ಗ್ರಾಮೀಣ ಬದುಕಿನ ಸೊಗಡು, ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಕ್ರೀಡೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಮೂಡಂಗಲ್ ಫ್ರೆಂಡ್ಸ್, ಧರ್ಮಸ್ಥಳ ಇವರ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ‘ಕೆಸರ್ಡ್ ಒಂಜಿ ದಿನ’ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಧರ್ಮಸ್ಥಳ: ಗ್ರಾಮೀಣ ಬದುಕಿನ ಸೊಗಡು, ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಕ್ರೀಡೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಮೂಡಂಗಲ್ ಫ್ರೆಂಡ್ಸ್, ಧರ್ಮಸ್ಥಳ ಇವರ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ‘ಕೆಸರ್ಡ್ ಒಂಜಿ ದಿನ’ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಕೆಸರ್ಡ್ ಒಂಜಿ ದಿನದಂತಹ ಕಾರ್ಯಕ್ರಮಗಳು ಗ್ರಾಮೀಣ ಬದುಕಿನ ಸೊಗಡು, ಕೃಷಿ ಸಂಸ್ಕೃತಿ ಮತ್ತು ನಮ್ಮ ಪರಂಪರಾಗತ ಕ್ರೀಡೆಗಳನ್ನು ಹೊಸ ಪೀಳಿಗೆಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಮಣ್ಣಿನೊಂದಿಗೆ ಮನುಷ್ಯನಿಗಿರುವ ಅವಿನಾಭಾವ ಸಂಬಂಧವನ್ನು ಇಂತಹ ಕಾರ್ಯಕ್ರಮಗಳು ಮತ್ತಷ್ಟು ಗಟ್ಟಿಗೊಳಿಸುತ್ತವೆ. ಯುವಜನರು ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಅರಿತು ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕು” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ಹಾಗೂ ಪುರುಷರು ಸೇರಿದಂತೆ ವಿವಿಧ ವಯೋಮಾನದವರು ಉತ್ಸಾಹದಿಂದ ಭಾಗವಹಿಸಿದರು. ಕೆಸರುಗದ್ದೆಯಲ್ಲಿ ಆಯೋಜಿಸಲಾದ ವಿವಿಧ ಗ್ರಾಮೀಣ ಹಾಗೂ ಸಾಂಪ್ರದಾಯಿಕ ಕ್ರೀಡಾಸ್ಪರ್ಧೆಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು. ಕೆಸರಿನಲ್ಲಿ ಆಟವಾಡುತ್ತಾ ಸ್ಪರ್ಧಿಗಳು ಪ್ರದರ್ಶಿಸಿದ ಉತ್ಸಾಹ, ಚುರುಕುತನ ಮತ್ತು ಕ್ರೀಡಾಸ್ಫೂರ್ತಿ ನೆರೆದಿದ್ದವರನ್ನು ರಂಜಿಸಿತು. ಗ್ರಾಮೀಣ ಕ್ರೀಡೆಗಳ ಮೂಲಕ ಹಳೆಯ ಕಾಲದ ಕೃಷಿ ಬದುಕು ಮತ್ತು ಜನಪದ ಸಂಸ್ಕೃತಿಯನ್ನು ನೆನಪಿಸುವುದರ ಜೊತೆಗೆ, ಪರಸ್ಪರ ಬಾಂಧವ್ಯ ಹಾಗೂ ಸಾಮರಸ್ಯವನ್ನು ಬೆಳೆಸುವ ವೇದಿಕೆಯಾಗಿಯೂ ಕಾರ್ಯಕ್ರಮ ಮೂಡಿಬಂತು. ಸ್ಥಳೀಯರು ಹಾಗೂ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ತಂದರು. ಈ ಸಂದರ್ಭದಲ್ಲಿ ಧರ್ಮಸ್ಥಳ ದೇವಸ್ಥಾನದ ಪಾರುಪತ್ಯಗಾರ್ ಪಿ. ಲಕ್ಷ್ಮೀನಾರಾಯಣ ರಾವ್, ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್, ವಕೀಲ ಕೇಶವ ಬೆಳಾಲ್, ಪ್ರಭಾಕರ ಪೂಜಾರಿ, ಉದಯ್ ಕುಮಾರ್, ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಮುರಳೀಧರ ದಾಸ್, ಹರ್ಷತ್ ಜೈನ್, ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ವಿಟಿವಿ ವಿಟ್ಲ ಮತ್ತು ಎಸ್ ಎಲ್ ವಿ ಬುಕ್ ಹೌಸ್ ಆಶ್ರಯದಲ್ಲಿ ಕರ್ನಾಟಕದ ಅತೀ ದೊಡ್ಡ ರಿಯಾಲಿಟಿ ಶೋ ಝೀ ಕನ್ನಡ ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್ ಎ ಜೆ ರವರಿಗೆ ಹುಟ್ಟೂರಿನ ಗೌರವ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ವಿದ್ಯಾಮಾತಾ ಅಕಾಡೆಮಿ ಹಾಗೂ ನಂದಗೋಕುಲ ಚಿಣ್ಣರ ಅಂಗಳ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ಕೃಷ್ಣ ವೇಷ ಹಾಗೂ ಯಶೋಧ ಕೃಷ್ಣ ಸ್ಪರ್ಧೆಯು ಆಗಸ್ಟ್ 30, 2026ರ ಭಾನುವಾರ...
ಶ್ರಾವಣ ಮಾಸದ ಶುಕ್ರವಾರ ಹಾಗೂ ಪವಿತ್ರ ವರಮಹಾಲಕ್ಷ್ಮೀ ವ್ರತದ ಪ್ರಯುಕ್ತ ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು 3ನೇ ಶುಕ್ರವಾರ ನಡೆಯುವ ಲಲಿತಾ ಸಹಸ್ರನಾಮ ಪಠಣದೊಂದಿಗೆ, ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ವಿಶೇಷ ರೀತಿಯಲ್ಲಿ...
ತಂತ್ರಜ್ಞಾನದ ಇಂದಿನ ಯುಗದಲ್ಲಿ ವಿದ್ಯಾರ್ಥಿಗಳ ಉದ್ಯೋಗದ ಅವಶ್ಯಕತೆಗಳನ್ನು ಮನಗಂಡು, ಪುತ್ತೂರಿನಂತಹ ಗ್ರಾಮೀಣ ಭಾಗದಲ್ಲಿ ವೃತ್ತಿಪರ ಕೋರ್ಸ್ಗಳನ್ನು ಪರಿಚಯಿಸುತ್ತಿರುವ ಅಕ್ಷಯ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಪುತ್ತೂರು ಸುದ್ದಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ....
ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಸಿಂಹ ಸಂಕ್ರಮಣ (ತುಳು: ಸೋಣ ಸಂಕ್ರಾಂತಿ)ದ ದಿನವಾದ ಆ. 15 ರಂದು ಶನಿವಾರ ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು. ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಸಿಂಹ ಸಂಕ್ರಮಣ (ತುಳು: ಸೋಣ...
ಕೊಡಂಗಾಯಿಯ ಶಿಲ್ಪ ಶ್ರೀಯುವಕ ಮಂಡಲದ (ರಿ) ವತಿಯಿಂದ, ಸಂಘದ ಸ್ಥಾಪಕ ಕಾರ್ಯದರ್ಶಿಯಾಗಿದ್ದ ದಿವಂಗತ ರಘುನಾಥ ಶೆಟ್ಟಿ ಅವರಿಗೆ ಇತ್ತೀಚೆಗೆ ಕೊಡಂಗಾಯಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ವಿಟ್ಲ: ಕೊಡಂಗಾಯಿಯ ಶಿಲ್ಪ ಶ್ರೀಯುವಕ ಮಂಡಲದ...
ಡಾ. ಶಿವರಾಮ ಕಾರಂತರ ಬಾಲವನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪುತ್ತೂರಿನ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಧ್ವಜಾರೋಹಣ ನೆರವೇರಿಸಿ ಶುಭಾಶಯ ಕೋರಿದರು. ರಾಷ್ಟ್ರೀಯ ವಿಪತ್ತು ಪಡೆ (NDRF) ತಂಡ ಪಥಸಂಚಲನವನ್ನು ನೆರವೇರಿಸಿದರು. ಪುತ್ತೂರು : ಡಾ.ಶಿವರಾಮ...
ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಪುತ್ತೂರು ಶಾಖೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಲಕ್ಷ್ಮೀಕಾಂತ್ ಬಿ. ಆಚಾರ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಪುತ್ತೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿ.ಎಲ್. ಆಚಾರ್ಯ...
ಮುಳಿಯ ಫೌಂಡೇಶನ್ ಹಾಗೂ ಮುಳಿಯ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಬೆಂಗಳೂರಿನ 81ಕ್ಕೂ ಹೆಚ್ಚು ಶಾಲೆಗಳಲ್ಲಿ ಆಯೋಜಿಸಲಾಗುತ್ತಿರುವ ‘ಧನಾತ್ಮಕ ಪೋಷಕತ್ವ’ ವಿಚಾರಸಂಕಿರಣ ಸರಣಿಯ ಉದ್ಘಾಟನಾ ಕಾರ್ಯಕ್ರಮವು ಆನ್ಲೈನ್ ಮೂಲಕ ನಡೆಯಲಿದೆ. ಮುಳಿಯ ಫೌಂಡೇಶನ್ ಹಾಗೂ ಮುಳಿಯ...