Connect with us

ನಿಧನ ವಾರ್ತೆ

Mulki-ಕೈ ಕೈ ಹಿಡಿದು ಹೋಗುತ್ತಿದ್ದಾಗ ನೂಕುನುಗ್ಗಲಿನಲ್ಲಿ ಕೆಳಗೆ ಬಿದ್ದ ಪತ್ನಿಯ ಸುಳಿವೇ ಸಿಗಲಿಲ್ಲ! ಎಲ್ಲೆಡೆ ಹುಡುಕಿದ ಬಳಿಕ ಆಸ್ಪತ್ರೆಯಲ್ಲಿ ಶವ ದೊರಕಿತು – ಮೂಲ್ಕಿಯ ಅಕ್ಷತಾ ಪತಿ ಕಣ್ಣೀರು”

Published

on

Ad Widget

Ad Widget

Ad Widget

Ad Widget

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಅಂಬಳ್ಳಿ ಕುಟುಂಬದ ಸೊಸೆ, ಅಕ್ಷತಾ ಅಂಬಳ್ಳಿ (27) ಅವರು ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು/ಸಿದ್ದಾಪುರ, ಜೂನ್ 6: ಕ್ರಿಕೆಟ್ನ ಮಹಾ ಹಬ್ಬವೆಂದೇ ಬಣ್ಣಿಸಲಾಗುವ ಐಪಿಎಲ್ನ ವಿಜಯೋತ್ಸವವು ಕೆಲವೊಮ್ಮೆ ದುರಂತಕ್ಕೂ ಕಾರಣವಾಗಬಹುದು ಎಂಬುದಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಘಟನೆ ಕಹಿ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಅಂಬಳ್ಳಿ ಕುಟುಂಬದ ಸೊಸೆ, ಅಕ್ಷತಾ ಅಂಬಳ್ಳಿ (27) ಅವರು ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಈ ಘಟನೆ ಸಿದ್ದಾಪುರ ತಾಲೂಕಿನಲ್ಲಿ ಮತ್ತು ದಂಪತಿಯ ಕುಟುಂಬ ವರ್ಗದಲ್ಲಿ ತೀವ್ರ ಶೋಕವನ್ನು ಉಂಟುಮಾಡಿದೆ.

Ad Widget

Ad Widget alt="Ad Widget"/>

Ad Widget

ಕಣ್ಣೆದುರೇ ನಡೆದ ದುರಂತ, ಪತಿಯ ಕಣ್ಣೀರಿನ ಕಥನ:
ಮೃತ ಅಕ್ಷತಾ ಅವರ ಪತಿ ಆಶಯ ಅಂಬಳ್ಳಿ ಅವರು ಘಟನೆಯನ್ನು ನೆನೆದು ಕಣ್ಣೀರಿಟ್ಟರು. “ನಾನು ಮತ್ತು ನನ್ನ ಪತ್ನಿ ಅಕ್ಷತಾ, ಆರ್ಸಿಬಿ ತಂಡದ ದೊಡ್ಡ ಅಭಿಮಾನಿಗಳು. ತಂಡದ ವಿಜಯೋತ್ಸವವನ್ನು ಕಣ್ತುಂಬಿಕೊಳ್ಳಲು ಅರ್ಧ ದಿನ ರಜೆ ಹಾಕಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದ್ದೆವು. ಆದರೆ, ಅಲ್ಲಿ ಸೇರಿದ್ದ ಅಪಾರ ಜನಸಮೂಹ ಗೇಟ್ನಿಂದ ಒಳನುಗ್ಗಲು ಯತ್ನಿಸಿದಾಗ ಪರಿಸ್ಥಿತಿ ಕೈಮೀರಿತು. ಕಾಲ್ತುಳಿತ ಉಂಟಾದಾಗ ನಾನು ಬ್ಯಾರಿಕೇಡ್ನ ಸಹಾಯದಿಂದ ನಿಂತಿದ್ದೆ, ಅಕ್ಷತಾಳ ಕೈಯನ್ನೂ ಗಟ್ಟಿಯಾಗಿ ಹಿಡಿದಿದ್ದೆ. ಆದರೆ, ಜನರ ತಳ್ಳಾಟದ ರಭಸಕ್ಕೆ ನಾವಿಬ್ಬರೂ ಕೆಳಗೆ ಬಿದ್ದೆವು. ಯಾರೋ ನನ್ನನ್ನು ಮೇಲಕ್ಕೆಳೆದರು, ಆದರೆ ಅಕ್ಷತಾಳ ಸುಳಿವೇ ಇರಲಿಲ್ಲ,” ಎಂದು ಆಶಯ ತಮ್ಮ ದುಃಖವನ್ನು ತೋಡಿಕೊಂಡರು.

Ad Widget

Ad Widget <> Ad Widget

ತಕ್ಷಣವೇ ಪತ್ನಿಯನ್ನು ಹುಡುಕಲು ಪ್ರಾರಂಭಿಸಿದ ಆಶಯ, ಪೊಲೀಸರನ್ನು ಸಂಪರ್ಕಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. “ಹತಾಶನಾಗಿ ಸುತ್ತಮುತ್ತಲಿನ ಆಸ್ಪತ್ರೆಗಳಿಗೆ ವಿಚಾರಿಸುತ್ತಾ ಹೋದೆ. ಕೊನೆಗೆ, ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ನನ್ನ ಅಕ್ಷತಾಳ ಪಾರ್ಥಿವ ಶರೀರ ಪತ್ತೆಯಾಯಿತು,” ಎಂದು ಹೇಳುವಾಗ ಅವರ ದನಿ ಗದ್ಗದಿತವಾಗಿತ್ತು.

ಅಕಾಲಿಕ ಅಂತ್ಯ:
ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯವರಾದ ಅಕ್ಷತಾ, ವೃತ್ತಿಯಲ್ಲಿ ಪ್ರತಿಭಾವಂತ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದ ಅವರು, ಕೇವಲ ಒಂದೂವರೆ ವರ್ಷದ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಸಾಫ್ಟ್ವೇರ್ ಇಂಜಿನಿಯರ್ ಆಶಯ ಅಂಬಳ್ಳಿ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು. ಕ್ರಿಕೆಟ್, ಅದರಲ್ಲೂ ಆರ್ಸಿಬಿ ತಂಡದ ಬಗ್ಗೆ ವಿಶೇಷ ಅಭಿಮಾನ ಹೊಂದಿದ್ದ ಅಕ್ಷತಾ, ವಿಜಯೋತ್ಸವದ ಕ್ಷಣಗಳನ್ನು ಕಣ್ತುಂಬಿಕೊಳ್ಳುವ ಕನಸಿನೊಂದಿಗೆ ತೆರಳಿದ್ದರು, ಆದರೆ ವಿಧಿಯಾಟವೇ ಬೇರೆಯಾಗಿತ್ತು.

Ad Widget

Ad Widget

ಸಿದ್ದಾಪುರದಲ್ಲಿ ಶೋಕದ ವಾತಾವರಣ:
ಅಕ್ಷತಾ ಅಂಬಳ್ಳಿ ಅವರ ಅಂತ್ಯಸಂಸ್ಕಾರವು ಸಿದ್ದಾಪುರ ತಾಲೂಕಿನ ಹೊಸೂರಿನಲ್ಲಿರುವ ಜಿಎಸ್ಬಿ ಸ್ಮಶಾನದಲ್ಲಿ ಕುಟುಂಬಸ್ಥರು, ಬಂಧುಮಿತ್ರರು ಮತ್ತು ನೂರಾರು ಹಿತೈಷಿಗಳ ಆಕ್ರಂದನದ ನಡುವೆ ಮಂಗಳವಾರ ನೆರವೇರಿತು. ನವವಧುವಿನ ಅಕಾಲಿಕ ಮರಣ ಇಡೀ ಸಿದ್ದಾಪುರ ಪಟ್ಟಣವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ಇಂತಹ ದುರಂತಗಳು ಮರುಕಳಿಸದಂತೆ ಕ್ರೀಡಾಂಗಣಗಳಲ್ಲಿ ಸೂಕ್ತ ಭದ್ರತೆ ಮತ್ತು ಜನಸಂದಣಿ ನಿರ್ವಹಣಾ ವ್ಯವಸ್ಥೆಗಳನ್ನು ಕಲ್ಪಿಸಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

Ad Widget
Click to comment

Leave a Reply

ನಿಧನ ವಾರ್ತೆ

Savitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ

Published

on

Ad Widget

Ad Widget

Ad Widget

Ad Widget

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget

Ad Widget

Ad Widget

ಡೆಹ್ರಾಡೂನ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಅತ್ಯಂತ ದುಃಖದಾಯಕ ಹಾಗೂ ಹೃದಯವಿದ್ರಾವಕವಾಗಿದೆ ಎಂದು ಅವರು ತಿಳಿಸಿದ್ದಾರೆ.

Ad Widget

Ad Widget <> Ad Widget

ತಾಯಿಯ ವಾತ್ಸಲ್ಯ, ಆಶೀರ್ವಾದ ಮತ್ತು ಪ್ರೀತಿ ಜೀವನದ ಅತ್ಯಮೂಲ್ಯ ಸಂಪತ್ತು. ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಧಾಮಿ ಸಂತಾಪ ಸೂಚಿಸಿದ್ದಾರೆ.

ಅಗಲಿದ ಆತ್ಮಕ್ಕೆ ಭಗವಾನ್ ಕೇದಾರನಾಥರು ಶಾಂತಿ ಕರುಣಿಸಲಿ. ತಾಯಿ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Ad Widget

Ad Widget

ಯೋಗಿ ಆದಿತ್ಯನಾಥ್ ಅವರು ತಾಯಿಯ ಅಂತಿಮ ದರ್ಶನಕ್ಕೆ ತೆರಳುವ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Ad Widget
Continue Reading

ನಿಧನ ವಾರ್ತೆ

Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!

Published

on

Ad Widget

Ad Widget

Ad Widget

Ad Widget

ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.

Ad Widget

Ad Widget

Ad Widget

Ad Widget

ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.

Ad Widget

Ad Widget <> Ad Widget

ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್‌ನ ಫುಟ್‌ಬೋರ್ಡ್‌ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್‌ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.

ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್‌ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.

Ad Widget

Ad Widget

ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು

Published

on

Ad Widget

Ad Widget

Ad Widget

Ad Widget

ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.

Ad Widget

Ad Widget

Ad Widget

Ad Widget

ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

Ad Widget

Ad Widget

ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!