ಉಡುಪಿ
Udupi-ಉಡುಪಿ : ಮೊಬೈಲ್ ಗೀಳು, ಸಂಸಾರ ದಿಕ್ಕಾಪಾಲು ! ರೀಲ್ಸ್ ನೋಡುವ ಚಟವಿದ್ದ ಸತಿಯ ಕಡಿದು ಕೊಂದ ಪತಿ
ಉಡುಪಿಯ ಬ್ರಹ್ಮಾವರದ ಹಸಿರ ಮಣ್ಣಿನಲ್ಲಿ ಅರಳಿ ನಿಲ್ಲಬೇಕಿದ್ದ ಒಂದು ಸಂಸಾರ, ಕ್ಷಣಿಕ ಕೋಪ ಮತ್ತು ಮೊಬೈಲ್ ಗೀಳಿಗೆ ಬಲಿಯಾಗಿ ಛಿದ್ರಗೊಂಡಿದೆ. ಎಂಟು ವರುಷಗಳ ಹಿಂದೆ ಕೈ ಹಿಡಿದು, ಬಾಳಿನುದ್ದಕ್ಕೂ ಜೊತೆಯಾಗಿರುವ ಪ್ರಮಾಣ ಮಾಡಿದ್ದ ಪತಿಯೇ, ಪತ್ನಿಯ ಪಾಲಿಗೆ ಯಮನಾದ ಆ ಕರಾಳ ರಾತ್ರಿಯ ಕಥೆಯಿದು.
ಉಡುಪಿಯ ಬ್ರಹ್ಮಾವರದ ಹಸಿರ ಮಣ್ಣಿನಲ್ಲಿ ಅರಳಿ ನಿಲ್ಲಬೇಕಿದ್ದ ಒಂದು ಸಂಸಾರ, ಕ್ಷಣಿಕ ಕೋಪ ಮತ್ತು ಮೊಬೈಲ್ ಗೀಳಿಗೆ ಬಲಿಯಾಗಿ ಛಿದ್ರಗೊಂಡಿದೆ. ಎಂಟು ವರುಷಗಳ ಹಿಂದೆ ಕೈ ಹಿಡಿದು, ಬಾಳಿನುದ್ದಕ್ಕೂ ಜೊತೆಯಾಗಿರುವ ಪ್ರಮಾಣ ಮಾಡಿದ್ದ ಪತಿಯೇ, ಪತ್ನಿಯ ಪಾಲಿಗೆ ಯಮನಾದ ಆ ಕರಾಳ ರಾತ್ರಿಯ ಕಥೆಯಿದು.
ಹಿಲಿಯಾಣ ಗ್ರಾಮದ ಹೊಸಮಠದ ನಿವಾಸಿ ರೇಖಾ (27), ಬದುಕಿನ ಬಂಡಿ ಸಾಗಿಸಲು ಪೆಟ್ರೋಲ್ ಬಂಕ್‌ನಲ್ಲಿ ದುಡಿಯುತ್ತಿದ್ದ ಸಾಮಾನ್ಯ ಹೆಣ್ಣುಮಗಳು. ಅವಳ ಪತಿ ಗಣೇಶ್ ಪೂಜಾರಿ (42), ವೃತ್ತಿಯಲ್ಲಿ ಪೇಂಟರ್. ಈ ದಂಪತಿಗೆ ಇಬ್ಬರು ಮುದ್ದಾದ ಮಕ್ಕಳು. ಆದರೆ, ಈ ಸಂಸಾರದ ದೋಣಿಯನ್ನು ಗಣೇಶನ ಕುಡಿತದ ಚಟ ಮತ್ತು ಅನುಮಾನದ ಹುಳ ನಿಧಾನವಾಗಿ ಮುಳುಗಿಸುತ್ತಿತ್ತು.
ಪತ್ನಿ ರೇಖಾ ಸದಾ ಮೊಬೈಲ್ ಲೋಕದಲ್ಲಿ ಮುಳುಗಿರುತ್ತಾಳೆ ಎಂಬುದು ಗಣೇಶನ ಕೋಪಕ್ಕೆ ಕಾರಣವಾಗಿತ್ತು. ಕುಡಿದು ಬಂದಾಗಲೆಲ್ಲಾ ಇದೇ ವಿಷಯಕ್ಕೆ ಮನೆಯಲ್ಲಿ ಜಗಳದ ಕಿಡಿ ಹೊತ್ತುತ್ತಿತ್ತು. ಗುರುವಾರ ರಾತ್ರಿಯೂ ಅದೇ ಪುನರಾವರ್ತನೆಯಾಯಿತು. ಮದ್ಯದ ಅಮಲಿನಲ್ಲಿ ಮನೆಗೆ ಬಂದ ಗಣೇಶ, ಎಂದಿನಂತೆ ರೇಖಾಳೊಂದಿಗೆ ಜಗಳಕ್ಕಿಳಿದ.
ಮಾತಿಗೆ ಮಾತು ಬೆಳೆದು, ವಾಗ್ವಾದ ವಿಕೋಪಕ್ಕೆ ತಿರುಗಿತು. ರಾತ್ರಿ 11:30ರ ಸುಮಾರಿಗೆ, ಕೋಪದ ಕೈಗೆ ಬುದ್ಧಿ ಕೊಟ್ಟ ಗಣೇಶ, ಮನೆಯಲ್ಲಿದ್ದ ಹರಿತವಾದ ಕತ್ತಿಯಿಂದ ರೇಖಾಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ. ಆತನ ಅಟ್ಟಹಾಸಕ್ಕೆ ತುತ್ತಾದ ರೇಖಾ, ರಕ್ತದ ಮಡುವಿನಲ್ಲಿ ಬಿದ್ದು ಸ್ಥಳದಲ್ಲೇ ಪ್ರಾಣ ಚೆಲ್ಲಿದರು. ಆಕೆಯ ಕೊನೆಯುಸಿರು, ತನ್ನಿಬ್ಬರು ಮಕ್ಕಳ ಭವಿಷ್ಯದ ಕನಸನ್ನು ಹೊತ್ತು ಗಾಳಿಯಲ್ಲಿ ಲೀನವಾಯಿತು.
ಉಡುಪಿ
Malpe-ಮಲ್ಪೆ: ದಸರಾ ರಜೆಗೂ ಮುನ್ನವೇ ಬೀಚ್‌ನಲ್ಲಿ ಪ್ರವಾಸಿಗರ ಮಹಾಪೂರ : ಕಿಮೀ ಉದ್ದ ಟ್ರಾಫಿಕ್ ಜಾಮ್ – ಪಾರ್ಕಿಂಗ್ ಗಿಲ್ಲ ಸ್ಥಳ..!
ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಮಲ್ಪೆ: ವಾರಾಂತ್ಯ ಹಾಗೂ ಮುಂಬರುವ ದಸರಾ ರಜೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಂದ ಪ್ರವಾಸಿಗರು ಉಡುಪಿಯ ಪ್ರಸಿದ್ಧ ದೇವಾಲಯಗಳು ಮತ್ತು ಕಡಲತೀರಗಳಿಗೆ ಆಗಮಿಸುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಭಾರೀ ಜನಸಂದಣಿ ಕಂಡುಬರುತ್ತಿದೆ.
ಬಿಸಿಲಿನ ತೀವ್ರತೆ ಹೆಚ್ಚಿದ್ದರೂ ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಭಾಗಗಳಿಂದ ಕುಟುಂಬ ಸಮೇತರಾಗಿ ಪ್ರವಾಸಿಗರು ಮಲ್ಪೆಗೆ ಆಗಮಿಸುತ್ತಿದ್ದಾರೆ. ಬೀಚ್‌ನ ಮುಖ್ಯ ಭಾಗದಿಂದ ಸೀವಾಕ್‌ವರೆಗೂ ಕಡಲತೀರದಲ್ಲಿ ಜನಜಂಗುಳಿ ಕಂಡುಬರುತ್ತಿದೆ.
ಶುಕ್ರವಾರ ಬೆಳಗ್ಗೆಯಿಂದಲೇ ಮಲ್ಪೆಯತ್ತ ಪ್ರವಾಸಿಗರ ಆಗಮನ ಹೆಚ್ಚಾಗಿದ್ದು, ಅಪರಾಹ್ನದ ವೇಳೆಗೆ ವಾಹನ ನಿಲುಗಡೆಗೂ ಜಾಗವಿಲ್ಲದಷ್ಟು ಒತ್ತಡ ನಿರ್ಮಾಣವಾಗಿತ್ತು. ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳನ್ನು ನಿಲ್ಲಿಸಿದ್ದರಿಂದ ಸುಗಮ ಸಂಚಾರಕ್ಕೂ ಅಡ್ಡಿಯಾಯಿತು.
ಬೀಚ್‌ಗೆ ಆಗಮಿಸಿದ ಪ್ರವಾಸಿಗರು ಬನಾನಾ ರೈಡ್, ಸ್ಪೀಡ್ ಬೋಟ್ ಸೇರಿದಂತೆ ವಿವಿಧ ಜಲಸಾಹಸ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪ್ರಸಿದ್ಧ ಸೈಂಟ್ ಮೇರಿಸ್ ದ್ವೀಪಕ್ಕೂ ದೋಣಿ ಮೂಲಕ ತೆರಳುವ ಪ್ರವಾಸಿಗರ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ.
ಆದಿ ಉಡುಪಿ-ಮಲ್ಪೆ ರಸ್ತೆಯಲ್ಲಿ ಸಂಚಾರ ಸಂಕಷ್ಟ
ಪ್ರವಾಸಿಗರ ವಾಹನಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಮಲ್ಪೆಗೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಆದಿಉಡುಪಿಯಿಂದ ಮಲ್ಪೆ ಬೀಚ್‌ವರೆಗಿನ ರಸ್ತೆಯಲ್ಲಿ ಶುಕ್ರವಾರ ಸಂಜೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಶನಿವಾರ ಕಲ್ಮಾಡಿ ಭಾಗದಲ್ಲೂ ಇದೇ ಪರಿಸ್ಥಿತಿ ಕಂಡುಬಂತು.
ಮಲ್ಪೆ ಭಾಗದ ಕಿರಿದಾದ ರಸ್ತೆಯಲ್ಲಿ ಮೀನುಗಾರಿಕೆಗೆ ಸಂಬಂಧಿಸಿದ ಮಂಜುಗಡ್ಡೆ ಹಾಗೂ ಮೀನಿನ ಲಾರಿಗಳ ಸಂಚಾರವೂ ಹೆಚ್ಚಿದ್ದು, ಪ್ರವಾಸಿಗರ ವಾಹನಗಳ ಒತ್ತಡದೊಂದಿಗೆ ಸಂಚಾರ ಮತ್ತಷ್ಟು ನಿಧಾನಗೊಂಡಿದೆ. ಇದರ ಜೊತೆಗೆ ಕಲ್ಮಾಡಿ ಸೇತುವೆ ಬಳಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿಯೂ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ದಸರಾ ರಜೆಯಲ್ಲಿ ಮತ್ತಷ್ಟು ಪ್ರವಾಸಿಗರ ನಿರೀಕ್ಷೆ
ಶಾಲಾ-ಕಾಲೇಜುಗಳ ಪರೀಕ್ಷೆಗಳು ಮುಗಿದಿದ್ದು, ಅ.11ರಿಂದ ದಸರಾ ರಜೆ ಆರಂಭವಾಗಲಿದೆ. ಹೀಗಾಗಿ ರಜೆ ಅವಧಿಯಲ್ಲಿ ಮಲ್ಪೆ ಬೀಚ್‌ಗೆ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ.
ಪಾರ್ಕಿಂಗ್, ಸ್ವಚ್ಛತೆ, ಸುರಕ್ಷತೆಗೆ ಆದ್ಯತೆ ಅಗತ್ಯ
ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ವಾಹನ ಪಾರ್ಕಿಂಗ್ ಸ್ಥಳ ಸಾಕಾಗುತ್ತಿಲ್ಲ. ಕೆಲವರು ಪಾದಚಾರಿ ಮಾರ್ಗದಲ್ಲೇ ವಾಹನಗಳನ್ನು ನಿಲ್ಲಿಸುತ್ತಿದ್ದು, ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ ಹೇಳಿದ್ದಾರೆ.
ಬೀಚ್ ಸುತ್ತಮುತ್ತ ಸ್ವಚ್ಛತೆ ಹಾಗೂ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಬೀಚ್ ಪ್ರದೇಶದಲ್ಲಿ ಕಸದ ರಾಶಿ ಕಂಡುಬರುತ್ತಿದ್ದು, ಇದು ಪ್ರವಾಸಿಗರಿಗೆ ಅಸಹ್ಯ ಉಂಟುಮಾಡುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಉಡುಪಿ
Manipal-ಮಣಿಪಾಲ: ಕೆಎಂಸಿ ಆಸ್ಪತೆಯ 4ನೇ ಮಹಡಿಯಿಂದ ಬಿದ್ದ ವ್ಯಕ್ತಿಗೆ ಗಂಭೀರ ಗಾಯ
ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಉಡುಪಿ, ಸೆ.30: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಗಾಯಗೊಂಡವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ.
ಪತ್ನಿಯೊಂದಿಗೆ ನಡೆದ ಜಗಳದ ಬಳಿಕ ಕೆಲವು ದಿನಗಳ ಹಿಂದೆ ರಾಜೇಶ್ ವಿಷ ಸೇವಿಸಿದ್ದರು ಎನ್ನಲಾಗಿದ್ದು, ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಡಿಸ್‌ಚಾರ್ಜ್‌ಗೆ ಸಿದ್ಧತೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.
ಬುಧವಾರ ಆಸ್ಪತ್ರೆ ಸಿಬ್ಬಂದಿಯೊಂದಿಗೆ ವಾಕಿಂಗ್‌ಗೆ ತೆರಳುವುದಾಗಿ ಹೇಳಿ ಕೊಠಡಿಯಿಂದ ರಾಜೇಶ್ ಹೊರಬಂದಿದ್ದರು. ಬಳಿಕ ಕಿಟಕಿಯ ಬಳಿ ತೆರಳಿ ಗ್ರಿಲ್ ಮೂಲಕ ಕೆಳಗೆ ಇಳಿಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಜಾಲರಿಯನ್ನು ಹರಿದು ಕೆಳಗೆ ಇಳಿಯುತ್ತಿದ್ದಾಗ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ
Clarification-ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿ ಹತ್ಯೆ? ಪೊಲೀಸರಿಂದ ಮಹತ್ವದ ಸ್ಪಷ್ಟನೆ
ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು ಹತ್ಯೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮ ಸೇರಿದಂತೆ ಕೆಲವು ಸ್ಥಳೀಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ ಮೂಲದ ವ್ಯಕ್ತಿಯೊಬ್ಬರು ಯುಎಇಯ ಶಾರ್ಜಾದಲ್ಲಿ ಹತ್ಯೆಯಾಗಿದ್ದಾರೆ ಎಂಬ ವರದಿಗಳು ಪ್ರಸಾರವಾಗುತ್ತಿವೆ. ಆದರೆ, ಈ ಕುರಿತು ಶಾರ್ಜಾ ಪೊಲೀಸ್ ಇಲಾಖೆ ಅಥವಾ ಯುಎಇಯಲ್ಲಿರುವ ಭಾರತೀಯ ರಾಯಭಾರ ಕಚೇರಿ/ಕಾನ್ಸುಲೇಟ್‌ನಿಂದ ಉಡುಪಿ ಜಿಲ್ಲಾ ಪೊಲೀಸರಿಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಅಥವಾ ದೃಢೀಕರಣ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತ ಮಾಹಿತಿ ಲಭ್ಯವಾದಲ್ಲಿ, ಅದನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಹೀಗಾಗಿ, ಸದ್ಯ ಸಾಮಾಜಿಕ ಮಾಧ್ಯಮ ಹಾಗೂ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಶಾರ್ಜಾ ಹತ್ಯೆ ಕುರಿತ ಸುದ್ದಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
-
Uncategorized18 hours ago
ಚಿನ್ನಾಭರಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ
-
ದಕ್ಷಿಣ ಕನ್ನಡ20 hours ago
Raod Accident : ಮಂತ್ರಾಲಯ ಯಾತ್ರೆ ವೇಳೆ ಬಣಕಲ್ ನಲ್ಲಿ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಶಿಶಿಲದ ಯುವಕ ಸಾವು
-
ಬಿಗ್ ನ್ಯೂಸ್6 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ7 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ5 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ6 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ6 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ನಿಧನ ವಾರ್ತೆ4 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು


















