ಉಡುಪಿ
Udupi Private Bus Recklessness ಉಡುಪಿಯಲ್ಲಿ ಖಾಸಗಿ ಬಸ್ ಚಾಲಕನ ಹುಚ್ಚಾಟ: ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ, 180 ಡಿಗ್ರಿ ಸ್ಪಿನ್ ಆದ ಬಸ್! ಬೆಚ್ಚಿ ಬೀಳಿಸುವ ವಿಡಿಯೋ ವೈರಲ್

ಉಡುಪಿ: ನಗರದಲ್ಲಿ ಖಾಸಗಿ ಬಸ್ಗಳ ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಗೆ ಮತ್ತೊಂದು ಆಘಾತಕಾರಿ ಘಟನೆ ಸಾಕ್ಷಿಯಾಗಿದೆ. ಕುಂದಾಪುರದಿಂದ ಉಡುಪಿಗೆ ಬರುತ್ತಿದ್ದ ‘ದುರ್ಗಾಂಬ’ ಹೆಸರಿನ ಖಾಸಗಿ ಬಸ್ ಚಾಲಕನೋರ್ವ, ನಗರದ ಬನ್ನಂಜೆ ಬಳಿ ಏಕಾಏಕಿ ಬ್ರೇಕ್ ಹಾಕಿ, ಬಸ್ಸನ್ನು 180 ಡಿಗ್ರಿ ತಿರುಗಿಸಿ ಪ್ರಯಾಣಿಕರಲ್ಲಿ ತೀವ್ರ ಭೀತಿ ಹುಟ್ಟಿಸಿದ ಘಟನೆ ನಡೆದಿದೆ.
ಬೆಚ್ಚಿ ಬೀಳಿಸುವ ವಿಡಿಯೋ ನೋಡಿ
ಘಟನೆಯ ವಿವರ:
ಕುಂದಾಪುರದಿಂದ ಅತಿ ವೇಗವಾಗಿ ನಗರ ಪ್ರವೇಶಿಸುತ್ತಿದ್ದ ದುರ್ಗಾಂಬ ಬಸ್, ಬನ್ನಂಜೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಹುಚ್ಚಾಟ ಮೆರೆದಿದೆ. ಚಾಲಕನು ಏಕಾಏಕಿ ಬ್ರೇಕ್ ಹಾಕಿದ ರಭಸಕ್ಕೆ, ಬಸ್ ನಿಯಂತ್ರಣ ತಪ್ಪಿ ರಸ್ತೆಯಲ್ಲೇ 180 ಡಿಗ್ರಿ ಕೋನದಲ್ಲಿ ಸಂಪೂರ್ಣವಾಗಿ ಸುತ್ತು ಹೊಡೆದಿದೆ. ಈ ಅನಿರೀಕ್ಷಿತ ಘಟನೆಯಿಂದ ಬಸ್ಸಿನಲ್ಲಿದ್ದ ಹಿರಿಯರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಎಲ್ಲಾ ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾಗಿ, ಮುಂದೇನಾಗುವುದೋ ಎಂಬ ಭಯದಿಂದ ಚೀರಾಡಿದ್ದಾರೆ.
ಆದರೆ, ಇಷ್ಟೆಲ್ಲಾ ಆದರೂ ಚಾಲಕ ತನ್ನ ತಪ್ಪಿನ ಅರಿವಿಲ್ಲದಂತೆ, ಏನೂ ಆಗೇ ಇಲ್ಲವೆಂಬಂತೆ ಬಸ್ಸನ್ನು ಮತ್ತೆ ಅತಿ ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದಾನೆ. ಅಷ್ಟಕ್ಕೆ ನಿಲ್ಲಿಸದೆ, ಮುಂದೆ ಸಾಗಿ ರಾಂಗ್ ಸೈಡ್ನಲ್ಲಿ ಚಲಿಸಿ ಅಪಾಯಕಾರಿಯಾಗಿ ಯೂ-ಟರ್ನ್ ಪಡೆದು ತನ್ನ ದಾರಿಯಲ್ಲಿ ಮುಂದುವರಿದಿದ್ದಾನೆ. ಚಾಲಕನ ಈ ಬೇಜವಾಬ್ದಾರಿ ವರ್ತನೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಸಾರ್ವಜನಿಕರ ಆಕ್ರೋಶ:
ಈ ಘಟನೆಯನ್ನು ಕಣ್ಣಾರೆ ಕಂಡ ಸಾರ್ವಜನಿಕರು ಹಾಗೂ ಇತರ ವಾಹನ ಸವಾರರು ದುರ್ಗಾಂಬ ಬಸ್ ಚಾಲಕನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಇದು ಚಾಲನೆಯಲ್ಲ, ಇದೊಂದು ಕೊಲೆ ಯತ್ನ. ಟೈಮಿಂಗ್ಸ್ ಪೈಪೋಟಿಗಾಗಿ ಜನರ ಜೀವದ ಜೊತೆ ಹೀಗೆ ಚೆಲ್ಲಾಟವಾಡುವುದು ಎಷ್ಟು ಸರಿ? ಅದೃಷ್ಟವಶಾತ್ ಇಂದು ಯಾವುದೇ ಅನಾಹುತ ಸಂಭವಿಸಿಲ್ಲ. ಆದರೆ, ಇಂತಹ ಚಾಲಕರಿಂದಾಗಿ ರಸ್ತೆಯಲ್ಲಿ ಓಡಾಡುವುದೇ ಭಯಾನಕವಾಗಿದೆ,” ಎಂದು ಸ್ಥಳೀಯರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಪೊಲೀಸರಿಗೆ ಕ್ರಮಕ್ಕೆ ಒತ್ತಾಯ:
ಉಡುಪಿ-ಕುಂದಾಪುರ ಮಾರ್ಗದಲ್ಲಿ ಖಾಸಗಿ ಬಸ್ಗಳ ನಡುವಿನ ಪೈಪೋಟಿ ಮಿತಿಮೀರಿದ್ದು, ಚಾಲಕರು ರಸ್ತೆ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ. ಪ್ರಯಾಣಿಕರ ಜೀವವನ್ನು ಪಣಕ್ಕಿಟ್ಟು ವಾಹನ ಚಲಾಯಿಸುವ ಇಂತಹ ಚಾಲಕರ ವಿರುದ್ಧ ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ (RTO) ಕಠಿಣ ಕ್ರಮ ಕೈಗೊಳ್ಳಬೇಕು. ಈ ಘಟನೆಗೆ ಕಾರಣನಾದ ದುರ್ಗಾಂಬ ಬಸ್ ಚಾಲಕನ ಚಾಲನಾ ಪರವಾನಗಿಯನ್ನು ತಕ್ಷಣವೇ ರದ್ದುಗೊಳಿಸಬೇಕು ಮತ್ತು ಬಸ್ ಮಾಲೀಕರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಖಾಸಗಿ ಬಸ್ಗಳ ವೇಗಕ್ಕೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಅಪರಾಧ
Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್ಐ ಸುಳ್ಳು ವಿವರಗಳೊಂದಿಗೆ ಎಫ್ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮಣಿಪಾಲ ಠಾಣೆಯ ಪಿಎಸ್ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
ಉಡುಪಿ
H.D.K.-ಕರಾವಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ. ಟೆಂಪಲ್ ರನ್: ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನವಚಂಡಿಕಾಯಾಗ
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಉಡುಪಿ: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕುಟುಂಬದ ದೋಷ ಪರಿಹಾರ ಹಾಗೂ ಹರಕೆ ತೀರಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ನವಚಂಡಿಕಾಯಾಗ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಹರಕೆ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ಯಾಗ ನೆರವೇರಿಸುತ್ತಿದ್ದಾರೆ ಎನ್ನಲಾಗಿದೆ.
ಅರ್ಚಕ ಶ್ರೀಕಾಂತ್ ಅಡಿಗ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೆ ನವಚಂಡಿಕಾಯಾಗ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ.
ಕುಮಾರಸ್ವಾಮಿ ಅವರು ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಯಾಗದಲ್ಲಿ ಭಾಗವಹಿಸಲಿದ್ದಾರೆ.
-
ಶಿಕ್ಷಣ12 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ5 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ಚಿನ್ನ-ಬೆಳ್ಳಿ ದರ11 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಸ್ಥಳೀಯ11 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಸಿನೆಮಾ10 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ11 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ11 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ರಾಜಕೀಯ5 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ















