ಒಂದೂವರೆ ವರ್ಷಗಳ ಕಾಲ ಶಾಸಕ ಅಶೋಕ್ […]" /> ಒಂದೂವರೆ ವರ್ಷಗಳ ಕಾಲ ಶಾಸಕ ಅಶೋಕ್ […]"> Political alliance-ʼಹಸ್ತʼಲಾಘವ ಫೋಟೊ ವೈರಲ್ ! ಪುತ್ತೂರಿನಲ್ಲಿ ಅಚ್ಚರಿಯ ರಾಜಕೀಯ ರಾಜಿ!! ಒಂದಾದರೇ ಅಶೋಕ್ ರೈ ಹಕೀಂ ಕೂರ್ನಡ್ಕ - Nikhara News | Kannada News Website
Connect with us

ರಾಜಕೀಯ

Political alliance-ʼಹಸ್ತʼಲಾಘವ ಫೋಟೊ ವೈರಲ್ ! ಪುತ್ತೂರಿನಲ್ಲಿ ಅಚ್ಚರಿಯ ರಾಜಕೀಯ ರಾಜಿ!! ಒಂದಾದರೇ ಅಶೋಕ್ ರೈ ಹಕೀಂ ಕೂರ್ನಡ್ಕ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ರಾಜಕೀಯ ರಂಗಸ್ಥಳದಲ್ಲಿ ಒಂದು ಅನಿರೀಕ್ಷಿತ ನಾಟಕೀಯ ಬೆಳವಣಿಗೆ ನಡೆದಿದೆ. ಒಂದೂವರೆ ವರ್ಷಗಳ ಕಾಲ ಶಾಸಕ ಅಶೋಕ್ ರೈ ವಿರುದ್ಧ ಸಾಮಾಜಿಕ ಜಾಲತಾಣವನ್ನೇ ಸಮರ ಭೂಮಿಯಾಗಿಸಿಕೊಂಡಿದ್ದ ಅವರ ಕಟು ಟೀಕಾಕಾರ ಹಕೀಂ ಕೂರ್ನಡ್ಕ, ಇದೀಗ ಶಾಸಕರೊಂದಿಗೆ ಕೈ ಕುಲುಕಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರಿನ ರಾಜಕೀಯ ರಂಗಸ್ಥಳದಲ್ಲಿ ಒಂದು ಅನಿರೀಕ್ಷಿತ ನಾಟಕೀಯ ಬೆಳವಣಿಗೆ ನಡೆದಿದೆ. ರಾಜಕೀಯದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಮಿತ್ರರೂ ಇಲ್ಲ ಎಂಬ ಮಾತಿಗೆ ಪುತ್ತೂರಿನಲ್ಲಿ ಹೊಸ ಭಾಷ್ಯ ಬರೆದಂತಿದೆ.

Ad Widget

Ad Widget alt="Ad Widget"/>

Ad Widget

ಒಂದೂವರೆ ವರ್ಷಗಳ ಕಾಲ ಶಾಸಕ ಅಶೋಕ್ ರೈ ವಿರುದ್ಧ ಸಾಮಾಜಿಕ ಜಾಲತಾಣವನ್ನೇ ಸಮರ ಭೂಮಿಯಾಗಿಸಿಕೊಂಡಿದ್ದ ಅವರ ಕಟು ಟೀಕಾಕಾರ ಹಕೀಂ ಕೂರ್ನಡ್ಕ, ಇದೀಗ ಶಾಸಕರೊಂದಿಗೆ ಕೈ ಕುಲುಕಿದ್ದಾರೆ.

Ad Widget

Ad Widget <> Ad Widget

ಸ್ಪೀಕರ್ ಯು.ಟಿ. ಖಾದರ್ ಅವರ ಮಧ್ಯಸ್ಥಿಕೆಯಲ್ಲಿ ನಡೆದ ಈ ‘ಶಾಂತಿ ಒಪ್ಪಂದ’ವು, ಇಬ್ಬರ ನಡುವಿನ ವೈರತ್ವಕ್ಕೆ ಅಂತ್ಯ ಹಾಡಿತೋ ಇಲ್ಲವೋ, ಆದರೆ ಶಾಸಕರ ಬೆಂಬಲಿಗರು , ಕಾರ್ಯಕರ್ತರ ಮಧ್ಯೆ ಗೊಂದಲ ಮೂಡಿಸಿದ್ದರೇ, ವಿರೋಧಿ ಪಾಳಯಕ್ಕೆ ಆಘಾತ ಉಂಟು ಮಾಡಿದೆ.

