ಸ್ಥಳೀಯ
Naveen Neriya-ಪೊಲೀಸರ ವಿರುದ್ಧ ದ್ವೇಷ ಭಾಷಣ: ನವೀನ್ ನೆರಿಯ ವಿರುದ್ಧ ಪ್ರಕರಣ ದಾಖಲು
ಪೊಲೀಸರನ್ನು ಉದ್ದೇಶಿಸಿ ದ್ವೇಷ ಭಾಷಣ ಮಾಡಿದ ಹಾಗೂ ಸಾರ್ವಜನಿಕರನ್ನು ಪ್ರಚೋದಿಸಿದ ಆರೋಪದ ಮೇಲೆ ನವೀನ್ ನೆರಿಯ ಎಂಬ ವ್ಯಕ್ತಿಯ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ, ಜೂನ್ 05, 2025: ಪೊಲೀಸರನ್ನು ಉದ್ದೇಶಿಸಿ ದ್ವೇಷ ಭಾಷಣ ಮಾಡಿದ ಹಾಗೂ ಸಾರ್ವಜನಿಕರನ್ನು ಪ್ರಚೋದಿಸಿದ ಆರೋಪದ ಮೇಲೆ ನವೀನ್ ನೆರಿಯ ಎಂಬ ವ್ಯಕ್ತಿಯ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂ 4 ರಂದು ಸಂಜೆ, ಕಡಬ ಪೊಲೀಸ್ ಠಾಣೆಯ ಸಮೀಪ, ಕಡಬ – ಸುಬ್ರಹ್ಮಣ್ಯ ಮುಖ್ಯ ರಸ್ತೆಯಿಂದ ಪೊಲೀಸ್ ಠಾಣೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಧಾರ್ಮಿಕ ಸಂಘಟನೆಗಳ ಕೆಲವು ಪ್ರಮುಖರು ಸಭೆ ಸೇರಿದ್ದರು. ಈ ಸಂದರ್ಭದಲ್ಲಿ ನವೀನ್ ನೆರಿಯ ಎಂಬಾತನು ಪೊಲೀಸರನ್ನು ಗುರಿಯಾಗಿಸಿಕೊಂಡು ತೀವ್ರ ಸ್ವರೂಪದ ದ್ವೇಷ ಕಾರುವಂತಹ ಭಾಷಣ ಮಾಡಿದ್ದಲ್ಲದೆ, ಅಲ್ಲಿ ನೆರೆದಿದ್ದ ಸಾರ್ವಜನಿಕರನ್ನು ಉದ್ದೇಶಿಸಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಘಟನೆಯಿಂದಾಗಿ ಸ್ಥಳೀಯವಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳಿದ್ದ ಕಾರಣ, ಕಡಬ ಪೊಲೀಸರು ಸ್ವಯಂಪ್ರೇರಿತವಾಗಿ ಅಥವಾ ದೂರಿನನ್ವಯ ಈ ಬಗ್ಗೆ ಕ್ರಮ ಕೈಗೊಂಡಿದ್ದಾರೆ. ನವೀನ್ ನೆರಿಯ ವಿರುದ್ಧ ಜೂ4 ರಂದು ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 42/2025 ರಂತೆ, ಭಾರತೀಯ ನ್ಯಾಯ ಸಂಹಿತೆ (BNS) 2023 ರ ಕಲಂ 353(2) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.
ಪ್ರಸ್ತುತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದ್ದು, ಆರೋಪಿಯ ವಿರುದ್ಧ ಮುಂದಿನ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ. ಈ ಘಟನೆಯು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ವ್ಯಕ್ತವಾಗಿದೆ.
ದಕ್ಷಿಣ ಕನ್ನಡ
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು

ಬೆಳ್ತಂಗಡಿ: ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಶಿಶಿಲ ಗ್ರಾಮದ ಮಂತಾಜೆ ನಿವಾಸಿ ದೀಪೇಶ್ (27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಕುರಿತು ಕಾರು ಚಾಲಕ ಶಿಶಿಲದ ರಘು ಎಂಬವರು ನೀಡಿದ ದೂರಿನಂತೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎದುರಿನ ಕಾರಿನ ಚಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸಿರುವುದಾಗಿ ದೂರು ನೀಡಿದರೂ, ಪೊಲೀಸರು ಅದನ್ನು ಪ್ರಥಮ ವರ್ತಮಾನ ವರದಿಯಲ್ಲಿ ಉಲ್ಲೇಖಿಸಿಲ್ಲ ಎಂದು ದೂರುದಾರರು ಆರೋಪಿಸಿದ್ದು ಚರ್ಚೆಗೆ ಗ್ರಾಸ ಒದಗಿಸಿದೆ.
ದೂರಿನಲ್ಲಿ ಏನಿದೆ ?
ಸೆ.29ರಂದು ನಸುಕಿನ ಜಾವ 1.30ರ ಸುಮಾರಿಗೆ ಶಿಶಿಲದಿಂದ ಮಂತ್ರಾಲಯಕ್ಕೆ ರಘು (32), ಶಿಶಿಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುಧೀನ್, ಸತೀಶ, ದೀಪೇಶ್, ದೀಪಕ್ ಅಲಿಯಾಸ್ ತಿರುಮಲೇಶ್ವರ ಹಾಗೂ ಶೋಭಿತ್ ಅಲಿಯಾಸ್ ನಾಗರಾಜ್ ಅವರು ಕಾರಿನಲ್ಲಿ ತೆರಳಿದ್ದರು. ರಘು ಕಾರು ಚಲಾಯಿಸುತ್ತಿದ್ದರು. ಉಜಿರೆ–ಚಾರ್ಮಾಡಿ ಮಾರ್ಗವಾಗಿ ಬಣಕಲ್ ದಾಟಿ ಮೂಡಿಗೆರೆ ಕಡೆಗೆ ತೆರಳುತ್ತಿದ್ದಾಗ, ನಸುಕಿನ ಜಾವ 3.40ರ ಸುಮಾರಿಗೆ ಸಬ್ಬೇನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.
ಎದುರಿನಿಂದ ಬಂದ ಕಾರಿನ ಚಾಲಕ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ತಪ್ಪು ಬದಿಯಲ್ಲಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ರಘು ಬಣಕಲ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಡಿಕ್ಕಿ ಹೊಡೆದ ಕಾರು ಕೆಎ–51 ಎಂಪಿ–9399 ನೋಂದಣಿಯ ಫೋರ್ಡ್ ಎಂಡೆವರ್ ಆಗಿದ್ದು, ಆಲ್ದೂರು ನಿವಾಸಿ ಅಮೋಘ್ ಡಿ.ಎಸ್. ಚಾಲನೆ ಮಾಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಪಘಾತದಲ್ಲಿ ದೀಪೇಶ್ ಅವರ ಕುತ್ತಿಗೆಗೆ ಹಾಗೂ ಸುಧೀನ್ ಅವರ ಎಡಭುಜಕ್ಕೆ ಗಾಯವಾಗಿತ್ತು. ರಘು, ಸತೀಶ, ನಾಗರಾಜ್ ಹಾಗೂ ದೀಪಕ್‌ಗೂ ಸಣ್ಣಪುಟ್ಟ ಗಾಯಗಳಾಗಿದ್ದವು. ಗಾಯಾಳುಗಳನ್ನು ಬಣಕಲ್‌ನ ಕೃಷ್ಣ ಆಸ್ಪತ್ರೆಗೆ ದಾಖಲಿಸಿ, ಬಳಿಕ ದೀಪೇಶ್ ಹಾಗೂ ಸುಧೀನ್ ಅವರನ್ನು ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ದೀಪೇಶ್ ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಮದ್ಯಪಾನದ ವಿಚಾರ ದಾಖಲಿಸಿಲ್ಲವೆಂದು ಆರೋಪ
ಚಾಲಕ ಅಮೋಘ್ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದರು ಎಂಬುದನ್ನು ಪೊಲೀಸರಿಗೆ ತಿಳಿಸಿದ್ದರೂ, ಎಫ್‌ಐಆರ್‌ನಲ್ಲಿ ಆ ಅಂಶ ದಾಖಲಿಸಿಲ್ಲ ಎಂದು ಗಾಯಾಳುಗಳು ಆರೋಪಿಸಿದ್ದಾರೆ. ಚಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದೂ ಅವರು ತಿಳಿಸಿದ್ದಾರೆ.
ಈ ಕುರಿತು ಬಣಕಲ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ದಿಲೀಪ್ ಅವರೊಂದಿಗೆ ಮಾತನಾಡಿದಾಗ ಸೂಕ್ತ ಸ್ಪಂದನೆ ದೊರೆಯಲಿಲ್ಲ ಎಂದು ಗಾಯಾಳುಗಳು ಆರೋಪಿಸಿದ್ದಾರೆ. ಈ ವಿಚಾರವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಸಿ.ಟಿ. ರವಿ, ಕೋಟಾ ಅವರ ಗಮನಕ್ಕೂ ತಂದಿದ್ದಾಗಿ ಅವರು ಹೇಳಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ದೂರು ನೀಡಲು ವಿಳಂಬವಾಯಿತು ಎಂದು ರಘು ತಿಳಿಸಿದ್ದಾರೆ. ಅವರ ದೂರಿನ ಮೇರೆಗೆ ಅ.1ರಂದು ಸಂಜೆ ಬಣಕಲ್ ಠಾಣೆಯಲ್ಲಿ ಅಪರಾಧ ಸಂಖ್ಯೆ 54/2026ರಂತೆ ಭಾರತೀಯ ನ್ಯಾಯ ಸಂಹಿತೆಯ ಕಲಂ 281 ಹಾಗೂ 125(ಎ) ಅಡಿ ಪ್ರಕರಣ ದಾಖಲಾಗಿದೆ. ಲಭ್ಯ ಎಫ್‌ಐಆರ್‌ನಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪದ ಉಲ್ಲೇಖವಿಲ್ಲ ಎಂದು ವರದಿಯಾಗಿದೆ
ಪುತ್ತೂರು
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು

ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ.
ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ನಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮೂಲಗಳ ಪ್ರಕಾರ, ಎಚ್‌ಟಿ (ಹೈಟೆನ್ಶನ್) ವಿದ್ಯುತ್ ಲೈನ್‌ನ ಜಿಒಎಸ್ (ಗ್ಯಾಂಗ್ ಆಪರೇಟಿಂಗ್ ಸ್ವಿಚ್) ತೆರೆಯುವ ಸಂದರ್ಭದಲ್ಲಿ ಅರ್ಥ್ ಆಗಿ ವಿದ್ಯುತ್ ಪ್ರವಹಿಸಿ ರವಿ ಗೌಡ ಅವರಿಗೆ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ.
ಕೆದಿಲ ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ತಮ್ಮ ಸೇವಾ ಮನೋಭಾವದಿಂದ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಅಪರಾಧ
Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.
ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
-
Uncategorized7 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized6 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ
-
ದಕ್ಷಿಣ ಕನ್ನಡ31 minutes ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು


















