ಬಿಗ್ ನ್ಯೂಸ್
Taxi service-ಹೈಕೋರ್ಟ್ ಆದೇಶ : ಕರ್ನಾಟಕದ 8 ಲಕ್ಷ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ
ಕರ್ನಾಟಕ ಹೈಕೋರ್ಟ್‌ನ ಆದೇಶದಂತೆ ಜೂನ್ 16ರಿಂದ ರಾಜ್ಯದಾದ್ಯಂತ 8 ಲಕ್ಷಕ್ಕೂ ಅಧಿಕ ಬೈಕ್ ಟ್ಯಾಕ್ಸಿಗಳ ಸೇವೆಯನ್ನು ಅಧಿಕೃತವಾಗಿ ನಿಷೇಧಿಸಲಾಗಿದೆ. ಇದರಿಂದ ರಸ್ತೆಯಲ್ಲಿ ಬೈಕ್ ಟ್ಯಾಕ್ಸಿಗಳು ಕಂಡುಬಂದರೆ ಸಾರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಕ್ರಮ ಕೈಗೊಳ್ಳಲಿದ್ದಾರೆ.
ಬೆಂಗಳೂರು, ಜೂನ್ 17: ಕರ್ನಾಟಕ ಹೈಕೋರ್ಟ್‌ನ ಆದೇಶದಂತೆ ಜೂನ್ 16ರಿಂದ ರಾಜ್ಯದಾದ್ಯಂತ 8 ಲಕ್ಷಕ್ಕೂ ಅಧಿಕ ಬೈಕ್ ಟ್ಯಾಕ್ಸಿಗಳ ಸೇವೆಯನ್ನು ಅಧಿಕೃತವಾಗಿ ನಿಷೇಧಿಸಲಾಗಿದೆ. ಇದರಿಂದ ರಸ್ತೆಯಲ್ಲಿ ಬೈಕ್ ಟ್ಯಾಕ್ಸಿಗಳು ಕಂಡುಬಂದರೆ ಸಾರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಕ್ರಮ ಕೈಗೊಳ್ಳಲಿದ್ದಾರೆ. ಆದರೆ, ಈ ವಿಷಯದ ಕುರಿತು ಜೂನ್ 24ರಂದು ಹೈಕೋರ್ಟ್‌ನಲ್ಲಿ ವಿಚಾರಣೆ ನಿಗದಿಯಾಗಿದ್ದು, ಅಂತಿಮ ತೀರ್ಪಿನ ನಿರೀಕ್ಷೆಯಿದೆ. ಈ ನಿಷೇಧದಿಂದ 1 ಲಕ್ಷಕ್ಕೂ ಹೆಚ್ಚು ಚಾಲಕರು ಉದ್ಯೋಗ ಕಳೆದುಕೊಂಡಿದ್ದು, ನಿಷೇಧವನ್ನು ಮರುಪರಿಶೀಲಿಸಲು ಒತ್ತಾಯಗಳು ಕೇಳಿಬಂದಿವೆ.
ರಾಜ್ಯ ಸರಕಾರದ ಆದೇಶದಂತೆ, ಬೈಕ್ ಟ್ಯಾಕ್ಸಿಗಳಿಗೆ ಮಾರ್ಗಸೂಚಿಗಳು ಜಾರಿಯಾಗುವವರೆಗೆ ಸೇವೆ ಸ್ಥಗಿತಗೊಳಿಸಲು ಹೈಕೋರ್ಟ್ ಸೂಚಿಸಿತ್ತು. ಕಂಪನಿಗಳಿಗೆ ನೀಡಲಾಗಿದ್ದ 6 ವಾರಗಳ ಕಾಲಾವಕಾಶ ಜೂನ್ 15ರಂದು ಮುಕ್ತಾಯಗೊಂಡಿತು. ಇದರಿಂದ ರ್ಯಾಪಿಡೋ, ಉಬರ್ ಮುಂತಾದ ಕಂಪನಿಗಳು ತಮ್ಮ ಆ್ಯಪ್‌ಗಳಿಂದ ಬೈಕ್ ಟ್ಯಾಕ್ಸಿ ಸೇವೆಯ ಆಯ್ಕೆಯನ್ನು ತೆಗೆದುಹಾಕಿವೆ.
2021ರಲ್ಲಿ ಆರಂಭವಾಗಿದ್ದ ಈ ಬೈಕ್ ಟ್ಯಾಕ್ಸಿ ಆಟೋ ಚಾಲಕರು ಮತ್ತು ಕ್ಯಾಬ್ ಚಾಲಕರ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲಲ್ಲಿ ಬೈಕ್ ಟ್ಯಾಕ್ಸಿ ಸವಾರರ ಮೇಲೆ ಹಲ್ಲೆಯೂ ನಡೆದಿತ್ತು. ಆದರೆ ಕಡಿಮೆ ಖರ್ಚಿನಲ್ಲಿ ಬೇಗ ಪ್ರಯಾಣಿಸಬಹುದಾಗಿದ್ದ ಬೈಕ್ ಟ್ಯಾಕ್ಸಿ ಪ್ರಯಾಣವನ್ನು ಲಕ್ಷಾಂತರ ಮಂದಿ ಇಷ್ಟಪಡುತ್ತಿದ್ದರು. ಈಗ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ ಗೊಂಡಿದೆ. ಕರ್ನಾಟಕ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಈ ಬೆಳವಣಿಗೆಯನ್ನು ದೃಢಪಡಿಸಿದ್ದು, ಕಂಪೆನಿಗಳು ನ್ಯಾಯಾಲಯದ ತೀರ್ಪನ್ನು ಪಾಲಿಸಬೇಕು ಎಂದು ಹೇಳಿದ್ದಾರೆ.
ಕೋರ್ಟ್ ಆದೇಶಕ್ಕೆ ಗೌರವ
ಇನ್ನು ಹೈಕೋರ್ಟ್‌ನ ಇತ್ತೀಚಿನ ಆದೇಶದ ಅನು ಸಾರವಾಗಿ 2025ರ ಜೂನ್ 16ರಿಂದ ಕರ್ನಾಟಕದಲ್ಲಿ ನಮ್ಮ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ನಾವು ಕಾನೂನನ್ನು ಗೌರವಿಸುತ್ತೇವೆ. ಹೈಕೋರ್ಟ್ ನಿರ್ದೇಶನ ಪಾಲಿಸುತ್ತೇವೆ ಎಂಬುದಾಗಿ ಬೈಕ್ ಟ್ಯಾಕ್ಸಿ ಸೇವೆಗಳ ಸ್ಥಗಿತ ಕುರಿತು ಆ್ಯಪ್ ಮೂಲಕ ತನ್ನ ಗ್ರಾಹಕರಿಗೆ ರ್ಯಾಪಿಡೋ ಕಂಪೆನಿ ಮಾಹಿತಿ ನೀಡಿದೆ. ನಿಯಮಗಳಿಗೆ ಅನುಗುಣವಾಗಿ, ಸುಸ್ಥಿರ ಮತ್ತು ಭವಿಷ್ಯಕ್ಕೆ ಸಿದ್ಧವಾಗಿರುವ ನಿಯಂತ್ರಕ ಚೌಕಟ್ಟನ್ನು ರೂಪಿಸಲು ಸಾರಿಗೆ ಇಲಾಖೆ ಮತ್ತು ಕರ್ನಾಟಕ ಸರ್ಕಾರದೊಂದಿಗೆ ಸಹಯೋಗದಿಂದ ಕೆಲಸ ಮಾಡಲು ನಾವು ಬದ್ಧರಾಗಿದ್ದೇವೆ. ಪ್ರಯಾಣಿಕರ ಸುರಕ್ಷೆಯನ್ನು ಖಚಿತಪಡಿಸಿಕೊಳ್ಳುವ ಜತೆಗೆ ಗಿಗ್ ಕಾರ್ಮಿಕರ ಹಿತಾಸಕ್ತಿಗಳನ್ನು ರಕ್ಷಿಸುವುದು ನಮ್ಮ ಆದ್ಯತೆಯಾಗಿದೆ ಎಂದು ರ್ಯಾಪಿಡೋ ಸಂಸ್ಥೆ ತಿಳಿಸಿದೆ.
ನಿಷೇಧದಿಂದ ನಷ್ಟವೇನು ?
ರಾಜ್ಯದಲ್ಲಿ ಲಕ್ಷಾಂತರ ಮಂದಿ ಬೈಕ್ ಟ್ಯಾಕ್ಸಿ ಸೇವೆಯನ್ನೇ ಅವಲಂಬಿಸಿದ್ದಾರೆ. ವಿದ್ಯಾರ್ಥಿಗಳು, ದಿನಗೂಲಿ ನೌಕರರು ಸಹಿತ ಬಹುತೇಕ ನಿರುದ್ಯೋಗಿ ಗಳಿಗೆ ಇದು ಆಸರೆಯಾಗಿತ್ತು. ಈಗ ಈ ಬೆಳವಣಿಗೆಯಿಂದ ಬೈಕ್ ಟ್ಯಾಕ್ಸಿ ಸೇವೆ ನೀಡುತ್ತಿದ್ದ ಹಲವು ಮಂದಿಗೆ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಇನ್ನು ಆಟೋ, ಬಾಡಿಗೆ ಕಾರುಗಳಿಗೆ ದುಪ್ಪಟ್ಟು ಹಣ ತೆತ್ತು ಪ್ರಯಾಣಿಸುತ್ತಿದ್ದವರಿಗೆ ಆಟೋಟ್ಯಾಕ್ಸಿ ವರದಾನವಾಗಿತ್ತು. ಈಗ ಮತ್ತೆ ಆಟೋ, ಟ್ಯಾಕ್ಸಿ ಮೊರೆ ಹೋಗಬೇಕಾಗಿದೆ.
ರಾಜ್ಯದಲ್ಲಿ 8 ಲಕ್ಷ ಬೈಕ್ ಟ್ಯಾಕ್ಸಿ
ರಾಜ್ಯದಲ್ಲಿ ಸುಮಾರು 1.50 ಲಕ್ಷಕ್ಕೂ ಹೆಚ್ಚಿನ ಬೈಕ್ ಟ್ಯಾಕ್ಸಿಗಳಿವೆ. ಮೊದಲು ಸರಕಾರವು ಬೈಕ್ ಟ್ಯಾಕ್ಸಿಗಳಿಗೆ ಗೈಡ್ಲೈನ್ಸ್ ಕೊಡಲಿ. ಅದನ್ನು ಪಾಲಿಸದಿದ್ದರೆ ಅದನ್ನು ಬ್ಯಾನ್ ಮಾಡಿ. ರ್ಯಾಪಿಡೋದವರು ಜಿಎಸ್‌ಟಿ ತೆರೆಗೆ 100 ಕೋಟಿ ರೂ.ಗೂ ಹೆಚ್ಚು ತೆರಿಗೆ ಪಾವತಿಸಿದ್ದಾರೆ. ಇದರಿಂದ ಸಾಕಷ್ಟು ಬಡ ಉದ್ಯೋಗಿಗಳ ಮೇಲೆ ಹೊಡೆತ ಬಿದ್ದಿದೆ ಎಂದು ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಅಧ್ಯಕ್ಷ ಮೊಹಮ್ಮದ್ ಸಲೀಂ ತಿಳಿಸಿದ್ದಾರೆ.
ಪುನರಾರಂಭಕ್ಕೆ ಅನುಮತಿ ಕೊಡಿ: ರಾಹುಲ್, ಸಿದ್ದುಗೆ ಪತ್ರ
ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತದಿಂದ ಬೆಂಗಳೂರು ಸೇರಿ ಕರ್ನಾಟಕದಾದ್ಯಂತ 1 ಲಕ್ಷಕ್ಕೂ ಅಧಿಕ ಮಂದಿ ತಮ್ಮ ಕೆಲಸವನ್ನು ಕಳೆದುಕೊಂಡು, ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯಾರ್ಥಿಗಳು, ದಿನಗೂಲಿ ನೌಕರರು ಎನ್ನದೇ ಅನೇಕರು ಯಾವುದೇ ಕೆಲಸ ಸಿಗದಿದ್ದಾಗ ಅಥವಾ ತಮ್ಮ ಬಿಡುವಿನ ಸಮಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಆರಂಭಿಸಿ ಜೀವನೋಪಾಯ ಮಾರ್ಗವನ್ನು ಕಂಡುಕೊಂಡಿದ್ದರು. ಆದರೆ ನಿಷೇಧದಿಂದ ಅವರ ಜೀವನೋಪಾಯಕ್ಕೆ ಧಕ್ಕೆಯಾಗಿದೆ. ಹಾಗಾಗಿ ನಿಷೇಧ ವಾಪಸ್ ಪಡೆದು, ಸೇವೆಗೆ ಅನುಮತಿ ಕೊಡಿ ಎಂದು ನಮ್ಮ ಟ್ಯಾಕ್ಸಿ ಅಸೋಸಿಯೇಶನ್ ಅಧ್ಯಕ್ಷ ಮೊಹಮ್ಮದ್ ಸಲೀಂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧೀ ಮತ್ತು ಸಿಎಂ ಸಿದ್ಧರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ಬೈಕ್ ಟ್ಯಾಕ್ಸಿ ರದ್ದಾದರೂ “ಪಾರ್ಸೆಲ್’ ಹೆಸರಲ್ಲಿ ಸೇವೆ!
ಬೆಂಗಳೂರು: ಸಾರಿಗೆ ಇಲಾಖೆ ಚಾಪೆ ಕೆಳಗೆ ನುಗ್ಗಿದರೆ, ಬೈಕ್ ಟ್ಯಾಕ್ಸಿ ಆಪರೇಟರ್‌ಗಳು ಈಗ ರಂಗೋಲಿ ಕೆಳಗೆ ನುಸುಳುತ್ತಿದ್ದಾರೆ. ಜೂನ್ 16ರಿಂದ ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿ, ಅವುಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ ಬೆನ್ನಲ್ಲೇ ಬೈಕ್ ಟ್ಯಾಕ್ಸಿ ಆಪರೇಟರ್‌ಗಳು ತಮ್ಮ ಆ್ಯಪ್‌ಗ್ನಿಂದ “ಟ್ಯಾಕ್ಸಿ’ ಆಯ್ಕೆಯನ್ನು ತೆಗೆದುಹಾಕಿ, “ಪಾರ್ಸೆಲ್’ ಆಯ್ಕೆಯನ್ನು ನೀಡಿದ್ದಾರೆ. ಈಗ ಪಾರ್ಸೆಲ್’ ಎಂದು ಬುಕ್ ಮಾಡಿ ಪ್ರಯಾಣಿಕರು ಸಂಚರಿಸುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ. ಇದಕ್ಕೆ ಪ್ರತಿಯಾಗಿ ಸಾರಿಗೆ ಸಿಬಂದಿ ಪ್ರತಿತಂತ್ರ ರೂಪಿಸಿದ್ದು, ತಾವೇ ಆಪರೇಟರ್‌ಗಳ ಆ್ಯಪ್‌ನಲ್ಲಿ “ಪಾರ್ಸೆಲ್’ ಸೇವೆಯನ್ನು ಬುಕಿಂಗ್ ಮಾಡುತ್ತಿದ್ದು, ಬೈಕ್ ಟ್ಯಾಕ್ಸಿಗಳು ಬಂದಾಕ್ಷಣ ಹಿಡಿದು ಜಪ್ತಿ ಮಾಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ.
ಅಂತರ ರಾಜ್ಯ
Nana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.
ನವದೆಹಲಿ: ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.
ನಾನಾ ಪಾಟೇಕರ್ ಕೇವಲ ಬೆಳ್ಳಿತೆರೆಯ ನಟನಾಗಿ ಮಾತ್ರ ಗುರುತಿಸಿಕೊಂಡವರಲ್ಲ. ಸರಳತೆ, ಸಾಮಾಜಿಕ ಕಳಕಳಿ ಹಾಗೂ ದೇಶಪ್ರೇಮಕ್ಕೂ ಅವರು ಹೆಸರಾಗಿದ್ದರು. ಭಾರತೀಯ ಸೇನೆಯೊಂದಿಗೆ ಅವರಿಗಿದ್ದ ನಂಟು ಕೂಡ ಅವರ ಬದುಕಿನ ಪ್ರಮುಖ ಅಧ್ಯಾಯವಾಗಿತ್ತು.
ಸೇನಾ ತರಬೇತಿ ಪಡೆದು ಟೆರಿಟೋರಿಯಲ್ ಆರ್ಮಿಗೆ ಸೇರ್ಪಡೆ
1991ರಲ್ಲಿ ತೆರೆಕಂಡ ತಮ್ಮ ಪ್ರಸಿದ್ದ ‘ಪ್ರಹಾರ್: ದಿ ಫೈನಲ್ ಅಟ್ಯಾಕ್’ ಸಿನಿಮಾದ ಕಮಾಂಡೋ ಪಾತ್ರಕ್ಕಾಗಿ ನಾನಾ ಪಾಟೇಕರ್ ಅವರು ಯಾವುದೇ ಶಾರ್ಟ್‌ಕಟ್ ಬಳಸದೆ, ಮರಾಠಾ ಲೈಟ್ ಇನ್ವೆಂಟ್ರಿ ಜೊತೆ ಮೂರು ವರ್ಷಗಳ ಕಾಲ ಕಠಿಣ ಮಿಲಿಟರಿ ತರಬೇತಿ ಪಡೆದಿದ್ದರು. ಈ ತರಬೇತಿಯ ನಂತರ ಅವರು 1980ರ ದಶಕದ ಉತ್ತರಾರ್ಧದಲ್ಲಿ ಟೆರಿಟೋರಿಯಲ್ ಆರ್ಮಿಗೆ (ಪ್ರಾದೇಶಿಕ ಸೇನೆ) ಅಧಿಕೃತವಾಗಿ ಸೇರ್ಪಡೆಗೊಂಡಿದ್ದರು.
1999ರಲ್ಲಿ ಕಾರ್ಗಿಲ್ ಯುದ್ಧ ಆರಂಭವಾದಾಗ ಗಡಿಯಲ್ಲಿ ಸೈನಿಕರೊಂದಿಗೆ ಸೇವೆ ಸಲ್ಲಿಸುವ ಇಚ್ಛೆಯನ್ನು ಅವರು ವ್ಯಕ್ತಪಡಿಸಿದ್ದರು. ಅನುಮತಿ ಪಡೆದ ಬಳಿಕ ತಮ್ಮ ನಟನಾ ವೃತ್ತಿಜೀವನವನ್ನು ಕೆಲಕಾಲ ಬದಿಗೊತ್ತಿ ಸೇನೆಯ ಕ್ವಿಕ್ ರಿಯಾಕ್ಷನ್ ಟೀಮ್‌ನೊಂದಿಗೆ ಗಡಿ ಪ್ರದೇಶದಲ್ಲಿ ಸೇವೆ ಸಲ್ಲಿಸಿದ್ದರು.
ಶ್ರೀನಗರ, ಡ್ರಾಸ್ ಹಾಗೂ ಲೇಹ್ ಸೇರಿದಂತೆ ಕಠಿಣ ಹವಾಮಾನವಿರುವ ಪ್ರದೇಶಗಳಲ್ಲಿ ಸೈನಿಕರೊಂದಿಗೆ ಸುಮಾರು ಎರಡು ತಿಂಗಳು ಕಳೆದಿದ್ದರು. ಈ ಅವಧಿಯಲ್ಲಿ ಸುಮಾರು 20 ಕೆ.ಜಿ. ತೂಕ ಕಳೆದುಕೊಂಡಿದ್ದಾಗಿ ಅವರು ಹಿಂದಿನ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು.
ಗಣ್ಯರಿಂದ ಸಂತಾಪ
ನಾನಾ ಪಾಟೇಕರ್ ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ರಿತೇಶ್ ದೇಶ್‌ಮುಖ್ ಸೇರಿದಂತೆ ದೇಶದ ಪ್ರಮುಖ ರಾಜಕಾರಣಿಗಳು, ಚಲನಚಿತ್ರ ರಂಗದ ಗಣ್ಯರು ಹಾಗೂ ಕ್ರೀಡಾಪಟುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ”ಎಕ್ಸ್”ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ನಾನಾ ಪಾಟೇಕರ್‌ಜಿ ಅವರ ಅಭಿನಯದಲ್ಲಿನ ವಿಶಿಷ್ಟತೆ, ತೀವ್ರತೆ ಹಾಗೂ ಪ್ರಭಾವಶಾಲಿ ವ್ಯಕ್ತಿತ್ವ ಕೆಲವೇ ಕೆಲವು ಕಲಾವಿದರಲ್ಲಿ ಮಾತ್ರ ಕಾಣಸಿಗುತ್ತದೆ. ತಮ್ಮ ಪಾತ್ರಗಳ ಮೂಲಕ ಜ್ವಾಲಾಮುಖಿಯಂತೆ ಸ್ಫೋಟಿಸುವ ಪ್ರತಿಭೆ ಹಾಗೂ ಸೃಜನಶೀಲತೆಯನ್ನು ಅವರು ಪ್ರದರ್ಶಿಸುತ್ತಿದ್ದರು. ಬೆಳ್ಳಿತೆರೆಯ ಮೇಲೆ ಅವರು ಜೀವ ತುಂಬಿದ ಪಾತ್ರಗಳು ಹಲವು ತಲೆಮಾರುಗಳ ನೆನಪಿನಲ್ಲಿ ಶಾಶ್ವತವಾಗಿ ಉಳಿಯಲಿವೆ. ನೇರ ಹಾಗೂ ಸ್ಪಷ್ಟ ಅಭಿಪ್ರಾಯಗಳಿಗೆ ಹೆಸರಾಗಿದ್ದ ನಾನಾ ಪಾಟೇಕರ್ ಅವರದು ಅದೇ ವಿಶಿಷ್ಟ ಛಾಪು. ತಾವು ಕಂಡ ಸಂಗತಿಗಳ ಕುರಿತು ಯಾವುದೇ ಮುಚ್ಚುಮರೆಯಿಲ್ಲದೆ ಅತ್ಯಂತ ಸ್ಪಷ್ಟವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದರು’ ಎಂದು ಹೇಳಿದ್ದಾರೆ.
ಅವರ ಅಗಲಿಕೆಗೆ ಸಂತಾಪ ಸೂಚಿಸಿರುವ ನಟ ಅಕ್ಷಯ್ ಕುಮಾರ್, “ಅವರ ಗಂಭೀರ ಧ್ವನಿ, ನಟನೆಯಲ್ಲಿನ ತೀವ್ರತೆ ಹಾಗೂ ಪ್ರಾಮಾಣಿಕತೆ ಅವರನ್ನು ಅನನ್ಯ ವ್ಯಕ್ತಿಯನ್ನಾಗಿ ಮಾಡಿತ್ತು. ವೆಲ್ಕಮ್ ಹಾಗೂ ಇತ್ತೀಚಿನ ಹೌಸ್‌ಫುಲ್ 5 ಚಿತ್ರಗಳಲ್ಲಿ ಅವರೊಂದಿಗೆ ಕೆಲಸ ಮಾಡಿದ ನೆನಪುಗಳು ಎಂದಿಗೂ ನನ್ನೊಂದಿಗಿರುತ್ತವೆ” ಎಂದಿದ್ದಾರೆ.
ನಟ ರಿತೇಶ್ ದೇಶ್‌ಮುಖ್ ಪ್ರತಿಕ್ರಿಯಿಸಿ, “ನಾನಾ ಪಾಟೇಕರ್ ಅವರು ಬೆಳ್ಳಿಪರದೆಯ ಮೇಲಷ್ಟೇ ಅಲ್ಲದೆ, ನಿಜ ಜೀವನದಲ್ಲೂ ಒಬ್ಬ ರಿಯಲ್ ಹೀರೋ ಆಗಿದ್ದರು. ಅವರು ಕೈಗೊಂಡ ಸಾಮಾಜಿಕ ಕಾರ್ಯಗಳು ಅಪಾರವಾದವು. ನಾಯಕನಾಗಿ, ಖಳನಾಯಕನಾಗಿ ಹಾಗೂ ಹಾಸ್ಯನಟನಾಗಿ ಎಲ್ಲಾ ರೀತಿಯ ಪಾತ್ರಗಳಿಗೂ ಜೀವ ತುಂಬುತ್ತಿದ್ದ ಅವರ ಅಗಲಿಕೆ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ” ಎಂದು ಸ್ಮರಿಸಿದ್ದಾರೆ.
ಬಿಗ್ ನ್ಯೂಸ್
Reservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ವರ್ಗವಾರು ಮೀಸಲಾತಿ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಟಿಕೆಟ್ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ವರ್ಗವಾರು ಮೀಸಲಾತಿ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಟಿಕೆಟ್ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ.
ಜಿಲ್ಲೆಯ ವಿವಿಧ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ), ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದಡಿ ಮೀಸಲಿಡಲಾಗಿದೆ.
ತಾಲೂಕು ಪಂಚಾಯಿತಿ:
ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಪಂಚಾಯಿತಿಗಳಲ್ಲಿ ಒಟ್ಟು 126 ಸ್ಥಾನಗಳಿದ್ದು, 65 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಜಾತಿಗೆ 13 ಸ್ಥಾನಗಳಿದ್ದು, ಈ ಪೈಕಿ 9 ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಪಂಗಡಕ್ಕೆ 10 ಸ್ಥಾನಗಳಿದ್ದು, 9 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.
ಹಿಂದುಳಿದ ವರ್ಗ ‘ಎ’ಗೆ 29 ಸ್ಥಾನಗಳು ಮೀಸಲಾಗಿದ್ದು, 16 ಸ್ಥಾನಗಳು ಮಹಿಳೆಯರಿಗೆ ಮೀಸಲು. ಹಿಂದುಳಿದ ವರ್ಗ ‘ಬಿ’ಗೆ 7 ಸ್ಥಾನಗಳಿದ್ದು, 4 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಸಾಮಾನ್ಯ ವರ್ಗದ 67 ಸ್ಥಾನಗಳ ಪೈಕಿ 27 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.
ತಾಲೂಕುವಾರು ಗಮನಿಸಿದರೆ ಮೂಲ್ಕಿಯಲ್ಲಿ 7, ಮೂಡುಬಿದಿರೆಯಲ್ಲಿ 9, ಸುಳ್ಯದಲ್ಲಿ 11, ಉಳ್ಳಾಲದಲ್ಲಿ 12, ಪುತ್ತೂರಿನಲ್ಲಿ 12, ಮಂಗಳೂರಿನಲ್ಲಿ 14, ಬೆಳ್ತಂಗಡಿಯಲ್ಲಿ 14, ಕಡಬದಲ್ಲಿ 22 ಹಾಗೂ ಬಂಟ್ವಾಳದಲ್ಲಿ 25 ತಾಲೂಕು ಪಂಚಾಯಿತಿ ಕ್ಷೇತ್ರಗಳಿವೆ. ಬಂಟ್ವಾಳದಲ್ಲಿ ಅತಿ ಹೆಚ್ಚು 25 ಹಾಗೂ ಮೂಲ್ಕಿಯಲ್ಲಿ ಅತಿ ಕಡಿಮೆ 7 ಕ್ಷೇತ್ರಗಳಿವೆ.
ಜಿಲ್ಲಾ ಪಂಚಾಯಿತಿ:
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯಲ್ಲಿ ಒಟ್ಟು 35 ಸ್ಥಾನಗಳಿದ್ದು, 18 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಜಾತಿಗೆ 3 ಸ್ಥಾನಗಳಿದ್ದು, 2 ಮಹಿಳೆಯರಿಗೆ ಮೀಸಲು. ಪರಿಶಿಷ್ಟ ಪಂಗಡಕ್ಕೆ 2 ಸ್ಥಾನಗಳಿದ್ದು, 1 ಸ್ಥಾನ ಮಹಿಳೆಯರಿಗೆ ಮೀಸಲಾಗಿದೆ.
ಹಿಂದುಳಿದ ವರ್ಗ ‘ಎ’ಗೆ 10 ಸ್ಥಾನಗಳಿದ್ದು, 5 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಹಿಂದುಳಿದ ವರ್ಗ ‘ಬಿ’ಗೆ 2 ಸ್ಥಾನಗಳಿದ್ದು, 1 ಸ್ಥಾನ ಮಹಿಳೆಯರಿಗೆ ಮೀಸಲು. ಸಾಮಾನ್ಯ ವರ್ಗದ 18 ಸ್ಥಾನಗಳ ಪೈಕಿ 9 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.
ಮೀಸಲಾತಿ ವಿವರ ಪ್ರಕಟಗೊಂಡಿರುವ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ. ಯಾವ ಕ್ಷೇತ್ರದಲ್ಲಿ ಯಾವ ವರ್ಗಕ್ಕೆ ಮೀಸಲಾತಿ ದೊರೆತಿದೆ ಎಂಬುದನ್ನು ಆಧರಿಸಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ನಿರೀಕ್ಷೆಯಿದೆ.
ಅಂತರ ರಾಜ್ಯ
CEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.
ಹೊಸದಿಲ್ಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.
ಜ್ಞಾನೇಶ್ ಕುಮಾರ್ ಅವರಿಗೆ ಈಗಾಗಲೇ Z-ಪ್ಲಸ್ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಇತ್ತೀಚಿನ ಗುಪ್ತಚರ ಮಾಹಿತಿ ಹಾಗೂ ದಿಲ್ಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಗಮನದಲ್ಲಿಟ್ಟುಕೊಂಡು ಅವರ ನಿವಾಸದ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಿಲ್ಲಿಯಲ್ಲಿ ವಿವಿಧ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಭದ್ರತಾ ಏಜೆನ್ಸಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆಗಳು ದೇಶದ ವಿವಿಧೆಡೆ ತೀವ್ರಗೊಳ್ಳುತ್ತಿರುವ ನಡುವೆಯೇ ಅವರ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.
-
Uncategorized23 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized12 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಮಂಗಳೂರು9 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized10 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ11 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ10 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಬಿಗ್ ನ್ಯೂಸ್6 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ನಿಧನ ವಾರ್ತೆ9 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು


















