Connect with us

ಅಪರಾಧ

Arrested-ಅತ್ಯಾಚಾರ ಯತ್ನ – ಮಹಿಳೆಯ ಬೆತ್ತಲೆ ವಿಡಿಯೋ : ಕೇರಳದ ಪ್ರಸಿದ್ಧ ದೇವಸ್ಥಾನದ ಅರ್ಚಕ ಬೆಂಗಳೂರಿನಲ್ಲಿ ಬಂಧನ!

Published

on

Ad Widget

Ad Widget

Ad Widget

Ad Widget

ದೇವರ ಮೊರೆ ಹೋದ ಭಕ್ತೆಯನ್ನೇ ಬ್ಲ್ಯಾಕ್ಮೇಲ್ ಮಾಡಿ, ಬೆತ್ತಲೆ ವಿಡಿಯೋ ಚಿತ್ರೀಕರಿಸಿ, ಅತ್ಯಾಚಾರಕ್ಕೆ ಯತ್ನಿಸಿದ ಘೋರ ಕೃತ್ಯವೊಂದು ಬೆಳಕಿಗೆ ಬಂದಿದೆ. ಈ ಸಂಬಂಧ, ಓರ್ವ ಅರ್ಚಕನನ್ನು ಬೆಂಗಳೂರಿನ ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದು, ಪ್ರಕರಣದ ಪ್ರಮುಖ ಆರೋಪಿ, ಪ್ರಧಾನ ಅರ್ಚಕನಿಗಾಗಿ ಬಲೆ ಬೀಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು, ಜೂನ್ 16: ದೇವರ ಮೊರೆ ಹೋದ ಭಕ್ತೆಯನ್ನೇ ಬ್ಲ್ಯಾಕ್ಮೇಲ್ ಮಾಡಿ, ಬೆತ್ತಲೆ ವಿಡಿಯೋ ಚಿತ್ರೀಕರಿಸಿ, ಅತ್ಯಾಚಾರಕ್ಕೆ ಯತ್ನಿಸಿದ ಘೋರ ಕೃತ್ಯವೊಂದು ಬೆಳಕಿಗೆ ಬಂದಿದೆ. ಕೌಟುಂಬಿಕ ಸಮಸ್ಯೆಗೆ ಪರಿಹಾರ ಅರಸಿ ಕೇರಳದ ಪ್ರಸಿದ್ಧ ದೇವಸ್ಥಾನಕ್ಕೆ ತೆರಳಿದ್ದ ಬೆಂಗಳೂರಿನ ಮಹಿಳೆಯ ನಂಬಿಕೆಯನ್ನೇ ದುರುಪಯೋಗಪಡಿಸಿಕೊಂಡ ಇಬ್ಬರು ಕಾಮುಕ ಅರ್ಚಕರು ನರಕ ದರ್ಶನ ಮಾಡಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಸಂಬಂಧ, ಓರ್ವ ಅರ್ಚಕನನ್ನು ಬೆಂಗಳೂರಿನ ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದು, ಪ್ರಕರಣದ ಪ್ರಮುಖ ಆರೋಪಿ, ಪ್ರಧಾನ ಅರ್ಚಕನಿಗಾಗಿ ಬಲೆ ಬೀಸಿದ್ದಾರೆ.

Ad Widget

Ad Widget <> Ad Widget

ದೈವದ ಸನ್ನಿಧಿಯಲ್ಲೇ ದೈತ್ಯರ ಅಟ್ಟಹಾಸ!
ಕುಟುಂಬದಲ್ಲಿನ ಮನಸ್ತಾಪಗಳಿಂದ ನೊಂದಿದ್ದ ಬೆಂಗಳೂರಿನ ಮಹಿಳೆಯೊಬ್ಬರು, ಸಾಮಾಜಿಕ ಜಾಲತಾಣದಲ್ಲಿ ಕೇರಳದ ತ್ರಿಶೂರ್ ಜಿಲ್ಲೆಯ ಪೆರಿಂಗೋಟ್ಟುಕ್ಕಾರ ದೇವಸ್ಥಾನದ ಮಹಾತ್ಮೆಯ ಬಗ್ಗೆ ತಿಳಿದುಕೊಂಡಿದ್ದರು.

ಸಮಸ್ಯೆಗಳಿಗೆ ಪರಿಹಾರ ಸಿಗಬಹುದೆಂಬ ಆಶಯದೊಂದಿಗೆ ಅವರು ದೇವಸ್ಥಾನಕ್ಕೆ ತೆರಳಿದ್ದರು. ಮಲಯಾಳಂ ಬಾರದ ಕಾರಣ, ಅಲ್ಲಿ ತಮಿಳು ಮಾತನಾಡುತ್ತಿದ್ದ ಅರ್ಚಕ ಅರುಣ್ ಎಂಬಾತನ ಸಹಾಯ ಪಡೆದಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಅರುಣ್, ಪೂಜೆಗಾಗಿ ₹24,000 ಪಡೆದು, ಮಹಿಳೆಯ ಮೊಬೈಲ್ ಸಂಖ್ಯೆಯನ್ನೂ ಪಡೆದುಕೊಂಡಿದ್ದ.

Ad Widget

Ad Widget

ಮಾಟ-ಮಂತ್ರದ ಬ್ಲ್ಯಾಕ್ಮೇಲ್ ಬಲೆ
ಬೆಂಗಳೂರಿಗೆ ಮರಳಿದ ಬಳಿಕ ಮಹಿಳೆಗೆ ಕರೆ ಮಾಡಿದ ಅರುಣ್, ತನ್ನ ಅಸಲಿ ಮುಖವಾಡವನ್ನು ಬಯಲು ಮಾಡಿದ್ದಾನೆ. “ನಿಮ್ಮ ಮೇಲೆ ಘೋರವಾದ ಮಾಟ-ಮಂತ್ರವಾಗಿದೆ, ಅದನ್ನು ನಾನೇ ಸರಿಪಡಿಸುತ್ತೇನೆ. ನಾನು ಹೇಳಿದಂತೆ ಕೇಳಬೇಕು” ಎಂದು ಬೆದರಿಸಿದ್ದಾನೆ.

ನಂತರ ವಾಟ್ಸ್ಆ್ಯಪ್ ವಿಡಿಯೋ ಕಾಲ್ನಲ್ಲಿ ತಾನು ನಗ್ನನಾಗಿ, ಮಹಿಳೆಗೂ ಬಟ್ಟೆ ಬಿಚ್ಚುವಂತೆ ಬಲವಂತ ಮಾಡಿದ್ದಾನೆ. ಆಕೆ ನಿರಾಕರಿಸಿದಾಗ, “ನಿನ್ನ ಮಕ್ಕಳಿಗೆ ಮಾಟ ಮಾಡಿಸಿಬಿಡುತ್ತೇನೆ” ಎಂದು ಬೆದರಿಸಿ, ಆಕೆಯನ್ನು ನಗ್ನಗೊಳಿಸಿ ಅದರ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದಾನೆ.

ಕಾಡಿಗೆಳೆದು ಅತ್ಯಾಚಾರಕ್ಕೆ ಯತ್ನ
ಆ ಬೆತ್ತಲೆ ವಿಡಿಯೋವನ್ನೇ ಅಸ್ತ್ರವಾಗಿಸಿಕೊಂಡ ಕಾಮುಕ ಅರ್ಚಕ, ‘ವಿಶೇಷ ಪೂಜೆ’ಯ ನೆಪದಲ್ಲಿ ಮಹಿಳೆಯನ್ನು ಮತ್ತೆ ದೇವಸ್ಥಾನಕ್ಕೆ ಬರುವಂತೆ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಮಕ್ಕಳ ಮೇಲಿನ ಭಯದಿಂದ ಮಹಿಳೆ ಮತ್ತೆ ಕೇರಳಕ್ಕೆ ತೆರಳಿದ್ದಾರೆ. ಅಲ್ಲಿ, ಅರುಣ್ ಮತ್ತು ಮುಖ್ಯ ಅರ್ಚಕ ಉನ್ನಿ ದಾಮೋದರನ್ ಇಬ್ಬರೂ ಸೇರಿ, ಧಾರ್ಮಿಕ ಕ್ರಿಯೆಯ ಹೆಸರಿನಲ್ಲಿ ಮಹಿಳೆಯನ್ನು ಕಾರಿನಲ್ಲಿ ಹತ್ತಿರದ ಕಾಡಿಗೆ ಕರೆದೊಯ್ದಿದ್ದಾರೆ. ಅಲ್ಲಿ ಇಬ್ಬರೂ ಸೇರಿ ಆಕೆಯ ಮೇಲೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯಕ್ಕೆ ಮುಂದಾಗಿದ್ದಾರೆ.

ಈ ಘೋರ ಕೃತ್ಯದಿಂದ ತೀವ್ರ ಆಘಾತಕ್ಕೊಳಗಾದ ಮಹಿಳೆ, ಅಲ್ಲಿಂದ ತಪ್ಪಿಸಿಕೊಂಡು ಬೆಂಗಳೂರಿಗೆ ವಾಪಸಾಗಿ, ಧೈರ್ಯ ಮಾಡಿ ಬೆಳ್ಳಂದೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಕೇರಳಕ್ಕೆ ತೆರಳಿ ಅರ್ಚಕ ಅರುಣ್ನನ್ನು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಮತ್ತೋರ್ವ ಆರೋಪಿ, ಪ್ರಧಾನ ಅರ್ಚಕ ಉನ್ನಿ ದಾಮೋದರನ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.

ಪವಿತ್ರ ಕ್ಷೇತ್ರದಲ್ಲೇ ಇಂತಹ ಪೈಶಾಚಿಕ ಕೃತ್ಯ ಎಸಗಿರುವ ಅರ್ಚಕರ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಂಧಿತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಕಠಿಣ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

Ad Widget
Click to comment

Leave a Reply

ಸ್ಥಳೀಯ

Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು

Published

on

Ad Widget

Ad Widget

Ad Widget

Ad Widget

ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

Ad Widget

Ad Widget <> Ad Widget

ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

Ad Widget

Ad Widget

ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.

ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ

Published

on

Ad Widget

Ad Widget

Ad Widget

Ad Widget

ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.

Ad Widget

Ad Widget <> Ad Widget

ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.

Ad Widget

Ad Widget

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.

ಆರೋಪಿಗೆ ವಿಧಿಸಿದ ಶಿಕ್ಷೆ:

  • ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
  • ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
  • ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.

ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.

Ad Widget
Continue Reading

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!