ಅಂತರ ರಾಜ್ಯ
Mulleeriya-ಮುಳ್ಳೇರಿಯ : ದೈವ ನರ್ತಕನ ಕೊಲೆ – ಮದ್ಯ ಕುಡಿಯುತ್ತಿದ್ದಾಗ ವಾಗ್ವಾದ : ತಳ್ಳಿದ ಗೆಳೆಯ – ಆಪ್ತ ಗೆಳೆಯ ಬಂಧನ
ಆದೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡೂರು ಉರುಡೂರು ಚಂದನಕ್ಕಾಡಿನ ದೈವ ಕಲಾವಿದ ಟಿ. ಸತೀಶನ್ ಯಾನೆ ಬಿಜು (46) ಅವರ ಸಾವು ಕೊಲೆಯೆಂದು ತನಿಖೆಯಲ್ಲಿ ತಿಳಿದುಬಂದಿದ್ದು, ಆರೋಪಿಯಾದ ಸ್ನೇಹಿತ ಚಿದಾನಂದನನ್ನು (32) ಪೊಲೀಸರು ಬಂಧಿಸಿದ್ದಾರೆ.
ಮುಳ್ಳೇರಿಯ, ಜೂ.13: ಆದೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡೂರು ಉರುಡೂರು ಚಂದನಕ್ಕಾಡಿನ ದೈವ ಕಲಾವಿದ ಟಿ. ಸತೀಶನ್ ಯಾನೆ ಬಿಜು (46) ಅವರ ಸಾವು ಕೊಲೆಯೆಂದು ತನಿಖೆಯಲ್ಲಿ ತಿಳಿದುಬಂದಿದ್ದು, ಆರೋಪಿಯಾದ ಸ್ನೇಹಿತ ಚಿದಾನಂದನನ್ನು (32) ಪೊಲೀಸರು ಬಂಧಿಸಿದ್ದಾರೆ.
ಘಟನೆಯ ವಿವರ:
ಕಳೆದ ಸೋಮವಾರ (ಜೂನ್ 9, 2025) ಸತೀಶನ್ ಮತ್ತು ಚಿದಾನಂದ ಇಬ್ಬರು ಚಂದನಕ್ಕಾಡಿನ ದೇಲಂಪಾಡಿ ಗ್ರಾಮ ಪಂಚಾಯಿತಿಯ ನೆರೆಮನೆಯವರಾದ ಚೋಮಣ್ಣ ನಾಯ್ಕ ಅವರ ಮನೆಯಲ್ಲಿ ಮದ್ಯ ಸೇವಿಸುತ್ತಿದ್ದರು. ಇವರಿಬ್ಬರು ಆಗಾಗ ಚೋಮಣ್ಣನ ಮನೆಯಲ್ಲಿ ಕುಡಿಯುವ ಅಭಾಸ ರೂಢಿಮಾಡಿಕೊಂಡಿದ್ದರು. ಆ ದಿನ ಮಧ್ಯಾಹ್ನ, ಮದ್ಯ ಸೇವನೆ ವೇಳೆ ಇಬ್ಬರ ನಡುವೆ ವಾಗ್ವಾದ ಉಂಟಾಗಿ, ಕೋಪಗೊಂಡ ಚಿದಾನಂದ ಸತೀಶನ್ನನ್ನು ಹಿಂದಿನಿಂದ ತಳ್ಳಿದ್ದ. ಇದರಿಂದ ಸತೀಶನ್ ಕೆಳಗೆ ಬಿದ್ದು, ತಲೆ ನೆಲಕ್ಕೆ ಬಡಿದು ಗಂಭೀರ ಗಾಯಗೊಂಡಿದ್ದರು.
ಬಳಿಕ, ಚಿದಾನಂದ ಮತ್ತು ಇನ್ನೊಬ್ಬರ ಸಹಾಯದಿಂದ ಸತೀಶನ್ನನ್ನು ವರಾಂಡದಲ್ಲಿ ಮಲಗಿಸಲಾಗಿತ್ತು. ನೋವಿನಿಂದ ಕೂಗಾಡಿದಾಗ, ಚಿದಾನಂದ ಸತೀಶನ್ಗೆ ಮೂವ್ ಮುಲಾಮು ಹಚ್ಚಿ, ನೋವು ನಿವಾರಕ ಮಾತ್ರೆ ನೀಡಿದ್ದ. ಆದರೆ, ಸತೀಶನ್ ಅರೆಪ್ರಜ್ಞಾವಸ್ಥೆಗೆ ತಲುಪಿದ್ದರು. ಚಿದಾನಂದ ಅವರನ್ನು ನಿದ್ರೆಯಲ್ಲಿದ್ದಾರೆಂದು ಭಾವಿಸಿ ಮನೆಗೆ ಮರಳಿದ್ದ.
ಮಂಗಳವಾರ (ಜೂನ್ 10, 2025) ಸತೀಶನ್ ಮನೆಗೆ ಬಾರದಿರುವುದರಿಂದ ಆತನ ಸಹೋದರಿ ಸೌಮಿನಿ ಚೋಮಣ್ಣನ ಮನೆಗೆ ಭೇಟಿ ನೀಡಿದಾಗ, ಸತೀಶನ್ ವರಾಂಡದಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಕಂಡುಬಂದಿದ್ದ. ಕೂಡಲೇ ಆತನನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ರಕ್ಷಿಸಲಾಗಲಿಲ್ಲ. ಮರಣೋತ್ತರ ಪರೀಕ್ಷೆಯಲ್ಲಿ ಕುತ್ತಿಗೆಯ ಎಲುಬು ಮುರಿದಿರುವುದು, ದೇಹದ ಹಿಂಭಾಗದಲ್ಲಿ ಆಂತರಿಕ ಗಾಯಗಳು ಕಂಡುಬಂದಿದ್ದವು.
ಅಂತರ ರಾಜ್ಯ
Former CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ನವದೆಹಲಿ: ಉನ್ನತ ಸರ್ಕಾರಿ ಹುದ್ದೆ, ಕೈತುಂಬಾ ಸಂಬಳ, ಕಾರು, ಬಂಗಲೆಯಂತಹ ಐಷಾರಾಮಿ ಸೌಲಭ್ಯಗಳಿದ್ದರೂ ನೆಮ್ಮದಿ ಸಿಗದ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳದ (ಸಿಬಿಐ) ಮಾಜಿ ಇನ್ಸ್ಪೆಕ್ಟರ್ ಒಬ್ಬರು ತಮ್ಮ ಪ್ರತಿಷ್ಠಿತ ಹುದ್ದೆಗೆ ರಾಜೀನಾಮೆ ನೀಡಿ ಸನ್ಯಾಸ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದೀಗ ಅರಣ್ಯದ ಗುಹೆಗಳಲ್ಲಿ ಸರಳ ಜೀವನ ನಡೆಸುತ್ತಿರುವ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಆಧುನಿಕ ಜಗತ್ತಿನ ಸಕಲ ಸೌಕರ್ಯಗಳಿಂದ ದೂರವಾಗಿ ಗುಹೆಗಳಲ್ಲಿ ವಾಸಿಸುತ್ತಿರುವ ಮಾಜಿ ಅಧಿಕಾರಿಯು, ತಮ್ಮ ಆಧ್ಯಾತ್ಮಿಕ ಪಯಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅರಣ್ಯದ ವಾತಾವರಣದಲ್ಲಿ ಬದುಕಲು ಆರಂಭಿಸಿದ ಬಳಿಕ ಜೀವನದ ನೈಜ ಅರ್ಥ ಹಾಗೂ ನೆಮ್ಮದಿಯ ಮಹತ್ವ ಅರಿವಾಯಿತು ಎಂದು ಅವರು ಹೇಳಿದ್ದಾರೆ.
ಸಿಬಿಐ ಇನ್ಸ್ಪೆಕ್ಟರ್ ಹುದ್ದೆ ದೊರೆತ ಆರಂಭದಲ್ಲಿ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದೇನೆ ಎಂದು ಭಾವಿಸಿದ್ದ ಅವರು, ಕಾಲಕ್ರಮೇಣ ಆ ವ್ಯವಸ್ಥೆಯೊಳಗೆ ಮಾನಸಿಕ ಒತ್ತಡ ಅನುಭವಿಸಲಾರಂಭಿಸಿದರು. ಕಾನೂನು ಪಾಲನೆಯ ಹೆಸರಿನಲ್ಲಿ ಜನರೊಂದಿಗೆ ಕಠಿಣವಾಗಿ ಹಾಗೂ ಒರಟಾಗಿ ವರ್ತಿಸಬೇಕಾದ ಪರಿಸ್ಥಿತಿ ತಮ್ಮ ಸ್ವಭಾವಕ್ಕೆ ಹೊಂದಿಕೆಯಾಗುತ್ತಿರಲಿಲ್ಲ. ಹಣ, ಮನೆ, ಕಾರು ಸೇರಿದಂತೆ ಎಲ್ಲ ಸೌಲಭ್ಯಗಳಿದ್ದರೂ ಮನಸ್ಸಿಗೆ ಬೇಕಾದ ನೆಮ್ಮದಿ ಮತ್ತು ಸ್ವಾತಂತ್ರ್ಯ ಸಿಗುತ್ತಿಲ್ಲ ಎಂಬ ಅರಿವಾದ ಬಳಿಕ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದರು.
ನಂತರ ಹಲವು ರಾಜ್ಯಗಳಲ್ಲಿ ಸಂಚರಿಸಿದ ಅವರು, ಕೊನೆಗೆ ಮಧ್ಯಪ್ರದೇಶದ ಓಂಕಾರೇಶ್ವರದ ಸಮೀಪ ನರ್ಮದಾ ನದಿ ತೀರಕ್ಕೆ ತಲುಪಿದರು. ಅಲ್ಲಿ ಸರಳ ಜೀವನ ಆರಂಭಿಸಿ, ಚಪ್ಪಲಿ ಇಲ್ಲದೆ, ಮಲಗಲು ಚಾಪೆಯನ್ನೂ ಬಳಸದೆ, ದೊರೆಯುವ ಆಹಾರವನ್ನು ಸೇವಿಸುತ್ತಾ ಧ್ಯಾನ ಮತ್ತು ದೇವಿಯ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡರು.
ಬಳಿಕ ಬೆಟ್ಟದ ಮೇಲಿರುವ ದೇವಸ್ಥಾನವೊಂದರಲ್ಲಿ ಸಾಧುಗಳೊಂದಿಗೆ ಕೆಲವು ವರ್ಷಗಳನ್ನು ಕಳೆದರು. ಈ ಸಂದರ್ಭದಲ್ಲಿ ಗ್ರಾಮದ ಮಕ್ಕಳಿಗೆ ಪ್ರಕೃತಿಯೊಂದಿಗೆ ಬೆರೆಯುವ ಪಾಠವನ್ನೂ ಕಲಿಸಿದರು. ಸದ್ಯ ದಟ್ಟ ಅರಣ್ಯದ ಗುಹೆಗಳಲ್ಲಿ ವಾಸಿಸುತ್ತಿರುವ ಅವರು, ಒಲೆಯ ಮೇಲೆ ಅಡುಗೆ ಮಾಡಿಕೊಂಡು ಧ್ಯಾನದಲ್ಲಿ ಕಾಲ ಕಳೆಯುತ್ತಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಅವರ ಅಭಿಪ್ರಾಯವೇನು?
ಸಮಾಜದಲ್ಲಿನ ಭ್ರಷ್ಟಾಚಾರದ ಕುರಿತು ಮಾತನಾಡಿರುವ ಮಾಜಿ ಅಧಿಕಾರಿ, ಭ್ರಷ್ಟಾಚಾರದ ಬೀಜ ಮನೆಯಲ್ಲಿಯೇ ಬಿತ್ತನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪೋಷಕರು ತಮ್ಮ ಮಕ್ಕಳನ್ನು ನೆರೆಹೊರೆಯವರ ಶ್ರೀಮಂತಿಕೆಯೊಂದಿಗೆ ಹೋಲಿಕೆ ಮಾಡುವುದು ಮಕ್ಕಳಲ್ಲಿ ಹಣ ಮತ್ತು ಐಷಾರಾಮಿ ಜೀವನದ ಮೇಲಿನ ಅತಿಯಾದ ಆಸೆ ಬೆಳೆಸುತ್ತದೆ. ಇಂತಹ ಮನೋಭಾವದಲ್ಲಿ ಬೆಳೆಯುವ ಮಕ್ಕಳು ಮುಂದೆ ಜಿಲ್ಲಾಧಿಕಾರಿ, ವೈದ್ಯ ಅಥವಾ ಎಂಜಿನಿಯರ್ನಂತಹ ಉನ್ನತ ಸ್ಥಾನಕ್ಕೇರಿದರೂ ಸಮಾಜವನ್ನು ಶೋಷಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.
ಆದ್ದರಿಂದ ಮಕ್ಕಳನ್ನು ಐಎಎಸ್, ಐಪಿಎಸ್ ಅಧಿಕಾರಿಗಳನ್ನಾಗಿ ಅಥವಾ ಸನ್ಯಾಸಿಗಳನ್ನಾಗಿ ರೂಪಿಸುವುದಕ್ಕಿಂತ ಮೊದಲು ಅವರನ್ನು ಉತ್ತಮ ಮನುಷ್ಯರನ್ನಾಗಿ ಬೆಳೆಸುವುದು ಪೋಷಕರ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದ್ದಾರೆ.
ಕೇವಲ ಬಟ್ಟೆ ಅಥವಾ ವೇಷ ಬದಲಾಯಿಸಿಕೊಳ್ಳುವುದರಿಂದ ಸನ್ಯಾಸಿಯಾಗಲು ಸಾಧ್ಯವಿಲ್ಲ. ತಾನು ಮಾಡುವ ಕೆಲಸದಲ್ಲಿ ಸಂಪೂರ್ಣ ಪ್ರಾಮಾಣಿಕತೆ ಮತ್ತು ಸಮರ್ಪಣಾ ಮನೋಭಾವ ಹೊಂದಿರುವುದೇ ನಿಜವಾದ ಪವಿತ್ರತೆ ಎಂಬ ಸಂದೇಶವನ್ನೂ ಅವರು ನೀಡಿದ್ದಾರೆ.
ಸಿನೆಮಾ
Dawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
‘ಧುರಂಧರ್’ ಸಿನಿಮಾದಲ್ಲಿ ತೀವ್ರ ಅನಾರೋಗ್ಯದಿಂದ ಬಳಲುತ್ತಾ ಹಾಸಿಗೆ ಹಿಡಿದಿರುವ ವೃದ್ಧನಂತೆ ಚಿತ್ರಿಸಲಾಗಿರುವ ದಾವೂದ್, ವಾಸ್ತವದಲ್ಲಿ ಇನ್ನೂ ಸಕ್ರಿಯನಾಗಿದ್ದು ತನ್ನ ಅಪರಾಧ ಜಾಲವನ್ನು ಮುನ್ನಡೆಸುತ್ತಿದ್ದಾನೆ ಎಂದು ಅಮೆರಿಕದ ಮಾಜಿ ಎಫ್ಬಿಐ ಅಧಿಕಾರಿ ಕಮ್ರಾನ್ ಫರೀದಿ ಇಂಡಿಯಾ ಟುಡೇಗೆ ನೀಡಿದ ಪಾಡ್ಕಾಸ್ಟ್ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ನವದೆಹಲಿ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟಗಳ ಬಳಿಕ ಭಾರತದಿಂದ ಪರಾರಿಯಾಗಿ ಪಾಕಿಸ್ತಾನದಲ್ಲಿ ನೆಲೆಸಿದ್ದಾನೆ ಎನ್ನಲಾದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಬದುಕು ಇಂದಿಗೂ ನಿಗೂಢವಾಗಿದೆ. ಕಳೆದ ಹಲವು ವರ್ಷಗಳಿಂದ ಆತನ ಯಾವುದೇ ಅಧಿಕೃತ ಛಾಯಾಚಿತ್ರ ಸಾರ್ವಜನಿಕವಾಗಿ ಲಭ್ಯವಾಗಿಲ್ಲ. ಇದೀಗ ದಾವೂದ್ನ ಡಿ-ಕಂಪನಿಯೊಳಗೆ ರಹಸ್ಯವಾಗಿ ಕಾರ್ಯನಿರ್ವಹಿಸಿದ್ದಾಗಿ ಹೇಳಿಕೊಂಡಿರುವ ಅಮೆರಿಕದ ಮಾಜಿ ಎಫ್ಬಿಐ ಅಧಿಕಾರಿ ಕಮ್ರಾನ್ ಫರೀದಿ, ಡಾನ್ನ ವೈಯಕ್ತಿಕ ಜೀವನ, ಭದ್ರತಾ ವ್ಯವಸ್ಥೆ ಹಾಗೂ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಜೊತೆಗಿನ ಸಂಪರ್ಕದ ಕುರಿತು ಹಲವು ಅಚ್ಚರಿಯ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ.
‘ಧುರಂಧರ್’ ಸಿನಿಮಾದಲ್ಲಿ ತೀವ್ರ ಅನಾರೋಗ್ಯದಿಂದ ಬಳಲುತ್ತಾ ಹಾಸಿಗೆ ಹಿಡಿದಿರುವ ವೃದ್ಧನಂತೆ ಚಿತ್ರಿಸಲಾಗಿರುವ ದಾವೂದ್, ವಾಸ್ತವದಲ್ಲಿ ಇನ್ನೂ ಸಕ್ರಿಯನಾಗಿದ್ದು ತನ್ನ ಅಪರಾಧ ಜಾಲವನ್ನು ಮುನ್ನಡೆಸುತ್ತಿದ್ದಾನೆ ಎಂಬುದು ಫರೀದಿ ಅವರ ಪ್ರಮುಖ ಹೇಳಿಕೆ. ಇಂಡಿಯಾ ಟುಡೇಗೆ ನೀಡಿದ ಪಾಡ್ಕಾಸ್ಟ್ ಸಂದರ್ಶನದಲ್ಲಿ ಅವರು ಈ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.
ಧುರಂಧರ್ ಸಿನಿಮಾದ ದಾವೂದ್ಗೂ ನೈಜ ವ್ಯಕ್ತಿಗೂ ವ್ಯತ್ಯಾಸ!
‘ಧುರಂಧರ್’ ಚಿತ್ರದಲ್ಲಿ ‘ಬಡೇ ಸಾಹಬ್’ ಎಂದು ಉಲ್ಲೇಖಿಸಲಾಗಿರುವ ದಾವೂದ್ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾನೆ. ಆದರೆ, ದಾವೂದ್ ಜೊತೆ ಹಲವು ಪಾರ್ಟಿ ಹಾಗೂ ವ್ಯವಹಾರಿಕ ಸಭೆಗಳಲ್ಲಿ ಭಾಗವಹಿಸಿದ್ದೇನೆ ಎಂದು ಹೇಳಿಕೊಂಡಿರುವ ಫರೀದಿ, ಆತ ಇಂದಿಗೂ ತನ್ನ ಅಪರಾಧ ಜಾಲದ ಕಾರ್ಯಾಚರಣೆಗಳನ್ನು ನಿಯಂತ್ರಿಸುತ್ತಿದ್ದಾನೆ ಎಂದು ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನದಲ್ಲಿ ನಡೆಯುತ್ತಿರುವ ಮಾದಕವಸ್ತು ವ್ಯಾಪಾರದ ಮೇಲೂ ದಾವೂದ್ ನಿಗಾ ಇರಿಸಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ಪಾಕಿಸ್ತಾನದ ಭದ್ರತಾ ವಲಯದಲ್ಲಿ ಆತನನ್ನು ‘ಬಡೇ ಸಾಹಬ್’ ಅಥವಾ ‘ಬಡೆ ವಾಲೆ’ ಎಂದು ಕರೆಯಲಾಗುತ್ತದೆ ಎಂದಿದ್ದಾರೆ.
ಕರಾಚಿಯ ಕ್ಲಿಫ್ಟನ್ನಲ್ಲೇ ಡಾನ್ ವಾಸ!
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾದರೂ ದಾವೂದ್ ತನ್ನ ವಾಸಸ್ಥಳವನ್ನು ಬದಲಿಸಿಲ್ಲ. ಕರಾಚಿಯ ಅತ್ಯಂತ ಬಿಗಿ ಭದ್ರತೆಯ ಕ್ಲಿಫ್ಟನ್ ಪ್ರದೇಶದಲ್ಲಿ ಕುಟುಂಬದ ಸದಸ್ಯರೊಂದಿಗೆ ವಾಸಿಸುತ್ತಿದ್ದಾನೆ ಎಂದು ಫರೀದಿ ಹೇಳಿಕೊಂಡಿದ್ದಾರೆ.
ಆದರೆ, ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾದ ಸಂದರ್ಭಗಳಲ್ಲಿ ಆತ ಇಸ್ಲಾಮಾಬಾದ್ ಸೇರಿದಂತೆ ಮೂರು ಸುರಕ್ಷಿತ ಅಡಗುತಾಣಗಳಿಗೆ ಸ್ಥಳಾಂತರಗೊಳ್ಳುತ್ತಾನೆ ಎಂದು ತಿಳಿಸಿದ್ದಾರೆ.
ದಾವೂದ್ ನಿವಾಸದ ಕೆಳಗೆ ರಹಸ್ಯ ಸುರಂಗವಿದೆ ಎಂಬ ವದಂತಿಯನ್ನು ತಳ್ಳಿಹಾಕಿರುವ ಅವರು, ಮನೆಯ ಹಿಂಭಾಗದಿಂದ ಜನಸಂದಣಿ ಹೆಚ್ಚಿರುವ ದರ್ಗಾವೊಂದಕ್ಕೆ ಸಂಪರ್ಕ ಕಲ್ಪಿಸುವ ಪರ್ಯಾಯ ನಿರ್ಗಮನ ಮಾರ್ಗವಿದೆ ಎಂದು ಹೇಳಿದ್ದಾರೆ.
ಡಿ-ಕಂಪನಿಯೊಳಗೆ ನುಸುಳಿದ್ದೇಗೆ?
ದಾವೂದ್ನ ಅಪರಾಧ ಜಾಲದೊಳಗೆ ತಾನು ಹೇಗೆ ಪ್ರವೇಶಿಸಿದೆ ಎಂಬುದನ್ನೂ ಫರೀದಿ ವಿವರಿಸಿದ್ದಾರೆ. 1995ರಲ್ಲಿ ಎಫ್ಬಿಐಗೆ ಸೇರ್ಪಡೆಯಾಗಿದ್ದ ತಮಗೆ 2009ರಲ್ಲಿ ದಾವೂದ್ ಗ್ಯಾಂಗ್ನೊಳಗೆ ರಹಸ್ಯವಾಗಿ ನುಸುಳುವ ಜವಾಬ್ದಾರಿ ನೀಡಲಾಗಿತ್ತು ಎಂದು ಹೇಳಿದ್ದಾರೆ.
ಈ ಕಾರ್ಯಾಚರಣೆಗಾಗಿ ರಷ್ಯಾದ ಮಾಫಿಯಾ ಸದಸ್ಯನಂತೆ ಗುರುತಿಸಿಕೊಂಡು, ತಮ್ಮ ಪಾಕಿಸ್ತಾನಿ ಮೂಲವನ್ನು ಮರೆಮಾಚಿದ್ದಾಗಿ ತಿಳಿಸಿದ್ದಾರೆ. ದಾವೂದ್ನ ಆಪ್ತ ಸಹಚರ ಜಬೀರ್ ಮೊತಿವಾಲಾ ಮೂಲಕ ಆತನಿಗೆ ಪರಿಚಯವಾಗಿತ್ತು ಎಂದಿದ್ದಾರೆ.
2018ರಲ್ಲಿ ಲಂಡನ್ನಲ್ಲಿ ಜಬೀರ್ ಮೊತಿವಾಲಾ ಬಂಧನಕ್ಕೂ ತಾನೇ ಕಾರಣ ಎಂದು ಫರೀದಿ ಹೇಳಿಕೊಂಡಿದ್ದಾರೆ. ಕರಾಚಿಯಲ್ಲಿ ಡಿ-ಕಂಪನಿಗಾಗಿ ಹವಾಲಾ ಹಣಕಾಸು ವ್ಯವಹಾರಗಳನ್ನು ಸ್ಥಾಪಿಸಲು ಸಹಾಯ ಮಾಡಿದ್ದಾಗಿಯೂ ತಿಳಿಸಿದ್ದಾರೆ. ದಾವೂದ್ನ ಸಹೋದರ ಅನೀಸ್ ಇಬ್ರಾಹಿಂ ಪುತ್ರ ಅಲಿ ಕಾಸ್ಕರ್ ತಮ್ಮ ಮಾಹಿತಿಯ ಪ್ರಮುಖ ಮೂಲವಾಗಿದ್ದ ಎಂದು ಹೇಳಿದ್ದಾರೆ.
ರಾತ್ರಿ 10ರ ಬಳಿಕವೇ ಹೊರಗೆ ಬರುವ ಡಾನ್!
ದಾವೂದ್ನ ದಿನಚರಿಯ ಕುರಿತು ಮಾತನಾಡಿರುವ ಫರೀದಿ, ಆತ ಹಗಲು ಹೊತ್ತಿನಲ್ಲಿ ಮನೆಯಿಂದ ಹೊರಬರುವುದಿಲ್ಲ ಎಂದು ತಿಳಿಸಿದ್ದಾರೆ. ರಾತ್ರಿ 10 ಗಂಟೆಯ ಬಳಿಕ ಹೊರಗೆ ಬಂದು, ಮುಂಜಾನೆ ಫಜರ್ ಪ್ರಾರ್ಥನೆಗೂ ಮುನ್ನ ಮನೆಗೆ ಮರಳುತ್ತಾನೆ. ಈ ಕಾರಣದಿಂದ ಆತನನ್ನು ‘ರಾತ್ ಕಾ ಬಾದ್ಶಾ’ ಎಂದು ಕರೆಯಲಾಗುತ್ತದೆ ಎಂದಿದ್ದಾರೆ.
ದಾವೂದ್ಗೆ ದಿನದ 24 ಗಂಟೆಯೂ ಬಿಗಿ ಭದ್ರತೆ ಇರುತ್ತದೆ. ಸುಮಾರು 35ರಿಂದ 45 ಮಂದಿ ಭದ್ರತಾ ಸಿಬ್ಬಂದಿ ಆತನ ಸುತ್ತಲೂ ಕಾವಲು ಕಾಯುತ್ತಾರೆ. ಅವರ ಬಳಿ ಎಕೆ-47 ಸೇರಿದಂತೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿರುತ್ತವೆ ಎಂದು ಫರೀದಿ ಆರೋಪಿಸಿದ್ದಾರೆ.
ದಾವೂದ್ನ ಭದ್ರತಾ ವ್ಯವಸ್ಥೆಯನ್ನು ಛೋಟಾ ಶಕೀಲ್ ನಿರ್ವಹಿಸುತ್ತಾನೆ. ಆತ ಪಾಕಿಸ್ತಾನದ ಐಎಸ್ಐ ಜೊತೆ ಸಂಪರ್ಕ ಹೊಂದಿದ್ದು, ಪ್ರತಿ ಶುಕ್ರವಾರ ಆ ಸಂಸ್ಥೆಯ ಕೇಂದ್ರ ಕಚೇರಿಗೆ ತೆರಳಿ ಭದ್ರತಾ ವರದಿಗಳನ್ನು ಪಡೆಯುತ್ತಾನೆ ಎಂದು ಫರೀದಿ ಹೇಳಿದ್ದಾರೆ.
ದಾವೂದ್ ಮತ್ತು ಛೋಟಾ ಶಕೀಲ್ ದುಬೈನಿಂದ ತರಿಸಿಕೊಂಡಿರುವ ಗುಂಡು ನಿರೋಧಕ ವಾಹನಗಳಲ್ಲಿ ಸಂಚರಿಸುತ್ತಾರೆ. ಬಾಂಬ್, ರಾಕೆಟ್ ಹಾಗೂ ಸ್ನೈಪರ್ ದಾಳಿಗಳನ್ನು ತಡೆದುಕೊಳ್ಳುವ ಸಾಮರ್ಥ್ಯ ಈ ವಾಹನಗಳಿಗಿದೆ ಎಂದು ತಿಳಿಸಿದ್ದಾರೆ.
ಐಎಸ್ಐ, ಲಷ್ಕರ್ ಜೊತೆ ನಂಟಿನ ಆರೋಪ
ದಾವೂದ್ ಪಾಕಿಸ್ತಾನದ ಐಎಸ್ಐ ಆಶ್ರಯದಲ್ಲಿದ್ದಾನೆ ಎಂದು ಫರೀದಿ ನೇರ ಆರೋಪ ಮಾಡಿದ್ದಾರೆ. ಲಷ್ಕರ್-ಎ-ತೊಯ್ಬಾ ಸಂಘಟನೆ ಹಾಗೂ 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರ ಹಫೀಜ್ ಸಯೀದ್ ಜೊತೆ ದಾವೂದ್ಗೆ ನಿಕಟ ವ್ಯವಹಾರಿಕ ಸಂಪರ್ಕವಿದೆ ಎಂದೂ ಹೇಳಿದ್ದಾರೆ.
1993ರ ಮುಂಬೈ ಸ್ಫೋಟ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಟೈಗರ್ ಮೆಮನ್ ಬಗ್ಗೆಯೂ ಮಾತನಾಡಿರುವ ಅವರು, ಮೆಮನ್ ಹೆಚ್ಚು ಹೊರಗೆ ಸಂಚರಿಸುವುದಿಲ್ಲ ಎಂದಿದ್ದಾರೆ. ಇದೇ ವೇಳೆ, ಅನೀಸ್ ಇಬ್ರಾಹಿಂ ಮತ್ತು ಛೋಟಾ ಶಕೀಲ್ ನಡುವೆ ಗ್ಯಾಂಗ್ನ ನಿಯಂತ್ರಣ ಹಾಗೂ ಉತ್ತರಾಧಿಕಾರದ ವಿಚಾರದಲ್ಲಿ ಭಿನ್ನಾಭಿಪ್ರಾಯವಿದೆ ಎಂದು ಆರೋಪಿಸಿದ್ದಾರೆ.
ಐಷಾರಾಮಿ ಜೀವನ, ಕೊಕೇನ್ ಸೇವನೆ, ಎರಡನೇ ಮದುವೆ!
ಧಾರ್ಮಿಕ ವ್ಯಕ್ತಿಯಂತೆ ತನ್ನನ್ನು ಬಿಂಬಿಸಿಕೊಳ್ಳುವ ದಾವೂದ್ ಖಾಸಗಿ ಬದುಕಿನಲ್ಲಿ ಐಷಾರಾಮಿ ಜೀವನ ನಡೆಸುತ್ತಾನೆ ಎಂದು ಫರೀದಿ ಆರೋಪಿಸಿದ್ದಾರೆ. ಮುಜ್ರಾ ನೃತ್ಯ ಕಾರ್ಯಕ್ರಮಗಳನ್ನು ವೀಕ್ಷಿಸುವ ಆಸಕ್ತಿ ಹೊಂದಿದ್ದಾನೆ. ಹಿಂದೆ ಮದ್ಯ ಸೇವಿಸುತ್ತಿದ್ದ ಆತ ಇದೀಗ ಕೊಕೇನ್ ಸೇವನೆಗೆ ಹೆಚ್ಚು ಒಲವು ತೋರಿದ್ದಾನೆ ಎಂದು ಹೇಳಿದ್ದಾರೆ.
ದಾವೂದ್ಗಾಗಿ ತಾನೇ ಮದ್ಯ ಖರೀದಿಸಿದ್ದಾಗಿ ಹಾಗೂ ಸುಮಾರು 1.78 ಲಕ್ಷ ರೂಪಾಯಿ ಮೌಲ್ಯದ ದುಬಾರಿ ಮದ್ಯದ ಬಾಟಲಿಯನ್ನು ಆತ ತರಿಸಿಕೊಂಡಿದ್ದಾಗಿ ಸಂದರ್ಶನದಲ್ಲಿ ವಿವರಿಸಿದ್ದಾರೆ.
ಕರಾಚಿಯ ’22 ಜಮ್ಮಮಾ’ ಎಂಬ ಅತ್ಯಂತ ಬಿಗಿ ಭದ್ರತೆಯ, ಶಬ್ದ ನಿರೋಧಕ ಕಟ್ಟಡದಲ್ಲಿ ದಾವೂದ್ ಪಾಕಿಸ್ತಾನದ ಅಧಿಕಾರಿಗಳು ಮತ್ತು ಉದ್ಯಮಿಗಳೊಂದಿಗೆ ಸಭೆ ನಡೆಸುತ್ತಾನೆ ಎಂದಿದ್ದಾರೆ.
ಒಂದು ಸಂದರ್ಭದಲ್ಲಿ ತನ್ನ ಸಹಾಯಕನಿಗೆ ಪಾಕಿಸ್ತಾನ ಇಂಟರ್ನ್ಯಾಷನಲ್ ಏರ್ಲೈನ್ಸ್ನಲ್ಲಿ ಉದ್ಯೋಗ ಕೊಡಿಸುವ ಸಲುವಾಗಿ ದಾವೂದ್ ಮಧ್ಯರಾತ್ರಿಯಲ್ಲಿ ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರಿಗೆ ಕರೆ ಮಾಡಿದ್ದನ್ನು ನೋಡಿದ್ದೇನೆ ಎಂದೂ ಫರೀದಿ ಹೇಳಿಕೊಂಡಿದ್ದಾರೆ.
ಇದಲ್ಲದೆ, ದಾವೂದ್ ಪಾಕಿಸ್ತಾನದಲ್ಲಿ ಎರಡನೇ ಮದುವೆಯಾಗಿದ್ದಾನೆ ಎಂಬ ಮಾಹಿತಿಯನ್ನೂ ಅವರು ಬಹಿರಂಗಪಡಿಸಿದ್ದಾರೆ. ಆಯೇಷಾ ಭಾಭಿ ಎಂದು ಕರೆಯಲಾಗುವ ಈ ಮಹಿಳೆ ದಾವೂದ್ಗಿಂತ ಸುಮಾರು 20 ವರ್ಷ ಚಿಕ್ಕವಳು. ಆಕೆ ಕರಾಚಿಯಲ್ಲಿ ಕಪ್ಪು ಬಣ್ಣದ ಮರ್ಸಿಡಿಸ್ ಕಾರಿನಲ್ಲಿ ಸಂಚರಿಸುತ್ತಾಳೆ ಎಂದು ತಿಳಿಸಿದ್ದಾರೆ.
2023ರಲ್ಲಿ ದಾವೂದ್ನ ಸಹೋದರಿ ಹಸೀನಾ ಪಾರ್ಕರ್ ಪುತ್ರ ಅಲಿಶಾ ಪಾರ್ಕರ್ ಕೂಡ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮುಂದೆ ಇದೇ ರೀತಿಯ ಮಾಹಿತಿ ನೀಡಿದ್ದ ಎನ್ನಲಾಗಿದೆ. ಮೊದಲ ಪತ್ನಿ ಮೆಹಜಬೀನ್ ಜೊತೆಗಿನ ವಿವಾಹ ಸಂಬಂಧ ಮುಂದುವರಿದಿರುವಾಗಲೇ ದಾವೂದ್ ಪಾಕಿಸ್ತಾನದ ಪಠಾಣ್ ಸಮುದಾಯದ ಮಹಿಳೆಯನ್ನು ಎರಡನೇ ಮದುವೆಯಾಗಿದ್ದಾನೆ ಎಂದು ಅಲಿಶಾ ಹೇಳಿದ್ದ.
ದಾವೂದ್ ಜೊತೆಗಿದ್ದ ಮುಂಬೈನ ಫಕೀರ!
ದಾವೂದ್ ಪಾಕಿಸ್ತಾನಕ್ಕೆ ತೆರಳುವಾಗ ಮುಂಬೈ ಮೂಲದ ‘ಇಸ್ಲಾಂ ಬಾಬಾ’ ಎಂಬ ಫಕೀರನನ್ನೂ ತನ್ನೊಂದಿಗೆ ಕರೆದೊಯ್ದಿದ್ದ ಎಂದು ಫರೀದಿ ತಿಳಿಸಿದ್ದಾರೆ. ಡಿ-ಕಂಪನಿಯ ಯಾವುದೇ ಕಾರ್ಯಾಚರಣೆ ಆರಂಭಿಸುವ ಮೊದಲು ಈ ಫಕೀರನ ಅನುಮತಿ ಪಡೆಯಲಾಗುತ್ತದೆ ಎಂಬ ಕುತೂಹಲಕಾರಿ ವಿಚಾರವನ್ನೂ ಅವರು ಹಂಚಿಕೊಂಡಿದ್ದಾರೆ.
ಒಟ್ಟಿನಲ್ಲಿ, ದಶಕಗಳಿಂದ ನಿಗೂಢವಾಗಿರುವ ದಾವೂದ್ ಇಬ್ರಾಹಿಂನ ವೈಯಕ್ತಿಕ ಬದುಕು, ಭದ್ರತಾ ವ್ಯವಸ್ಥೆ ಹಾಗೂ ಅಪರಾಧ ಜಾಲದ ಕುರಿತು ಕಮ್ರಾನ್ ಫರೀದಿ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಆದರೆ, ಸಂದರ್ಶನದಲ್ಲಿ ಅವರು ನೀಡಿರುವ ಮಾಹಿತಿಗಳಿಗೆ ಸ್ವತಂತ್ರ ದೃಢೀಕರಣ ಲಭ್ಯವಾಗಿರುವ ಬಗ್ಗೆ ಸ್ಪಷ್ಟತೆ ಇಲ್ಲ. ಹೀಗಾಗಿ ಈ ಹೇಳಿಕೆಗಳನ್ನು ದೃಢಪಟ್ಟ ಅಧಿಕೃತ ಮಾಹಿತಿಯೆಂದು ಪರಿಗಣಿಸಲಾಗದು.
ನಿಧನ ವಾರ್ತೆ
One-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.
ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್ಐಆರ್ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.
ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.
ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.
ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.
ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
-
ಅಪರಾಧ23 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ23 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್22 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ದಕ್ಷಿಣ ಕನ್ನಡ20 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ನಿಧನ ವಾರ್ತೆ21 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ಅಪರಾಧ21 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್5 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಮಂಗಳೂರು21 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ















