ನಿಧನ ವಾರ್ತೆ
Gujarat-ಗುಜರಾತ್ ವಿಮಾನ ದುರಂತ : ಚಹಾ ಅಂಗಡಿ ಮಾಲಕಿಯ ಮಗ 14 ವರ್ಷದ ಬಾಲಕ ಮೃತ್ಯು – ಮೃತರ ಸಂಖ್ಯೆ 274ಕ್ಕೆ ಏರಿಕೆ
ಅಹಮದಾಬಾದ್ ವಿಮಾನ ದುರಂತದಲ್ಲಿ 14 ವರ್ಷದ ಬಾಲಕ ಆಕಾಶ್ ಪ್ರಾಣ ಕಳೆದುಕೊಂಡಿದ್ದಾನೆ. ಮಧ್ಯಾಹ್ನದ ವೇಳೆ ಆಕಾಶ್ ಚಹಾ ಅಂಗಡಿಯ ಪಕ್ಕದ ಹಾಸ್ಟೆಲ್ ಕಟ್ಟಡದ ಬಳಿಯ ಮರದ ಕೆಳಗೆ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ವಿಮಾನದ ತುಣುಕೊಂದು ಆಕಾಶ್ನ ತಲೆಯ ಮೇಲೆ ಬಿದ್ದು, ಕ್ಷಣಾರ್ಧದಲ್ಲಿ ಅವನ ದೇಹಕ್ಕೆ ಬೆಂಕಿ ಹೊತ್ತಿಕೊಂಡಿತು.
ಅಹಮದಾಬಾದ್: ಗುರುವಾರ ನಡೆದ ಭೀಕರ ವಿಮಾನ ದುರಂತದಲ್ಲಿ ಮೃತರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಹಮದಾಬಾದ್ನಿಂದ ಲಂಡನ್ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಿನಗರದ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಕಟ್ಟಡಕ್ಕೆ ಡಿಕ್ಕಿ ಹೊಡೆದಿತ್ತು. ವಿಮಾನದಲ್ಲಿ 230 ಪ್ರಯಾಣಿಕರು, 2 ಪೈಲಟ್ಗಳು ಮತ್ತು 10 ಸಿಬ್ಬಂದಿ ಸೇರಿ ಒಟ್ಟು 242 ಜನರಿದ್ದರು. ಇವರಲ್ಲಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆಯೊಬ್ಬರು ಮಾತ್ರ ಬದುಕುಳಿದಿದ್ದಾರೆ. ಮೃತರಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಹ ಸೇರಿದ್ದಾರೆ.
ಅಧಿಕಾರಿಗಳ ಪ್ರಕಾರ, ದುರಂತದಲ್ಲಿ ಕಾಲೇಜಿನ ಹಾಸ್ಟೆಲ್ನಲ್ಲಿ ತಂಗಿದ್ದ 10 ವೈದ್ಯರು ಮತ್ತು ಅವರ ಸಂಬಂಧಿಕರು ಮೃತಪಟ್ಟಿದ್ದಾರೆ. ಇದರ ಜೊತೆಗೆ 24 ಎಂಬಿಬಿಎಸ್ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
14 ವರ್ಷದ ಬಾಲಕನ ದುರಂತ ಮೃತ್ಯು
ಘಟನೆಯ ಸಮೀಪದಲ್ಲಿರುವ ಚಹಾ ಅಂಗಡಿಯ ಮಾಲಕಿಯ ಮಗ, 14 ವರ್ಷದ ಆಕಾಶ್, ಈ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಮಧ್ಯಾಹ್ನದ ವೇಳೆ ಆಕಾಶ್ ಚಹಾ ಅಂಗಡಿಯ ಪಕ್ಕದ ಹಾಸ್ಟೆಲ್ ಕಟ್ಟಡದ ಬಳಿಯ ಮರದ ಕೆಳಗೆ ವಿಶ್ರಾಂತಿ ಪಡೆಯುತ್ತಿದ್ದ. ಆ ಸಂದರ್ಭದಲ್ಲಿ ಅವನ ತಾಯಿ ಸೀತಾಬೆನ್ ಚಹಾ ತಯಾರಿಸುತ್ತಿದ್ದರು. ಆಗ ಒಮ್ಮೆಲೇ ವಿಮಾನದ ತುಣುಕೊಂದು ಆಕಾಶ್ನ ತಲೆಯ ಮೇಲೆ ಬಿದ್ದು, ಕ್ಷಣಾರ್ಧದಲ್ಲಿ ಅವನ ದೇಹಕ್ಕೆ ಬೆಂಕಿ ಹೊತ್ತಿಕೊಂಡಿತು, ಇದರಿಂದ ಅವನು ಸ್ಥಳದಲ್ಲೇ ಮೃತಪಟ್ಟ.
ನಿಧನ ವಾರ್ತೆ
Savitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಡೆಹ್ರಾಡೂನ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಅತ್ಯಂತ ದುಃಖದಾಯಕ ಹಾಗೂ ಹೃದಯವಿದ್ರಾವಕವಾಗಿದೆ ಎಂದು ಅವರು ತಿಳಿಸಿದ್ದಾರೆ.
ತಾಯಿಯ ವಾತ್ಸಲ್ಯ, ಆಶೀರ್ವಾದ ಮತ್ತು ಪ್ರೀತಿ ಜೀವನದ ಅತ್ಯಮೂಲ್ಯ ಸಂಪತ್ತು. ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಧಾಮಿ ಸಂತಾಪ ಸೂಚಿಸಿದ್ದಾರೆ.
ಅಗಲಿದ ಆತ್ಮಕ್ಕೆ ಭಗವಾನ್ ಕೇದಾರನಾಥರು ಶಾಂತಿ ಕರುಣಿಸಲಿ. ತಾಯಿ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್ನ ಫುಟ್ಬೋರ್ಡ್ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ಅಪರಾಧ14 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಶಿಕ್ಷಣ21 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಚಿನ್ನ-ಬೆಳ್ಳಿ ದರ19 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ರಾಜಕೀಯ14 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಸಿನೆಮಾ19 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಸ್ಥಳೀಯ20 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಬಿಗ್ ನ್ಯೂಸ್13 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಅಪರಾಧ20 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು















