ಬೆಂಗಳೂರು
Chaitra-ಚೈತ್ರಾ ಸಂಸಾರದ ಗುಟ್ಟು ರಟ್ಟು: ಪತಿಗೆ ಪ್ರೀತಿಯಿಂದ ‘ಮಗಾ’ ಎಂದು ಕೂಗುವ ಫೈರ್ ಬ್ರ್ಯಾಂಡ್!
‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮೂಲಕ ಮನೆಮಾತಾದ, ತಮ್ಮ ನೇರ ನುಡಿಗಳಿಂದಲೇ ‘ಫೈರ್ ಬ್ರ್ಯಾಂಡ್’ ಎಂದು ಖ್ಯಾತರಾದ ಚೈತ್ರಾ ಕುಂದಾಪುರ ಅವರು ಇತ್ತೀಚೆಗೆ ತಮ್ಮ ಬಹುಕಾಲದ ಗೆಳೆಯ ಶ್ರೀಕಾಂತ್ ಕಶ್ಯಪ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೇ 9, 2024 ರಂದು ವಿವಾಹವಾದ ಈ ಜೋಡಿ, ಇದೀಗ ತಮ್ಮ ಹೊಸ ಜೀವನದ ಸಂತಸದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮೂಲಕ ಮನೆಮಾತಾದ, ತಮ್ಮ ನೇರ ನುಡಿಗಳಿಂದಲೇ ‘ಫೈರ್ ಬ್ರ್ಯಾಂಡ್’ ಎಂದು ಖ್ಯಾತರಾದ ಚೈತ್ರಾ ಕುಂದಾಪುರ ಅವರು ಇತ್ತೀಚೆಗೆ ತಮ್ಮ ಬಹುಕಾಲದ ಗೆಳೆಯ ಶ್ರೀಕಾಂತ್ ಕಶ್ಯಪ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೇ 9, 2024 ರಂದು ವಿವಾಹವಾದ ಈ ಜೋಡಿ, ಇದೀಗ ತಮ್ಮ ಹೊಸ ಜೀವನದ ಸಂತಸದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.
ಗೆಳೆತನದಿಂದ ಗಂಡ-ಹೆಂಡತಿಯವರೆಗೆ
ವರ್ಷಗಳ ಕಾಲ ಆಪ್ತ ಸ್ನೇಹಿತರಾಗಿದ್ದ ಚೈತ್ರಾ ಮತ್ತು ಶ್ರೀಕಾಂತ್, ಇದೀಗ ಪತಿ-ಪತ್ನಿಯರಾಗಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಈ ಬದಲಾವಣೆಯ ಬಗ್ಗೆ ಮಾತನಾಡಿದ ಚೈತ್ರಾ, “ಮೊದಲೆಲ್ಲಾ ಬೇರೆ ಬೇರೆ ಮನೆಯಲ್ಲಿದ್ದೆವು, ಈಗ ಒಂದೇ ಮನೆಯಲ್ಲಿದ್ದೇವೆ. ಆರಂಭದಲ್ಲಿ ಗೆಳೆಯನಾಗಿದ್ದವನು ಈಗ ಗಂಡನಲ್ಲವೇ ಎಂಬ ಭಾವನೆ ಇತ್ತು. ಆದರೆ ಈಗ ಶ್ರೀಕಾಂತ್ ಮೇಲೆ ಗೌರವದ ಜೊತೆಗೆ ಹೆಚ್ಚಿನ ಆತ್ಮೀಯತೆಯೂ ಮೂಡಿದೆ,” ಎನ್ನುತ್ತಾರೆ. ಇದಕ್ಕೆ ಶ್ರೀಕಾಂತ್ ಕೂಡ ದನಿಗೂಡಿಸಿ, “ಸ್ನೇಹಿತರಾಗಿದ್ದಾಗಿಂತ ಈಗ ಸಂಗಾತಿಯಾದ ಮೇಲೆ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಿದೆ,” ಎಂದು ತಮ್ಮ ಸಂತಸ ಹಂಚಿಕೊಂಡಿದ್ದಾರೆ.
‘ಮಗಾ’ ಮತ್ತು ‘ಸಿರಿ’ ಎಂಬ ಪ್ರೀತಿಯ ಅಡ್ಡಹೆಸರುಗಳು
ಸಂದರ್ಶನವೊಂದರಲ್ಲಿ, ‘ಪತಿಯನ್ನು ಏನೆಂದು ಕರೆಯುತ್ತೀರಿ?’ ಎಂಬ ಪ್ರಶ್ನೆಗೆ ಚೈತ್ರಾ ಮುಗುಳ್ನಗುತ್ತಲೇ ಉತ್ತರಿಸಿದ್ದಾರೆ. “ನಾವಿಬ್ಬರೂ ಒಬ್ಬರನ್ನೊಬ್ಬರು ‘ಮಗಾ’ ಅಂತಾನೇ ಕರೆಯೋದು. ಆದರೆ ಇದು ಕುಂದಾಪುರ ಕನ್ನಡದ ‘ಮಗಾ’, ಬೆಂಗಳೂರಿನದ್ದಲ್ಲ,” ಎಂದು ತಮ್ಮೂರಿನ ಸೊಗಡನ್ನು ನೆನಪಿಸಿಕೊಂಡರು. ಅಷ್ಟೇ ಅಲ್ಲದೆ, “ನಾನು ಶ್ರೀಕಾಂತ್ ಅವರನ್ನು ‘ಸಿರಿ’ ಎಂದೂ ಕರೆಯುತ್ತೇನೆ. ನನ್ನ ಜೀವನಕ್ಕೆ ಸಿರಿ-ಸಂಪತ್ತು ಬಂದಿದ್ದೇ ಅವರಿಂದ. ಹೀಗಾಗಿ ಆ ಹೆಸರು ನನಗೆ ಬಹಳ ವಿಶೇಷ,” ಎಂದು ಹೇಳಿದರು.
ವಿಶೇಷವೆಂದರೆ, ಮದುವೆಯ ಶಾಸ್ತ್ರದ ಪ್ರಕಾರ ಶ್ರೀಕಾಂತ್ ಅವರು ಚೈತ್ರಾ ಅವರಿಗೆ ‘ಶ್ರೀ ಮೇಧಾ’ ಎಂದು ಹೊಸ ಹೆಸರಿಟ್ಟಿದ್ದು, ಆ ಹೆಸರಿನಿಂದ ಕರೆಯುವುದು ಅವರಿಗೆ ಮಾತ್ರ ಸೀಮಿತ ಎಂದು ಚೈತ್ರಾ ಪ್ರೀತಿಯಿಂದ ತಿಳಿಸಿದ್ದಾರೆ.
ಕಷ್ಟದ ದಿನಗಳಿಂದ ಸುಖದ ಜೀವನದವರೆಗೆ
ಈ ಜೋಡಿಯದ್ದು ಕೇವಲ ಪ್ರೀತಿಯ ಕಥೆಯಲ್ಲ, ಬದಲಾಗಿ ಕಷ್ಟ-ಸುಖಗಳನ್ನು ಒಟ್ಟಾಗಿ ಎದುರಿಸಿ ನಿಂತ ಬಾಂಧವ್ಯ. “ಹಿಂದೆ ಕೈಯಲ್ಲಿ ದುಡ್ಡಿಲ್ಲದಿದ್ದಾಗ ಕೃಷ್ಣ ಮಠದಲ್ಲಿ ಊಟ ಮಾಡಿದ ದಿನಗಳೂ ಇವೆ. ಸಂಬಳವಿಲ್ಲದೆ ಪರದಾಡಿದಾಗಲೂ ಶ್ರೀಕಾಂತ್ ನನ್ನ ಜೊತೆಗಿದ್ದರು. ಆ ಹಸಿವಿನ ದಿನಗಳಿಂದ, ಇಂದು ಐಷಾರಾಮಿ ಹೋಟೆಲ್ಗಳಲ್ಲಿ ಊಟ ಮಾಡುವವರೆಗೆ ನಮ್ಮ ಪಯಣ ಸಾಗಿದೆ. ಕಷ್ಟದ ದಿನಗಳನ್ನು ಒಟ್ಟಾಗಿ ಎದುರಿಸಿದ್ದರಿಂದ ಈಗ ಯಾವುದು ಕಷ್ಟವೆನಿಸುವುದಿಲ್ಲ,” ಎಂದು ಚೈತ್ರಾ ತಮ್ಮ ಜೀವನದ ಪಯಣವನ್ನು ಭಾವನಾತ್ಮಕವಾಗಿ ವಿವರಿಸಿದ್ದಾರೆ.
ಒಟ್ಟಿನಲ್ಲಿ, ಚೈತ್ರಾ ಮತ್ತು ಶ್ರೀಕಾಂತ್ ಅವರ ದಾಂಪತ್ಯ ಜೀವನವು ಸ್ನೇಹ, ಪ್ರೀತಿ, ಪರಸ್ಪರ ಗೌರವ ಮತ್ತು ಕಷ್ಟಕಾಲದಲ್ಲಿ ಜೊತೆಯಾಗಿ ನಿಂತ ಬಲವಾದ ಅಡಿಪಾಯದ ಮೇಲೆ ನಿಂತಿದೆ.
ಬಿಗ್ ನ್ಯೂಸ್
Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್ಗೆ ಹೈಕೋರ್ಟ್ನಲ್ಲಿ ಹಿನ್ನಡೆ; ಎಫ್ಐಆರ್ ರದ್ದುಪಡಿಸಲು ನಿರಾಕರಣೆ
ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್, ಎಸ್ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.
ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ವೇಳೆ, ಗಿರೀಶ್ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.
ಮತ್ತೊಂದೆಡೆ, ಎಸ್ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.
ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.
ಬಿಗ್ ನ್ಯೂಸ್
High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:
ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.
ಅಪರಾಧ
FIR-‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್, ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಎಫ್ಐಆರ್
ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು: ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಲ್ಯಾಣದ ಭಂಡಾರಿಯಾಗಿದ್ದ ಬಸವಣ್ಣನವರ ಮೇಲೆ ಜಾತಿವಾದಿಗಳು ಮಾಡಿದ್ದ ಸುಳ್ಳು ಆರೋಪಗಳನ್ನು ‘ಕಳ್ಳತನ’ ಎಂದು ವ್ಯಾಖ್ಯಾನಿಸಿರುವುದು ಹಾಗೂ ಕಲ್ಯಾಣ ಕ್ರಾಂತಿಯ ಐತಿಹಾಸಿಕ ಸಂಘರ್ಷಗಳನ್ನು ತಿರುಚಿ ಬಸವಣ್ಣನವರ ಮೇಲೆ ಆರೋಪ ಹೊರಿಸಿರುವುದು ಇತಿಹಾಸಕ್ಕೆ ಮಾಡಿದ ಅಪಚಾರ ಎಂದು ಬಸವ ಸಮಿತಿ ದೂರಿನಲ್ಲಿ ಆಕ್ಷೇಪಿಸಿದೆ.
ರವಿ ಹಂಜ್ ಅವರು ಇಂತಹ ಪೂರ್ವಾಗ್ರಹಪೀಡಿತ ಬರಹಗಳಿಗೆ ಸಂಶೋಧನೆಯ ಮುಖವಾಡ ತೊಡಿಸಿ ಸಮಾಜದಲ್ಲಿ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದರೆ, ಪ್ರಕಾಶಕ ವಿಶ್ವೇಶ್ವರ ಭಟ್ ಅವರು ಕೃತಿಗೆ ಪ್ರಚಾರ ನೀಡುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ.
ಇಂತಹ ವಿವಾದಾತ್ಮಕ ಕೃತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಬಸವ ಸಮಿತಿ ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿತ್ತು.
-
ಶಿಕ್ಷಣ11 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ4 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಚಿನ್ನ-ಬೆಳ್ಳಿ ದರ9 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಸ್ಥಳೀಯ10 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಸಿನೆಮಾ9 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ9 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಅಪರಾಧ10 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ರಾಜಕೀಯ4 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ















