Uncategorized
Big Breaking: ನ್ಯಾಯಾಲಯದ ಆದೇಶ ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿದ ಸೋಮನಾಥ ನಾಯಕ್‌ಗೆ ಜೈಲು ಶಿಕ್ಷೆ ಖಾಯಂಗೊಳಿಸಿ ಆದೇಶ ಹೊರಡಿಸಿದ ಹೈಕೋರ್ಟ್ – ಉಚ್ಚನ್ಯಾಯಲಯ ಖಾವಂದರರು ಮತ್ತು ಕ್ಷೇತ್ರದ ಬಗ್ಗೆ ಹೇಳಿದ್ದೇನು ಗೊತ್ತೇ..?
ಬೆಳ್ತಂಗಡಿ: ಬೆಳ್ತಂಗಡಿಯ ಸಿವಿಲ್ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನು ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗು ಅಲ್ಲಿಯ ಧರ್ಮಾಧಿಕಾರಿಗಳ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ.ಸೋಮನಾಥ ನಾಯಕ್ ಬೆಳ್ತಂಗಡಿ ನ್ಯಾಯಾಲಯ ವಿಧಿಸಿದ ಜೈಲು ಶಿಕ್ಷೆ, ಆಸ್ತಿ ಮುಟ್ಟುಗೋಲು ಹಾಗೂ ದಂಡನೆಯನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ರಿಟ್ ಅರ್ಜಿ ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ವಜಗೊಂಡಿದೆ.
ಎರಡೂ ಕಡೆಯ ವಾದ ಆಲಿಸಿದ ಉಚ್ಚ ನ್ಯಾಯಾಲಯವು ಮೇ. 5 ರಂದು ತನ್ನ 128 ಪುಟಗಳ ಸುಧೀರ್ಘ ತೀರ್ಪು ಪ್ರಕಟಿಸಿ ಬೆಳ್ತಂಗಡಿ ಸಿವಿಲ್ ನ್ಯಾಯಾಲಯಗಳ ಆದೇಶವನ್ನು ಎತ್ತಿ ಹಿಡಿದು ಸೋಮನಾಥ ನಾಯಕ್‌ರ ರಿಟ್ ಅರ್ಜಿಯನ್ನು ವಜಾಗೊಳಿಸಿದೆ.
ತನ್ನ ತೀರ್ಪಿನಲ್ಲಿ ಉಚ್ಚ ನ್ಯಾಯಾಲಯ ಹೇಳಿದ್ದೇನು..?
- ಸೋಮನಾಥ ನಾಯಕ್‌ರು ಹೆಗ್ಗಡೆಯವರ ವಿರುದ್ಧ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನು ಸಹ ಉಲ್ಲಂಘಿಸಿ ಸುಳ್ಳು ಆರೋಪ ಮಾಡಿರುವುದು ಸಾಬೀತಾಗಿದೆ.
- ಹೆಗ್ಗಡೆಯವರು ಮಿತಿಗಿಂತ ಜಾಸ್ತಿ ಸ್ಥಿರಾಸ್ತಿ ಹೊಂದಿರುತ್ತಾರೆ ಎಂಬುವುದಾಗಿ ಮಾಡುತ್ತಿರುವ ಆರೋಪಗಳು ಸುಳ್ಳು.
- ಈ ಪ್ರಕರಣದ ದಾಖಲೆಗಳನ್ನು ಪರಾಮರ್ಶಿಸುವಾಗ ಹೆಗ್ಗಡೆಯವರು ಮತ್ತವರ ಕುಟುಂಬದವರು ತಮ್ಮ ಬಹಳಷ್ಟು ಆಸ್ತಿಗಳನ್ನು ಸಾಗುವಳಿದಾರರಿಗೆ ಬಿಟ್ಟುಕೊಟ್ಟಿರುವುದು ಕಂಡುಬರುತ್ತದೆ.
- ರಾಜ್ಯದೆಲ್ಲೆಡೆ ತುಳಿತಕ್ಕೊಳಗಾದವರ ಏಳಿಗೆಗಾಗಿ, ಮಹಿಳಾ ಸಬಲೀಕರಣಕ್ಕಾಗಿ, ಇನ್ನೂ ಹಲವಾರು ಸಮಾಜಮುಖಿ ಕೈಂಕರ್ಯಗಳನ್ನು ಹೆಗ್ಗಡೆಯವರು ಮಾಡುತ್ತಿರುವುದು ಕಂಡುಬರುತ್ತದೆ.
- ಹೆಗ್ಗಡೆಯವರಿಗೆ ಅವರ ಸಮಾಜಮುಖಿ ಸೇವೆಗಳನ್ನು ಪರಿಗಣಿಸಿ ನಮ್ಮ ದೇಶದ ಸರಕಾರಗಳು ಪದ್ಮವಿಭೂಷಣ ಸಹಿತ ಹಲವಾರು ಉನ್ನತ ಪ್ರಶಸ್ತಿಗಳನ್ನು ನೀಡಿ ಗೌರವಿಸಿರುವುದು ಕಂಡುಬರುತ್ತದೆ.
- ನಮ್ಮ ದೇಶದ ಜನತೆಯು ಹೆಗ್ಗಡೆಯವರನ್ನು ಧರ್ಮಾಧಿಕಾರಿಯೆಂದು ಗೌರವ ಭಾವನೆಯಿಂದ ಕಾಣುತ್ತಿದ್ದಾರೆ.
- ಹೆಗ್ಗಡೆಯವರ ಸಚ್ಚಾರಿತ್ರ್ಯಕ್ಕೆ ಹಾಗೂ ಕ್ಷೇತ್ರದ ಘನತೆಗೆ ದಕ್ಕೆ ತರುವ ದುರುದ್ದೇಶದಿಂದ ಸೋಮನಾಥ ನಾಯಕ್‌ರವರು ಎಗ್ಗಿಲ್ಲದೆ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನೂ ಸಹ ಉಲ್ಲಂಘಿಸಿ ಸುಳ್ಳು ಆರೋಪಗಳನ್ನು ಸಾರ್ವಜನಿಕ ಮಾಧ್ಯಮ ಹಾಗು ಜಾಲತಾಣಗಳಲ್ಲಿ ಮಾಡುತ್ತಿರುವುದು ಕ್ಷಮಾರ್ಹವಲ್ಲ.
- ಹೆಗ್ಗಡೆಯವರು ಹಾಗೂ ಅವರ ಕುಟುಂಬದವರ ವಿರುದ್ಧ ಆರೋಪ ಮಾಡುವುದರ ಹೊರತು ಸಮಾಜಕ್ಕೆ ತನ್ನ ಕೊಡುಗೆ ಏನು ಎಂಬುವುದನ್ನು ನ್ಯಾಯಾಲಯಕ್ಕೆ ತಿಳಿಸುವಲ್ಲಿ ಸಹ ಸೋಮನಾಥ ನಾಯಕ್ ವಿಫಲವಾಗಿದ್ದಾರೆ.
- ನ್ಯಾಯಾಲಯದ ಮುಂದಿರುವ ದಾಖಲೆಗಳಲ್ಲಿ ಕ್ಷೇತ್ರ ಹಾಗೂ ಶ್ರೀ ಹೆಗ್ಗಡೆಯವರಿಂದ ನಡೆಯುತ್ತಿರುವ ಸಮಾಜಮುಖಿ ಕಾರ್ಯಗಳು ಎದ್ದು ಕಾಣುತ್ತಿವೆ.
- ನ್ಯಾಯಾಲಯದ ಮುಂದೆ ಸೋಮನಾಥ ನಾಯಕ್ ಕೊನೆಯ ಕ್ಷಣದಲ್ಲಿ, ತಾನು ಎಸಗಿರುವ ಅಪರಾಧವು ಸಾಬೀತಾಗುವ ಎಲ್ಲಾ ಲಕ್ಷಣಗಳು ಕಂಡುಬಂದಾಗ ತನ್ನ ಕೃತ್ಯಗಳ ಬಗ್ಗೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿರುವುದು ಆತನ ಧಾಷ್ಟತನವಲ್ಲದೆ ನ್ಯಾಯಾಲಯದ ಘನತೆಯ ಬಗ್ಗೆ ಆತನಿಗಿರುವ ಕೇವಲ ಭಾವವನ್ನು ಬಿಂಬಿಸುತ್ತದೆ.
- ಈ ಪ್ರಕರಣದಲ್ಲಿ ನ್ಯಾಯಾಲಯದ ಮೇಲೆ ಸಾರ್ವಜನಿಕರು ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವುದಕ್ಕಾಗಿ ಮತ್ತು ನ್ಯಾಯಾಲಯದ ಘನತೆಯನ್ನು ರಕ್ಷಿಸುವ ಸಲುವಾಗಿ ಹಾಗೂ ಸೋಮನಾಥ ನಾಯಕ್‌ರನ್ನು ಶಿಕ್ಷಿಸದಿದ್ದಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದು ಕಾನೂನಿನ ಉದ್ದೇಶ ಹಾಗು ಸಾಮರ್ಥ್ಯವನ್ನು ಸಾರುತ್ತಾ ಆದೇಶವನ್ನು ನೀಡಿದೆ.
- ಪ್ರಕರಣದ ಎಲ್ಲ ಸಾಕ್ಷ್ಯಗಳನ್ನು ಹಾಗೂ ವಾಸ್ತವಾಂಶಗಳನ್ನು ತನಿಖಾ ಹಾಗು ಅಪಾರ ನ್ಯಾಯಾಲಯ ಕೂಲಂಕುಷವಾಗಿ ವಿರ್ಮಶಿಸಿದ ನಂತರ ಸದ್ರಿ ನ್ಯಾಯಾಲಯಗಳು ಸೋಮನಾಥ್ ನಾಯಕ್ ಎಸಗಿರುವ ಅಪರಾಧದ ತೀವ್ರತೆಯನ್ನು ಮನಗಂಡು ನೀಡಿರುವ ಶಿಕ್ಷೆ ನ್ಯಾಯಾಲಯದ ಘನತೆ ಹಾಗೂ ಹೆಗ್ಗಡೆಯವರ ಸಚ್ಚಾರಿತ್ಯಗಳ ರಕ್ಷಣೆ ನಿಟ್ಟಿನಲ್ಲಿ ಮಾಡಿರುವ ಕಾನೂನುರಿತ್ಯಾ ಪ್ರಬುದ್ಧವಾಗಿರುವ ಆದೇಶಗಳಾಗಿರುವುದಾಗಿ ಉದ್ಘೋಷಿಸಿದೆ.
ಬೆಳ್ತಂಗಡಿ ನ್ಯಾಯಾಲಯ ಈಗಾಗಲೇ ಸೋಮನಾಥ ನಾಯಕ್‌ರ ವಿರುದ್ಧ ಬಂಧನದ ವಾರೆಂಟ್ ಹೊರಡಿಸಿದೆ. ನ್ಯಾಯಾಲಯದಲ್ಲಿ ನ್ಯಾಯವಾದಿಗಳಾದ ಕೆ. ಚಂದ್ರನಾಥ ಆರಿಗ ಬೆಂಗಳೂರು ಹಾಗೂ ರತ್ನವರ್ಮ ಬುಣ್ಣು ಬೆಳ್ತಂಗಡಿ ಅವರು ಕ್ಷೇತ್ರದ ಪರವಾಗಿ ವಾದಿಸಿದ್ದರು.
Uncategorized
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್‌ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್‌ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ
ಘಟನೆ ಬಳಿಕ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!
ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.
ದೂರು ದಾಖಲಿಸಲು ಹಿಂದೇಟು?
ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ
ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.
ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.
Uncategorized
Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.
ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.
ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.
ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.
ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.
ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
-
ಅಪರಾಧ16 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್13 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ13 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು14 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ನಿಧನ ವಾರ್ತೆ10 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ14 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು15 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಸ್ಥಳೀಯ14 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















