ನಿಧನ ವಾರ್ತೆ
Vijay Rupani-ಸ್ಟಾಕ್ಬ್ರೋಕರ್ ನಿಂದ ಸಿಎಂ ಆದ ವಿಜಯ್ ರೂಪಾನಿ ಜೀವನ ಯಾತ್ರೆಗೆ ದುಃಖಾಂತ್ಯ
ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕಳೆದ ಆರು ತಿಂಗಳಿಂದ ಲಂಡನ್ನಲ್ಲಿದ್ದ ತಮ್ಮ ಪತ್ನಿ ಅಂಜಲಿಯನ್ನು ಕರೆತರಲು ಮತ್ತು ಅಲ್ಲಿಯೇ ನೆಲೆಸಿರುವ ತಮ್ಮ ಪುತ್ರಿ ರಾಧಿಕಾರನ್ನು ಭೇಟಿಯಾಗಲು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಿನಗರದ ವಸತಿ ಪ್ರದೇಶದ ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ಗೆ ವಿಮಾನ ಡಿಕ್ಕಿಯಾಗಿ ಸ್ಫೋಟಗೊಂಡಿತು. ಈ ದುರಂತದಲ್ಲಿ ಅವರು ಜೀವ ಕಳೆದುಕೊಂಡಿದ್ದಾರೆ.
ಅಹಮದಾಬಾದ್, ಜೂ.13: ಗುಜರಾತ್ನ ಅಹಮದಾಬಾದ್ನಿಂದ ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI171 (ಬೋಯಿಂಗ್ 787-8 ಡ್ರೀಮ್ಲೈನರ್) ಜೂನ್ 12, 2025ರಂದು ಮಧ್ಯಾಹ್ನ 1:38ಕ್ಕೆ ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಿನಗರದ ವಸತಿ ಪ್ರದೇಶದ ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ಗೆ ಡಿಕ್ಕಿಯಾಗಿ ಸ್ಫೋಟಗೊಂಡಿತು. ಈ ಭೀಕರ ದುರಂತದಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿಗಳ ಪೈಕಿ 241 ಮಂದಿ ಮೃತಪಟ್ಟಿದ್ದು, ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ (68) ಸಹ ಈ ದುರಂತದಲ್ಲಿ ಜೀವ ಕಳೆದುಕೊಂಡಿದ್ದಾರೆ. ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್, ಮತ್ತು 1 ಕೆನಡಿಯನ್ ಇದ್ದರು.
ವಿಜಯ್ ರೂಪಾನಿಯ ರಾಜಕೀಯ ಮತ್ತು ವೈಯಕ್ತಿಕ ಜೀವನ:
ವಿಜಯ್ ರೂಪಾನಿ ಕಳೆದ ಆರು ತಿಂಗಳಿಂದ ಲಂಡನ್ನಲ್ಲಿದ್ದ ತಮ್ಮ ಪತ್ನಿ ಅಂಜಲಿಯನ್ನು ಕರೆತರಲು ಮತ್ತು ಅಲ್ಲಿಯೇ ನೆಲೆಸಿರುವ ತಮ್ಮ ಪುತ್ರಿ ರಾಧಿಕಾರನ್ನು ಭೇಟಿಯಾಗಲು ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.
1956ರ ಆಗಸ್ಟ್ 2ರಂದು ಮ್ಯಾನ್ಮಾರ್ನ (ಬರ್ಮಾ) ಯಾಂಗೂನ್ನಲ್ಲಿ ಜೈನ ಬನಿಯಾ ಕುಟುಂಬದ ಮಾಯಾಬೆನ್ ಮತ್ತು ರಾಮಿಕ್ಲಾಲ್ ರೂಪಾನಿ ದಂಪತಿಯ ಏಳನೇ ಮತ್ತು ಕಿರಿಯ ಪುತ್ರನಾಗಿ ಜನಿಸಿದ ರೂಪಾನಿ, 1960ರಲ್ಲಿ ರಾಜಕೀಯ ಅಸ್ಥಿರತೆಯಿಂದಾಗಿ ಕುಟುಂಬದೊಂದಿಗೆ ರಾಜ್ಕೋಟ್ಗೆ ಸ್ಥಳಾಂತರಗೊಂಡಿದ್ದರು.
ರೂಪಾನಿ ಧರ್ಮೇಂದ್ರ ಸಿಂಹಜಿ ಕಲಾ ಕಾಲೇಜಿನಿಂದ ಬಿಎ ಮತ್ತು ಸೌರಾಷ್ಟ್ರ ವಿಶ್ವವಿದ್ಯಾಲಯದಿಂದ ಎಲ್ಎಲ್ಬಿ ಪದವಿ ಪಡೆದಿದ್ದರು. ತಂದೆ ಸ್ಥಾಪಿಸಿದ ರಸಿಕ್ಲಾಲ್ & ಸನ್ಸ್ ಸಂಸ್ಥೆಯಲ್ಲಿ ಪಾಲುದಾರರಾಗಿ ಸ್ಟಾಕ್ಬ್ರೋಕರ್ ಆಗಿ ವೃತ್ತಿ ಆರಂಭಿಸಿದ ಅವರು, 1971ರಲ್ಲಿ ಜನಸಂಘಕ್ಕೆ ಸೇರಿ ರಾಜಕೀಯಕ್ಕೆ ಕಾಲಿಟ್ಟರು. 1976ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ 11 ತಿಂಗಳು ಭುಜ್ ಮತ್ತು ಭಾವನಗರ ಜೈಲುಗಳಲ್ಲಿ ಸೆರೆವಾಸ ಅನುಭವಿಸಿದ್ದರು.
1987ರಲ್ಲಿ ರಾಜ್ಕೋಟ್ ಮುನ್ಸಿಪಲ್ ಕಾರ್ಪೊರೇಷನ್ನ ಕಾರ್ಪೊರೇಟರ್ ಆಗಿ ಆಯ್ಕೆಯಾದ ರೂಪಾನಿ, 1996-97ರಲ್ಲಿ ರಾಜ್ಕೋಟ್ನ ಮೇಯರ್ ಆಗಿದ್ದರು. 1998ರಲ್ಲಿ ಬಿಜೆಪಿಯ ಗುಜರಾತ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಕೇಶುಭಾಯಿ ಪಟೇಲ್ರ ಮುಖ್ಯಮಂತ್ರಿತ್ವದ ಅವಧಿಯಲ್ಲಿ ಬಿಜೆಪಿ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 2006-2012ರವರೆಗೆ ರಾಜ್ಯಸಭಾ ಸದಸ್ಯರಾಗಿದ್ದ ಅವರು, ನಾಲ್ಕು ಬಾರಿ ಗುಜರಾತ್ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು 2013ರಲ್ಲಿ ನರೇಂದ್ರ ಮೋದಿಯವರ ಮುಖ್ಯಮಂತ್ರಿತ್ವದಲ್ಲಿ ಗುಜರಾತ್ ಮುನ್ಸಿಪಲ್ ಹಣಕಾಸು ಮಂಡಳಿಯ ಅಧ್ಯಕ್ಷರಾಗಿದ್ದರು.
2014ರ ಆಗಸ್ಟ್ನಲ್ಲಿ ರಾಜ್ಕೋಟ್ ಪಶ್ಚಿಮ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದು ವಿಧಾನಸಭೆಗೆ ಪ್ರವೇಶಿಸಿದ ರೂಪಾನಿ, ಆನಂದಿಬೆನ್ ಪಟೇಲ್ ಸಂಪುಟದಲ್ಲಿ ಸಾರಿಗೆ, ನೀರು ಸರಬರಾಜು, ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರಾದರು. 2016ರ ಫೆಬ್ರವರಿ 19ರಂದು ಗುಜರಾತ್ ಬಿಜೆಪಿ ರಾಜ್ಯಾಧ್ಯಕ್ಷರಾದ ಅವರು, 2021ರಲ್ಲಿ ಇಂಡಿಯನ್ ಎಕ್ಸ್ಪ್ರೆಸ್ನ ‘ಭಾರತದ 100 ಪ್ರಭಾವಶಾಲಿ ವ್ಯಕ್ತಿಗಳ’ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು.
2016ರ ಆಗಸ್ಟ್ 7ರಂದು ಆನಂದಿಬೆನ್ ಪಟೇಲ್ರ ಉತ್ತರಾಧಿಕಾರಿಯಾಗಿ ಗುಜರಾತ್ನ 16ನೇ ಮುಖ್ಯಮಂತ್ರಿಯಾದ ರೂಪಾನಿ, 2017ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಕೋಟ್ ಪಶ್ಚಿಮ ಕ್ಷೇತ್ರವನ್ನು ಗೆದ್ದು, ಡಿಸೆಂಬರ್ 22ರಂದು ಶಾಸಕಾಂಗ ಪಕ್ಷದ ನಾಯಕರಾಗಿ ಮತ್ತೊಮ್ಮೆ ಆಯ್ಕೆಯಾದರು. 2021ರ ಸೆಪ್ಟೆಂಬರ್ 11ರಂದು ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ಮತ್ತು ಭೂಪೇಂದ್ರ ಭಾಯಿ ಪಟೇಲ್ ಉತ್ತರಾಧಿಕಾರಿಯಾದರು.
ವೈಯಕ್ತಿಕ ಜೀವನ: ರೂಪಾನಿಯವರ ಪತ್ನಿ ಅಂಜಲಿ ಬಿಜೆಪಿಯಲ್ಲಿ ಸಕ್ರಿಯರಾಗಿದ್ದಾರೆ. ದಂಪತಿಯ ಹಿರಿಯ ಪುತ್ರ ರುಷಭ್ ಎಂಜಿನಿಯರಿಂಗ್ ಪದವೀಧರರಾಗಿದ್ದು, ಪುತ್ರಿ ರಾಧಿಕಾ ಚಾರ್ಟರ್ಡ್ ಅಕೌಂಟೆಂಟ್ ಆಗಿ ನಿಮಿತ್ ಮಿಶ್ರಾರನ್ನು ವಿವಾಹವಾಗಿ ಲಂಡನ್ನಲ್ಲಿ ನೆಲೆಸಿದ್ದಾರೆ. ಕಿರಿಯ ಪುತ್ರ ಪೂಜಿತ್ ಅಪಘಾತದಲ್ಲಿ ಮೃತಪಟ್ಟಿದ್ದು, ಅವರ ಸ್ಮರಣೆಗಾಗಿ ಪೂಜಿತ್ ರೂಪಾನಿ ಸ್ಮಾರಕ ಟ್ರಸ್ಟ್ ಸ್ಥಾಪಿಸಲಾಗಿದೆ.
ನಿಧನ ವಾರ್ತೆ
Savitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಡೆಹ್ರಾಡೂನ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಅತ್ಯಂತ ದುಃಖದಾಯಕ ಹಾಗೂ ಹೃದಯವಿದ್ರಾವಕವಾಗಿದೆ ಎಂದು ಅವರು ತಿಳಿಸಿದ್ದಾರೆ.
ತಾಯಿಯ ವಾತ್ಸಲ್ಯ, ಆಶೀರ್ವಾದ ಮತ್ತು ಪ್ರೀತಿ ಜೀವನದ ಅತ್ಯಮೂಲ್ಯ ಸಂಪತ್ತು. ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಧಾಮಿ ಸಂತಾಪ ಸೂಚಿಸಿದ್ದಾರೆ.
ಅಗಲಿದ ಆತ್ಮಕ್ಕೆ ಭಗವಾನ್ ಕೇದಾರನಾಥರು ಶಾಂತಿ ಕರುಣಿಸಲಿ. ತಾಯಿ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್ನ ಫುಟ್ಬೋರ್ಡ್ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ಅಪರಾಧ13 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಶಿಕ್ಷಣ20 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಚಿನ್ನ-ಬೆಳ್ಳಿ ದರ19 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ರಾಜಕೀಯ13 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಸಿನೆಮಾ18 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಸ್ಥಳೀಯ19 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ19 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಬಿಗ್ ನ್ಯೂಸ್12 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ















