ಶಿಕ್ಷಣ
Philomena-ಸಂತ ಫಿಲೋಮಿನಾ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ
ಜೂ 21 ರಂದು ಕಾಲೇಜು ಸಭಾಂಗಣದಲ್ಲಿ ನಡೆದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಪುತ್ತೂರು ವಿವೇಕಾನಂದ ಕಾಲೇಜು ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಇಲ್ಲಿನ ಸಹ ಪ್ರಾಧ್ಯಾಪಕರು ಹಾಗೂ ಎಂ. ಬಿ. ಎ ವಿಭಾಗದ ನಿರ್ದೇಶಕರಾದ ಡಾ. ರೋಬಿನ್ ಮನೋಹರ್ ಶಿಂಧೆ ಮಾತನಾಡಿದರು.
ಪುತ್ತೂರು: ವಿದ್ಯಾರ್ಥಿ ಸಂಘವು ಕಾಲೇಜಿನ ಪ್ರಮುಖ ಅಂಗವಾಗಿದ್ದು, ಸಮಾಜಮುಖಿ ಮತ್ತು ವಿದ್ಯಾರ್ಥಿ ಸ್ನೇಹಿ ಕೆಲಸಗಳನ್ನು ಮಾಡುವುದರ ಮೂಲಕ ಮಾದರಿ ಸಂಘಟನೆ ಎನಿಸಿಕೊಳ್ಳಬಲ್ಲುದು ಎಂದು ಪುತ್ತೂರು ವಿವೇಕಾನಂದ ಕಾಲೇಜು ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಇಲ್ಲಿನ ಸಹ ಪ್ರಾಧ್ಯಾಪಕರು ಹಾಗೂ ಎಂ. ಬಿ. ಎ ವಿಭಾಗದ ನಿರ್ದೇಶಕರಾದ ಡಾ. ರೋಬಿನ್ ಮನೋಹರ್ ಶಿಂಧೆ ಹೇಳಿದರು.

ಅವರು ಜೂ 21 ರಂದು ಕಾಲೇಜು ಸಭಾಂಗಣದಲ್ಲಿ ನಡೆದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ಸಮಾಜದಲ್ಲಿ ವಿದ್ಯಾರ್ಥಿ ಸಂಘಟನೆಯ ಕಾರ್ಯಗಳು ವಿಭಿನ್ನವಾಗಿ ಕಾಣಿಸಿಕೊಳ್ಳಬೇಕಾಗಿದ್ದು, ಸಂಘದ ಪಾದಾಧಿಕಾರಿಗಳಿಗೆ ಸಮಾಜದ ಆಗುಹೋಗುಗಳ ಬಗ್ಗೆ ಜ್ಞಾನವಿರುವುದು ಅತ್ಯಂತ ಅವಶ್ಯಕ. ಇಂದಿನ ಕಂಪ್ಯೂಟರ್ ಯುಗದಲ್ಲಿ ಕೃತಕ ಬುದ್ಧಿಮತ್ತೆ (Artificial intelligence) ಸಮಾಜವನ್ನು ನಿಯಂತ್ರಿಸುತ್ತಿದ್ದು, ಇದರ ಉಪಯೋಗ ಮತ್ತು ದುರುಪಯೋಗಗಳ ಬಗ್ಗೆ ವಿದ್ಯಾಥಿಗಳು ತಿಳಿದುಕೊಳ್ಳಬೇಕಾಗಿದೆ. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘವು ಸಮಾಜಮುಖಿ ಕಾರ್ಯಗಳನ್ನು ಮಾಡುವುದರ ಜೊತೆಗೆ ಕಾಲೇಜಿನ 1500 ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿವುದರ ಮೂಲಕ ಮಾದರಿ ಸಂಘವಾಗಲಿ ಎಂದು ಶುಭ ಹಾರೈಸಿದರು.

ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ರೆ. ಫಾ. ಲಾರೆನ್ಸ್ ಮಸ್ಕರೇನಸ್ ಹೂಗುಚ್ಛ ನೀಡಿ ಅಭಿನಂದಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ. ಫಾ. ಲಾರೆನ್ಸ್ ಮಸ್ಕರೇನಸ್ ಮಾತನಾಡಿ, ನಾಯಕನಾದವನು ಇತರರನ್ನು ಉತ್ತೇಜಿಸಬೇಕು. ಜವಾಬ್ದಾರಿಗಳನ್ನು ಹಂಚಿಕೊಂಡು, ತನ್ನ ಸೇವೆಯ ಮೂಲಕ ಇತರರಿಗೆ ಮಾದರಿಯಾಗಬೇಕು. ಯಾವುದೇ ಸಮಸ್ಯೆಗಳು ಬಂದಾಗ ಅದಕ್ಕೆ ಸೂಕ್ತವಾದ ಪರಿಹಾರವನ್ನು ಕಂಡುಕೊಳ್ಳುವಲ್ಲಿ ಕಾರ್ಯಪ್ರವೃತನಾಗಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ನೂತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ದೀಪ್ತಿ ಕೆ. ಸಿ, ಕಾರ್ಯದರ್ಶಿ ತೇಜಸ್ ಎ. ಕೆ, ಜೊತೆ ಕಾರ್ಯದರ್ಶಿ ಶ್ರಿಯಾ ಎ ಜಾನ್ ಸಹಿತ ತರಗತಿವಾರು ಪ್ರತಿನಿಧಿಗಳು, ವಿವಿಧ ಸಂಘಗಳ ಪದಾಧಿಕಾರಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಪ್ರಮಾಣ ವಚನವನ್ನು ಬೋಧಿಸಿದರು.
ಇದೇ ಸಂದರ್ಭದಲ್ಲಿ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರತಿಮಾ ಹೆಗ್ಡೆಯವರನ್ನು ಸನ್ಮಾನಿಸಲಾಯಿತು.
ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿ.ಕೋಸ್ಟ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಹಾಗೂ ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ ಹಾಗೂ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರತಿಮಾ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ನೂತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಪ್ತಿ ಕೆ. ಸಿ ಸ್ವಾಗತಿಸಿ, ಕಾರ್ಯದರ್ಶಿ ತೇಜಸ್ ಎ. ಕೆ ಅತಿಥಿಗಳನ್ನು ಪರಿಚಯಿಸಿದರು. ಜತೆ ಕಾರ್ಯದರ್ಶಿ ಶ್ರಿಯಾ ಎ ಜಾನ್ ವಂದಿಸಿ, ವಿದ್ಯಾರ್ಥಿನಿ ಎಂಜಲಿಕ ಮೆಲನಿ ಪಿಂಟೋ ಕಾರ್ಯಕ್ರಮವನ್ನು ನಿರೂಪಿಸಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ನಿಧನ ವಾರ್ತೆ21 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು19 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು17 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ21 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ20 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ20 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಪರಾಧ16 hours agoBantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
-
ಅಂತರ ರಾಜ್ಯ20 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ


















