ರಾಜಕೀಯ
Ashok Rai-ಸಂಟ್ಯಾರ್ ಕಲ್ಲಕಟ್ಟ ಕಾಂಕ್ರೀಟ್ ರಸ್ತೆ ಉದ್ಘಾಟನೆ; ನಾವು ಸುಳ್ಳು ಭರವಸೆ ಕೊಟ್ಟು ಪಿಕ್ಕಾಸು ಹಾಕಿ ಹೋಗುವುದಿಲ್ಲ: ಶಾಸಕ ಅಶೋಕ್ ರೈ
ಆರ್ಯಾಪು ಗ್ರಾಮದ ಕಲ್ಲಕಟ್ಟ ರಾಜನ್ ಗುಳಿಗದೈವ ದೈವಸ್ಥಾನಕ್ಕೆ ತೆರಳುವ ನೂತನ ರಸ್ತೆಯನ್ನು ಉದ್ಘಾಟಿಸಿ ಪುತ್ತೂರು ಶಾಸಕರಾದ ಅಶೋಕ್ ರೈ ಮಾತನಾಡಿದರು. ಈ ರಸ್ತೆಗೆ ಶಾಸಕರು ಹತ್ತು ಲಕ್ಷ ಅನುದಾನವನ್ನು ನೀಡಿದ್ದರು.
ಪುತ್ತೂರು: ಜನರಿಗೆ ರಾಜಕಾರಣಿಗಳು ಸುಳ್ಳು ಭರವಸೆ ಕೊಡಬಾರದು, ಕೆಲಸ ಆಗುವುದಿದ್ದರೂ , ಆಗದೇ ಕೆಲಸ ಕೆಲಸವಾದರೂ ತಕ್ಕ ಹೇಳಿಬಿಡಬೇಕು, ರಾಜಕಾರಣಿಗಳ ಸುಳ್ಳು ಭರವಸೆಯನ್ನು ಜನ ನಂಬಿ ಮೋಸ ಹೋಗುತ್ತಿದ್ದಾರೆ ಆ ರೀತಿ ಯಾರೂ ಮಾಡಬಾರದು, ನಾವು ಯಾರಿಗೂ ಸುಳ್ಳು ಭರವಸೆ ಕೊಟ್ಟಿಲ್ಲ, ಕೊಡುವುದೂ ಇಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಆರ್ಯಾಪು ಗ್ರಾಮದ ಕಲ್ಲಕಟ್ಟ ರಾಜನ್ ಗುಳಿಗದೈವ ದೈವಸ್ಥಾನಕ್ಕೆ ತೆರಳುವ ನೂತನ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು. ಈ ರಸ್ತೆಗೆ ಶಾಸಕರು ಹತ್ತು ಲಕ್ಷ ಅನುದಾನವನ್ನು ನೀಡಿದ್ದರು.
ಗ್ರಾಮದ ಕೊಲ್ಯ ಎಂಬಲ್ಲಿ ಕಾಲನಿಗೆ ತಡೆಗೋಡೆ ನಿರ್ಮಾಣ ಮಾಡುವುದಾಗಿ ಹಿಂದಿನವರು ಪಿಕ್ಕಾಸು ಹೋಗಿದ್ದಾರೆ ಚಿಕ್ಕಾಸೂ ನೀಡಿಲ್ಲ. ಪಿಕ್ಕಾಸು ಹಾಕಿ ಶಿಲಾನ್ಯಾಸ ಮಾಡಿದಾಗ ತಡೆಗೋಡೆ ಆಗಿಯೇ ಆಗುತ್ತದೆ ಎಂದು ಜನ ನಂಬಿದ್ದರು , ನಂಬಿದ ಬಡ ಜನತೆಗೆ ಮೋಸ ಮಾಡುವುದು ದೇವರು ಮೆಚ್ಚದ ಕೆಲಸವಾಗಿದೆ. ವೋಟಿಗೋಸ್ಕರ ಜನರ ಭಾವನೆಗಳ ಜೊತೆ ಚೆಲ್ಲಾಟವಾಡಬಾರದು ಎಂದು ಹೇಳಿದ ಶಾಸಕರು ಬಡ ಜನತೆಗೆ ಮೋಸ ಮಾಡಿದರೆ ದೇವರು ತಕ್ಕ ಶಿಕ್ಷೆ ಕೊಟ್ಟೇ ಕೊಡ್ತಾನೆ ಎಂದು ಹೇಳಿದರು.
ಮೆಡಿಕಲ್ ಕಾಲೇಜು ಆದ ಬಳಿಕ ಪುತ್ತೂರು ಬದಲಾಗಲಿದೆ
ಪುತ್ತೂರಿಗೆ ಮೆಡಿಕಲ್ ಕಾಲೇಜು ಬಂದಿದೆ, ಇನ್ನು ಆರಂಭವಾದ ಬಳಿಕ ಪುತ್ತೂರು ನಗರ ಸೇರಿದಂತೆ ತಾಲೂಕಿನ ಚಿತ್ರಣವೇ ಬದಲಾಗಲಿದೆ. ಮಣಿಪಾಲ ಎಂಬ ಕುಗ್ರಾಮ ಮೆಡಿಕಲ್ ಕಾಲೇಜು ಆದ ಬಳಿಕ ಯಾವ ಮಟ್ಟದಲ್ಲಿ ಅಭಿವೃದ್ದಿಯಾಗಿದೆ ಎಂಬುದನ್ನು ನಾವು ಗಮನಿಸಬೇಕು. ಮೆಡಿಕಲ್ ಕಾಲೇಜು ಆದ ಬಳಿಕ ಪುತ್ತೂರಿನ ಎಲ್ಲಾ ವ್ಯವಹಾರಿಕ ಕ್ಷೇತ್ರವೂ ಉನ್ನತಿಗೇರಲಿದೆ. ನಗರದ ರಿಕ್ಷಾ ಚಾಲಕರಿಂದ ಹಿಡಿದು ಸಣ್ಣ ಕ್ಯಾಂಟೀನ್ ನಡೆಸುವವರಿಗೂ ಇಲ್ಲಿ ಉತ್ತಮ ವ್ಯವಹಾರ ಆಗಲಿದೆ. ನಗರದಲ್ಲಿ ಜನ ಸಂಚಾರ ಅಧಿಕವಾದರೆ ಎಲ್ಲರಿಗೂ ವ್ಯಾಪಾರ , ವಹಿವಾಟು ಹೆಚ್ಚಾಗಲಿದೆ ಇದರಿಂದ ಕ್ಷೇತ್ರವೂ ಅಭಿವೃದ್ದಿಯಾಗಲಿದೆ ಎಂದು ಹೇಳಿದರು.
ಪುತ್ತೂರಿಗೆ ಆಯುರ್ವೇದ ಕಾಲೇಜು
ಪುತ್ತೂರಿನ ಮೆಡಿಕಲ್ ಕಾಲೇಜು ಸಮೀಪವೇ ಅದೇ ಜಾಗದಲ್ಲಿ ಆಯುರ್ವೇದ ಮೆಡಿಕಲ್ ಕಾಲೇಜು ನಿರ್ಮಾಣವಾಗಲಿದೆ. ಈಗಾಗಲೇ ಅದಕ್ಕೆ ಬೆಕಾದ ಎಲ್ಲಾ ಸಿದ್ದತೆಗಳು ನಡೆಯುತ್ತಿದೆ. ಆಯುರ್ವೇದ ಮೆಡಿಕಲ್ ಕಾಲೇಜಿಗೆ ಅನುದಾನವನ್ನು ನೀಡುವ ಬಗ್ಗೆ ಸರಕಾರದಿಂದ ಭರವಸೆ ಸಿಕ್ಕಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.
ಕೊಟ್ಟ ಮಾತನ್ನು ಉಳಿಸಿಕೊಂಡ ಏಕೈಕ ಶಾಸಕ: ಕಾವು ಹೇಮನಾಥ ಶೆಟ್ಟಿ
ಕಳೆದ ಚುನಾವಣೆಯ ಸಂದರ್ಭದಲ್ಲಿ ಶಾಸಕರು ನೀಡಿದ ಬಹುತೇಕ ಭರವಸೆಗಳು ಈಡೇರಿದೆ. ಕುಡಿಯುವ ನೀರು, ಮೆಡಿಕಲ್ ಕಾಲೇಜು, ದೇವಸ್ಥಾನಗಳ ಅಭಿವೃದ್ದಿ ಸೇರಿದಂತೆ ಎಲ್ಲಾ ರಂಗದಲ್ಲೂ ಯಸಶ್ವಿಯಾಗಿ ಮುನ್ನಡೆಯುತ್ತಿದೆ, ಕೊಟ್ಟ ಮಾತನ್ನು ಉಳಿಸಿಕೊಂಡ ಏಕೈಕ ಶಾಸಕರಾಗಿ ಗುರುತಿಸಿಕೊಂಡಿದ್ದಾರೆ ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಹೇಳಿದರು. ಕಲ್ಲಕಟ್ಟ ರಾಜನ್ ಗುಳಿಗದೈವಸ್ಥಾನದ ರಸ್ತೆಗೆ ಅನುದಾನ ಕೊಡಿ ಎಂದು ಈ ಭಾಗದ ಜನರು ಹಲವು ವರ್ಷಗಳಿಂದ ಮನವಿ ಮಾಡುತ್ತಿದ್ದಾರೆ ಆದರೆ ಈ ಬಾರಿ ಬೇಡಿಕೆ ಈಡೇರಿದೆ. ಅಭಿವೃದ್ದಿ ಪರ ಚಿಂತನೆಯುಳ್ಳ ಶಾಸಕರಿಂದ ಮಾತ್ರ ಯಾವುದೇ ಕ್ಷೇತ್ರದ ಅಭಿವೃದ್ದಿ ಸಾದ್ಯ ಎಂಬುದಕ್ಕೆ ಅಶೋಕ್ ರೈ ಸಾಕ್ಷಿಯಾಗಿದ್ದಾರೆ. ಮುಂದಿನ ಮೂರು ವರ್ಷದಲ್ಲಿ ಪುತ್ತೂರು ವಿಧಾನಸಭಾ ಕ್ಷೆತ್ರ ಇನ್ನಷ್ಟು ಅಭಿವೃದ್ದಿಯಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಜನ್ ಗುಳಿಗ ದೈವಸ್ಥಾನ ರಾಧಾಕೃಷ್ಣ ರೈ ಏಳ್ನಾಡು ಗುತ್ತು, ಕಾರ್ಯದರ್ಶಿ ನವೀನ್ ಪೂಜಾರಿ ಕಿನ್ನಿಮಜಲು, ಗ್ರಾಪಂ ಸದಸ್ಯರಾದ ಹರೀಶ್ ನಾಯ್ಕ್, ಯತೀಶ್ ದೇವಗೌಡ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರ. ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಬನ್ನೂರು, ವಲಯ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ರೈ ಕೈಕಾರ ,ಕಿರಣ್ ರೈ ಪುಂಡಿಕಾಯಿ, ಬೂತ್ ಅಧ್ಯಕ್ಷ ಸುಹೈಲ್, ರಝಾಕ್ ಸಂಟ್ಯಾರ್, ಹಾರಿಸ್ ಸಂಟ್ಯಾರ್, ಫಾರೂಕ್ ಸಂಟ್ಯಾರ್, ವಲಯ ಕಾರ್ಯದರ್ಶಿ ಇಸ್ಮಾಯಿಲ್ ಡೆಂಜಿಬಾಗಿಲು, ಕೋಶಾಧಿಕಾರಿ ಪುಷ್ಪಾ ಡಿಸೋಜಾ ಮರಿಕೆ, ಮಹೇಶ್ ಸಂಪ್ಯ, ಜನಾರ್ಧನ ಸಂಟ್ಯಾರ್, ಉಪೇಂದ್ರ ಸಂಟ್ಯಾರ್, ಮಹೇಶ್ ಕಲ್ಲಕಟ್ಟ ಮತ್ತಿತರರು ಉಪಸ್ತಿತರಿದ್ದರು. ಗ್ರಾಪಂ ಸದಸ್ಯರಾದ ನೇಮಾಕ್ಷ ಸುವರ್ಣಮಗಿರೆ ಸ್ವಾಗತಿಸಿ ವಂದಿಸಿದರು.
ಸ್ಥಳೀಯ
Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ
ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.
ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
ರಾಜಕೀಯ
U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್
ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಬಿಚ್ಚಿಟ್ಟಿದ್ದಾರೆ
ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.
ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ
ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548
ಅಂತರ ರಾಜ್ಯ
Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್
ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.
ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.
ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.
ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.
ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.
ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.
ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.
ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.
-
Uncategorized7 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized6 hours ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ
-
ದಕ್ಷಿಣ ಕನ್ನಡ34 minutes ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು


















