Connect with us

ನಿಧನ ವಾರ್ತೆ

Sadānanda Shetty-ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕರಾದ ಸದಾನಂದ ಶೆಟ್ಟಿ ಕೆಮ್ಮಾರ ನಿಧನ

Published

on



Ad Widget

Ad Widget

Ad Widget

Ad Widget

ನಿವೃತ ಬಿಎಸ್ಸೆನ್ನೆಲ್ ನ ಉದ್ಯೋಗಿ, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕರಾದ ಸದಾನಂದ ಶೆಟ್ಟಿ ಕೆಮ್ಮಾರ (65) ಜ್ವರದಿಂದ ನಿನ್ನೆ ರಾತ್ರಿ ಮಂಗಳೂರಿನ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಡೆಂಗ್ಯೂ ಜ್ವರದ ಶಂಕೆ ವ್ಯಕ್ತವಾಗಿದೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ನಿವೃತ ಬಿಎಸ್ಸೆನ್ನೆಲ್ ನ ಉದ್ಯೋಗಿ, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕರಾದ ಸದಾನಂದ ಶೆಟ್ಟಿ ಕೆಮ್ಮಾರ (65) ಜ್ವರದಿಂದ ನಿನ್ನೆ ರಾತ್ರಿ ಮಂಗಳೂರಿನ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಡೆಂಗ್ಯೂ ಜ್ವರದ ಶಂಕೆ ವ್ಯಕ್ತವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಹೀರೆಬಂಡಾಡಿ ಕೆಮ್ಮಾರ ನಿವಾಸಿಯಾಗಿರುವ ಇವರಿಗೆ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆ ಯಲ್ಲಿ ಔಷಧಿ ಪಡೆದಿದ್ದರು.

Ad Widget

Ad Widget <> Ad Widget

ಆದರೆ ಜ್ವರ ಮತ್ತಷ್ಟು ಉಲ್ಭಣಗೊಂಡಾಗ ಪುತ್ತೂರು ಆಸ್ಪತ್ರೆ ಬಳಿಕ ಮಂಗಳೂರು ಆಸ್ಪತ್ರೆಗೆ ತೆರಳಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.



Ad Widget

ಹೀರೆಬಂಡಾಡಿ ಗ್ರಾಮದಲ್ಲಿ 2 ದಿನದ ಹಿಂದೆಯೂ ಒಬ್ಬರು ಶಂಕಿತ ಡೆಂಗ್ಯೂ ಜ್ವರಕ್ಕೆ ಮೃತಪಟ್ಟಿದ್ದಾರೆ. ಈ ಗ್ರಾಮದಲ್ಲಿ ಕಳೆದ ದಿನಗಳಿಂದ ಹಲವರಲ್ಲಿ ಜ್ವರ ಭಾದೆ ಕಾಣಿಸಿಕೊಂಡಿದ್ದು, ಇದರಲ್ಲಿ ಬಹುತೇಕರು ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಶಂಕೆ ವ್ಯಕ್ತವಾಗಿದೆ. ಆದರೇ ಇದನ್ನು ಆರೋಗ್ಯ ಇಲಾಖೆ ಗಂಭೀರವಾಗಿ ತೆಗೆದುಕೊಂಡಿಲ್ಲ, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ತಕ್ಷಣೆವೆ ಆರೋಗ್ಯ ಇಲಾಖೆ ಸೊಳ್ಳೆ ನಿರ್ಮೂಲನೆಗೆ ಅಗತ್ಯ ಕ್ರಮಗಳನ್ನು ನಡೆಸಬೇಕು ಹಾಗೂ ಗ್ರಾಮದಾದ್ಯಂತ ಫಾಗಿಂಗ್‌ ನಡೆಸಬೇಕೆಂದು ಗ್ರಾಮಾಸ್ಥರು ಒತ್ತಾಯಿಸಿದ್ದಾರೆ.

Click to comment

Leave a Reply

ನಿಧನ ವಾರ್ತೆ

Subramanya-ಸರ್ಪಸಂಸ್ಕಾರ ಸೇವೆಗೆ ಬಂದ ಯಾತ್ರಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಸೇವೆಗಾಗಿ ಆಗಮಿಸಿದ್ದ ತುಮಕೂರು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಮೃತದೇಹ ಮಂಗಳವಾರ ಬೆಳಗ್ಗೆ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ. ಮೃತರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿ ದೇವೇಗೌಡ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಸೇವೆಗಾಗಿ ಆಗಮಿಸಿದ್ದ ತುಮಕೂರು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಮೃತದೇಹ ಮಂಗಳವಾರ ಬೆಳಗ್ಗೆ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿ ದೇವೇಗೌಡ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅನಾರೋಗ್ಯದಿಂದ ವಸತಿಗೃಹದಲ್ಲೇ ವಿಶ್ರಾಂತಿ
ದೇವೇಗೌಡ ಅವರು ತುರುವೇಕೆರೆಯಿಂದ ಇತರ ಯಾತ್ರಾರ್ಥಿಗಳೊಂದಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಬಂದಿದ್ದರು ಎನ್ನಲಾಗಿದೆ. ದೂರದ ಪ್ರಯಾಣದ ಬಳಿಕ ಅನಾರೋಗ್ಯಕ್ಕೆ ಒಳಗಾದ ಅವರು, ಪೂಜಾ ಸ್ಥಳಕ್ಕೆ ತೆರಳದೆ ತಾವು ತಂಗಿದ್ದ ವಸತಿಗೃಹದಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.



Ad Widget

ನದಿಯಲ್ಲಿ ತೇಲುತ್ತಿದ್ದ ಮೃತದೇಹ ಪತ್ತೆ
ಮಂಗಳವಾರ ಮುಂಜಾನೆ ಸುಬ್ರಹ್ಮಣ್ಯದ ಕುಲ್ಕುಂದ ಕಾಲನಿ ರಸ್ತೆಯಿಂದ ಕುಮಾರಧಾರ ನದಿಗೆ ಸಂಪರ್ಕ ಕಲ್ಪಿಸುವ ಸ್ಥಳದ ಸಮೀಪ ನದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ತೇಲುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ.

Ad Widget

Ad Widget

ಇದೇ ವೇಳೆ, ವಸತಿಗೃಹದಲ್ಲಿದ್ದ ದೇವೇಗೌಡ ಅವರು ಕಾಣೆಯಾಗಿರುವುದನ್ನು ಗಮನಿಸಿದ ಕುಟುಂಬಸ್ಥರು ಹಾಗೂ ಅವರೊಂದಿಗೆ ಬಂದಿದ್ದವರು ಹುಡುಕಾಟ ನಡೆಸಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನಾಪತ್ತೆ ದೂರು ನೀಡಲು ತೆರಳಿದಾಗ ನದಿಯಲ್ಲಿ ಮೃತದೇಹ ಪತ್ತೆಯಾಗಿರುವ ಮಾಹಿತಿ ಲಭಿಸಿದೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮೃತದೇಹ ದೇವೇಗೌಡ ಅವರದ್ದೇ ಎಂಬುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಸಾವಿನ ಸುತ್ತ ಹಲವು ಅನುಮಾನ
ಅನಾರೋಗ್ಯದಿಂದ ವಸತಿಗೃಹದಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ದೇವೇಗೌಡ ಅವರು ನದಿಯ ಬಳಿಗೆ ತೆರಳಿದ್ದು ಹೇಗೆ? ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದಿದ್ದಾರೆಯೇ ಅಥವಾ ಬೇರೆ ಯಾವುದಾದರೂ ಕಾರಣದಿಂದ ಮೃತಪಟ್ಟಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Kalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು

Published

on



Ad Widget

Ad Widget

Ad Widget

Ad Widget

ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಕಲ್ಮಡ್ಕ: ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕಲ್ಮಡ್ಕದ ಬೊಮ್ಮೆಟ್ಟಿ ನಿವಾಸಿಗಳಾದ ಬಾಬು–ಸೀತಾ ದಂಪತಿಯ ಪುತ್ರ ಭರತ್ (28) ಹಾಗೂ ಭರತ್ ಅವರ ಸಹೋದರಿ ಭವ್ಯಾ ಅವರ ಪತಿ, ಬೆಳ್ತಂಗಡಿ ತಾಲೂಕಿನ ಮುಂಗೆಲು ನಿವಾಸಿಗಳಾದ ವೀರಪ್ಪ–ಸೀತಮ್ಮ ದಂಪತಿಯ ಪುತ್ರ ರಮೇಶ್ (34) ಮೃತಪಟ್ಟವರು. ಗಾಯಗೊಂಡ ಯುವಕನನ್ನು ಅವರ ಸಂಬಂಧಿ ಸಿಂಚನ್ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅ.12ರಂದು ರಾತ್ರಿ ಸುಮಾರು 10.30ರ ವೇಳೆಗೆ ಭರತ್, ರಮೇಶ್ ಹಾಗೂ ಸಿಂಚನ್ ಅವರು ಮನೆಯಿಂದ ಸುಮಾರು ಒಂದೂವರೆ ಕಿ.ಮೀ. ದೂರದಲ್ಲಿರುವ ತೋಡಿಗೆ ಮೀನು ಹಿಡಿಯಲು ತೆರಳಿದ್ದರು ಎನ್ನಲಾಗಿದೆ. ತೋಡಿನ ಮೇಲ್ಭಾಗದಲ್ಲಿ ತಂತಿ ಅಳವಡಿಸಿ ಅದಕ್ಕೆ ವಿದ್ಯುತ್ ಸಂಪರ್ಕ ನೀಡಲಾಗಿತ್ತು ಎಂದು ತಿಳಿದುಬಂದಿದೆ.



Ad Widget

ಈ ತಂತಿಯನ್ನು ದಾಟುವ ವೇಳೆ ಭರತ್ ಮತ್ತು ರಮೇಶ್ ಅವರಿಗೆ ವಿದ್ಯುತ್ ಸ್ಪರ್ಶಿಸಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರೊಂದಿಗೆ ಇದ್ದ ಸಿಂಚನ್ ಅವರಿಗೂ ವಿದ್ಯುತ್ ತಗುಲಿ ಎಸೆಯಲ್ಪಟ್ಟಿದ್ದು, ಕೈ, ಎದೆ ಹಾಗೂ ಕಾಲುಗಳಿಗೆ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Ad Widget

Ad Widget

ಘಟನೆಯ ಬಳಿಕ ತಂತಿ ಅಳವಡಿಸಿದ್ದ ಮನೆಯವರಿಗೆ ವಿಷಯ ತಿಳಿದು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಸಿಂಚನ್ ಅವರನ್ನು ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಷಯ ತಿಳಿದು ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

Ad Widget
Continue Reading

ನಿಧನ ವಾರ್ತೆ

Sullia-Big Breaking: ಸುಳ್ಯ: ವಿದ್ಯುತ್ ಶಾಕ್‌ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ

Published

on



Ad Widget

Ad Widget

Ad Widget

Ad Widget

ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Ad Widget

Ad Widget

Ad Widget

Ad Widget

ಸುಳ್ಯ: ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಬೊಮ್ಮೆಟ್ಟಿ ನಿವಾಸಿಗಳಾದ ಗಣೇಶ್ ಹಾಗೂ ಭರತ್ ಎಂದು ಗುರುತಿಸಲಾಗಿದೆ. ತಡರಾತ್ರಿ ಸಂಭವಿಸಿದ ಈ ದುರಂತದಿಂದ ಸ್ಥಳೀಯರಲ್ಲಿ ಆತಂಕ ಹಾಗೂ ಶೋಕದ ವಾತಾವರಣ ನಿರ್ಮಾಣವಾಗಿದೆ.

Ad Widget

Ad Widget <> Ad Widget

ವಿದ್ಯುತ್ ಶಾಕ್ ತಗುಲಲು ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading