ಬಿಗ್ ನ್ಯೂಸ್
Illegal sand miners-ಅಕ್ರಮ ಮರಳುಗಾರಿಕೆ ನಡೆಸುವವರಿಂದ ಮರಳು ಪಡೆದುಕೊಂಡವರ ಮೇಲೆ ಕೇಸ್ ದಾಖಲು – ದ.ಕ ಪೊಲೀಸ್ ಎಚ್ಚರಿಕೆ
ಅಕ್ರಮ ಮರಳುಗಾರಿಕೆ ನಡೆಸುವವರೆಲ್ಲ ಮರಳುಗಾರಿಕೆ ನಿಲ್ಲಿಸಬೇಕು ಮತ್ತು ಅಕ್ರಮ ಮರಳು ಖರೀದಿಸುವವರಿಗೂ ಕೇಸ್ ದಾಖಲಾಗುತ್ತದೆ ಎಂದು ದಕ್ಷಿಣ ಕನ್ನಡ ನೂತನ ಎಸ್ಪಿ ಆದೇಶಿಸಿದ್ದಾರೆ.
ಪುತ್ತೂರು : ಅಕ್ರಮ ಮರಳುಗಾರಿಕೆ ನಡೆಸುವವರೆಲ್ಲ ಮರಳುಗಾರಿಕೆ ನಿಲ್ಲಿಸಬೇಕು ಮತ್ತು ಅಕ್ರಮ ಮರಳು ಖರೀದಿಸುವವರಿಗೂ ಕೇಸ್ ದಾಖಲಾಗುತ್ತದೆ ಎಂದು ದಕ್ಷಿಣ ಕನ್ನಡ ನೂತನ ಎಸ್ಪಿ ಆದೇಶಿಸಿದ್ದಾರೆ. ಅಕ್ರಮ ಚಟುವಟಿಕೆಗಳನ್ನು ಮಾಡುವವರಿಗೆ ಸಾರ್ವಜನಿಕರು ಬೆಂಬಲ ನೀಡಬಾರದು. ಎಲ್ಲರೂ ಕಾನೂನು ಪಾಲಿಸಬೇಕು. ಜನರ ಸಮಸ್ಯೆ ಆಲಿಸುವ ಕೆಲಸವನ್ನು ಇಲಾಖೆ ಮಾಡುತ್ತದೆ ಎಂದು ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕ ಡಿ.ಎನ್.ಈರಯ್ಯ ಹೇಳಿದರು.
ಜೂ.3ರಂದು ಸವಣೂರು ಗ್ರಾ.ಪಂ.ವತಿಯಿಂದ ಗ್ರಾ.ಪಂ.ನ ಕುಮಾರಧಾರ ಸಭಾಂಗಣದಲ್ಲಿ ನಡೆದ ಪೊಲೀಸ್ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.
ಅಪ್ರಾಪ್ತ ವಯಸ್ಕರ ಕೈಯಲ್ಲಿ ವಾಹನ ಚಲಾಯಿಸಲು ಕೊಡಬೇಡಿ.ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡ್ ಮಾಡಿದವರ ಮೇಲೆ ಈಗಾಗಲೇ ಪ್ರಕರಣ ದಾಖಲಾಗಿದೆ. ಪೊಲೀಸ್ ಇಲಾಖೆ ಕಾನೂನು ಪಾಲನೆ ಮತ್ತು ಸುವ್ಯವಸ್ಥೆ ಕಾಪಾಡಿಕೊಳ್ಳುವ ಜತೆಗೆ ಪ್ರವಾಹ ಸಂದರ್ಭದಲ್ಲೂ ಕೆಲಸ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಇಲಾಖೆಯ ಜತೆಗೆ ಸಾರ್ವಜನಿಕರೂ ಸಹಕರಿಸಬೇಕು.ಸಾಮಾನ್ಯ ವ್ಯಕ್ತಿಗೂ ಕೂಡ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ ಎಂದರು.
ವಾಹನ ತಪಾಸಣೆ ಸಾಮಾನ್ಯ ಪ್ರಕ್ರಿಯೆ: ಸಾರ್ವಜನಿಕ ವಾಹನವನ್ನು ತಪಾಸಣೆ ನಡೆಸುವುದು ಸಾಮಾನ್ಯ ಪ್ರಕ್ರಿಯೆ. ಇದಕ್ಕೆ ಜನ ಭಯಭೀತರಾಗುವುದು ಬೇಡ. ಕಾರು ಸಹಿತ ಇತರ ವಾಹನಗಳಲ್ಲಿ ಟಂಟ್ ಗ್ಲಾಸ್ ಹಾಕಿದ್ದರೆ ಕೂಡಲೇ ತೆರವು ಮಾಡಬೇಕು. ಕೆಲ ವಾಹನದವರು ಪ್ರಖರ ಬೆಳಕು ಸೂಸುವ ಲೈಟ್ ಅಳವಡಿಸಿ ಇತರ ವಾಹನದವರಿಗೆ ಸಮಸ್ಯೆಯಾಗುತ್ತಿದ್ದಾರೆ.ಈ ಬಗ್ಗೆಯೂ ಕಾರ್ಯಾಚರಣೆ ನಡೆಸುತ್ತಿದ್ದೇವೆ.ಕಾನೂನು ಪಾಲನೆ ಎಲ್ಲರೂ ಮಾಡಬೇಕು.ಉಲ್ಲಂಘಿಸಿದರೆ ಕ್ರಮ ಅನಿವಾರ್ಯ ಎಂದರು.
ಮಹಿಳೆ ಮತ್ತು ಮಕ್ಕಳ ಭದ್ರತೆ : ಹಿರಿಯರು, ಮಹಿಳೆಯರು ಮತ್ತು
ಮಕ್ಕಳ ಭದ್ರತೆ ದೃಷ್ಟಿಯಿಂದ ಇಲಾಖೆ ವಿಶೇಷ ಗಮನಹರಿಸುತ್ತಿದೆ. ಯಾವುದೇ ಸಮಸ್ಯೆ ಬಂದರೂ ನೇರವಾಗಿ ಇಲಾಖೆಯ ಗಮನಕ್ಕೆ ತನ್ನಿ. ಅಗತ್ಯ ಬಿದ್ದಲ್ಲಿ 112ಗೆ ಕರೆ ಮಾಡಿ, ಕೆಲವೇ ನಿಮಿಷಗಳಲ್ಲಿ ಇಲಾಖೆ ಬರಲಿದೆ. ಸೈಬರ್ ಕ್ರೈಮ್, ಹ್ಯಾಕರ್‌ಗಳಿಂದ ಹಣವರ್ಗಾವಣೆ ಸೇರಿದಂತೆ ಸೈಬರ್ ಕ್ರೈಮ್ ಸಂಬಂಧಿಸಿದಂತೆ 1930ಗೆ ಕರೆಮಾಡಬಹುದು ಎಂದರು.
ಅಕ್ರಮ ಮರಳು ಪಡೆದುಕೊಂಡವರ ಮೇಲೂ ಕೇಸು: ಪರವಾನಿಗೆ ರಹಿತ ಅಕ್ರಮ ಮರಳನ್ನು ಪಡೆದುಕೊಂಡವರಮೇಲೂ ಇಲಾಖೆ ಕೇಸು ದಾಖಲು ಮಾಡುತ್ತದೆ. ಅಕ್ರಮಗಳಿಗೆ ಯಾವತ್ತೂ ಪ್ರೋತ್ಸಾಹ ನೀಡಬೇಡಿ.ಪರವಾನಿಗೆ ಪಡೆದುಕೊಂಡವರಿಂದ ಮರಳು ಪಡೆದುಕೊಳ್ಳಿ ಎಂದರು.
24X7 ಕೆಲಸ, ವದಂತಿಗಳಿಗೆ ಕಿವಿಕೊಡಬೇಡಿ: ಸಾರ್ವಜನಿಕರ ರಕ್ಷಣೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ 24×7 ಕೆಲಸ ಮಾಡುತ್ತಿದೆ.ಸುಖಾ ಸುಮ್ಮನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಮಾಡಬೇಡಿ ಹಾಗೂ ಆಕ್ಷೇಪಾರ್ಹ ಪೋಸ್ಟ್ ಮಾಡುವುದು,ಫಾರ್‌ವರ್ಡ್ ಮಾಡುವುದೂ ಅಪರಾಧ.ಯಾವುದೇ ಮುಲಾಜಿಲ್ಲದೆ ಅಂತಹವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಪಾಯಕಾರಿ ತಿರುವು, ಅಪಘಾತ ವಲಯಗಳ ಗುರುತಿಸುವಿಕೆ: ಸವಣೂರಿನ ಚಾಪಲ್ಲ,ಸರ್ವೆ, ವಿದ್ಯಾರಶ್ಮಿ ಮುಂಭಾಗ ಸೇರಿದಂತೆ ಕೆಲವೆಡೆ ಅಪಾಯಕಾರಿ ತಿರುವುಗಳಿವೆ. ಅಲ್ಲದೆ ಅಪಘಾತ ವಲಯಗಳನ್ನು ಗುರುತಿಸಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದು ಎಸೈ ಈರಯ್ಯ ಹೇಳಿದರು.
ಸಾರ್ವಜನಿಕರ ಅಭಿಪ್ರಾಯ: ಶ್ರೀಧರ್ ಗೌಡ ಅಂಗಡಿಹಿತ್ಲು ಮಾತನಾಡಿ, ರಾತ್ರಿ ಹೊತ್ತು ಕಲೆವೆಡೆ ಅಂಗಡಿಗಳಲ್ಲಿ ಸುಖಾ ಸುಮ್ಮನೆ ಜನ ಸೇರಿಕೊಳ್ಳುವುದು ಕಂಡು ಬರುತ್ತಿದೆ.
ಪ್ರಖರ ತೀವ್ರತೆಯ ಲೈಟ್ ಗಳನ್ನು ಹಾಕಿ ಕೆಲ ವಾಹನದವರು ಹೋಗುತ್ತಿದ್ದಾರೆ. ಇದರಿಂದ ದ್ವಿಚಕ್ರ ವಾಹನ ಸವಾರರಿಗೆ ತೊಂದರೆಯಾಗುತ್ತದೆ.ಪಾಲ್ತಾಡಿಯ ಅಂಕತಡ್ಕದಲ್ಲೂ ಪೊಲೀಸ್ ಜನ ಸಂಪರ್ಕ ಸಭೆ ಮಾಡಿ ಎಂದರು.
ಗ್ರಾ.ಪಂ.ಸದಸ್ಯ ಸತೀಶ್ ಅಂಗಡಿಮೂಲೆ ಮಾತನಾಡಿ, ಸವಣೂರಿನ ವಿಷ್ಣುಪುರ ಪಾಲ್ತಾಡಿಯ ಬಂಬಿಲ ಕ್ರಾಸ್ ಬಳಿ ಹಂಪ್ಸ್ ಅಳವಡಿಕೆ, ಸವಣೂರು ರೈಲ್ವೆ ಕ್ರಾಸಿಂಗ್ ಬಳಿ ಎರಡೂ ಕಡೆಗಳಲ್ಲಿ ಸಿಸಿ ಕೆಮರಾ ಅಳವಡಿಕೆಗೆ ರೈಲ್ವೇ ಇಲಾಖೆಗೆ ಸೂಚನೆ ನೀಡಬೇಕು ಎಂದರು.
ಪ್ರವಾಹದಿಂದ ಪಾಲ್ತಾಡಿ ಗ್ರಾಮದ ಬಯಲು ಪ್ರದೇಶ, ಗದ್ದೆಗಳಲ್ಲಿ ಮರಳು ತುಂಬಿಕೊಂಡಿದೆ. ಇದನ್ನು ತೆರವು ಮಾಡಲು ಇಲಾಖೆ ಅವಕಾಶ ನೀಡಬೇಕು ಎಂದರು.
ಉತ್ತರಿಸಿದ ಎಸೈ ಅವರು ಈ ಕುರಿತು ಗ್ರಾ.ಪಂ.ನಲ್ಲಿ ನಿರ್ಣಯ ಕೈಗೊಂಡು ಗಣಿ ಇಲಾಖೆಯ ಅನುಮತಿ ಪಡೆದುಕೊಂಡು ತೆರವು ಮಾಡಿ ಎಂದರು.
ಗ್ರಾ.ಪಂ.ಸದಸ್ಯ ಬಾಬು ಎನ್ ಮಾತನಾಡಿ, ಅಟೋ ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು ಮಿತಿ ಮೀರಿ ತುಂಬಿಸಿಕೊಂಡು ಹೋಗುತ್ತಿದ್ದಾರೆ.ಈ ಕುರಿತು ಕ್ರಮ ಕೈಗೊಳ್ಳಿ ಎಂದರು. ಈ ಕುರಿತು ರಿಕ್ಷಾ ಚಾಲಕರ ಸಭೆ ನಡೆಸಿ ಸೂಚನೆ ನೀಡಲಾಗುವುದು ಎಂದರು.
ಗ್ರಾ.ಪಂ.ಮಾಜಿ ಉಪಾಧ್ಯಕ್ಷ ರಾಕೇಶ್ ರೈ ಕಡೆಂಜಿ ಮಾತನಾಡಿ, ಸವಣೂರಿನಲ್ಲಿ ಗಾಂಜಾ ಸೇವನೆಯ ಘಟನೆಗಳು ನಡೆಯುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳಿ ಎಂದರು.
ಎಸೈ ಈರಯ್ಯ ಅವರು ಉತ್ತರಿಸಿ, ಗಾಂಜಾ ಸೇವನೆ ಹಾಗೂ ಮಾರಾಟ ಕಂಡು ಬಂದಲ್ಲಿ ಇಲಾಖೆಯ ಗಮನಕ್ಕೆ ತನ್ನಿ. ಅಲ್ಲದೇ ಈ ಕುರಿತು ಇಲಾಖೆ ಕೂಡ ಗಂಭೀರವಾಗಿ ಪರಿಗಣಿಸಿ ಕಾರ್ಯಾಚರಣೆ ನಡೆಸುತ್ತಿದೆ ಎಂದರು.
ಗ್ರಾ.ಪಂ.ಸದಸ್ಯ ರಫೀಕ್ ಎಂ.ಎ. ಮಾತನಾಡಿ, ಗಾಂಜಾ ಪ್ರಕರಣಗಳ ಬಗ್ಗೆ ಇಲಾಖೆಗೆ ಮಾಹಿತಿ ನೀಡಿದರೆ ಅಕ್ರಮ ಗಾಂಜಾ ಮಾರಾಟ, ಸೇವನೆ ಮಾಡುವವರು ನಮ್ಮ ಮೇಲೆ ದಾಳಿ ಮಾಡುವಂತಹ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಎಸೈ ಅವರು ಇಲಾಖೆಗೆ ಮಾಹಿತಿ ನೀಡಿದವರ ವಿವರ ಗೌಪ್ಯವಾಗಿರುತ್ತದೆ.ಯಾವುದೇ ಅಂಜಿಕೆ ಇಲ್ಲದೆ ಗಮನಕ್ಕೆ ತನ್ನಿ ಎಂದರು.
ಗ್ರಾ.ಪಂ.ಸದಸ್ಯ ತಾರಾನಾಥ ಬೊಳಿಯಾಲ ಮಾತನಾಡಿ, ಪಾಲ್ತಾಡಿ ಶಾಲೆಗೂ ಬೀಟ್ ಪೊಲೀಸರು ನಿಯಮಿತವಾಗಿ ಬರುವ ವ್ಯವಸ್ಥೆಯಾಗಬೇಕು ಎಂದರು.
ವೇದಿಕೆಯಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್., ಉಪಾಧ್ಯಕ್ಷೆ ಜಯಶ್ರೀ ಕುಚ್ಚೆಜಾಲು ಸವಣೂರು ಬೀಟ್ ಪೊಲೀಸ್ ಶ್ರೀಧರ್ ಉಪಸ್ಥಿತರಿದ್ದರು. ಸಭೆಯಲ್ಲಿ ಗ್ರಾ.ಪಂ.ಸದಸ್ಯರಾದ ಅಬ್ದುಲ್ ರಝಾಕ್, ಗಿರಿಶಂಕರ ಸುಲಾಯ, ಚೆನ್ನು ಮುಂಡೋತಡ್ಕ, ರಾಜೀವಿ ವಿಶೆಟ್ಟಿ, ಭರತ್ ರೈ ಪಾಲ್ತಾಡಿ, ಚಂದ್ರಾವತಿ ಸುಣ್ಣಾಜೆ, ಯಶೋಧಾ ನೂಜಾಜೆ, ಚೇತನಾ ಶಿವಾನಂದ ಪಾಲ್ತಾಡಿ ಮತ್ತು ಗ್ರಾ.ಪಂ.ಸಿಬ್ಬಂದಿಗಳಾದ ಪ್ರಮೋದ್ ಕುಮಾರ್, ದಯಾನಂದ ಮಾಲೆತ್ತಾರು, ಜಯಾಕೆ., ಜಯ ಶ್ರೀ, ಶಾರದಾ, ಯತೀಶ್ , ದೀಪಿಕಾ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ವಸಂತ ಶೆಟ್ಟಿ ಸ್ವಾಗತಿಸಿ,ವಂದಿಸಿದರು.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತರ ರಾಜ್ಯ
Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.
ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.
ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.
ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.
SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:
- ವಾಹನದ ನೋಂದಣಿ ಸಂಖ್ಯೆ.
- ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
- ವಾಹನದ ವಿಮೆ ಅವಧಿ ಮುಗಿದ ದಿನಾಂಕ.
- ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ. - ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
- ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.
ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.
ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.
ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.
-
ಬಿಗ್ ನ್ಯೂಸ್22 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್15 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ20 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು23 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized22 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್23 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ21 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್21 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