ರಂಗಪ್ರವೇಶ ಮಾಡಿದ ಸ್ಪೀಕರ್: ಮುಗಿಯಿತೇ ಸಮರ?
ಕೂರ್ನಡ್ಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರು ರಾಜಿ ಸಂಧಾನದ ಸೂತ್ರಧಾರರಂತೆ ಕಾಣಿಸಿಕೊಂಡರು. ಸಾರ್ವಜನಿಕ ವಲಯದಲ್ಲಿ ಬದ್ಧವೈರಿಗಳಂತೆ ಬಿಂಬಿತಗೊಂಡಿದ್ದ ಅಶೋಕ್ ರೈ ಮತ್ತು ಹಕೀಂ ಕೂರ್ನಡ್ಕ ಅವರ ಕೈಗಳನ್ನು ಒಂದು ಮಾಡಿ, ಹಸ್ತಲಾಘವ ಮಾಡಿಸುವ ಮೂಲಕ ಈ ‘ಶೀತಲ ಸಮರ’ಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದರು. ವೇದಿಕೆಯಲ್ಲಿ ನಾಯಕರಿಬ್ಬರೂ ನಗುತ್ತಲೇ ಕೈ ಕುಲುಕಿದರು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಟಾಕ್‌ ಆಪ್‌ ದ ಟೌನ್‌ ಆಗಿದೆ.

Ad Widget

Ad Widget

ಹಕೀಂ ಎಂಬ ‘ಅಸ್ತ್ರ’ ನಿಷ್ಕ್ರಿಯವಾಯಿತೇ?
ಕಳೆದ ಒಂದೂವರೆ ವರ್ಷದಿಂದ ಹಕೀಂ ಕೂರ್ನಡ್ಕ, ಶಾಸಕ ಅಶೋಕ್ ರೈ ಅವರ ಪಾಲಿಗೆ ನಿರಂತರ ತಲೆನೋವಾಗಿದ್ದರು. ಅಶೋಕ್ ರೈ ವಿರೋಧಿ ಬಣಗಳು ಹಕೀಂ ಅವರನ್ನು ತಮ್ಮ ಕಾರ್ಯಸಾಧನೆಗೆ ಹರಿತವಾದ ‘ಅಸ್ತ್ರ’ವಾಗಿ ಬಳಸಿಕೊಂಡಿದ್ದವು. ಗೊಂದಲದಲ್ಲಿರುವ ಬಿಜೆಪಿ ಕೂಡ ಶಾಸಕರನ್ನು ಹಣಿಯಲು ಹಕೀಂ ಎಸೆದ ಮಾತಿನ ಬಾಣಗಳನ್ನೇ ನೆಚ್ಚಿಕೊಂಡಿತ್ತು. ಒಂದು ಪ್ರತಿಭಟನೆಯಲ್ಲಂತೂ ಬಿಜೆಪಿ ನಾಯಕರು ಹಕೀಂಗೆ ಬಹಿರಂಗವಾಗಿಯೇ ಬೆಂಬಲ ಸೂಚಿಸಿದ್ದರು. ಹೀಗೆ ಎಲ್ಲರ ಕೈಯಲ್ಲಿ ಅಸ್ತ್ರವಾಗಿದ್ದ ಹಕೀಂ, ಕಾಂಗ್ರೆಸ್ ಪಾಳಯಕ್ಕೆ ‘ನುಂಗಲಾರದ ತುತ್ತಾಗಿ’ ಪರಿಣಮಿಸಿದ್ದರು. ಬೆಟ್ಟದಷ್ಟು ದೊಡ್ಡದಾಗಿದ್ದ ಈ ಸಮಸ್ಯೆ, ಇದೀಗ ಮಂಜಿನಂತೆ ಕರಗಿರುವುದು ಎಲ್ಲರಿಗೂ ಸಖೇದಾಶ್ಚರ್ಯ ಉಂಟುಮಾಡಿದೆ.

ಈ ರಾಜಿ ಯಾಕಿಷ್ಟು ಸುದ್ದಿಯಲ್ಲಿದೆ? ಕೆಲವೇ ದಿನಗಳ ಹಿಂದೆ ತನಗೆ ಬಂದಿದ್ದ ಗಡೀಪಾರು ಆದೇಶಕ್ಕೆ ಕೆಂಡಾಮಂಡಲರಾಗಿದ್ದ ಹಕೀಂ, “ಪಿಸ್ತೂಲ್ ಹಿಡಿದು ಪೋಸ್ ಕೊಟ್ಟ ಶಾಸಕರನ್ನು ಮೊದಲು ಗಡೀಪಾರು ಮಾಡಿ, ನನ್ನನ್ನಲ್ಲ!” ಎಂದು ನೇರ ಸವಾಲೆಸೆದಿದ್ದರು. ಇದಕ್ಕೆ ಅಷ್ಟೇ ಖಾರವಾಗಿ ಪ್ರತಿಕ್ರಿಯಿಸಿದ್ದ ಶಾಸಕ ಅಶೋಕ್ ರೈ, “ನನ್ನ ಬಳಿ ಗನ್ ಕೂಡ ಇದೆ, ಪೆನ್ ಕೂಡ ಇದೆ. ಯಾರಿಗೆ ಯಾವ ಭಾಷೆಯಲ್ಲಿ ಬುದ್ಧಿ ಕಲಿಸಬೇಕೆಂದು ನನಗೆ ಚೆನ್ನಾಗಿ ಗೊತ್ತು. ನನ್ನ ತಂಟೆಗೆ ಬಂದರೆ ಸುಮ್ಮನಿರಲಾರೆ,” ಎಂದು ಎಚ್ಚರಿಸಿದ್ದರು.

ಇಂತಹ ಬೆಂಕಿ-ಉಗುಳುವ ಮಾತುಗಳ ನಂತರ, ಕೇವಲ ಒಂದು ಹಸ್ತಲಾಘವದಿಂದ ಎಲ್ಲವೂ ತಣ್ಣಗಾಗಲು ಸಾಧ್ಯವೇ? ಈ ರಾಜಿ ಸಂಧಾನದ ಹಿಂದಿನ ಅಸಲಿ ಕಾರಣವೇನು ಎಂಬುದು ಸದ್ಯ ಎಲ್ಲರನ್ನೂ ಕಾಡುತ್ತಿರುವ ಕುತೂಹಲ.

ಕಾರ್ಯಕರ್ತರ ಗೊಂದಲ: ನಾಯಕರ ಮಾತು ಈಗ ಪಥ್ಯವಾಗಬೇಕಿದೆ!
ಹಕೀಂ ಹೇಳಿಕೆ ನೀಡಿದಾಗಲೆಲ್ಲ ಶಾಸಕರ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಮುಗಿಬೀಳುತ್ತಿದ್ದರು. ಈಗ ತಮ್ಮ ನಾಯಕನೇ ವಿರೋಧಿ(ವೈರಿ)ಯೊಂದಿಗೆ ಕೈಕುಲುಕಿದ ಸನ್ನಿವೇಶವನ್ನು ಹೇಗೆ ಸ್ವೀಕರಿಸಬೇಕು ಎಂಬ ಗೊಂದಲದಲ್ಲಿದ್ದಾರೆ. “ನಾಯಕರಿಗಾಗಿ, ಪಕ್ಷಕ್ಕಾಗಿ ಕಾರ್ಯಕರ್ತರು ಬೀದಿ ಜಗಳ ಮಾಡಬಾರದು, ನಾವೆಲ್ಲ ಒಂದೇ” ಎಂದು ಶಾಸಕ ಅಶೋಕ್ ರೈ ವೇದಿಕೆಗಳಲ್ಲಿ ಆಗಾಗ ಹೇಳುವ ಮಾತು, ಈಗ ಅವರದ್ದೇ ಬೆಂಬಲಿಗರಿಗೆ ಪಥ್ಯವಾಗಬೇಕಿದೆ. ಒಟ್ಟಿನಲ್ಲಿ, ಈ ಹಸ್ತಲಾಘವ ಶಾಶ್ವತ ಸ್ನೇಹದ ಸಂಕೇತವೇ ಅಥವಾ ಕೇವಲ ತಾತ್ಕಾಲಿಕ ರಾಜಕೀಯ ಅನಿವಾರ್ಯತೆಯೇ ಎಂಬ ಪ್ರಶ್ನೆಗೆ ಕಾಲವೇ ಉತ್ತರಿಸಬೇಕಿದೆ.

Ad Widget
Click to comment

Leave a Reply

ಸ್ಥಳೀಯ

Rakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ

Published

on

Ad Widget

Ad Widget

Ad Widget

Ad Widget

ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಕ್ಷಿತ್ ಶಿವರಾಂ, ವಳಾಲು ಟೋಲ್ ಗೇಟ್‌ನಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Ad Widget

Ad Widget <> Ad Widget

ಹೊಸ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಸಂದರ್ಭದಲ್ಲೇ ರಸ್ತೆ ತೆರಿಗೆ ಪಾವತಿಸಲಾಗುತ್ತಿದ್ದರೂ, ರಸ್ತೆ ಬಳಕೆಯ ಹೆಸರಿನಲ್ಲಿ ಮತ್ತೆ ಮತ್ತೆ ಟೋಲ್ ಶುಲ್ಕ ಹೆಚ್ಚಿಸುತ್ತಿರುವುದು ಎಷ್ಟು ಸಮಂಜಸ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ನಿಯಮಗಳ ಪ್ರಕಾರ ಎರಡು ಟೋಲ್ ಪ್ಲಾಜಾಗಳ ನಡುವೆ ನಿಗದಿತ ಅಂತರ ಇರಬೇಕು. ಆದರೆ, ಬ್ರಹ್ಮರಕೊಟ್ಟು ಟೋಲ್ ಗೇಟ್‌ನಿಂದ 35 ಕಿ.ಮೀ.ಗಿಂತ ಕಡಿಮೆ, ಕೇವಲ 32 ಕಿ.ಮೀ. ಅಂತರದಲ್ಲೇ ವಳಾಲು ಟೋಲ್ ಆರಂಭಿಸಿ ಎರಡು ಕಡೆ ಶುಲ್ಕ ವಸೂಲಿ ಮಾಡುತ್ತಿರುವುದು ನಿಯಮಬಾಹಿರ ಎಂದು ರಕ್ಷಿತ್ ಶಿವರಾಂ ದೂರಿದ್ದಾರೆ.

Ad Widget

Ad Widget

ವಳಾಲು ಭಾಗದ ಸ್ಥಳೀಯರು ಬ್ಯಾಂಕ್, ಸಹಕಾರಿ ಹಾಲು ಡಿಪೋ, ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ತೆರಳುವಂತಹ ದೈನಂದಿನ ಚಟುವಟಿಕೆಗಳಿಗೂ ಪ್ರತಿನಿತ್ಯ ₹250 ವರೆಗೆ ಟೋಲ್ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಜನವಿರೋಧಿ ಟೋಲ್ ದರ ಏರಿಕೆ ವಿರುದ್ಧ ಧ್ವನಿ ಎತ್ತದಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಟೀಕಿಸಿದ್ದಾರೆ.

ವಾಹನ ಸವಾರರಿಗೆ ಹೊರೆಯಾಗುವ ರೀತಿಯಲ್ಲಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಶ್ನಿಸುವ ಧೈರ್ಯ ಶಾಸಕರಿಗಿದೆಯೇ ಎಂದು ರಕ್ಷಿತ್ ಶಿವರಾಂ ಸವಾಲು ಹಾಕಿದ್ದಾರೆ.

ವಳಾಲು ಟೋಲ್ ದರ ಏರಿಕೆಯನ್ನು ತಕ್ಷಣ ಮರುಪರಿಶೀಲಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು. ಟೋಲ್ ದರ ನಿಗದಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ ಸ್ಥಳೀಯರಿಗೆ ವಿನಾಯಿತಿ ನೀಡಬೇಕು. ಬ್ರಹ್ಮರಕೊಟ್ಟು ಟೋಲ್ ಗೇಟ್ ತೆರವುಗೊಳಿಸಬೇಕು ಹಾಗೂ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಉದ್ದೇಶಿತ ಟೋಲ್ ಗೇಟ್ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?

Published

on

Ad Widget

Ad Widget

Ad Widget

Ad Widget

ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.

Ad Widget

Ad Widget <> Ad Widget

ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.

Ad Widget
Continue Reading

ರಾಜಕೀಯ

Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ

Published

on

Ad Widget

Ad Widget

Ad Widget

Ad Widget

ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

Ad Widget

Ad Widget <> Ad Widget

ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.

1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Ad Widget

Ad Widget

2018ರಲ್ಲಿ ರೈತರ ಸಾಲಮನ್ನಾ ಮಾಡುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನೂ 1,000 ರೂ. ಹೆಚ್ಚಳ ಮಾಡಿದ್ದೆ ಎಂದು ಸ್ಮರಿಸಿದ ಅವರು, ‘ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು ಎಂದು ಮುಖ್ಯಮಂತ್ರಿಗಳು ಕೇಳುತ್ತಾರೆ. ನನ್ನ ಸಾಕ್ಷಿಗುಡ್ಡೆ ಇರಲಿ, ನಿಮ್ಮ ಸಾಕ್ಷಿಗುಡ್ಡೆ ಎಲ್ಲಿ?’ ಎಂದು ಪ್ರಶ್ನಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!