Connect with us

ರಾಜಕೀಯ

Ashok Rai-ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ; ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

Published

on



Ad Widget

Ad Widget

Ad Widget

Ad Widget

ಪುತ್ತೂರು ವಿಧಾನಸಭಾ ಕ್ಷೇತ್ರದ ಪಿಡಬ್ಲ್ಯುಡಿ ರಸ್ತೆ ಅಭಿವೃದ್ದಿ, ಹಾರಾಡಿ ರೈಲ್ವೇ ಸೇತುವೆ ಅಭಿವೃದ್ದಿ ಹಾಗೂ ಪುತ್ತೂರಿನ ರಿಂಗ್ ರಸ್ತೆ ನಿರ್ಮಾಣಕ್ಕೆ ಅನುದಾನ ನೀಡುವಂತೆ ಆಗ್ರಹಿಸಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಪುತ್ತೂರು ಶಾಸಕ ಅಶೋಕ್ ರೈ ಅವರು ಮನವಿ ಸಲ್ಲಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪಿಡಬ್ಲ್ಯುಡಿ ರಸ್ತೆ ಅಭಿವೃದ್ದಿ, ಹಾರಾಡಿ ರೈಲ್ವೇ ಸೇತುವೆ ಅಭಿವೃದ್ದಿ ಹಾಗೂ ಪುತ್ತೂರಿನ ರಿಂಗ್ ರಸ್ತೆ ನಿರ್ಮಾಣಕ್ಕೆ ಅನುದಾನ ನೀಡುವಂತೆ ಆಗ್ರಹಿಸಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಪುತ್ತೂರು ಶಾಸಕ ಅಶೋಕ್ ರೈ ಅವರು ಮನವಿ ಸಲ್ಲಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗುರುವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ತನ್ನ ಕ್ಷೇತ್ರದ ಲೋಕೋಪಯೋಗಿ ಇಲಾಖಾ ವ್ಯಾಪ್ತಿಗೆ ಒಳಪಡುವ ಅನೇಕ ರಸ್ತೆಗಳು ನಾದುರಸ್ಥಿಯಲ್ಲಿದ್ದು ಇದರ ಅಭಿವೃದ್ದಿಗೆ 32 ಕೋಟಿ ಅನುದಾನದ ಅಗತ್ಯವಿದೆ. ಬಹಳ ವರ್ಷಗಳ ಹಿಂದೆ ಈ ರಸ್ತೆಯನ್ನು ಅಭಿವೃದ್ದಿ ಮಾಡಲಾಗಿದ್ದು ಆ ಬಳಿಕ ಈ ರಸ್ತೆ ಡಾಮರನ್ನೇ ಕಂಡಿಲ್ಲ. ಲೋಕೋಪಯೋಗಿ ಇಲಖಾ ವ್ಯಾಪ್ತಿಗೆ ಒಳಪಡುವ ಈ ರಸ್ತೆಗಳನ್ನು ಮಳೆಗಾಲ ಮುಗಿದ ಬಳಿಕ ಅಭಿವೃದ್ದಿ ಮಾಡಬೇಕಿದ್ದು ಇದಕ್ಕೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದರು.

Ad Widget

Ad Widget <> Ad Widget

ಪುತ್ತೂರು ಉಪ್ಪಿನಂಗಡಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯಲಿದ್ದು ಇದಕ್ಕಾಗಿ ಹಾರಾಡಿಯಲ್ಲಿರುವ ರೈಲ್ವೇ ಸೇತುವೆಯನ್ನು ಅಗಲೀಕರಣ ಮಾಡಬೇಕಾಗಿದೆ. ಇದಕ್ಕಾಗಿ ಈಗಾಗಲೇ ಎಸ್ಟಿಮೇಟ್ ಸಿದ್ದಪಡಿಸಲಾಗಿದ್ದು ರೂ 8 ಕೋಟಿ ಅನುದಾನವನ್ನು ರಾಜ್ಯ ಸರಕಾರದಿಂದ ಪಾವತಿ ಮಾಡಬೇಕಿದೆ. ಈ ಸೇತುವೆಯ ಕಾಮಗಾರಿಗೆ ಅನುದಾನವನ್ನು ಒದಗಿಸುವಂತೆ ಮನವಿಯಲ್ಲಿ ಆಗ್ರಹಿಸಿದ್ದಾರೆ, ಇದಲ್ಲದೆ ಪುತ್ತೂರಿಗೆ ರಿಂಗ್ ರೋಡು ಮಾಡುವಲ್ಲಿಯೂ ಅನುದಾನದ ಬೇಡಿಕೆಯನ್ನು ಸಲ್ಲಿಸಿದ್ದಾರೆ.



Ad Widget

ಒಟ್ಟು 40 ಕೋಟಿ ಅನುದಾನದ ಬೇಡಿಕೆಯನ್ನು ಸಚಿವರಿಗೆ ಸಲ್ಲಿಸಿದ್ದೇನೆ. ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಪಿಡಬ್ಲ್ಯುಡಿ ರಸ್ತೆಗಳು ತುಂಬಾ ಹದಗೆಟ್ಟಿದೆ. ಕ್ಷೇತ್ರದ ಜನತೆಯ ಬೇಡಿಕೆಯನ್ನು ಈಡೇರಿಸುವಲ್ಲಿ ಶತಮೀರಿ ಪ್ರಯತ್ನವನ್ನು ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲಾ ರಸ್ತೆಗಳು ಅಭಿವೃದ್ದಿ ಹೊಂದಲಿದೆ. – ಅಶೋಕ್ ರೈ ಶಾಸಕರು, ಪುತ್ತೂರು

Click to comment

Leave a Reply

ರಾಜಕೀಯ

Sudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್

Published

on



Ad Widget

Ad Widget

Ad Widget

Ad Widget

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಸಿಕ್ಕಿಂ ರಾಜ್ಯಪಾಲರಾಗಿದ್ದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಕೇರಳದ ರಾಜ್ಯಪಾಲರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ತಮಿಳುನಾಡಿನ ರಾಜ್ಯಪಾಲರ ಜವಾಬ್ದಾರಿ ನೀಡಲಾಗಿದೆ.

Ad Widget

Ad Widget <> Ad Widget

ಇತರ ನೇಮಕಾತಿಗಳ ವಿವರ ಹೀಗಿದೆ:
ಒಡಿಶಾ: ಬ್ರಜ್ ಮೋಹನ್ ರಾಮ್
ಉತ್ತರಾಖಂಡ: ಧಲ್ ಸಿಂಗ್ ಬಿಸೇನ್
ಸಿಕ್ಕಿಂ: ದುಷ್ಯಂತ್ ಗೌತಮ್



Ad Widget

ಈ ನೇಮಕಾತಿಗಳೊಂದಿಗೆ ಆರು ರಾಜ್ಯಗಳ ರಾಜ್ಯಪಾಲರ ಹುದ್ದೆಗಳಲ್ಲಿ ಬದಲಾವಣೆಗಳಾಗಿವೆ.

Continue Reading

ಅಂತರ ರಾಜ್ಯ

March to Supreme Court-ಮತಗಳವು ಆರೋಪ: ಇಂಡಿಯಾ ಕೂಟದಿಂದ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ

Published

on



Ad Widget

Ad Widget

Ad Widget

Ad Widget

ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿರುವ ಇಂಡಿಯಾ ಕೂಟ, ಸೋಮವಾರ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲು ತಾವು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಸಂಜೆ 4ರಿಂದ 5 ಗಂಟೆಯ ನಡುವೆ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಲು ಸಮಯ ಕೋರಿರುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ಮತಗಳವು ಆರೋಪ ಮಾಡಿರುವ ಇಂಡಿಯಾ ಕೂಟ, ಸೋಮವಾರ ‘ಸುಪ್ರೀಂಕೋರ್ಟ್ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಲು ತಾವು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಸಂಜೆ 4ರಿಂದ 5 ಗಂಟೆಯ ನಡುವೆ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಲು ಸಮಯ ಕೋರಿರುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದ್ದಾರೆ ಎಂದು ಖರ್ಗೆ ಆರೋಪಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ನಿಯೋಜಿಸಿರುವ ಪೊಲೀಸರ ಸಂಖ್ಯೆಯನ್ನು ನೋಡಿದರೆ ಕೇಂದ್ರ ಸರ್ಕಾರದ ಆತಂಕ ಅರ್ಥವಾಗುತ್ತದೆ ಎಂದೂ ಅವರು ಹೇಳಿದ್ದಾರೆ.

Ad Widget

Ad Widget <> Ad Widget

ಇಂಡಿಯಾ ಕೂಟದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ವಿರೋಧ ಪಕ್ಷಗಳು, ನಾಗರಿಕ ಸಮಾಜದ ಗುಂಪುಗಳು ಮತ್ತು ಇತರ ಸಂಘಟನೆಗಳಿಗೆ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.



Ad Widget

ಶನಿವಾರ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ದೇಶದ ವಿವಿಧ ಭಾಗಗಳಿಂದ ಯುವಕರು ಆಗಮಿಸಿದ್ದರು. ಆದರೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. “ನಮಗೆ ಬೇಕಿರುವುದು ಇಂತಹ ಭಾರತವಲ್ಲ” ಎಂದು ಅವರು ಹೇಳಿದ್ದಾರೆ.

Continue Reading

ಸ್ಥಳೀಯ

Sharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ

Published

on



Ad Widget

Ad Widget

Ad Widget

Ad Widget

ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಅವರು ನವರಾತ್ರಿ ಉತ್ಸವದ ಪ್ರಯುಕ್ತ ಪ್ರಸಿದ್ಧ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

Ad Widget

Ad Widget

Ad Widget

Ad Widget

ಶರವೂರು: ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಅವರು ನವರಾತ್ರಿ ಉತ್ಸವದ ಪ್ರಯುಕ್ತ ಪ್ರಸಿದ್ಧ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಲಂಕಾರು ಸಮೀಪದಲ್ಲಿರುವ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು ನಾಡಿನ ಪ್ರಸಿದ್ಧ ಶಕ್ತಿಕ್ಷೇತ್ರಗಳಲ್ಲಿ ಒಂದಾಗಿದ್ದು, ನವರಾತ್ರಿ ಉತ್ಸವವನ್ನು ಅತ್ಯಂತ ಭಕ್ತಿ, ಶ್ರದ್ಧೆ ಹಾಗೂ ವೈಭವದಿಂದ ಆಚರಿಸುವ ಕ್ಷೇತ್ರವೆಂಬ ಖ್ಯಾತಿಯನ್ನು ಹೊಂದಿದೆ. ನವರಾತ್ರಿಯ ಸಂದರ್ಭದಲ್ಲಿ ದೇವಿಯ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಾರೆ.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಕುಮಾರಿ ಶೋಭಾ ಕರಂದ್ಲಾಜೆ ಅವರು ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸುಭಿಕ್ಷೆ, ಜನರ ಕಲ್ಯಾಣ ಹಾಗೂ ಲೋಕಶಾಂತಿಗಾಗಿ ಪ್ರಾರ್ಥಿಸಿದರು.



Ad Widget

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸಂಬಂಧಪಟ್ಟ ಗಣ್ಯರು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading