅನುದಾನವನ್ನು ನೀಡುತ್ತಿದ್ದೀರಿ, ನಮ್ಮ ಬೇಡಿಕೆಯನ್ನು ಈಡೇರಿಸಿದ್ದಲ್ಲಿ ನಾವು ನಿಮ್ಮ ಪರ ಬಹಿರಂಗ ಪ್ರಚಾರ ಮಾಡಿಯೇ ಮಾಡುತ್ತೇವೆ ಎಂದು ಪೆರುವಾಯಿ ಗ್ರಾಮದ ಬಿಜೆಪಿ ಕಾರ್ಯಕರ್ತರ ನಿಯೋಗವೊಂದು ಪುತ್ತೂರು ಶಾಸಕ ಅಶೋಕ್ ರೈ ನಿವಾಸಕ್ಕೆ ಬಂದು ಭರವಸೆಯ ಜೊತೆಗೆ ಶಪಥ ಮಾಡಿದ್ದಾರೆ. ಪೆರುವಾಯಿ ಗ್ರಾಮದ ಬದಿಮಾರ್ ಪ್ರದೇಶದಲ್ಲಿ ಅನೇಕ ಮನೆಗಳಿದೆ. ನಮ್ಮ ರಸ್ತೆ ಇನ್ನೂ ಅಭಿವೃದ್ದಿಯಾಗಿಲ್ಲ. ರಸ್ತೆಯಾಗಬೇಕಾದರೆ ಖಾಸಗಿ ವ್ಯಕ್ತಿಗಳು ಜಾಗ ಬಿಟ್ಟುಕೊಡಬೇಕಾಗುತ್ತದೆ. ಇಷ್ಟು ವರ್ಷದಲ್ಲಿ ನಾವು ಮಾಡಿದ ಪ್ರಯತ್ನವೆಲ್ಲವೂ ವಿಫಲವಾಗಿದೆ. ರಾಜಕೀಯ ನೇತಾರರು ಈ ಹಿಂದೆ ಭರವಸೆಯನ್ನು ಮಾತ್ರ ಕೊಟ್ಟಿದ್ದಾರೆ ವಿನಾ ನಮ್ಮ ಸಮಸ್ಯೆ ಪರಿಹಾರ ಮಾಡಿಲ್ಲ. ಖಾಸಗಿ ವ್ಯಕ್ತಿಗಳ ಜೊತೆ ಮಾತುಕತೆ ನಡೆಸಿ ನಮ್ಮ ಪ್ರದೇಶಕ್ಕೆ ರಸ್ತೆಯನ್ನು ನಿರ್ಮಾಣ ಮಾಡಿ ಕೊಡುತ್ತೀರಿ ಎಂಬ ಪೂರ್ಣ ನಂಬಿಕೆ ನಮ್ಮಲ್ಲಿದೆ. ನಮ್ಮ ಬೇಡಿಕೆಯನ್ನು ನೀವು ಈಡೇರಿದ್ದಲ್ಲಿ ನಾವು ಬಹಿರಂಗವಾಗಿ ನಿಮ್ಮ ಪರ ಪ್ರಚಾರ ಮಾಡುತ್ತೇವೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಶಾಸಕರ ಮುಂದೆ ಶಪಥ ಮಾಡಿದ್ದಾರೆ. ಈ ವೇಳೆ ವಸಂತಶೆಟ್ಟಿ ಬದಿಯಾರು, ಜಯರಾಮ ಬಿ, ಪದ್ಮಶ್ರೀ, ಜಯರಾಮ ವಿಠಲ, ಮತ್ತು ಗೀತಾ ಉಪಸ್ಥಿತರಿದ್ದರು. ನಮ್ಮ ಜೊತೆ ಇನ್ನೂ ಅನೇಕ ಮಂದಿ ಇದ್ದು ಅವರೆಲ್ಲರನ್ನೂ ನಾವು ಸೇರಿಸಿಕೊಳ್ಳಲಿದ್ದೇವೆ ಎಂದು ಹೇಳಿದರು. ಈ ವೇಳೆ ಮಾತನಾಡಿದ ಶಾಸಕರು ಖಾಸಗಿ ವ್ಯಕ್ತಿಗಳ ಜೊತೆ ಮಾತುಕತೆ ನಡೆಸುವ ಪ್ರಯತ್ನವನ್ನು ಮಾಡುತ್ತೇನೆ. ಅವರ ಮನವೊಲಿಸಿ ರಸ್ತೆ ನಿರ್ಮಾಣದ ಭರವಸೆಯನ್ನು ನೀಡಿದರು.
ಹವಂಬಾವಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಘರ್ಷಣೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ರಾಜಕೀಯ ತಿರುವು ಸಿಕ್ಕಿದೆ. ಈ ಪ್ರಕರಣದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ...