Connect with us

ಬಿಗ್ ನ್ಯೂಸ್

ವಿಟ್ಲದ SSLC ಬಾಲಕಿ ಆತ್ಮಹತ್ಯೆ ಪ್ರಕರಣ : ಬಾಗಿಲು ತೆರೆದಿತ್ತು, ಮೃತದೇಹ ನೇತಾಡದೇ ಕಾಲುಗಳು ನೆಲದ ಮೇಲೆ ಇಳಿ ಬಿಟ್ಟಿತ್ತು, ಕುತ್ತಿಗೆ ಮೇಲೆ ಬೆರಳಿನ ಗುರುತಿತ್ತು; ಹಾಗಾಗಿ ಇದು ವ್ಯವಸ್ಥಿತ ಕೊಲೆ ಹಾಗೂ ಲವ್ ಜಿಹಾದ್ ಪ್ರಕರಣ : ಶರಣ್ ಪಂಪ್ ವೆಲ್

Published

on

Ad Widget

Ad Widget

Ad Widget

Ad Widget

ವಿಟ್ಲ: ಕನ್ಯಾನದ  ಅಪ್ರಾಪ್ತ ಪ.ಜಾತಿಯ ಬಾಲಕಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣವು,FIR  ಹಾಗೂ ಮಾಧ್ಯಮಗಳಲ್ಲಿ ವರದಿಯಾದಂತೆ ಆತ್ಮಹತ್ಯೆಯಲ್ಲ. ಮೃತದೇಹ ಪತ್ತೆಯಾದ ವೇಳೆ ಮನೆಯ ಬಾಗಿಲು ತೆರೆದಿತ್ತು ಹಾಗೂ ಕುತ್ತಿಗೆಗೆ  ನೇಣು ಬಿಗಿದ ಸ್ಥಿತಿಯಲ್ಲಿ ನೆಲದಿಂದ ಮೇಲೆ ನೇತಾಡಬೇಕಿದ್ದ ಬಾಲಕಿಯ ಕಾಲುಗಳು ನೆಲದ ಮೇಲೆ ಓರೆಯಾಗಿ ಇಳಿ ಬಿಟ್ಟಿತ್ತು. ಹೀಗಾಗಿ ಇದೊಂದು ವ್ಯವಸ್ಥಿತ ಕೊಲೆ ಎಂದು ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದರು.

Ad Widget

Ad Widget

Ad Widget

Ad Widget

ವಿಟ್ಲದ ಪ್ರೆಸ್‌ ಕ್ಲಬ್‌ ನಲ್ಲಿ ಗುರುವಾರ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು “ 14 ವರ್ಷದ ಬಾಲಕಿಯನ್ನು  30 ವರ್ಷ ಪ್ರಾಯದ ಸಾಹುಲ್ ಹಮೀದ್ ತನ್ನ ತೀಟೆ ತೀರಿಸುವುದಕ್ಕಾಗಿ ಹತ್ಯೆ ಮಾಡಿದ್ದಾನೆ. ಇದರಲ್ಲಿ ಆತನ ಮನೆಯವರು ಶಾಮೀಲಾಗಿದ್ದು ಅವರನ್ನು ಕೂಡ ಪ್ರಕರಣದಲ್ಲಿ ಸೇರಿಸಬೇಕು” ಎಂದು ಅವರು ಅಗ್ರಹಿಸಿದರು.

Ad Widget

Ad Widget alt="Ad Widget"/>

Ad Widget

” ಆರೋಪಿ ಸಾಹುಲ್ ಹಮೀದ್ ಬಾಲಕಿಯಲ್ಲಿ ಪ್ರೀತಿಸುವಂತೆ ಪೀಡಿಸುತ್ತಿದ್ದ  ಆಕೆಯ ಮೇಲೆ ವಾಮಾಚಾರ ಪ್ರಯೋಗಗಳನ್ನು ಮಾಡಿದ್ದ.  ಬಾಲಕಿಗೆ ಬುರ್ಕಾ ತೊಡಿಸಿ ಅವನ ಕುಟುಂಬದವರ ಸಹಕಾರದಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದ. ಈ ಎಲ್ಲ ವಿಚಾರವನ್ನು ಆಕೆಯ ತಾಯಿ ನಮ್ಮಲ್ಲಿ ಹೇಳಿದ್ದಾರೆ. ಹೀಗಾಗಿ ಇದೊಂದು ವ್ಯವಸ್ಥಿತ ಲವ್ ಜಿಹಾದ್ ಪ್ರಕರಣವಾಗಿದೆ. ಬಾಲಕಿ ಅತ್ಮಹತ್ಯೆ ಮಾಡಿಕೊಂಡ ಸಮಯ ಮನೆಯ ಒಂದು ಬಾಗಿಲು ತೆರೆದಿತ್ತು ಮತ್ತು ಬಾಲಕಿಯ ಕುತ್ತಿಗೆಯಲ್ಲಿ ಬೆರಳಿನ ಗುರುತೊಂದು ಇತ್ತೆಂಬ ಮಾಹಿತಿಯಿದೆ” ಎಂದು ಅವರು ವಿವರಿಸಿದರು

Ad Widget

Ad Widget <> Ad Widget

” ಆರೋಪಿ ಯುವಕ ಹಲವರ ಜತೆಗೆ ಸಂಪರ್ಕದಲ್ಲಿದ್ದು, ಕಿರುಕುಳವನ್ನು ನೀಡುತ್ತಿದ್ದ ಎಂಬ ಮಾಹಿತಿಯಿದೆ. ವಿಟ್ಲ ಪೊಲೀಸರಿಂದ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. 24ಗಂಟೆ ಕಳೆದರೂ ಆರೋಪಿಯ ಬಂಧನ ಮಾಡುವ ಕಾರ್ಯವಾಗಲಿ, ಮನೆಗೆ ತೆರಳಿ ತನಿಖೆ ನಡೆಸುವ ಕಾರ್ಯವಾಗಲಿ ಮಾಡಿಲ್ಲ. ಆರೋಪಿಯನ್ನು ಹಾಗೂ ಆತನ ಕುಟುಂಬವನ್ನು ಬಂಧಿಸಬೇಕು. ನ್ಯಾಯ ಸಿಗುವ ತನಕ ಹೋರಾಟ ನಡೆಸಲಾಗುವುದು” ಎಂದರು.

“ದಲಿತರಿಗೆ ಅನ್ಯಾಯವಾದಾಗ ಬೀದಿಗಿಳಿದು ಹೋರಾಟ ಮಾಡುವ ದಲಿತ ಸಂಘಟನೆಗಳು ತಮ್ಮ ಸಮುದಾಯದ ಬಾಲಕಿಗೆ ಅನ್ಯಾಯವಾದಾಗ ಆಕೆಯ ಹತ್ಯೆಯಾದಾಗ ಯಾಕೇ ಸುಮ್ಮನಿವೆ ಎಂದು ಪ್ರಶ್ನಿಸಿದ ಅವರು ಬಾಲಕಿ ಕುಟುಂಬಕ್ಕೆ ನ್ಯಾಯ ಸಿಗುವ ತನಕ ವಿಶ್ವ ಹಿಂದೂ ಪರಿಷದ್ ಹೋರಾಟ ನಡೆಸಲಿದ್ದು, ದಲಿತ ಸಂಘಟನೆಗಳು ಇದಕ್ಕೆ ಧ್ವನಿಯಾಗಬೇಕೆಂದು” ಅವರು ಕರೆ ನೀಡಿದರು.

Ad Widget

Ad Widget

ವಿಶ್ವ ಹಿಂದೂ ಪರಿಷದ್ ಜಿಲ್ಲಾ ಉಪಾಧ್ಯಕ್ಷ ಕೃಷ್ಣಪ್ಪ ಕಲ್ಲಡ್ಕ, ವಿಟ್ಲ ತಾಲೂಕು ಅಧ್ಯಕ್ಷ ಪದ್ಮನಾಭ ಕಟ್ಟೆ, ಕನ್ಯಾನ ಅಧ್ಯಕ್ಷ ಲೋಕೇಶ್, ಭಜರಂಗದಳ ಕನ್ಯಾನ ಸಂಚಾಲಕ ಚಂದ್ರಹಾಸ ಉಪಸ್ಥಿತರಿದ್ದರು.

ಪತ್ರಿಕಾಗೋಷ್ಟಿಯ ವಿಡಿಯೋ

ಮೃತ ಬಾಲಕಿಯ ಮನೆಗೆ ಭೇಟಿ :

 ಬಾಲಕಿ ವಾಸವಾಗಿದ್ದ  ಕಣಿಯೂರು ಮನೆಗೆ ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಅವರನ್ನೊಳಗೊಂಡ ತಂಡ ಬೇಟಿ ಮಾಡಿ  ಕುಟುಂಬದವರನ್ನು ಸಂತೈಸಿದರು.

 ಮೂಲತ: ಸುಳ್ಯದವರಾದ ಈ ಕುಟುಂಬ ಕಳೆದೆರಡು  ವರ್ಷಗಳಿಂದ ಕಣಿಯೂರಿನ ಮುಸ್ಲಿಂ ಒಬ್ಬರಿಗೆ ಸೇರಿದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಬಾಲಕಿಯ ತಂದೆ ಹಾಗು ತಾಯಿ ದಿನಗೂಲಿ ಕಾರ್ಮಿಕರಾಗಿದ್ದು, ಕರೋಪಾಡಿ ಹಾಗೂ ಅಸುಪಾಸಿನ  ಗ್ರಾಮದಲ್ಲಿ  ದುಡಿಯುತ್ತಿದ್ದರು. ತಂದೆ ಹಾಗೂ ತಾಯಿ ಕೆಲಸಕ್ಕೆ ತೆರಳಿದ ಬಳಿಕ ಅಲ್ಲಿಗೆ ಬರುತ್ತಿದ್ದ ಆರೋಪಿ ಸಾಹುಲ್ ಬಾಲಕಿಗೆ ತೊಂದರೆ ಕೊಡುತ್ತಿದ್ದ ಎಂಬ ಬಗ್ಗೆ ಬಾಲಕಿ ತಾಯಿ ನಿಯೋಗಕ್ಕೆ  ಮಾಹಿತಿ ನೀಡಿದ್ದಾರೆ.

ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ ಉಪಧ್ಯಕ್ಷ ಕೃಷ್ಣಪ್ಪ ಕಲ್ಲಡ್ಕ, ಬಿಜೆಪಿ ಮುಖಂಡ ದಯಾನಂದ ಉಜಿರೆಮಾರ್, ವಿಶ್ವ ಹಿಂದೂ ಪರಿಷದ್ ವಿಟ್ಲ ಅಧ್ಯಕ್ಷ ಪದ್ಮನಾಭ ಕಟ್ಟೆ, ಕನ್ಯಾನ ಬಜರಂಗದಳ ಸಂಚಾಲಕ್ ಚಂದ್ರಹಾಸ, ಸಂಚಾಲಕ ಕೃಷ್ಣಪ್ಪ ಗೌಡ, ವಿಶ್ವ ಹಿಂದೂ ಪರಿಷದ್ ಕನ್ಯಾನ ಅಧ್ಯಕ್ಷ ಲೊಕೇಶ್ ಗೌಡ, ಜಯಂತ್ ಸಿ. ಎಚ್. ವಿಟ್ಲ ಮತ್ತಿತರರು ಹಾಜರಿದ್ದರು.

Ad Widget
Click to comment

Leave a Reply

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ಅಂತರ ರಾಜ್ಯ

Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್‌ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!

Published

on

Ad Widget

Ad Widget

Ad Widget

Ad Widget

ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Ad Widget

Ad Widget alt="Ad Widget"/>

Ad Widget

ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.

Ad Widget

Ad Widget <> Ad Widget

ಸಿಬಿಐ ಇನ್ಸ್‌ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.

ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.

Ad Widget

Ad Widget

ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್‌ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.

ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ

Published

on

Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget alt="Ad Widget"/>

Ad Widget

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.

Ad Widget

Ad Widget <> Ad Widget

ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Ad Widget

Ad Widget

ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.

ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!