ರಾಜಕೀಯ
Ashok Rai-ಒಂದು ವಾರದ ಭಾರೀ ಮಳೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ; 120ಕ್ಕೂ ಹೆಚ್ಚಿನ ಕಡೆಗಳಲ್ಲಿ ಧರೆಕುಸಿತ; ಪರಿಹಾರ ಕೊಡಿಸುವ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗುವೆ-ಶಾಸಕ ಅಶೋಕ್ ರೈ
ಒಂದುವಾರಗಳ ಕಾಲ ಸುರಿದ ಭಾರೀ ಗಾಳಿಮಳೆಗೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನಾಹುತ ನಡೆದ ಸ್ಥಳಗಳಿಗೆ ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದು ವರದಿ ಸಿದ್ದಪಡಿಸುವಂತೆ ಸೂಚನೆಯನ್ನು ನೀಡಿದ್ದೇನೆ, ಈ ಬಗ್ಗೆ ಪರಿಹಾರ ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.
ಪುತ್ತೂರು: ಒಂದುವಾರಗಳ ಕಾಲ ಸುರಿದ ಭಾರೀ ಗಾಳಿಮಳೆಗೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 120 ಕ್ಕೂ ಹೆಚ್ಚಿನ ಕಡೆಗಳಲ್ಲಿ ಧರೆ ಕುಸಿತವಾಗಿದ್ದು, ಇದರಿಂದ ಮನೆಗಳು, ಕೊಟ್ಟಿಗೆಗಳು ಹಾನಿಗೊಳಗಾಗಿದ್ದರೆ ಕೆಲವು ಕಡೆಗಳಲ್ಲಿ ರಸ್ತೆಗಳು ಮುಚ್ಚಲ್ಪಟ್ಟಿವೆ. ಅನಾಹುತ ನಡೆದ ಸ್ಥಳಗಳಿಗೆ ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದು ವರದಿ ಸಿದ್ದಪಡಿಸುವಂತೆ ಸೂಚನೆಯನ್ನು ನೀಡಿದ್ದೇನೆ, ಈ ಬಗ್ಗೆ ಪರಿಹಾರ ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.
ದ ಕ ಜಿಲ್ಲೆ ಭೌಗೋಳಿಕವಾಗಿ ಬೆಟ್ಟ ಗುಡ್ಡಗಳಿಂದ ಕೂಡಿದ್ದು ಗುಡ್ಡದ ಪಕ್ಕದಲ್ಲಿ ಅಥವಾ ಮನೆ ನಿರ್ಮಾಣ ಮಾಡುವ ಗುಡ್ಡವನ್ನು ಸಮತಟ್ಟು ಮಾಡಿ ಮನೆ ಕಟ್ಟಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಮನೆ ನಿರ್ಮಾಣವಾಗುವಾಗ ಅಗೆದ ಧರೆಗಳು ಮಳೆಗಾಲದಲ್ಲಿ ಕುಸಿತಕ್ಕೊಳಗಾಗುತ್ತಿದೆ. ಇದರಿಂದ ಮನೆಗಳಿಗೆ ಹಾನಿಯಾಗುತ್ತಿದೆ. ಧರೆಗಳ ಮಧ್ಯೆ ರಸ್ತೆಗಳೂ ಹಾದು ಹೋಗುವ ಕಾರಣ ಮಣ್ಣು ಕುಸಿತಕ್ಕೊಳಗಾಗಿ ರಸ್ತೆಗಳು ಮುಚ್ಚಲ್ಪಡುತ್ತಿದೆ. ಪುತ್ತೂರು ಸೇರಿದಂತೆ ಕರಾವಳಿ ಭಾಗದ ಸಮಸ್ಯೆಯ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗಿ ಚರ್ಚೆ ನಡೆಸಿ ಪರಿಹಾರ ಕೊಡಿಸುವಲ್ಲಿ ಮನವಿಯನ್ನು ಮಾಡುವುದಾಗಿ ತಿಳಿಸಿದ್ದಾರೆ.
ಭಾನುವಾರ ರಾತ್ರಿ ವಿವಿಧ ಕಡೆಗಳಿಗೆ ಭೇಟಿ
ಭಾನುವಾರ ರಾತ್ರಿ ಧರೆ ಕುಸಿತಕ್ಕೊಳಗಾಗಿ ಹಾನಿಗೀಡಾದ ಪ್ರದೇಶಗಳಿಗೆ ಶಾಶಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಾರೀ ಗಾತ್ರದಲ್ಲಿ ಧರೆ ಕುಸಿತಕ್ಕೊಳಗಾದ ಬೆಳ್ಳಿಪ್ಪಾಡಿ ಗುತ್ತಿನೆ ಮನೆಗೆ ಭೇಟಿ ನೀಡಿದ ಶಾಸಕರು ಅಲ್ಲಿ ಪರಿಶೀಲನೆ ನಡೆಸಿದರು. ಉಳಿದಂತೆ ಕೋಡಿಂಬಡಿ ಗ್ರಾಮ ಹಾಗೂ ನೆಕ್ಕಿಲಾಡಿ ಗ್ರಾಮದ ವಿವಿಧ ಕಡೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮುರಳೀಧರ್ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
ಭಾರೀ ಮಳೆಗೆ ಹೆಚ್ಚಿನ ಕಡೆಗಳಲ್ಲಿ ಅನಾಹುತವಾಗಿದೆ. ಧರೆ ಕುಸಿತ, ಮನೆಗಳಿಗೆ ಹಾನಿಯಾಗಿದೆ, ಗಾಳಿಗೆ ಅಡಿಕೆ ತೋಟ ಸೇರಿದಂತೆ ಎಲ್ಲಾ ಸ್ಥರಗಳಲ್ಲೂ ಹಾನಿಯುಂಟಾಗಿದೆ. ಮನೆ ಹಾನಿಗೊಳಗಾದರೆ, ಅಡಿಕೆ ತೋಟ ನಾಶವಾದರೆ ಸರಕಾರದಿಂದ ನಿಗಧಿತ ಪರಿಹಾರ ದೊರಕುತ್ತದೆ. ಉಳಿದಂತೆ ಹಾನಿಗೊಳಗಾದ ಕೆಲವು ವಿಚಾರಗಳಿಗೆ ಸರಕಾರದಿಂದ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಸರಕಾರದ ಗಮನಕ್ಕೆ ತಂದು , ಮುಖ್ಯಮಂತ್ರಿಗಳ ಜೊತೆಯೂ ಚರ್ಚೆ ನಡೆಸಿ ಹೆಚ್ಚಿನ ಪರಿಹಾರ ಕೊಡುವಂತೆ ಕೇಳಿಕೊಳ್ಳಲಿದ್ದೇನೆ. ತುರ್ತು ವ್ಯವಸ್ಥೆಗಾಗಿ ಗ್ರಾಪಂ ಗಳಿಗೆ ಈಗಾಗಲೇ ಅನುದಾನವನ್ನು ಒದಗಿಸಲಾಗಿದೆ. ಜನತೆ ಅತ್ಯಂತ ಜಾಗರೂಕರಾಗಿರಬೇಕು. ಪೃಕೃತಿಯ ಮುಂದೆ ನಾವು ಯಾರೂ ಏನೂ ಅಲ್ಲ ಎಂಬುದನ್ನು ಅರಿತುಕೊಳ್ಳುವ ಮೂಲಕ ಧರೆ ಇದ್ದ ಕಡೆಗಳಲ್ಲಿ ಅತ್ಯಂತ ಜಾಗೃತೆಯಿಂದ ಇರಬೇಕು.- ಅಶೋಕ್ ರೈ, ಶಾಸಕರು, ಪುತ್ತೂರು
ಸ್ಥಳೀಯ
Rakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಬೆಳ್ತಂಗಡಿ: ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಕ್ಷಿತ್ ಶಿವರಾಂ, ವಳಾಲು ಟೋಲ್ ಗೇಟ್ನಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಹೊಸ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಸಂದರ್ಭದಲ್ಲೇ ರಸ್ತೆ ತೆರಿಗೆ ಪಾವತಿಸಲಾಗುತ್ತಿದ್ದರೂ, ರಸ್ತೆ ಬಳಕೆಯ ಹೆಸರಿನಲ್ಲಿ ಮತ್ತೆ ಮತ್ತೆ ಟೋಲ್ ಶುಲ್ಕ ಹೆಚ್ಚಿಸುತ್ತಿರುವುದು ಎಷ್ಟು ಸಮಂಜಸ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ನಿಯಮಗಳ ಪ್ರಕಾರ ಎರಡು ಟೋಲ್ ಪ್ಲಾಜಾಗಳ ನಡುವೆ ನಿಗದಿತ ಅಂತರ ಇರಬೇಕು. ಆದರೆ, ಬ್ರಹ್ಮರಕೊಟ್ಟು ಟೋಲ್ ಗೇಟ್ನಿಂದ 35 ಕಿ.ಮೀ.ಗಿಂತ ಕಡಿಮೆ, ಕೇವಲ 32 ಕಿ.ಮೀ. ಅಂತರದಲ್ಲೇ ವಳಾಲು ಟೋಲ್ ಆರಂಭಿಸಿ ಎರಡು ಕಡೆ ಶುಲ್ಕ ವಸೂಲಿ ಮಾಡುತ್ತಿರುವುದು ನಿಯಮಬಾಹಿರ ಎಂದು ರಕ್ಷಿತ್ ಶಿವರಾಂ ದೂರಿದ್ದಾರೆ.
ವಳಾಲು ಭಾಗದ ಸ್ಥಳೀಯರು ಬ್ಯಾಂಕ್, ಸಹಕಾರಿ ಹಾಲು ಡಿಪೋ, ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ತೆರಳುವಂತಹ ದೈನಂದಿನ ಚಟುವಟಿಕೆಗಳಿಗೂ ಪ್ರತಿನಿತ್ಯ ₹250 ವರೆಗೆ ಟೋಲ್ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಜನವಿರೋಧಿ ಟೋಲ್ ದರ ಏರಿಕೆ ವಿರುದ್ಧ ಧ್ವನಿ ಎತ್ತದಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಟೀಕಿಸಿದ್ದಾರೆ.
ವಾಹನ ಸವಾರರಿಗೆ ಹೊರೆಯಾಗುವ ರೀತಿಯಲ್ಲಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಶ್ನಿಸುವ ಧೈರ್ಯ ಶಾಸಕರಿಗಿದೆಯೇ ಎಂದು ರಕ್ಷಿತ್ ಶಿವರಾಂ ಸವಾಲು ಹಾಕಿದ್ದಾರೆ.
ವಳಾಲು ಟೋಲ್ ದರ ಏರಿಕೆಯನ್ನು ತಕ್ಷಣ ಮರುಪರಿಶೀಲಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು. ಟೋಲ್ ದರ ನಿಗದಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ ಸ್ಥಳೀಯರಿಗೆ ವಿನಾಯಿತಿ ನೀಡಬೇಕು. ಬ್ರಹ್ಮರಕೊಟ್ಟು ಟೋಲ್ ಗೇಟ್ ತೆರವುಗೊಳಿಸಬೇಕು ಹಾಗೂ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಉದ್ದೇಶಿತ ಟೋಲ್ ಗೇಟ್ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅಂತರ ರಾಜ್ಯ
Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?
ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.
ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.
ರಾಜಕೀಯ
Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.
1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.















