ಸ್ಥಳೀಯ
Subrahmanya-ಪವಿತ್ರ ಕುಕ್ಕೆ ಕ್ಷೇತ್ರದ ಬಳಿ ವಸತಿ ಗೃಹದಲ್ಲಿ ಗೂಂಡಾಗಿರಿ: ಕೊಠಡಿ ನೋಡಿ ಬಾಡಿಗೆಗೆ ಪಡೆಯದಿದ್ದದಕ್ಕೆ ಯಾತ್ರಿಕನ ಮೇಲೆ ಅಮಾನವೀಯ ಹಲ್ಲೆ! ವಿಡಿಯೋ ವೈರಲ್
ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ, ಶಾಂತಿ ಮತ್ತು ಭಕ್ತಿಯ ನೆಲೆಬೀಡಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಸತಿ ಗೃಹದ ಬಳಿ ಕ್ಷುಲ್ಲಕ ಕಾರಣಕ್ಕೆ ಯಾತ್ರಿಕನೊಬ್ಬನ ಮೇಲೆ ಕೊಠಡಿ ನಿರ್ವಾಹಕರ ಗುಂಪೊಂದು ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ದೌರ್ಜನ್ಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹರಡಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಸುಬ್ರಹ್ಮಣ್ಯ, ಜೂನ್ 9: ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ, ಶಾಂತಿ ಮತ್ತು ಭಕ್ತಿಯ ನೆಲೆಬೀಡಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಸತಿ ಗೃಹದಲ್ಲಿ ನಾಚಿಕೆಗೇಡಿನ ಘಟನೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಯಾತ್ರಿಕನೊಬ್ಬನ ಮೇಲೆ ಕೊಠಡಿ ನಿರ್ವಾಹಕರ ಗುಂಪೊಂದು ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ದೇವರ ಸನ್ನಿಧಿಯ ಪಾವಿತ್ರ್ಯತೆಗೇ ಕಳಂಕ ತಂದಿದೆ. ಈ ದೌರ್ಜನ್ಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹರಡಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ನಡೆದಿದ್ದೇನು?
ಕ್ಷೇತ್ರಕ್ಕೆ ಬಂದಿದ್ದ ಯುವಕನೊಬ್ಬ ಆದಿ ಸುಬ್ರಹ್ಮಣ್ಯ ಪ್ರದೇಶದಲ್ಲಿ ವಸತಿಗಾಗಿ ಕೊಠಡಿಯೊಂದನ್ನು ವೀಕ್ಷಿಸಿದ್ದಾನೆ. ಆದರೆ, ಕಾರಣಾಂತರಗಳಿಂದ ಆ ಕೊಠಡಿಯನ್ನು ಬಾಡಿಗೆಗೆ ಪಡೆಯಲು ನಿರಾಕರಿಸಿ ಹೊರನಡೆದಿದ್ದಾನೆ. ಇದೇ ಕಾರಣಕ್ಕೆ ಕೆರಳಿದ ಕೊಠಡಿ ನಿರ್ವಾಹಕರ ತಂಡ, ಯುವಕನನ್ನು ಅಡ್ಡಗಟ್ಟಿ ವಾಗ್ವಾದಕ್ಕಿಳಿದಿದೆ. “ಕೊಠಡಿ ನೋಡಿ ಸುಮ್ಮನೆ ಹೋಗುತ್ತೀಯಾ?” ಎಂದು ದರ್ಪದಿಂದ ಪ್ರಶ್ನಿಸಿದ ಗುಂಪು, ಮಾತಿಗೆ ಮಾತು ಬೆಳೆದು ಯುವಕನ ಮೇಲೆ ಏಕಾಏಕಿ ಹಲ್ಲೆ ನಡೆಸಿದೆ. ಗುಂಪಿನಲ್ಲಿದ್ದ ಓರ್ವ ವ್ಯಕ್ತಿ ಯುವಕನ ಕೆನ್ನೆಗೆ ಬಾರಿಸುವ ದೃಶ್ಯಗಳು ವೀಡಿಯೋದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.
ತೆರೆಮರೆಯಲ್ಲಿ ವಾಣಿಜ್ಯ ಮಾಫಿಯಾ?
ಈ ಘಟನೆ ಕೇವಲ ಒಂದು ಆಕಸ್ಮಿಕ ಜಗಳವಲ್ಲ, ಬದಲಿಗೆ ಸುಬ್ರಹ್ಮಣ್ಯದಲ್ಲಿ ಬೇರೂರುತ್ತಿರುವ ಅಕ್ರಮ ದಂಧೆಯ ಕರಾಳ ಮುಖವನ್ನು ಅನಾವರಣಗೊಳಿಸಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಹೊರಗಿನಿಂದ ಬಂದ ಕೆಲವರು ಇಲ್ಲಿನ ಕೊಠಡಿಗಳನ್ನು ಗುತ್ತಿಗೆಗೆ ಪಡೆದು, ಹಣದಾಸೆಗಾಗಿ ಯಾತ್ರಿಕರನ್ನು ಗುರಿಯಾಗಿಸಿಕೊಂಡು ದೌರ್ಜನ್ಯ ಎಸಗುತ್ತಿದ್ದಾರೆ. ತಮ್ಮ ವ್ಯವಹಾರಕ್ಕೆ ಅಡ್ಡಿಯಾದರೆ ಅಥವಾ ನಿರೀಕ್ಷಿತ ಲಾಭ ಬರದಿದ್ದರೆ, ಈ ರೀತಿ ಗೂಂಡಾಗಿರಿಗೆ ಇಳಿಯುತ್ತಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಇಂತಹ ಮಾಫಿಯಾಗಳು ಕ್ಷೇತ್ರದ ಹೆಸರಿಗೆ ಮಸಿ ಬಳಿಯುತ್ತಿವೆ.
ಸಾರ್ವಜನಿಕರ ಆಕ್ರೋಶ ಮತ್ತು ಆಗ್ರಹ
ಶಾಂತಿ, ನೆಮ್ಮದಿ ಮತ್ತು ಭಕ್ತಿಗಾಗಿ ದೇಶದ ನಾನಾ ಭಾಗಗಳಿಂದ ಬರುವ ಯಾತ್ರಿಕರಿಗೆ ಇಲ್ಲಿ ರಕ್ಷಣೆ ಎಲ್ಲಿದೆ? ಕೊಠಡಿ ಇಷ್ಟವಾಗದಿದ್ದರೆ ಬೇಡವೆಂದು ಹೇಳುವ ಸ್ವಾತಂತ್ರ್ಯವೂ ಯಾತ್ರಿಕರಿಗಿಲ್ಲವೇ? ಹಣದಾಸೆಗೆ ಅಮಾಯಕರ ಮೇಲೆ ಹಲ್ಲೆ ನಡೆಸುವುದು ಯಾವ ನ್ಯಾಯ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.
ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿ, ಹಲ್ಲೆ ನಡೆಸಿದ ಗೂಂಡಾಗಳನ್ನು ಬಂಧಿಸಬೇಕು. ಈ ಘಟನೆಯ ಹಿಂದೆ ಇರುವ ಅಕ್ರಮ ಕೊಠಡಿ ದಂಧೆಕೋರರ ಜಾಲವನ್ನು ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಸುಬ್ರಹ್ಮಣ್ಯದ ಪಾವಿತ್ರ್ಯತೆಯನ್ನು ಉಳಿಸಿ, ಯಾತ್ರಿಕರಿಗೆ ಸುರಕ್ಷಿತ ಮತ್ತು ನಿರ್ಭೀತ ವಾತಾವರಣವನ್ನು ಕಲ್ಪಿಸಿಕೊಡಬೇಕೆಂದು ಭಕ್ತಾದಿಗಳು ಹಾಗೂ ಸ್ಥಳೀಯರು ಬಲವಾಗಿ ಆಗ್ರಹಿಸಿದ್ದಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.

ಪುತ್ತೂರು, ಅ.4: ಕಾಲ ಐದು ದಶಕಗಳತ್ತ ಸಾಗಿದರೂ, ಕಾಲೇಜಿನ ಆವರಣದಲ್ಲಿ ಕಳೆದ ಯೌವನದ ದಿನಗಳ ನೆನಪುಗಳು ಮಾತ್ರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ. ಅಂತಹ ಸುವರ್ಣ ನೆನಪುಗಳನ್ನು ಮತ್ತೊಮ್ಮೆ ಜೀವಂತಗೊಳಿಸಿದ ಅಪೂರ್ವ ಕ್ಷಣಕ್ಕೆ ಸಂತ ಫಿಲೋಮಿನಾ ಕಾಲೇಜು ಸಾಕ್ಷಿಯಾಯಿತು. 1991ರ ಬಿ.ಎಸ್ಸಿ. ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು 35 ವರ್ಷಗಳ ಬಳಿಕ ತಮ್ಮ ಎರಡನೇ ಪುನರ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕಾಗಿ ರವಿವಾರ ಪಿಜಿ ಸೆಮಿನಾರ್ ಹಾಲ್‌ನಲ್ಲಿ ಸೇರಿ, ಹಳೆಯ ಸ್ನೇಹ, ಗೌರವ ಮತ್ತು ಆತ್ಮೀಯತೆಯನ್ನು ಮರುಕಳಿಸಿದರು.
ಅತ್ಯಂತ ಸುಂದರ ಹಾಗೂ ಮನೋಜ್ಞವಾಗಿ ನಡೆದ ಈ ಪುನರ್ಮಿಲನ ಕಾರ್ಯಕ್ರಮದಲ್ಲಿ 1991ರ ಬ್ಯಾಚ್‌ನ ಹಳೆ ವಿದ್ಯಾರ್ಥಿಗಳು ತಮ್ಮ ಕಾಲೇಜು ದಿನಗಳ ನೆನಪುಗಳನ್ನು ಮೆಲುಕು ಹಾಕುತ್ತಾ, ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ವೃತ್ತಿ ಹಾಗೂ ಸಾಮಾಜಿಕ ಬದುಕಿನಲ್ಲಿ ವಿವಿಧ ಉನ್ನತ ಸ್ಥಾನಗಳನ್ನು ಅಲಂಕರಿಸಿರುವ ಅವರು, ಕಾಲೇಜಿನ ಆವರಣದಲ್ಲಿ ಮತ್ತೆ ವಿದ್ಯಾರ್ಥಿಗಳಂತೆಯೇ ಬೆರೆತು, ತಮ್ಮ ಸುವರ್ಣ ದಿನಗಳನ್ನು ನೆನಪಿಸಿಕೊಂಡರು.

ಕಾಲೇಜಿನ ಪ್ರಾಂಶುಪಾಲರಾದ ರೆ.ಡಾ. ಆಂಟನಿ ಪ್ರಕಾಶ್ ಮೊಂತೆರೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಅವರು ಮಾತನಾಡಿ, “ಕಾಲೇಜು ಬದುಕಿತ್ತು; ಬದುಕುತ್ತಿದೆ; ಮುಂದೆಯೂ ಬದುಕಲಿದೆ. ಆದರೆ ಅದಕ್ಕಿಂತ ಮುಖ್ಯವಾದುದು ಪ್ರೀತಿ, ಗೌರವ ಮತ್ತು ಸದ್ಭಾವನೆ. ನಿಮ್ಮಂತಹ ಹಿರಿಯ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸದ್ಭಾವನೆಯಿಂದಲೇ ಕಾಲೇಜು ನಿರಂತರವಾಗಿ ಬೆಳೆಯುತ್ತಿದೆ,” ಎಂದು ಹೇಳಿ, ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಅತ್ಯಂತ ಶಿಸ್ತಿನಿಂದ ಹಾಗೂ ಸಮಯಪಾಲನೆಯೊಂದಿಗೆ ಸಂಘಟಿಸಿರುವುದನ್ನು ಶ್ಲಾಘಿಸಿದ ಅವರು, ಅವರ ಶಿಸ್ತು ಮತ್ತು ಸಮಯ ನಿರ್ವಹಣೆಯ ಸೂಕ್ಷ್ಮತೆಯು ಯಾರಿಗಾದರೂ ಮಾದರಿಯಾಗಬಲ್ಲದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಲೇಜಿನ ಅಭಿವೃದ್ಧಿಗೆ ₹2 ಲಕ್ಷ ಕೊಡುಗೆ- ನೆನಪಿನಿಂದ ನಂಟಿಗೆ, ನಂಟಿನಿಂದ ಕೊಡುಗೆಗೆ
ಪುನರ್ಮಿಲನವು ಕೇವಲ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಕಾರ್ಯಕ್ರಮವಾಗಿ ಉಳಿಯದೆ, ತಾವು ಕಲಿತ ಸಂಸ್ಥೆಯ ಮೇಲಿನ ಋಣ ತೀರಿಸುವ ಸಾರ್ಥಕ ಸಂದರ್ಭವಾಗಿಯೂ ಪರಿಣಮಿಸಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 1991ರ ಬ್ಯಾಚ್‌ನ ಹಿರಿಯ ವಿದ್ಯಾರ್ಥಿಗಳು ಒಟ್ಟಾಗಿ ₹2 ಲಕ್ಷವನ್ನು ಕಾಲೇಜಿನ ಅಭಿವೃದ್ಧಿ ಕಾರ್ಯಗಳಿಗಾಗಿ ದೇಣಿಗೆಯಾಗಿ ನೀಡಿದರು.ತಾವು ವಿದ್ಯಾಭ್ಯಾಸ ಪಡೆದ ಸಂಸ್ಥೆಯ ಅಭಿವೃದ್ಧಿಗೆ ದಶಕಗಳ ಬಳಿಕವೂ ಕೈಜೋಡಿಸಿದ ಹಿರಿಯ ವಿದ್ಯಾರ್ಥಿಗಳ ಈ ಕೊಡುಗೆ ಕಾಲೇಜಿನ ಮೇಲಿನ ಅವರ ಪ್ರೀತಿ, ಕೃತಜ್ಞತೆ ಹಾಗೂ ಸದ್ಭಾವನೆಯ ಪ್ರತೀಕವಾಗಿ ಮೂಡಿಬಂತು.
ವೃತ್ತಿ ಸಾಧನೆಗೆ ಗೌರವ
ಹಿರಿಯ ವಿದ್ಯಾರ್ಥಿಗಳ ವೃತ್ತಿಪರ ಸಾಧನೆಗಳನ್ನೂ ಕಾರ್ಯಕ್ರಮದಲ್ಲಿ ಗುರುತಿಸಲಾಯಿತು. ಡಾ. ಗಿರೀಶ್ ಭಟ್ ಅಜಕ್ಕಳ ಹಾಗೂ ಶ್ರೀ ನವೀನ್ ಕುಮಾರ್ ಅವರನ್ನು ಅವರ ವೃತ್ತಿಪರ ಸಾಧನೆಗಳಿಗಾಗಿ ಗೌರವಿಸಲಾಯಿತು. ವೃತ್ತಿಜೀವನದಲ್ಲಿನ ಸಾಧನೆಗಳು ಹಾಗೂ ಪ್ರಗತಿಯನ್ನು ಗುರುತಿಸಿ ವಿವಿಧ ಗೌರವಗಳನ್ನು ನೀಡಿ ಅಭಿನಂದಿಸಲಾಯಿತು. ರೈಲ್ವೆ ಉದ್ಯೋಗದಲ್ಲಿನ ಪದೋನ್ನತಿಯೂ ಸೇರಿದಂತೆ ವೃತ್ತಿಪರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ವಿದ್ಯಾರ್ಥಿಗಳ ಯಶಸ್ಸನ್ನು ಕಾರ್ಯಕ್ರಮದಲ್ಲಿ ಮೆಚ್ಚುಗೆಯಿಂದ ಸ್ಮರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ವಾಣಿ ಹಾಗೂ ಡಾ. ಚಂದ್ರಶೇಖರ್ ಕೆ ಜಿ ಪ್ರಾರ್ಥನೆ ನೆರವೇರಿಸಿದರು. ಡಾ. ಕೃಷ್ಣಪ್ರಭಾ ಕಾರ್ಯಕ್ರಮ ನಿರ್ವಹಿಸಿದರು. ಶಿವಕುಮಾರ್ ಸ್ವಾಗತಿಸಿದರು. ಶಿವನಾಥ ರೈ ಮೆಗಿನಗುತ್ತು ಪ್ರಾಸ್ತಾವಿಕ ನುಡಿಗಳ ಮೂಲಕ ಕಾರ್ಯಕ್ರಮದ ಆಶಯವನ್ನು ವಿವರಿಸಿದರು.
ಡಾ. ಗಿರೀಶ್ ಭಟ್ ಅಜಕ್ಕಳ ವಂದಿಸಿದರು.
ನೆನಪುಗಳೊಂದಿಗೆ ಮತ್ತೆ ವಿದ್ಯಾರ್ಥಿಗಳಾದ ಹಿರಿಯ ವಿದ್ಯಾರ್ಥಿಗಳು
ಇತ್ತೀಚಿನ ವರ್ಷಗಳಲ್ಲಿ ಕಾಲೇಜಿನ ವಿವಿಧ ಬ್ಯಾಚ್‌ಗಳ ಹಿರಿಯ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳನ್ನು ಒಗ್ಗೂಡಿಸಿಕೊಂಡು ಕಾಲೇಜಿಗೆ ಭೇಟಿ ನೀಡುತ್ತಿರುವುದು ಗಮನಾರ್ಹವಾಗಿದೆ. ಇಂತಹ ಪುನರ್ಮಿಲನಗಳು ಕೇವಲ ಭೇಟಿಗೆ ಸೀಮಿತವಾಗದೆ, ಹಳೆಯ ಸುವರ್ಣ ನೆನಪುಗಳನ್ನು ಮರುಕಳಿಸುವ, ಸ್ನೇಹದ ನಂಟನ್ನು ಗಟ್ಟಿಗೊಳಿಸುವ ಹಾಗೂ ತಾವು ಬೆಳೆದ ಸಂಸ್ಥೆಯೊಂದಿಗೆ ಭಾವನಾತ್ಮಕ ಸಂಬಂಧವನ್ನು ಪುನಃ ಜೋಡಿಸುವ ವೇದಿಕೆಗಳಾಗಿವೆ.
ವೃತ್ತಿ ಮತ್ತು ಸಾಮಾಜಿಕ ಜೀವನದಲ್ಲಿ ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ, ಕಾಲೇಜಿನ ಆವರಣಕ್ಕೆ ಕಾಲಿಟ್ಟ ಕ್ಷಣ ಅವರು ತಮ್ಮ ಹುದ್ದೆ, ಸ್ಥಾನಮಾನಗಳನ್ನು ಮರೆತು ಮತ್ತೆ ತಮ್ಮ ಕಾಲೇಜು ದಿನಗಳ ವಿದ್ಯಾರ್ಥಿಗಳಾಗಿ, ಸ್ನೇಹಿತರಾಗಿ, ಸಹಪಾಠಿಗಳಾಗಿ ಬೆರೆತದ್ದು ಕಾರ್ಯಕ್ರಮದ ವಿಶೇಷತೆಯಾಗಿತ್ತು.
ಒಂದು ಋಣಸ್ಮರಣೆ; ಗುರುಗಳಿಗೆ ಭಾವಪೂರ್ಣ ಗುರುವಂದನೆ
ಪ್ರೊ. ಅಣ್ಣಾಜಿರಾವ್ | ಪ್ರೊ. ಹರಿನಾರಾಯಣ ಮಾಡಾವು | ಪ್ರೊ. ವಿಷ್ಣು ಭಟ್ | ಡಾ. ಎ.ಪಿ. ರಾಧಾಕೃಷ್ಣ | ಡಾ. ಕೃಷ್ಣಕುಮಾರ್ | ಪ್ರೊ. ಗಣೇಶ್ ಭಟ್ | ಪ್ರೊ. ಬಾಲಕೃಷ್ಣ | ಪ್ರೊ. ವಸಂತಿ | ಪ್ರೊ. ಇಟಾ ಡಿಸೋಜಾ
1991ರ ಬಿ.ಎಸ್ಸಿ. ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ತಮ್ಮ ಬದುಕಿಗೆ ಜ್ಞಾನ ಮತ್ತು ದಿಕ್ಕು ನೀಡಿದ ಈ ಗುರುಗಳನ್ನು ಏಲಕ್ಕಿ ಹಾರ, ಸರಸ್ವತಿ ವಿಗ್ರಹ, ಶಾಲು ಹಾಗೂ ಹಣ್ಣುಗಳನ್ನು ನೀಡಿ ಗುರುವಂದನೆಯೊಂದಿಗೆ ಸನ್ಮಾನಿಸಿದರು.
ಗುರುವಂದನೆ ಸ್ವೀಕರಿಸಲು ಅನಾರೋಗ್ಯ ಮತ್ತು ವಯೋಸಹಜ ಕಾರಣಗಳಿಗೆ ಸಮಾರಂಭಕ್ಕೆ ಬರಲಾಗದ ಪ್ರೊ. ಲಕ್ಷ್ಮಿನಾರಾಯಣ ಕಡಂಬಳಿತ್ತಾಯ, ಪ್ರೊ.ಕೇಶವ ಭಟ್,ಪ್ರೊ.ಕಾನ್ಸೆಪ್ಟ ಲೋಬೋ, ಪ್ರೊಸಿರಿಲ್ ಮಥಿಯಾಸ್ ಅವರ ನಿವಾಸಗಳಿಗೇ ಹುಡುಕಿಕೊಂಡು ಹೋದ ಹಿರಿಯ ವಿದ್ಯಾರ್ಥಿಗಳು ಅಲ್ಲಿಯೇ ಗುರುವಂದನೆ ಸಲ್ಲಿಸಿ ಕೃತಾರ್ಥರಾದದ್ದು ವಿಶೇಷವಾಗಿತ್ತು.
ಇದು ಕೇವಲ ಸನ್ಮಾನವಾಗಿರದೆ, ತಮ್ಮ ಬದುಕಿಗೆ ಜ್ಞಾನ, ಶಿಸ್ತು, ಮೌಲ್ಯ ಮತ್ತು ದಿಕ್ಕು ನೀಡಿದ ಗುರುಗಳೆಡೆಗೆ ಹಳೆಯ ವಿದ್ಯಾರ್ಥಿಗಳು ಸಲ್ಲಿಸಿದ ಕೃತಜ್ಞತೆಯ ಸಂಕೇತವಾಗಿತ್ತು. ಕಾಲೇಜು ದಿನಗಳಲ್ಲಿ ಶಿಕ್ಷಕರಿಂದ ಪಡೆದ ಮಾರ್ಗದರ್ಶನವನ್ನು ಹಲವು ದಶಕಗಳ ಬಳಿಕವೂ ಸ್ಮರಿಸಿ ಗೌರವ ಸಲ್ಲಿಸಿದ ಕ್ಷಣವು ಕಾರ್ಯಕ್ರಮಕ್ಕೆ ವಿಶೇಷ ಭಾವನಾತ್ಮಕ ಸ್ಪರ್ಶ ನೀಡಿತು.
ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಡಾ ಕೃಷ್ಣಪ್ರಭಾ, ರಾಜ್ಯ ಮಾಹಿತಿ ಆಯುಕ್ತ ಬದ್ರುದ್ದೀನ್ ಮಾಣಿ, ಶಿವನಾಥ ರೈ ಮೆಗಿನಗುತ್ತು, ಲಕ್ಷ್ಮೀನಾರಾಯಣ ಕಡಂಬಳಿತ್ತಾಯ ಹಾಗೂ ವಾಲೇರಿಯನ್ ಡಿಸೋಜಾ ಪ್ರಮುಖ ಪಾತ್ರ ವಹಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಪೊನ್ನಪ್ಪ ಅಡ್ಲ್ಯಾಬ್ಸ್, ಕಾಲೇಜಿನ ಪಿಆರ್‌ಒ ಡಾ. ಭಾರತಿ ಎಸ್. ರೈ, ಉಪಕುಲಸಚಿವ (ಶೈಕ್ಷಣಿಕ) ವಿಪಿನ್ ನಾಯಕ್, ಎನ್‌ಸಿಸಿ ನೌಕಾ ವಿಭಾಗದ ಸಬ್ ಲೆಫ್ಟಿನೆಂಟ್ ತೇಜಸ್ವಿ ಭಟ್, ಉಪಕುಲಸಚಿವ (ಮೌಲ್ಯಮಾಪನ) ಅಭಿಷೇಕ್ ಸುವರ್ಣ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಹರ್ಷಿತ್ ಕುಮಾರ್ ಉಪಸ್ಥಿತರಿದ್ದರು.
ಸ್ಥಳೀಯ
UT Khader-ಚನ್ನಪಟ್ಟಣ: ನಡುರಾತ್ರಿ 2 ಗಂಟೆಗೆ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ದಿಢೀರ್ ಭೇಟಿ: ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಗರಂ
ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತಡರಾತ್ರಿ ಚನ್ನಪಟ್ಟಣಕ್ಕೆ ಆಗಮಿಸಿದ್ದ ಸಚಿವರು, ಯಾವುದೇ ಮುನ್ಸೂಚನೆ ನೀಡದೆ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಚನ್ನಪಟ್ಟಣ, ಅ.6: ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತಡರಾತ್ರಿ ಚನ್ನಪಟ್ಟಣಕ್ಕೆ ಆಗಮಿಸಿದ್ದ ಸಚಿವರು, ಯಾವುದೇ ಮುನ್ಸೂಚನೆ ನೀಡದೆ ನೇರವಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಈ ವೇಳೆ ಆಸ್ಪತ್ರೆಯ ಜನರಲ್ ವಾರ್ಡ್, ಐಸಿಯು ಹಾಗೂ ಶೌಚಾಲಯಗಳ ನೈರ್ಮಲ್ಯವನ್ನು ವೀಕ್ಷಿಸಿದ ಸಚಿವರು, ಸಿಬ್ಬಂದಿಯ ಹಾಜರಾತಿ ಪುಸ್ತಕವನ್ನೂ ಪರಿಶೀಲಿಸಿದರು. ಕರ್ತವ್ಯದಲ್ಲಿದ್ದ ವೈದ್ಯರಿಂದ ಆಸ್ಪತ್ರೆಯಲ್ಲಿನ ಚಿಕಿತ್ಸಾ ವ್ಯವಸ್ಥೆ ಹಾಗೂ ರೋಗಿಗಳ ಕುರಿತಂತೆ ಮಾಹಿತಿ ಪಡೆದುಕೊಂಡರು.
ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಅಸಮಾಧಾನ
ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಹೊರಗಿನ ಖಾಸಗಿ ಮೆಡಿಕಲ್ ಸ್ಟೋರ್‌ಗಳಿಂದ ಔಷಧಿ ಖರೀದಿಸುವಂತೆ ಚೀಟಿ ಬರೆದುಕೊಡುತ್ತಿರುವ ವಿಚಾರ ಸಚಿವರ ಗಮನಕ್ಕೆ ಬಂದಿದೆ. ಇದರಿಂದ ಅಸಮಾಧಾನಗೊಂಡ ಖಾದರ್ ಅವರು ವೈದ್ಯರು ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
“ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳು ಹಾಗೂ ಔಷಧಿಗಳಿದ್ದರೂ ರೋಗಿಗಳಿಗೆ ಹೊರಗಡೆ ಔಷಧಿ ಬರೆದುಕೊಡುವುದು ಏಕೆ?” ಎಂದು ಪ್ರಶ್ನಿಸಿದ ಸಚಿವರು, ಈ ಬಗ್ಗೆ ವೈದ್ಯರು ಹಾಗೂ ಸಿಬ್ಬಂದಿಯಿಂದ ಸ್ಪಷ್ಟನೆ ಪಡೆದರು.
ಸರ್ಕಾರಿ ಆಸ್ಪತ್ರೆಗೆ ಆಗಮಿಸುವ ಬಡ ಹಾಗೂ ಸಾಮಾನ್ಯ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಹಾಗೂ ಸಮಯೋಚಿತ ಚಿಕಿತ್ಸೆ ಒದಗಿಸಬೇಕು. ರೋಗಿಗಳ ಸೇವೆಯಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಸಂಬಂಧಪಟ್ಟ ಸಿಬ್ಬಂದಿಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ ನೀಡಿದರು.
ನಿಧನ ವಾರ್ತೆ
Puttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.
ಪುತ್ತೂರು: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಕುರಿಯ ಮುಲಾರು ನಿವಾಸಿ, ಮರದ ಕೆಲಸ ನಿರ್ವಹಿಸುತ್ತಿದ್ದ ಸುಂದರ ಆಚಾರ್ಯ ಎಂದು ಗುರುತಿಸಲಾಗಿದೆ.
ಮೂರು ದಿನಗಳ ಹಿಂದೆ ಸುಂದರ ಆಚಾರ್ಯ ಅವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಕಾರ್ಪಾಡಿ ದೇವಸ್ಥಾನದ ದ್ವಾರದ ಬಳಿ ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ವಾಹನ ನಿಲ್ಲಿಸದೆ ಪರಾರಿಯಾಗಿತ್ತು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಂದರ ಆಚಾರ್ಯ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಅ.6ರಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
Uncategorized24 hours ago
ಪುತ್ತೂರು : ವಿಚಾರಣೆ ವೇಳೆ ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ 2 ವರ್ಷ ಜೈಲು
-
Uncategorized12 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ದಕ್ಷಿಣ ಕನ್ನಡ6 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಸಿನೆಮಾ12 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ13 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ12 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಬಿಗ್ ನ್ಯೂಸ್11 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು12 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















