ಬಿಗ್ ನ್ಯೂಸ್
Mangalore Police | ಪ್ರಚೋದನಕಾರಿ ಸಂದೇಶ ಹರಿಬಿಟ್ಟವರಿಗೆ ಮಂಗಳೂರು ಪೊಲೀಸರ ಬ್ರಹ್ಮಾಸ್ತ್ರ..! ಐವರ ವಶಕ್ಕೆ ಪಡೆದು ‘Trolling Not Fun Any More’ ಪೋಸ್ಟರ್ ಅಂಟಿಸಿ ಫೋಟೋ ಬಿಡುಗಡೆ
ಮಂಗಳೂರು: ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಶಾಂತಿ ನೆಮ್ಮದಿಗೆ ಭಂಗವನ್ನುಂಟು ಮಾಡಲು ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸಿ, ಸಮಾಜದ ಶಾಂತಿ ನೆಮ್ಮದಿಗೆ ಅಪಾಯವುಂಟು ಮಾಡುವ ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ವ್ಯಕ್ತಿಗಳ ಪತ್ತೆಗಾಗಿ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಿಂದ (Mangalore Police) ವಿಶೇಷ ತಂಡಗಳನ್ನು ರಚನೆ ಮಾಡಿದ್ದು, ಈ ಕೆಳಕಂಡ ಪ್ರಕರಣಗಳಲ್ಲಿ ಆರೋಪಿತರನ್ನು ಪತ್ತೆ ಮಾಡಿ ದಸ್ತಗಿರಿ ಮಾಡಲಾಗಿದೆ. ಅವರ ಶರ್ಟ್ ಗೆ ‘Trolling Not Fun Any More’ ಎಂಬ ಪೋಸ್ಟರ್ ಅಂಟಿಸಿ ಫೋಟೋ ಬಿಡುಗಡೆ ಮಾಡಲಾಗಿದೆ.
ಪೊಲೀಸ್ ವಶಕ್ಕೆ ಪಡೆದವರ ವಿವರ ಹೀಗಿದೆ:
1.ಮೊಹಮ್ಮದ್ ಅಸ್ಲಾಂ, ಪ್ರಾಯ:23 ವರ್ಷ, ತಂದೆ:ಅಬೂಬಕ್ಕರ್ ಸಿದ್ದಿಕ್, ವಿಳಾಸ: ಗ್ರೀನ್ ಹೌಸ್, ಎನ್.ಎಸ್ ರೋಡ್, ಹೆಜಮಾಡಿ, ಉಡುಪಿ ಜಿಲ್ಲೆಎಂಬಾತನು ಸೌದಿ ಅರೇಬಿಯಾದಿಂದ team_jokerzzz._ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 88/2025 ಕಲಂ.192, 353 (2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣದ ಆರೋಪಿ ಮೊಹಮ್ಮದ್ ಅಸ್ಲಾಂ ಎಂಬಾತನ ವಿರುದ್ದ LOC ಹೊರಡಿಸಿ, ದಸ್ತಗಿರಿ ಮಾಡಲಾಗಿದೆ. ತನಿಖೆ ಮುಂದುವರಿದಿದೆ.
2. ಚೇತನ್ ಪ್ರಾಯ: 20 ತಂದೆ: ನಾಗರಾಜು ಬಂಗೇರ, ವಿಳಾಸ: ಅಶ್ರಯ ಕಾಲೋನಿ, 3 ನೇ ಬ್ಲಾಕ್, ಕಾಟಿಪಳ್ಳ,ಇಡ್ಯಾ ಗ್ರಾಮ, ಸುರತ್ಕಲ್, ಮಂಗಳೂರು, ಮತ್ತು ನಿತಿನ್ ಅಡಪ ಪ್ರಾಯ:23 ವರ್ಷ, ತಂದೆ: ಯೋಗಿಶ್ ಅಡಪ ವಿಳಾಸ:ಖಂಡಿಗೆ ಪಾಡಿ, ಚೇಳ್ಯಾರ್, ಹಳೆಯಂಗಡಿ ಪೋಸ್ಟ್ ಮಂಗಳೂರು ಎಂಬುವರು ಮುಸ್ಲಿಂ ಹೆಸರಿನ ಸಿಮ್ ಕಾರ್ಡ್ ನ್ನು ಬಳಸಿಕೊಂಡು team_karna_surathkal ಎಂಬ Instagram ಫೇಜ್ ನ್ನು ತೆರೆದಿದ್ದು, ಸದ್ರಿ ಪೇಜ್ ನಲ್ಲಿ ಚೆನ್ನಪ್ಪ @ ಮುತ್ತು ಸುರತ್ಕಲ್ ಎಂಬಾತನು ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 58/2025 ಕಲಂ. 196(1), 353(2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣದಲ್ಲಿ ಚೇತನ್ ಮತ್ತು ನಿತಿನ್ ಅಡಪ ಎಂಬವರನ್ನು ಪತ್ತೆ ಮಾಡಿ ದಸ್ತಗಿರಿ ಮಾಡಿದ್ದು, ತನಿಖೆ ಮುಂದುವರಿದಿದೆ.
3.ರಿಯಾಝ್ ಇ್ರಬಾಹಿಂ, ಪ್ರಾಯ:30 ವರ್ಷ, ತಂದೆ: ಇಬ್ರಾಹಿಂ ವಿಳಾಸ: ಕೊಪ್ಪಲ್ ಹೌಸ್, ಅರ್ಕುಳ, ಫರಂಗಿಪೇಟೆ ಮಂಗಳೂರು ಎಂಬಾತನು ಸೌದಿ ಅರೇಬಿಯಾದಿಂದ Beary_royal_nawab ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ, ಆಧಾರದಲ್ಲಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 44/2025 ಕಲಂ. 353 (2) ಭಾರತೀಯ ನ್ಯಾಯ ಸಂಹಿತೆ ಮತ್ತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 42/2025 ಕಲಂ.353 (1) (c), 353(2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿರುತ್ತದೆ. ಸದ್ರಿ ಪ್ರಕರಣದಲ್ಲಿ ರಿಯಾಝ್ ಇ್ರಬಾಹಿಂ ಎಂಬಾತನ ವಿರುದ್ದ LOC ಹೊರಡಿಸಿ, ದಸ್ತಗಿರಿ ಮಾಡಲಾಗಿದೆ. ತನಿಖೆ ಮುಂದುವರಿದಿದೆ.
4.ಜಮಾಲ್ ಝಾಕೀರ್, ಪ್ರಾಯ:21 ವರ್ಷ, ತಂದೆ:ದಿ.ಮೊಹಮ್ಮದ್ ಮುಸ್ತಾಫ, ವಾಸ:ಕಿಲೇರಿಯಾ ಮಸೀದಿಯ ಬಳಿ, ಕಸಬಾ ಬೆಂಗ್ರೆ,ಕೂಳೂರು ಅಂಚೆ ಮಂಗಳೂರು ನಗರ ಎಂಬಾತನು Troll_bengare_ro_makka ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 44/2025 ಕಲಂ.353 (1) (c), 353(2) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ. ಸದ್ರಿ ಪ್ರಕರಣದಲ್ಲಿ ಜಮಾಲ್ ಝಾಕೀರ್ ಎಂಬಾತನನ್ನು ದಸ್ತಗಿರಿ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ.
5. ಗುರು ಪ್ರಸಾದ್, ವಾಸ: ಕೊಳವೈಲ್, ಹಳೆಯಂಗಡಿ, ಮಂಗಳೂರು ನಗರ ಎಂಬಾತನು Guru dprasad Haleyangadi ಎಂಬ Facebook ಖಾತೆಯ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 53/2025 ಕಲಂ.196(1),(A),353(2),79,56 ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ, ಸದ್ರಿ ಗುರು ಪ್ರಸಾದ್ ಎಂಬಾತನನ್ನು ದಸ್ತಗಿರಿ ಮಾಡಲಾಗಿದೆ. ತನಿಖೆ ಮುಂದುವರಿದಿದೆ.
ಸದ್ರಿ ಪ್ರಕರಣಗಳ ತನಿಖೆಯನ್ನು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಸುಧೀರ್ ಕುಮಾರ್ ರೆಡ್ಡಿ ಐ.ಪಿ.ಎಸ್, ಉಪ ಪೊಲೀಸ್ ಆಯುಕ್ತರರಾದ ಶ್ರೀ ಸಿದ್ದಾರ್ಥ ಗೋಯಲ್ ಐ.ಪಿ.ಎಸ್ (ಕಾ ಮತ್ತು ಸು) ಮತ್ತು ಶ್ರೀ ರವಿಶಂಕರ್ (ಅ ಮತ್ತು ಸಂ) ರವರ ಮಾರ್ಗದರ್ಶನದಲ್ಲಿ, ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿರವರ ವಿಶೇಷ ತಂಡಗಳಿಂದ ಮುಂದುವರೆಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಬಿಗ್ ನ್ಯೂಸ್
Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ
ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.
ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
-
Uncategorized15 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized18 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು20 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ19 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ21 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್20 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ20 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
ಬಿಗ್ ನ್ಯೂಸ್21 hours agoಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ


















