ಶಿಕ್ಷಣ
Ambika-ಅಂಬಿಕಾ ವಿದ್ಯಾರ್ಥಿಗೆ ರಾಷ್ಟ್ರಮಟ್ಟದಲ್ಲಿ 207ನೇ ರ್ಯಾಂಕ್, ತಾಲೂಕಿಗೆ ಪ್ರಥಮ: ನೀಟ್- 2025: ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳ ಅಮೋಘ ಸಾಧನೆ
ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ ನೀಟ್ನ ಫಲಿತಾಂಶ ಪ್ರಕಟವಾಗಿದ್ದು ಪುತ್ತೂರಿನ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿರುತ್ತಾರೆ.
ಪುತ್ತೂರು: ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ ನೀಟ್ನ ಫಲಿತಾಂಶ ಪ್ರಕಟವಾಗಿದ್ದು ಪುತ್ತೂರಿನ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿರುತ್ತಾರೆ.

ಬಂಟ್ವಾಳ ಪೆರ್ನೆಯ ಚಂದ್ರಶೇಖರ ಮತ್ತು ವನಿತಾ ದಂಪತಿಯ ಪುತ್ರ ವಿಷ್ಣು ಪ್ರಸಾದ್ 586 ಅಂಕ, 207ನೇ ರ್ಯಾಂಕ್(EWS) ಪಡೆದು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ. ಕಾಸರಗೋಡಿನ ಕೂಡ್ಲು ನಿವಾಸಿ ಎಚ್. ರವಿಚಂದ್ರ ನಾಯಕ್ ಹಾಗೂ ಶ್ಯಾಮಲಾ ದಂಪತಿ ಪುತ್ರ ಎಸ್. ತೇಜಸ್ ನಾಯಕ್ (540 ಅಂಕ, 7800 ನೇ ರ್ಯಾಂಕ್), ಮಡಿಕೇರಿಯ ಅಯ್ಯಣ್ಣ ಎಮ್.ಕೆ. ಮತ್ತು ಶರೀನ್.ಬಿ.ಬಿ. ದಂಪತಿಯ ಪುತ್ರ ಆರೀನ್ ಅಯ್ಯಪ್ಪ (530 ಅಂಕ, 9752ನೇ ರ್ಯಾಂಕ್) , ಪುತ್ತೂರು ಆರ್ಯಾಪು ಇಲ್ಲಿಯ ಮಹಾಲಿಂಗೇಶ್ವರ ಭಟ್ ಎಂ. ಮತ್ತು ಎಸ್. ವಿ. ದುರ್ಗಮಾಲಾ ದಂಪತಿ ಪುತ್ರಿ ಸ್ನೇಹಾ ಎಂ. (515 ಅಂಕ, 13789ನೇ ರ್ಯಾಂಕ್), ಬಂಟ್ವಾಳದ ಅಳಕೆ ಮಜಲಿನ ಡಾ. ಮಂದಾರ ಮತ್ತು ಅನುಪಮಾ ಎನ್. ದಂಪತಿ ಪುತ್ರಿ ಅನನ್ಯಾ ಎಸ್. ಜೈನ್ (515 ಅಂಕ, 14093ನೇ ರ್ಯಾಂಕ್ ), ಬಂಟ್ವಾಳ ಕರೋಪಾಡಿಯ ಪಿ. ನಾರಾಯಣ ಭಟ್ ಹಾಗೂ ಜಯ ಶ್ರೀ ದಂಪತಿ ಪುತ್ರಿ ಪಾವನ (498 ಅಂಕ), ಪುತ್ತೂರಿನ ನರಿಮೊಗರು ಇಲ್ಲಿಯ ರಘುನಾಥ ಎಸ್. ಮತ್ತು ತಾರಾ ಬಿ.ಸಿ. ದಂಪತಿ ಪುತ್ರ ತೇಜಸ್ ಎಸ್.ಆರ್. (490), ಪುತ್ತೂರು ತೆಂಕಿಲದ ಡಾ. ಭಾಸ್ಕರ್ ಎಂ. ಮತ್ತು ಡಾ. ಸೌಮ್ಯ ಎಂ. ದಂಪತಿಯ ಪುತ್ರ ಧ್ಯಾನ್ ವಸಿಷ್ಠ ಎಂ. (474), ಪುತ್ತೂರು ಪಡುವನ್ನೂರಿನ ರವಿರಾಜ್ ಗೌಡ ಮತ್ತು ಲತಾ ದಂಪತಿಯ ಪುತ್ರ ಸುಮೀತ್ ರಾಜ್ (469), ಪುತ್ತೂರು ಬಪ್ಪಳಿಗೆಯ ಚಿದಾನಂದ ಪೂಜಾರಿ ಮತ್ತು ಶೋಭಾ ಎಂ. ದಂಪತಿಯ ಪುತ್ರಿ ಹಿಮಾನಿ ಎ.ಸಿ. (447), ಪುತ್ತೂರು ಆರ್ಯಾಪಿನ ಕೆ. ದಿನಕರ ಮತ್ತು ಬಿ. ಸುಮತಿ ದಂಪತಿಯ ಪುತ್ರ ಗೌರವ್ ಪಿ.ಡಿ. (443), ಬಂಟ್ವಾಳ ವಿಟ್ಲದ ಶಿವಾನಂದ ರೈ ಕೆ. ಮತ್ತು ದೀಪಾ ಎಸ್. ರೈ ದಂಪತಿಯ ಪುತ್ರ ಅನ್ವಿತ್ ರೈ ಕೆ. (437), ಬಂಟ್ವಾಳ ಅಡ್ಯನಡ್ಕದ ಕೆ.ಎಸ್. ನಾರಾಯಣ ಭಟ್ ಮತ್ತು ವಿದ್ಯಾ ಭಟ್ ಕೆ. ದಂಪತಿಯ ಪುತ್ರ ಸಾತ್ವಿಕ್ ಕೃಷ್ಣ ಕೆ.ಎನ್. (434) ಅಂಕದೊAದಿಗೆ ವೈದ್ಯಕೀಯ ಕೋರ್ಸಿಗೆ ಅರ್ಹರಾಗಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಕೆಲವು ವರ್ಷಗಳಿಂದ ನೀಟ್ ಮತ್ತು ಜೆಇಇ ಪರೀಕ್ಷೆಗಳಲ್ಲಿ ಅದ್ಭುತ ಸಾಧನೆ ಮಾಡುತ್ತಿದ್ದು ಈ ವರ್ಷವೂ ನೀಟ್ (NEET) ಪರೀಕ್ಷೆಯಲ್ಲಿ ಅಂಬಿಕಾದ ಸಾಧನೆ ಅಪಾರ. ಬಹುಜನ ಪೋಷಕರ ಅಪೇಕ್ಷೆಯಂತೆ ಈ ಶೈಕ್ಷಣಿಕ ವರ್ಷದಲ್ಲೂ ನೀಟ್ ರಿಪೀಟರ್ಸ್ ಬ್ಯಾಚ್ ಆರಂಭಿಸುವುದಾಗಿ ಆಡಳಿತ ಮಂಡಳಿ ನಿರ್ಧರಿಸಿದ್ದು ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಶಿಕ್ಷಣ
Ambika-ಅಂಬಿಕಾ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ
ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.
ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.
ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.
ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.
ಶಿಕ್ಷಣ
Philomena-ಮಂಗಳೂರು ವಿಶ್ವವಿದ್ಯಾನಿಲಯ ಅಥ್ಲೆಟಿಕ್ಸ್ ಕೂಟದಲ್ಲಿ ಫಿಲೋಮಿನಾ ಕಾಲೇಜಿನ ಕ್ರೀಡಾಪಟುಗಳ ಸಾಧನೆ
ಮಂಗಳೂರಿನ ಅಜ್ಜರಕಾಡಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನ. 11ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಅಥ್ಲೆಟಿಕ್ಸ್ ಕೂಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದು, ಮಹಿಳಾ ತಂಡವು ಸಮಗ್ರವಾಗಿ ಐದನೇ ಹಾಗೂ ಪುರುಷರ ತಂಡವು ಏಳನೇ ಸ್ಥಾನ ಪಡೆದಿದೆ.
ಪುತ್ತೂರು, ನ. 20: ಮಂಗಳೂರಿನ ಅಜ್ಜರಕಾಡಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನ. 11ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಅಥ್ಲೆಟಿಕ್ಸ್ ಕೂಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದು, ಮಹಿಳಾ ತಂಡವು ಸಮಗ್ರವಾಗಿ ಐದನೇ ಹಾಗೂ ಪುರುಷರ ತಂಡವು ಏಳನೇ ಸ್ಥಾನ ಪಡೆದಿದೆ.
ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿ ನಿಹಾಲ್ ಪೋಲ್ ವಾಲ್ಟ್ನಲ್ಲಿ ಬೆಳ್ಳಿ ಪದಕ ಗಳಿಸಿದರೆ, ತೃತೀಯ ಬಿಎಸ್ಸಿಯ ರಿತೀಶ್ ಡಿಸ್ಕಸ್ ಥ್ರೋ ಹಾಗೂ ಶಾಟ್ಪುಟ್ನಲ್ಲಿ ತಲಾ ಕಂಚಿನ ಪದಕ ಪಡೆದರು. ದ್ವಿತೀಯ ಬಿಸಿಎಯ ಆಶ್ರಯ್ ಹಾಗೂ ಪ್ರಥಮ ಬಿಕಾಂನ ನಿಶ್ಚಿತ್ 4×400 ಮೀಟರ್ ಮಿಶ್ರ ರಿಲೇಯಲ್ಲಿ ಕಂಚಿನ ಪದಕ ಪಡೆದ ತಂಡದ ಸದಸ್ಯರಾಗಿದ್ದರು.
ಮಹಿಳಾ ವಿಭಾಗದಲ್ಲಿ ತೃತೀಯ ಬಿಕಾಂನ ಅಮೃತಾ ಹೈಜಂಪ್ನಲ್ಲಿ ಕಂಚಿನ ಪದಕ ಗಳಿಸಿದರೆ, ತೃತೀಯ ಬಿಕಾಂನ ಪೃಥ್ವಿ ಹ್ಯಾಮರ್ ಥ್ರೋದಲ್ಲಿ ಕಂಚಿನ ಪದಕ ಪಡೆದರು. ದ್ವಿತೀಯ ಬಿಎಯ ಕೃತಿ 4×400 ಮೀಟರ್ ಮಿಶ್ರ ರಿಲೇಯಲ್ಲಿ ಕಂಚಿನ ಪದಕ ಪಡೆದ ತಂಡದ ಸದಸ್ಯೆಯಾಗಿದ್ದರು. ಪ್ರಥಮ ಬಿಎಯ ಜೀವಿತಾ ಲಾಂಗ್ ಜಂಪ್ ಹಾಗೂ 4×400 ಮೀಟರ್ ಮಿಶ್ರ ರಿಲೇಯಲ್ಲಿ ತಲಾ ಕಂಚಿನ ಪದಕ ಗಳಿಸಿದರು.
ಕ್ರೀಡಾಪಟುಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ದೈಹಿಕ ಶಿಕ್ಷಣ ವಿಭಾಗ ಅಭಿನಂದನೆ ಸಲ್ಲಿಸಿದ್ದು, ಪದಕ ವಿಜೇತರು ಮತ್ತು ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲ ಕ್ರೀಡಾಪಟುಗಳು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ.
-
ದಕ್ಷಿಣ ಕನ್ನಡ22 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ನಿಧನ ವಾರ್ತೆ24 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ಅಪರಾಧ23 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್8 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ನಿಧನ ವಾರ್ತೆ7 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ7 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಅಂತರ ರಾಜ್ಯ6 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಮಂಗಳೂರು24 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ















