ಸ್ಥಳೀಯ
Savanoor-ಸವಣೂರು : ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ಮೇಲೆ ಪೊಲೀಸ್ ದಾಳಿ; ಆರೋಪಿ ಪರಾರಿ, 16 ಲಕ್ಷಕ್ಕೂ ಅಧಿಕ ಮೌಲ್ಯದ ವಾಹನ, ಯಂತ್ರೋಪಕರಣ ವಶ!
ಕಡಬ ತಾಲೂಕಿನ ಸವಣೂರು ಗ್ರಾಮದಲ್ಲಿ ನಡೆಯುತ್ತಿದ್ದ ಬೃಹತ್ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ಮತ್ತು ಸಾಗಾಟ ಜಾಲದ ಮೇಲೆ ಬೆಳ್ಳಾರೆ ಪೊಲೀಸರು ದಿಟ್ಟ ಕಾರ್ಯಾಚರಣೆ ನಡೆಸಿದ್ದು, ಪೊಲೀಸರನ್ನು ಕಂಡೊಡನೆ ಪ್ರಮುಖ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಬೆಳ್ಳಾರೆ, (ವರದಿ): ಕಡಬ ತಾಲೂಕಿನ ಸವಣೂರು ಗ್ರಾಮದಲ್ಲಿ ನಡೆಯುತ್ತಿದ್ದ ಬೃಹತ್ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ಮತ್ತು ಸಾಗಾಟ ಜಾಲದ ಮೇಲೆ ಬೆಳ್ಳಾರೆ ಪೊಲೀಸರು ದಿಟ್ಟ ಕಾರ್ಯಾಚರಣೆ ನಡೆಸಿದ್ದು, ಪೊಲೀಸರನ್ನು ಕಂಡೊಡನೆ ಪ್ರಮುಖ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಕಾರ್ಯಾಚರಣೆ ವೇಳೆ, ಸುಮಾರು 16 ಲಕ್ಷಕ್ಕೂ ಅಧಿಕ ಮೌಲ್ಯದ ಎರಡು ಲಾರಿಗಳು, ಕಲ್ಲು ಕತ್ತರಿಸುವ ಯಂತ್ರ ಹಾಗೂ ಅಪಾರ ಪ್ರಮಾಣದ ಕೆಂಪುಕಲ್ಲನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆಯ ವಿವರ:
ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಈರಯ್ಯ ಡಿ.ಎನ್. ಅವರು ತಮ್ಮ ಸಿಬ್ಬಂದಿಯೊಂದಿಗೆ ರಾತ್ರಿ ಸುಮಾರು 7:30ಕ್ಕೆ ಕಡಬ ತಾಲೂಕಿನ ಸವಣೂರು ಗ್ರಾಮದ ಇಡ್ಯಾಡಿ ಎಂಬಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ, ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸಿ, ಅದನ್ನು ಲಾರಿಗಳಲ್ಲಿ ತುಂಬಿ ಮಾರಾಟಕ್ಕೆ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಅವರಿಗೆ ಲಭಿಸಿತ್ತು.
ಮಾಹಿತಿಯಂತೆ ಸ್ಥಳಕ್ಕೆ ಭೇಟಿ ನೀಡಿದಾಗ, ಪೊಲೀಸ್ ಜೀಪನ್ನು ದೂರದಿಂದಲೇ ಗಮನಿಸಿದ ಅನ್ಯಾಡಿ ನಿವಾಸಿ ಸುಲೈಮಾನ್ ಎಂಬಾತ, ತಾನು ನಿಂತಿದ್ದ ಲಾರಿಯಿಂದ ಕೆಳಗಿಳಿದು ಕತ್ತಲಲ್ಲಿ ಓಡಿ ಪರಾರಿಯಾಗಿದ್ದಾನೆ.
ಬೃಹತ್ ಜಾಲ ಪತ್ತೆ:
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳವನ್ನು ಪರಿಶೀಲಿಸಿದಾಗ, ಅಕ್ರಮದ ಸಂಪೂರ್ಣ ಚಿತ್ರಣ ಬಯಲಾಗಿದೆ. KA 21 A 4150 ನೋಂದಣಿ ಸಂಖ್ಯೆಯ ಲಾರಿಯಲ್ಲಿ ಸಾಗಾಟಕ್ಕೆ ಸಿದ್ಧವಾಗಿ ಕೆಂಪುಕಲ್ಲುಗಳನ್ನು ತುಂಬಲಾಗಿತ್ತು. ಸ್ವಲ್ಪ ದೂರದಲ್ಲಿ ನಿಲ್ಲಿಸಲಾಗಿದ್ದ KL 57 B 3314 ನೋಂದಣಿ ಸಂಖ್ಯೆಯ ಇನ್ನೊಂದು ಲಾರಿಯಲ್ಲೂ ಕೆಂಪುಕಲ್ಲುಗಳನ್ನು ತುಂಬಿಟ್ಟಿರುವುದು ಕಂಡುಬಂದಿದೆ.
ಅಲ್ಲದೆ, ಸಮೀಪದಲ್ಲಿಯೇ ಬೃಹತ್ ಯಂತ್ರವನ್ನು ಬಳಸಿ ಕೆಂಪುಕಲ್ಲುಗಳನ್ನು ಅಳತೆಗೆ ತಕ್ಕಂತೆ ಕತ್ತರಿಸಲಾಗುತ್ತಿದ್ದು, ಆ ಕಟ್ಟಿಂಗ್ ಮೆಷಿನ್ ಕೂಡ ಸ್ಥಳದಲ್ಲೇ ಪತ್ತೆಯಾಗಿದೆ. ಇದು ಕೇವಲ ಸಾಗಾಟವಲ್ಲ, ವ್ಯವಸ್ಥಿತವಾದ ಅಕ್ರಮ ಗಣಿಗಾರಿಕೆ ಮತ್ತು ಸಂಸ್ಕರಣಾ ಘಟಕ ಎಂಬುದನ್ನು ಖಚಿತಪಡಿಸಿದೆ.
ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ:
ಪಂಚರ ಸಮ್ಮುಖದಲ್ಲಿ ಮಹಜರು ನಡೆಸಿದ ಪೊಲೀಸರು, ಈ ಕೆಳಗಿನ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ:
ಲಾರಿ (KA 21 A 4150) – ₹7,50,000
ಲಾರಿ (KL 57 B 3314) – ₹7,50,000
ಕಲ್ಲು ಕತ್ತರಿಸುವ ಯಂತ್ರ – ₹1,00,000
ಎರಡೂ ಲಾರಿಗಳಲ್ಲಿದ್ದ ಕೆಂಪುಕಲ್ಲು – ₹30,000
ಒಟ್ಟು ಅಂದಾಜು ಮೌಲ್ಯ: ₹16,30,000
ಈ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಮೈನರ್ ಮಿನರಲ್ ಕನ್ಸಿಸ್ಟೆಂಟ್ ರೂಲ್ಸ್ 1994 ಹಾಗೂ ಎಂ.ಎಂ.ಆರ್.ಡಿ. ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಆರೋಪಿ ಸುಲೈಮಾನ್ಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
ಶಿಕ್ಷಣ
Narendra-ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಇಚ್ಚಿಕ ಜೈನ್ ಇವರು ಕರಾಟೆ ಸ್ಪರ್ಧೆಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI)ಗೆ ಆಯ್ಕೆ
ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.
ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಇವರು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶಿವಪ್ರಸಾದ್ ಡಿ. ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ರಕ್ಷಕ-ಶಿಕ್ಷಕ ಸಂಘ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.
ಶಿಕ್ಷಣ
Vivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.
ಪೌಢ ಶಾಲಾ ವಿಭಾಗದಲ್ಲಿ ಚಿಂತನ. ಎಂ (ದಿ.ಸೀತಾರಾಮ ಮೇಲ್ಪಾಡಿ ಹಾಗೂ ಸರೋಜ ಮೇಲ್ಪಾಡಿಯವರ ಪುತ್ರಿ)ಚಿತ್ರಕಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ಸ್ಪರ್ಧೆಗಳು ಮುಂಬರುವ ಜನವರಿ ತಿಂಗಳಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.
ಶಿಕ್ಷಣ
Narendra-ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ-ಉದ್ಘಾಟನೆ
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1 ಆದ ರಾಮಕೃಷ್ಣ ಪಡುಮಲೆ ಅವರು ಮಾತನಾಡಿದರು.
ಕ್ರೀಡೆಯು ಜೀವನದ ಒಂದು ಭಾಗವಾಗಿದ್ದು,ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ ಮತ್ತು ಸಾಮಾಜಿಕ ಕೌಶಲ್ಯಗಳನ್ನು ಬೆಳೆಸುತ್ತದೆ.ನಾಯಕತ್ವ, ತಾಳ್ಮೆ, ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದ ಮೌಲ್ಯಗಳನ್ನು ಕಲಿಸುತ್ತದೆ.ಮನಸ್ಸಿನ ಸ್ಥಿತಿಯನ್ನು ಸುಧಾರಿಸುತ್ತದೆ.ಸೋಲು ಮತ್ತು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ.ತಂಡದ ಕೆಲಸ, ಒಗ್ಗಟ್ಟು ಮತ್ತು ಪರಸ್ಪರ ಸಹಕಾರವನ್ನು ಹೆಚ್ಚಿಸುತ್ತದೆ.ಯಶಸ್ಸಿನ ಶಿಖರವನ್ನು ಸಾಧಿಸಲು ವರ್ಷಗಳ ಕಠಿಣ ತರಬೇತಿಯನ್ನು ನಿಗದಿಪಡಿಸುತ್ತದೆ ಎಂಬುದನ್ನು ಗುರುತಿಸುತ್ತದೆ ಎಂದು ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1ಆದ ರಾಮಕೃಷ್ಣ ಪಡುಮಲೆ ಇವರು ಹೇಳಿದರು.
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಕ್ರೀಡಾಕೂಟದಲ್ಲಿ ಧ್ವಜಾರೋಹಣ ಮತ್ತು ಗೌರವ ವಂದನೆಯನ್ನು ಸ್ವೀಕರಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಶುಭಾ ಅಡಿಗ ಇವರು ಮಾತನಾಡುತ್ತಾ“ಇಂದಿನ ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಅವರು ಛಲಬಿಡದೆ ಸಾಧನೆ ಮಾಡಿ ಜೀವನವನ್ನು ರೂಪಿಸಿಕೊಳ್ಳುತ್ತಾರೆ.ಇಂತಹ ದೃಢ ಮನಸ್ಸಿನ ನಾಗರಿಕರೇ ಸ್ವಸ್ಥ ಸಮಾಜದ ರೂವಾರಿಗಳು.ಅದಕ್ಕಾಗಿ ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿರಬೇಕು. “ಎಂದು ಹೇಳಿದರು.
ಕರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸತ್ಯನಾರಾಯಣ ಬಿ. ಇವರು ಮಾತನಾಡುತ್ತಾ“ಕ್ರೀಡೆ ಸಹಶಿಕ್ಷಣದ ಒಂದು ಭಾಗ.ಮನಸ್ಸಿನ ಸಮತೋಲಿತ ಬೆಳವಣಿಗೆಗೆ ಮುಖ್ಯಕಾರಣ ಕ್ರೀಡೆ.ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವಿನ ಅರ್ಥವನ್ನು ತಿಳಿದುಕೊಳ್ಳಬೇಕು.ಈ ಮೂಲಕ ಜಿವನದಲ್ಲಿ ಸಮಚಿತ್ತವನ್ನು ಸಾಧಿಸಿಕೊಳ್ಳಬಹುದು.ಉತ್ತಮ ಕ್ರೀಡಾಪಟು ಉತ್ತಮ ವಿದ್ಯಾರ್ಥಿಯಾಗುತ್ತಾನೆ.ಉತ್ತಮ ವಿದ್ಯಾರ್ಥಿಉತ್ತಮ ನಾಗರಿಕನಾಗುತ್ತಾನೆ.ನಮ್ಮ ಹಾದಿಯ ಪ್ರಗತಿಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ಯಶಸ್ವಿ ಜೀವನವನ್ನುರೂಪಿಸಲು ಕ್ರೀಡೆಯು ಸಹಾಯಮಾಡುತ್ತದೆ.” ಎಂದು ಹೇಳಿದರು.
ವಿದ್ಯಾರ್ಥಿಗಳ ವಿವಿಧ ತಂಡಗಳ ಶಿಸ್ತುಬದ್ಧ ಪಥಸಂಚಲನ ನಡೆಯಿತು.ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು.
ಜಿಲ್ಲಾ ,ರಾಜ್ಯ ಮತ್ತು ರಾಷ್ಟçಮಟ್ಟದ ವಿವಿಧಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನುತರುವುದರ ಮೂಲಕ ಕರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ಸೆಟ್ ಪಥಸಂಚಲನ ಕರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ,ಮಾತನಾಡುತ್ತಾ“ಕ್ರೀಡೆಯು, ಆತ್ಮವಿಶ್ವಾಸ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ.ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯ ಮೂಲವಾಗಿದೆ.ವ್ಯಾಯಾಮದ ಅತ್ಯುತ್ತಮ ಸಾಧನವೆಂದು ಪರಿಗಣಿಸಲಾಗಿದೆ.ಹಾಗಾಗಿ ಈ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಸದೃಢ ಪ್ರಜೆಗಳಾಗಿ ಮುನ್ನಡೆಯಿರಿ ”ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಅರುಣ್ ಬಿ.ಕೆ. ಇವರು ಉಪಸ್ಥಿತರಿದ್ದರು.
ಈ ಕ್ರೀಡಾಕೂಟದಲ್ಲಿ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ್, ನಮಿತಾ, ಮತ್ತು ಕಾಲೇಜಿನ ಕ್ರೀಡಾ ತರಬೇತುದಾರರಾದ ಮನೋಹರ್ ಎನ್. ರವರು ಸಹಕರಿಸಿದರು.
ಕಾರ್ಯಕ್ರಮದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಲೋಚನಾ ವಂದಿಸಿದರು. ಉಪನ್ಯಾಸಕರಾದ ಮಮತಾ ಮತ್ತು ಅಪೂರ್ವ ಕಾರ್ಯಕ್ರಮವನ್ನು ನಿರೂಪಿಸಿದರು.
-
ಬಿಗ್ ನ್ಯೂಸ್21 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ22 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು22 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
Uncategorized13 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ನಿಧನ ವಾರ್ತೆ18 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ23 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು24 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಸ್ಥಳೀಯ23 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















